AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಹವಾಮಾನ ವರದಿ: ರಾಜ್ಯದಲ್ಲಿ ಇನ್ನೂ ಹಲವು ದಿನ ಇರಲಿದೆ ಶುಷ್ಕ ವಾತಾವರಣ

Karnataka Weather: ಇಂದೂ ಸಹ ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಶುಷ್ಕ ವಾತಾವರಣವಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು, ಇನ್ನೂ ಹಲವು ದಿನಗಳವರೆಗೂ ಇದೇ ವಾತಾವರಣ ಇರಬಹುದು ಎಂದು ಇಲಾಖೆ ಮುನ್ಸೂಚನೆ ನಿಡಿದೆ.ಕಳೆದ ಹಲವಾರು ದಿನಗಳಿಂದ ರಾಜ್ಯದೆಲ್ಲೆಡೆ ಒಣ ಹವೆಯ ವಾತಾವರಣ ಆವರಿಸಿದ್ದು, ಬೆಂಗಳೂರಿನಲ್ಲೂ ತಾಪಮಾನ ಸ್ವಲ್ಪ ಸುಧಾರಣೆ ಕಂಡಿದೆ.

ಕರ್ನಾಟಕ ಹವಾಮಾನ ವರದಿ: ರಾಜ್ಯದಲ್ಲಿ ಇನ್ನೂ ಹಲವು ದಿನ ಇರಲಿದೆ ಶುಷ್ಕ ವಾತಾವರಣ
ರಾಜ್ಯದಲ್ಲಿ ಇನ್ನೂ ಹಲವು ದಿನ ಇರಲಿದೆ ಶುಷ್ಕ ವಾತಾವರಣ
ಭಾವನಾ ಹೆಗಡೆ
|

Updated on: Feb 16, 2026 | 7:39 AM

Share

ಬೆಂಗಳೂರು, ಫೆಬ್ರವರಿ 16: ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಕೆಲ ದಿನಗಳಿಂದ ಒಣ ಹವೆಯ (Weather Forecast) ವಾತಾವರಣವಿದೆ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಒಣಹವೆ ಇಂದೂ ಮುಂದುವರೆಯಲಿದ್ದು, ದಕ್ಷಿಣ ಒಳನಾಡಿನಲ್ಲಿಯೂ ಶುಷ್ಕ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಹತ್ತಾರು ದಿನಗಳಿಂದ ರಾಜ್ಯದಲ್ಲಿ ಒಣ ಹವೆ ಆವರಿಸಿದೆ. ಬೆಂಗಳೂರಿನಲ್ಲಿ ಚಳಿಯ ಹವಾಮಾನ ತಕ್ಕಮಟ್ಟಿಗೆ ಇಂದು ಸುಧಾರಿಸಿದೆ.

ಎಲ್ಲೆಲ್ಲಿ ಒಣಹವೆ?

ಕರಾವಳಿಯ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆಯಿರಲಿದೆ ಎಂದು ಇಲಾಖೆ ತಿಳಿಸಿದೆ. ದಕ್ಷಿಣ ಒಳನಾಡಿನ ಮೈಸೂರು , ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಚಾಮರಾಜನಗರ , ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬಳ್ಳಾರಿ, ತುಮಕೂರು, ಚಿಕ್ಕಬಳ್ಳಾಪುರ, ರಾಮನಗರ, ಮಂಡ್ಯ ಮತ್ತು, ಚಿತ್ರದುರ್ಗ, ದಾವಣಗೆರೆ ಮತ್ತು ವಿಜಯನಗರ ಜಿಲ್ಲೆಗಳಲ್ಲಿಯೂ ಒಣ ಹವೆಯ ವಾತಾವರಣ ಇರಲಿದೆ. ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರದಲ್ಲಿ ಕಳೆದ ಹಲವು ದಿನಗಳಿಂದ ಒಣಹವೆಯ ವಾತಾವರಣವಿದ್ದು, ಇಂದೂ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೆಂಗಳೂರಿನಲ್ಲಿ ಶುಷ್ಕ ವಾತಾವರಣ

ಇಂದು ಬೆಂಗಳೂರಿನ ತಾಪಮಾನ ಕನಿಷ್ಠ 17°C ಇದ್ದು, ಗರಿಷ್ಠ 31°C ಇರಲಿದೆ ಎಂದು ಇಲಾಖೆ ತಿಳಿಸಿದೆ. ಈ ರೀತಿಯ ತೀವ್ರ ಚಳಿಯಿಂದ ಜನರ ಆರೋಗ್ಯದಲ್ಲಿ ಏರುಪೇರಾಗುತ್ತಿದ್ದು, ಬೆಚ್ಚಗಿನ ಹೊದಿಕೆ ಹೊತ್ತುಕೊಳ್ಳಬೇಕು ಹಾಗೂ ಬಿಸಿ ಆಹಾರ ಸೇವನೆ ಮಾಡಬೇಕೆಂದು ವೈದ್ಯರು ಸೂಚಿಸಿದ್ದಾರೆ. ಇಂದು ನಗರದಲ್ಲಿ ಎಂದಿನಂತೆ ಚಳಿಯ ವಾತಾವರಣವಿರುವುದರಿಂದ ಮಕ್ಕಳಿಂದ ಹಿಡಿದು ವೃದ್ಧರವರೆಗೂ ಎಚ್ಚರಿಕೆಯಿಂದಿರುವಂತೆ ಸಲಹೆ ನೀಡಿರುವ ಹವಾಮಾನ ಇಲಾಖೆ, ಬೆಚ್ಚನೆಯ ಉಡುಪು ಧರಿಸುವುದರ ಜೊತೆಗೆ ಸಮತೋಲನ ಆಹಾರ ಸೇವನೆಗೆ ಒತ್ತು ನೀಡುವಂತೆ ಸಲಹೆ ನೀಡಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

‘ಬಿಗ್​​ಬಾಸ್ ಬಳಿಕ ಹೇಗಿದೆ ಜೀವನ?’ ಕಾರ್ತಿಕ್ ಮಹೇಶ್ ಮಾತು: ವಿಡಿಯೋ ನೋಡಿ
‘ಬಿಗ್​​ಬಾಸ್ ಬಳಿಕ ಹೇಗಿದೆ ಜೀವನ?’ ಕಾರ್ತಿಕ್ ಮಹೇಶ್ ಮಾತು: ವಿಡಿಯೋ ನೋಡಿ
ರಂಗೋಲಿಯಲ್ಲಿ ಅರಳಿದ ಶಿವ: ಡ್ರೋಣ್ ನಲ್ಲಿ ಶಿವನ ಚಿತ್ರ ಸೆರೆ
ರಂಗೋಲಿಯಲ್ಲಿ ಅರಳಿದ ಶಿವ: ಡ್ರೋಣ್ ನಲ್ಲಿ ಶಿವನ ಚಿತ್ರ ಸೆರೆ
ಪಾಕ್ ನಾಯಕನೊಂದಿಗೆ ವಿಶ್ವಕಪ್​ನಲ್ಲೂ ಕೈಕುಲುಕುದ ಸೂರ್ಯ
ಪಾಕ್ ನಾಯಕನೊಂದಿಗೆ ವಿಶ್ವಕಪ್​ನಲ್ಲೂ ಕೈಕುಲುಕುದ ಸೂರ್ಯ
ಇಶಾ ಫೌಂಡೇಷನ್​​ನಲ್ಲಿ ಅದ್ದೂರಿ ಶಿವರಾತ್ರಿ ಸಂಭ್ರಮ; ನೇರ ಪ್ರಸಾರ ಇಲ್ಲಿದೆ
ಇಶಾ ಫೌಂಡೇಷನ್​​ನಲ್ಲಿ ಅದ್ದೂರಿ ಶಿವರಾತ್ರಿ ಸಂಭ್ರಮ; ನೇರ ಪ್ರಸಾರ ಇಲ್ಲಿದೆ
50ನೇ ಸಿನಿಮಾ ‘ಕಿಂಗ್’ ಬಗ್ಗೆ ಲೂಸ್ ಮಾದ ಯೋಗಿ ಮಾತು: ವಿಡಿಯೋ ನೋಡಿ
50ನೇ ಸಿನಿಮಾ ‘ಕಿಂಗ್’ ಬಗ್ಗೆ ಲೂಸ್ ಮಾದ ಯೋಗಿ ಮಾತು: ವಿಡಿಯೋ ನೋಡಿ
ಕರಾವಳಿ ಯುವತಿಯರೇ ಟಾರ್ಗೆಟ್: ಇದು ಮಂಗಳೂರು ಮನ್ಮಥನ ಭಯಾನಕ ಸ್ಟೋರಿ
ಕರಾವಳಿ ಯುವತಿಯರೇ ಟಾರ್ಗೆಟ್: ಇದು ಮಂಗಳೂರು ಮನ್ಮಥನ ಭಯಾನಕ ಸ್ಟೋರಿ
ಮಹಾಶಿವರಾತ್ರಿ ಸಂಭ್ರಮದ ಮಧ್ಯೆ ಶಿವಲಿಂಗ ಮೂರ್ತಿ ಭಗ್ನ: ರೊಚ್ಚಿಗೆದ್ದ ಜನ
ಮಹಾಶಿವರಾತ್ರಿ ಸಂಭ್ರಮದ ಮಧ್ಯೆ ಶಿವಲಿಂಗ ಮೂರ್ತಿ ಭಗ್ನ: ರೊಚ್ಚಿಗೆದ್ದ ಜನ
ದೇವದತ್ ಪಡಿಕ್ಕಲ್ ಶತಕ; ಬಲಿಷ್ಠ ಸ್ಥಿತಿಯಲ್ಲಿ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಬಲಿಷ್ಠ ಸ್ಥಿತಿಯಲ್ಲಿ ಕರ್ನಾಟಕ
ರಣಜಿ ಟ್ರೋಫಿ ಸೆಮಿಫೈನಲ್; ಸತತ 2ನೇ ಶತಕ ಸಿಡಿಸಿದ ರಾಹುಲ್
ರಣಜಿ ಟ್ರೋಫಿ ಸೆಮಿಫೈನಲ್; ಸತತ 2ನೇ ಶತಕ ಸಿಡಿಸಿದ ರಾಹುಲ್
ಕುಟುಂಬ ಸಮೇತ ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ರಿಷಬ್ ಶೆಟ್ಟಿ; ವಿಡಿಯೋ
ಕುಟುಂಬ ಸಮೇತ ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ರಿಷಬ್ ಶೆಟ್ಟಿ; ವಿಡಿಯೋ