AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಹವಾಮಾನ ವರದಿ: ರಾಜ್ಯದಲ್ಲಿ ಇಂದು ಶುಷ್ಕ ವಾತಾವರಣ, ಬೆಂಗಳೂರಿನಲ್ಲಿ ಮಂಜು

Karnataka Weather: ಕಳೆದ ನಾಲ್ಕು ದಿನಗಳಿಂದ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುತ್ತಿದ್ದು, ಇಂದು ದಕ್ಷಿಣ ಒಳನಾಡಿನಲ್ಲಿ ಒಣ ಹವೆಯಿರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಮೋಡ ಮುಸುಕಿದ ವಾತಾವರಣ ಇರಲಿದೆ ಎಂದು ಇಲಾಖೆ ತಿಳಿಸಿದ್ದು, ಸಮತೋಲನ ಆಹಾರ ಸೇವನೆಯೊಂದಿಗೆ ಬೆಚ್ಚನೆಯ ಉಡುಪು ಧರಿಸುವಂತೆ ಸಾರ್ವಜನಿಕರಿಗೆ ಸಲಹೆ ನೀಡಲಾಗಿದೆ.

ಕರ್ನಾಟಕ ಹವಾಮಾನ ವರದಿ: ರಾಜ್ಯದಲ್ಲಿ ಇಂದು ಶುಷ್ಕ ವಾತಾವರಣ, ಬೆಂಗಳೂರಿನಲ್ಲಿ ಮಂಜು
ರಾಜ್ಯದಲ್ಲಿ ಇಂದು ಶುಷ್ಕ ವಾತಾವರಣ
ಭಾವನಾ ಹೆಗಡೆ
|

Updated on: Jan 04, 2026 | 7:26 AM

Share

ಬೆಂಗಳೂರು, ಜನವರಿ 04: ಕಳೆದ ಎರಡು ದಿನಗಳಿಂದ ದಕ್ಷಿಣ ಒಳನಾಡಿನ ಪ್ರದೇಶದಲ್ಲಿ ತುಂತುರು (Weather Forecast) ಮಳೆಯಾಗುತ್ತಿದ್ದು, ಇಂದು ಒಣ ಹವೆಯಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಅರೊಂದಿಗೆ ಕರಾವಳಿ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿಯೂ ಶುಷ್ಕ ವಾತಾವರಣ ಇರಲಿದ್ದು, ಬೆಂಗಳೂರಿನಲ್ಲೂ ಮೋಡ ಕವಿದ ವಾತಾವರಣದೊಂದಿಗೆ ಸಾಧಾರಣ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.

ಎಲ್ಲೆಲ್ಲಿ ಒಣಹವೆ?

ಕರಾವಳಿಯ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆಯಿರಲಿದೆ ಎಂದು ಇಲಾಖೆ ತಿಳಿಸಿದೆ. ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರದಲ್ಲಿ ಕಳೆದ ಹಲವು ದಿನಗಳಿಂದ ಒಣಹವೆಯ ವಾತಾವರಣವಿದ್ದು, ಇಂದೂ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಚಾಮರಾಜನಗರ, ಮೈಸೂರು, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿಯೂ ಒಣ ಹವೆಯ ವಾತಾವರಣ ಇರಲಿದೆ.

ಬೆಂಗಳೂರಿನಲ್ಲಿ ಮಂಜು

ಬೆಂಗಳೂರಿನಲ್ಲಿ ಇಂದು ಮಂಜು ಕವಿದ ವಾತಾವರಣವಿದ್ದು, ತಾಪಮಾನ ಕನಿಷ್ಠ 16°C ಇದ್ದು, ಗರಿಷ್ಠ 28°C ಇರಲಿದೆ ಎಂದು ಇಲಾಖೆ ತಿಳಿಸಿದೆ. ಈ ರೀತಿಯ ತೀವ್ರ ಚಳಿಯಿಂದ ಜನರ ಆರೋಗ್ಯದಲ್ಲಿ ಏರುಪೇರಾಗುತ್ತಿದ್ದು, ಬೆಚ್ಚಗಿನ ಹೊದಿಕೆ ಹೊತ್ತುಕೊಳ್ಳಬೇಕು ಹಾಗೂ ಬಿಸಿ ಆಹಾರ ಸೇವನೆ ಮಾಡಬೇಕೆಂದು ವೈದ್ಯರು ಸೂಚಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಭಾವನಾ ಹೆಗಡೆ
ಭಾವನಾ ಹೆಗಡೆ

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More
ಅಸಹ್ಯದಲ್ಲೇ ಅಸಹ್ಯ, ಅದಕ್ಕೆ ನಾಮಿನೇಟ್ ಮಾಡಿದೆ; ಕಿರಣ್​​ ನಾಮಿನೇಟ್
ಅಸಹ್ಯದಲ್ಲೇ ಅಸಹ್ಯ, ಅದಕ್ಕೆ ನಾಮಿನೇಟ್ ಮಾಡಿದೆ; ಕಿರಣ್​​ ನಾಮಿನೇಟ್
ರಾತ್ರಿಯಿಡೀ ಮಳೆ ಅಬ್ಬರ: ಮಲ್ಲೇಶ್ವರಂನಲ್ಲಿ ಮರಬಿದ್ದು 2 ಕಾರುಗಳು ಜಖಂ
ರಾತ್ರಿಯಿಡೀ ಮಳೆ ಅಬ್ಬರ: ಮಲ್ಲೇಶ್ವರಂನಲ್ಲಿ ಮರಬಿದ್ದು 2 ಕಾರುಗಳು ಜಖಂ
ಇಂದು ಸಂಕಷ್ಟ ಚತುರ್ಥಿ; ಗಜಗೌರಿ ವ್ರತ ಮಾಡುವವರಿಗೆ ಮಹತ್ವದ ದಿನ
ಇಂದು ಸಂಕಷ್ಟ ಚತುರ್ಥಿ; ಗಜಗೌರಿ ವ್ರತ ಮಾಡುವವರಿಗೆ ಮಹತ್ವದ ದಿನ
ವಿದ್ಯಾರ್ಥಿಗಳಿಗೆ ಟಂಟಂಗಳೇ ಆಸರೆ: ಸ್ವಲ್ಪ ಯಾಮಾರಿದ್ರೂ ಪ್ರಾಣಕ್ಕೇ ಕುತ್ತು
ವಿದ್ಯಾರ್ಥಿಗಳಿಗೆ ಟಂಟಂಗಳೇ ಆಸರೆ: ಸ್ವಲ್ಪ ಯಾಮಾರಿದ್ರೂ ಪ್ರಾಣಕ್ಕೇ ಕುತ್ತು
ಸ್ಪೀಕರ್​ನಲ್ಲಿ ಭಜನೆ ಹಾಕಿದ್ದಕ್ಕೆ ಪಕ್ಕದ ಮನೆಯವರಿಂದ ಅರ್ಚಕನ ಮೇಲೆ ಹಲ್ಲೆ
ಸ್ಪೀಕರ್​ನಲ್ಲಿ ಭಜನೆ ಹಾಕಿದ್ದಕ್ಕೆ ಪಕ್ಕದ ಮನೆಯವರಿಂದ ಅರ್ಚಕನ ಮೇಲೆ ಹಲ್ಲೆ
ಈ ಬಾರಿ ಮೈಸೂರು ದಸರಾದಲ್ಲಿ ಏರ್ ಶೋ, ಸೇನಾ ಪರೇಡ್
ಈ ಬಾರಿ ಮೈಸೂರು ದಸರಾದಲ್ಲಿ ಏರ್ ಶೋ, ಸೇನಾ ಪರೇಡ್
ಬಂಗಾಳದ ಪ್ರವಾಸದ ವೇಳೆ ಝಲ್ಮುರಿ ಸವಿದ ಬಿಜೆಪಿ ಅಧ್ಯಕ್ಷ ನಿತಿನ್ ನವೀನ್
ಬಂಗಾಳದ ಪ್ರವಾಸದ ವೇಳೆ ಝಲ್ಮುರಿ ಸವಿದ ಬಿಜೆಪಿ ಅಧ್ಯಕ್ಷ ನಿತಿನ್ ನವೀನ್
ನೇಪಾಳದಲ್ಲಿ ಭಾರೀ ಹಿಮಪಾತ; 4 ಮೃತದೇಹಗಳ ಪತ್ತೆ, 12 ಜನ ನಾಪತ್ತೆ
ನೇಪಾಳದಲ್ಲಿ ಭಾರೀ ಹಿಮಪಾತ; 4 ಮೃತದೇಹಗಳ ಪತ್ತೆ, 12 ಜನ ನಾಪತ್ತೆ
ದಸರಾ ರಜೆ: ಕ್ರಿಶ್ಚಿಯನ್ ಶಾಲೆಗಳಿಗೆ ಪ್ರಮೋದ್ ಮುತಾಲಿಕ್ ಖಡಕ್ ಎಚ್ಚರಿಕೆ
ದಸರಾ ರಜೆ: ಕ್ರಿಶ್ಚಿಯನ್ ಶಾಲೆಗಳಿಗೆ ಪ್ರಮೋದ್ ಮುತಾಲಿಕ್ ಖಡಕ್ ಎಚ್ಚರಿಕೆ
ಕಾಂಗ್ರೆಸ್ ಮುಖಂಡನ ಮನೆ ಮುಂದೆ ವಾಮಾಚಾರ: ಲಗ್ನ ಪತ್ರಿಕೆ, ಮೂಳೆ ಬಳಕೆ
ಕಾಂಗ್ರೆಸ್ ಮುಖಂಡನ ಮನೆ ಮುಂದೆ ವಾಮಾಚಾರ: ಲಗ್ನ ಪತ್ರಿಕೆ, ಮೂಳೆ ಬಳಕೆ