AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಹವಾಮಾನ ವರದಿ: ರಾಜ್ಯದಲ್ಲಿ ಮುಂದುವರೆದ ಶುಷ್ಕ ವಾತಾವರಣ

Karnataka Weather: ನಿನ್ನೆ ರಾಜ್ಯದಲ್ಲಿ ಹಲವೆಡೆ ಶುಷ್ಕ ವಾತಾವರಣವಿತ್ತು. ಇಂದೂ ಅದೇ ರೀತಿ ದಕ್ಷಿಣ ಒಳನಾಡು ಸೇರಿದಂತೆ ವಿವಿಧೆಡೆ ಒಣ ಹವೆಯಿರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಮೋಡ ಮುಸುಕಿದ ವಾತಾವರಣ ಇರಲಿದೆ ಎಂದು ಇಲಾಖೆ ತಿಳಿಸಿದ್ದು, ಸಮತೋಲನ ಆಹಾರ ಸೇವನೆಯೊಂದಿಗೆ ಬೆಚ್ಚನೆಯ ಉಡುಪು ಧರಿಸುವಂತೆ ಸಾರ್ವಜನಿಕರಿಗೆ ಸಲಹೆ ನೀಡಲಾಗಿದೆ.

ಕರ್ನಾಟಕ ಹವಾಮಾನ ವರದಿ: ರಾಜ್ಯದಲ್ಲಿ ಮುಂದುವರೆದ ಶುಷ್ಕ ವಾತಾವರಣ
ರಾಜ್ಯದಲ್ಲಿ ಮುಂದುವರೆದ ಶುಷ್ಕ ವಾತಾವರಣ
ಭಾವನಾ ಹೆಗಡೆ
|

Updated on: Jan 05, 2026 | 7:37 AM

Share

ಬೆಂಗಳೂರು, ಜನವರಿ 05: ಕಳೆದ ಕೆಲ ದಿನಗಳಿಂದ ರಾಜ್ಯದ ಕೆಲವೆಡೆ ತುಂತುರು ಮಳೆ, ಇನ್ನೂ ಕೆಲವೆಡೆ ಒಣಹವೆಯ (Weather Forecast) ವಾತಾವರಣ ಮನೆಮಾಡಿದೆ. ಬೆಂಗಳೂರಿನಲ್ಲಿ ಹಲವು ದಿನಗಳಿಂದ ಮಂಜು ಮುಸುಕಿದ ಹವಾಮಾನ ಕಂಡುಬರುತ್ತಿದೆ. ದಕ್ಷಿಣ ಒಳನಾಡು ಸೇರಿದಂತೆ ಕರಾವಳಿ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿಯೂ ನಿನ್ನೆಯಂತೆಯೇ ಇಂದೂ ಒಣ ಹವೆ ಮುಂದುವರಿಯಲಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.

ಎಲ್ಲೆಲ್ಲಿ ಒಣಹವೆ?

ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಚಾಮರಾಜನಗರ, ಮೈಸೂರು, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿಯೂ ಒಣ ಹವೆಯ ವಾತಾವರಣ ಇರಲಿದೆ.

ಕರಾವಳಿಯ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆಯಿರಲಿದೆ ಎಂದು ಇಲಾಖೆ ತಿಳಿಸಿದೆ. ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರದಲ್ಲಿ ಕಳೆದ ಹಲವು ದಿನಗಳಿಂದ ಒಣಹವೆಯ ವಾತಾವರಣವಿದ್ದು, ಇಂದೂ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೆಂಗಳೂರಿನಲ್ಲಿ ಮಂಜು

ಬೆಂಗಳೂರಿನಲ್ಲಿ ಇಂದು ಮಂಜು ಕವಿದ ವಾತಾವರಣವಿದ್ದು, ತಾಪಮಾನ ಕನಿಷ್ಠ 16°C ಇದ್ದು, ಗರಿಷ್ಠ 28°C ಇರಲಿದೆ ಎಂದು ಇಲಾಖೆ ತಿಳಿಸಿದೆ. ಈ ರೀತಿಯ ತೀವ್ರ ಚಳಿಯಿಂದ ಜನರ ಆರೋಗ್ಯದಲ್ಲಿ ಏರುಪೇರಾಗುತ್ತಿದ್ದು, ಬೆಚ್ಚಗಿನ ಹೊದಿಕೆ ಹೊತ್ತುಕೊಳ್ಳಬೇಕು ಹಾಗೂ ಬಿಸಿ ಆಹಾರ ಸೇವನೆ ಮಾಡಬೇಕೆಂದು ವೈದ್ಯರು ಸೂಚಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಕನ್ನಡದ ಯಾವ ಹೀರೋಗೆ ವಿಜಯ್ ತರಹ ಗೆಲ್ಲುವ ತಾಕತ್ತಿದೆ? ಉಪ್ಪಿ ಹೇಳಿದ್ದಿಷ್ಟು
ಕನ್ನಡದ ಯಾವ ಹೀರೋಗೆ ವಿಜಯ್ ತರಹ ಗೆಲ್ಲುವ ತಾಕತ್ತಿದೆ? ಉಪ್ಪಿ ಹೇಳಿದ್ದಿಷ್ಟು
ಕೆರೆಯಂತಾದ ರಾಜ್ಯ ಹೆದ್ದಾರಿ; ಜೀವ ಕೈಯಲ್ಲಿ ಹಿಡಿದು ಸವಾರರ ಸಂಚಾರ!
ಕೆರೆಯಂತಾದ ರಾಜ್ಯ ಹೆದ್ದಾರಿ; ಜೀವ ಕೈಯಲ್ಲಿ ಹಿಡಿದು ಸವಾರರ ಸಂಚಾರ!
ಬೋಳು ತಲೆಯಿದ್ದವರಿಗೆ ಅದೃಷ್ಟವೋ ಅದೃಷ್ಟ! ಯಾಕೆ ಗೊತ್ತಾ?
ಬೋಳು ತಲೆಯಿದ್ದವರಿಗೆ ಅದೃಷ್ಟವೋ ಅದೃಷ್ಟ! ಯಾಕೆ ಗೊತ್ತಾ?
ಇಂದು ಈ ರಾಶಿಯವರು ಸ್ನೇಹಿತರೊಂದಿಗೆ ಹಣಕಾಸು ವ್ಯವಹಾರ ಮಾಡಬೇಡಿ
ಇಂದು ಈ ರಾಶಿಯವರು ಸ್ನೇಹಿತರೊಂದಿಗೆ ಹಣಕಾಸು ವ್ಯವಹಾರ ಮಾಡಬೇಡಿ
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು