AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಹವಾಮಾನ ವರದಿ: ರಾಜ್ಯದಾದ್ಯಂತ ಆವರಿಸಿದ ಒಣ ಹವೆ; ಬೆಂಗಳೂರಲ್ಲಿ ಮಂಜು ಕವಿದ ವಾತಾವರಣ

Karnataka Weather: ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ತೀವ್ರ ಚಳಿ ಮತ್ತು ಒಣ ಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.ಮಕ್ಕಳಿಂದ ವೃದ್ಧರವರೆಗೆ ಎಲ್ಲರೂ ಬೆಚ್ಚನೆಯ ಉಡುಪು ಧರಿಸಲು ಮತ್ತು ಸಮತೋಲಿತ ಆಹಾರ ಸೇವಿಸಲು ವೈದ್ಯರು ಸಲಹೆ ನೀಡಿದ್ದಾರೆ. ಈ ಚಳಿಗಾಲದಲ್ಲಿ ಆರೋಗ್ಯ ಕಾಪಾಡಿಕೊಳ್ಳುವುದು ಅತಿ ಮುಖ್ಯ. ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣವಿದ್ದು, ಕನಿಷ್ಠ 15°C ತಾಪಮಾನ ದಾಖಲಾಗಿದೆ.

ಕರ್ನಾಟಕ ಹವಾಮಾನ ವರದಿ: ರಾಜ್ಯದಾದ್ಯಂತ ಆವರಿಸಿದ ಒಣ ಹವೆ; ಬೆಂಗಳೂರಲ್ಲಿ ಮಂಜು ಕವಿದ ವಾತಾವರಣ
ರಾಜ್ಯದಾದ್ಯಂತ ಆವರಿಸಿದ ಒಣ ಹವೆ
ಭಾವನಾ ಹೆಗಡೆ
|

Updated on: Jan 19, 2026 | 7:42 AM

Share

ಬೆಂಗಳೂರು, ಜನವರಿ 19: ಕೆಲ ದಿನಗಳಿಂದ ರಾಜ್ಯದ ವಿವಿಧೆಡೆ ಒಣ ಹವೆಯ (Weather Forecast) ವಾತಾವರಣವಿದೆ. ಬೆಂಗಳೂರಿನಲ್ಲಿ ಶೀತದೊಂದಿಗೆ ಮಂಜು ಕವಿದ ವಾತಾವರಣ ಇರಲಿದ್ದು, ಬೆಚ್ಚಗಿನ ಉಡುಪು ಧರಿಸುವಂತೆ ವೈದ್ಯರು ಸಲಹೆ ನೀಡಿದ್ದಾರೆ. ಇಂದು ಕರಾವಳಿ ಸೇರಿದಂತೆ ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನಲ್ಲಿಯೂ ತೀವ್ರ ಚಳಿಯ ಜೊತೆಗೆ ಒಣಹವೆಯಿರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಎಲ್ಲೆಲ್ಲಿ ಒಣಹವೆ?

ದಕ್ಷಿಣ ಒಳನಾಡಿನ ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬಳ್ಳಾರಿ, ಚಾಮರಾಜನಗರ, ತುಮಕೂರು, ಚಿಕ್ಕಬಳ್ಳಾಪುರ, ರಾಮನಗರ, ಮಂಡ್ಯ ಮತ್ತು ಮೈಸೂರು ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೊಡಗು, ಹಾಸನ, ಶಿವಮೊಗ್ಗ ಮತ್ತು ವಿಜಯನಗರ ಜಿಲ್ಲೆಗಳಲ್ಲಿಯೂ ಒಣ ಹವೆಯ ವಾತಾವರಣ ಇರಲಿದೆ.

ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರದಲ್ಲಿ ಕಳೆದ ಹಲವು ದಿನಗಳಿಂದ ಒಣಹವೆಯ ವಾತಾವರಣವಿದ್ದು, ಇಂದೂ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿಯ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆಯಿರಲಿದೆ ಎಂದು ಇಲಾಖೆ ತಿಳಿಸಿದೆ.

ಬೆಂಗಳೂರಿನಲ್ಲಿ ಮಂಜು ಮುಸುಕಿದ ವಾತಾವರಣ

ಇಂದು ಬೆಂಗಳೂರಿನ ತಾಪಮಾನ ಕನಿಷ್ಠ 15°C ಇದ್ದು, ಗರಿಷ್ಠ 30°C ಇರಲಿದೆ ಎಂದು ಇಲಾಖೆ ತಿಳಿಸಿದೆ. ಈ ರೀತಿಯ ತೀವ್ರ ಚಳಿಯಿಂದ ಜನರ ಆರೋಗ್ಯದಲ್ಲಿ ಏರುಪೇರಾಗುತ್ತಿದ್ದು, ಬೆಚ್ಚಗಿನ ಹೊದಿಕೆ ಹೊತ್ತುಕೊಳ್ಳಬೇಕು ಹಾಗೂ ಬಿಸಿ ಆಹಾರ ಸೇವನೆ ಮಾಡಬೇಕೆಂದು ವೈದ್ಯರು ಸೂಚಿಸಿದ್ದಾರೆ. ಇಂದು ನಗರದಲ್ಲಿ ಎಂದಿನಂತೆ ಚಳಿಯ ಜೊತೆಗೆ ಮಂಜು ಮುಸುಕಿದ ವಾತಾವರಣವಿರುವುದರಿಂದ ಮಕ್ಕಳಿಂದ ಹಿಡಿದು ವೃದ್ಧರವರೆಗೂ ಎಚ್ಚರಿಕೆಯಿಂದಿರುವಂತೆ ಸಲಹೆ ನೀಡಿರುವ ಹವಾಮಾನ ಇಲಾಖೆ, ಬೆಚ್ಚನೆಯ ಉಡುಪು ಧರಿಸುವುದರ ಜೊತೆಗೆ ಸಮತೋಲನ ಆಹಾರ ಸೇವನೆಗೆ ಒತ್ತು ನೀಡುವಂತೆ ಸಲಹೆ ನೀಡಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಕೊಯಮತ್ತೂರಿನ ಬೇಕರಿಯಿಂದ 10,000 ರೂ. ಸಿಗರೇಟ್ ಪ್ಯಾಕೆಟ್ ಕದ್ದ ಕಳ್ಳ!
ಕೊಯಮತ್ತೂರಿನ ಬೇಕರಿಯಿಂದ 10,000 ರೂ. ಸಿಗರೇಟ್ ಪ್ಯಾಕೆಟ್ ಕದ್ದ ಕಳ್ಳ!
ಮೋದಿ ಬಹಳ ಸುಂದರ ವ್ಯಕ್ತಿ; ಗೆಳೆಯನನ್ನು ಹೊಗಳಿದ ಟ್ರಂಪ್
ಮೋದಿ ಬಹಳ ಸುಂದರ ವ್ಯಕ್ತಿ; ಗೆಳೆಯನನ್ನು ಹೊಗಳಿದ ಟ್ರಂಪ್
ಈ ವರ್ಷದ ಬಿಗ್ ಬಾಸ್ ಟಿಆರ್​ಪಿ ಬಗ್ಗೆ ನನಗೆ ಭಯ ಶುರು ಆಗಿದೆ: ತುಕಾಲಿ ಸಂತು
ಈ ವರ್ಷದ ಬಿಗ್ ಬಾಸ್ ಟಿಆರ್​ಪಿ ಬಗ್ಗೆ ನನಗೆ ಭಯ ಶುರು ಆಗಿದೆ: ತುಕಾಲಿ ಸಂತು
ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ; ಹತ್ತಾರು ಮನೆಗಳಿಗೆ ಹಾನಿ
ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ; ಹತ್ತಾರು ಮನೆಗಳಿಗೆ ಹಾನಿ
ಅಡ್ಡ ಮತದಾನದ ಭೀತಿ: ಕಾಂಗ್ರೆಸ್ ಶಾಸಕರಿಗೆ ಮತದಾನದ ತರಬೇತಿ
ಅಡ್ಡ ಮತದಾನದ ಭೀತಿ: ಕಾಂಗ್ರೆಸ್ ಶಾಸಕರಿಗೆ ಮತದಾನದ ತರಬೇತಿ
ಬಿಗ್​​ಬಾಸ್​ನಿಂದ ಜೀವನದಲ್ಲಾದ ಬದಲಾವಣೆ ಏನು: ಕರಿಬಸಪ್ಪ ಮಾತು
ಬಿಗ್​​ಬಾಸ್​ನಿಂದ ಜೀವನದಲ್ಲಾದ ಬದಲಾವಣೆ ಏನು: ಕರಿಬಸಪ್ಪ ಮಾತು
ಮೇಲ್ಮನೆ ಮೇಲಾಟ:ಕಾಂಗ್ರೆಸ್​​ ಕ್ಯಾಂಪ್​ ಸೇರಿಕೊಂಡ ಬಿಜೆಪಿ ಉಚ್ಛಾಟಿತ ಶಾಸಕ
ಮೇಲ್ಮನೆ ಮೇಲಾಟ:ಕಾಂಗ್ರೆಸ್​​ ಕ್ಯಾಂಪ್​ ಸೇರಿಕೊಂಡ ಬಿಜೆಪಿ ಉಚ್ಛಾಟಿತ ಶಾಸಕ
ಸಚಿವ ಸ್ಥಾನ ಸಂಬಂಧ ಜಮೀರ್​​ ಅಹ್ಮದ್​​ ಸ್ಫೋಟಕ ಹೇಳಿಕೆ
ಸಚಿವ ಸ್ಥಾನ ಸಂಬಂಧ ಜಮೀರ್​​ ಅಹ್ಮದ್​​ ಸ್ಫೋಟಕ ಹೇಳಿಕೆ
ಐಸೊಬ್ಯುಟನಾಲ್; ಶೀಘ್ರದಲ್ಲೇ ಬರಲಿದೆ ಪರಿಸರ ಸ್ನೇಹಿ ಬಯೋ ಡೀಸೆಲ್!
ಐಸೊಬ್ಯುಟನಾಲ್; ಶೀಘ್ರದಲ್ಲೇ ಬರಲಿದೆ ಪರಿಸರ ಸ್ನೇಹಿ ಬಯೋ ಡೀಸೆಲ್!
ಅವರು ಹೋಮಕ್ಕೆ ಕೋಟಿ ಸುರಿದರೆ, ನಾನು ರಂಗಭೂಮಿಗೆ ವ್ಯಯಿಸುತ್ತೇನೆ; ಪ್ರಕಾಶ್
ಅವರು ಹೋಮಕ್ಕೆ ಕೋಟಿ ಸುರಿದರೆ, ನಾನು ರಂಗಭೂಮಿಗೆ ವ್ಯಯಿಸುತ್ತೇನೆ; ಪ್ರಕಾಶ್