AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಸೇರಿದಂತೆ ರಾಜ್ಯದೆಲ್ಲೆಡೆ ಶುಷ್ಕ ವಾತಾವರಣ

Karnataka Weather: ಇಂದಿನಂತೆ ಕೆಲ ದಿನಗಳ ಕಾಲ ರಾಜ್ಯದೆಲ್ಲೆಡೆ ಶುಷ್ಕ ವಾತಾವರಣವೇ ಇರಲಿದೆ ಎಂದು ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣವಿದ್ದು, ರಾಜ್ಯದಲ್ಲಿ ತೀವ್ರ ಚಳಿ ಮತ್ತು ಒಣ ಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮಕ್ಕಳಿಂದ ವೃದ್ಧರವರೆಗೆ ಎಲ್ಲರೂ ಬೆಚ್ಚನೆಯ ಉಡುಪು ಧರಿಸಲು ಮತ್ತು ಸಮತೋಲಿತ ಆಹಾರ ಸೇವಿಸಲು ವೈದ್ಯರು ಸಲಹೆ ನೀಡಿದ್ದಾರೆ.

ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಸೇರಿದಂತೆ ರಾಜ್ಯದೆಲ್ಲೆಡೆ ಶುಷ್ಕ ವಾತಾವರಣ
ಬೆಂಗಳೂರು ಸೇರಿದಂತೆ ರಾಜ್ಯದೆಲ್ಲೆಡೆ ಶುಷ್ಕ ವಾತಾವರಣ
ಭಾವನಾ ಹೆಗಡೆ
|

Updated on: Jan 23, 2026 | 7:39 AM

Share

ಬೆಂಗಳೂರು, ಜನವರಿ 23: ನಗರದಲ್ಲಿ ಚಳಿಯ ಪ್ರಮಾಣದಲ್ಲಿ ಏರಿಳಿಕೆಯಾಗುತ್ತಿದ್ದು, ಒಣ ಹವೆಯ ವಾತಾವರಣವಿದೆ (Weather Forecast) . ಇಂದು ಕರಾವಳಿ ಸೇರಿದಂತೆ ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನಲ್ಲಿಯೂ ತೀವ್ರ ಚಳಿಯ ಜೊತೆಗೆ ಒಣಹವೆಯಿರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ರಾಜ್ಯದೆಲ್ಲೆಡೆ ಕಳೆದ ಕೆಲ ದಿನಗಳಿಂದ ಒಣ ಹವೆಯ ವಾತಾವರಣವಿದ್ದು, ಇನ್ನೂ ನಾಲ್ಕು ದಿನ ಇದೇ ಹವಾಮಾನ ಇರಲಿದೆ ಎಂದು ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಶೀತದೊಂದಿಗೆ ಮಂಜು ಕವಿದ ವಾತಾವರಣ ಇರಲಿದ್ದು, ಬೆಚ್ಚಗಿನ ಉಡುಪು ಧರಿಸುವಂತೆ ವೈದ್ಯರು ಸಲಹೆ ನೀಡಿದ್ದಾರೆ.

ಎಲ್ಲೆಲ್ಲಿ ಒಣಹವೆ?

ದಕ್ಷಿಣ ಒಳನಾಡಿನ ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬಳ್ಳಾರಿ, ಚಾಮರಾಜನಗರ, ತುಮಕೂರು, ಚಿಕ್ಕಬಳ್ಳಾಪುರ, ರಾಮನಗರ, ಮಂಡ್ಯ ಮತ್ತು ಮೈಸೂರು ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೊಡಗು, ಹಾಸನ, ಶಿವಮೊಗ್ಗ ಮತ್ತು ವಿಜಯನಗರ ಜಿಲ್ಲೆಗಳಲ್ಲಿಯೂ ಒಣ ಹವೆಯ ವಾತಾವರಣ ಇರಲಿದೆ.

ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರದಲ್ಲಿ ಕಳೆದ ಹಲವು ದಿನಗಳಿಂದ ಒಣಹವೆಯ ವಾತಾವರಣವಿದ್ದು, ಇಂದೂ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿಯ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆಯಿರಲಿದೆ ಎಂದು ಇಲಾಖೆ ತಿಳಿಸಿದೆ.

ಬೆಂಗಳೂರಿನಲ್ಲಿ ಮಂಜು

ಇಂದು ಬೆಂಗಳೂರಿನ ತಾಪಮಾನ ಕನಿಷ್ಠ 15°C ಇದ್ದು, ಗರಿಷ್ಠ 30°C ಇರಲಿದೆ ಎಂದು ಇಲಾಖೆ ತಿಳಿಸಿದೆ. ಈ ರೀತಿಯ ತೀವ್ರ ಚಳಿಯಿಂದ ಜನರ ಆರೋಗ್ಯದಲ್ಲಿ ಏರುಪೇರಾಗುತ್ತಿದ್ದು, ಬೆಚ್ಚಗಿನ ಹೊದಿಕೆ ಹೊತ್ತುಕೊಳ್ಳಬೇಕು ಹಾಗೂ ಬಿಸಿ ಆಹಾರ ಸೇವನೆ ಮಾಡಬೇಕೆಂದು ವೈದ್ಯರು ಸೂಚಿಸಿದ್ದಾರೆ. ಇಂದು ನಗರದಲ್ಲಿ ಎಂದಿನಂತೆ ಚಳಿಯ ಜೊತೆಗೆ ಮಂಜು ಮುಸುಕಿದ ವಾತಾವರಣವಿರುವುದರಿಂದ ಮಕ್ಕಳಿಂದ ಹಿಡಿದು ವೃದ್ಧರವರೆಗೂ ಎಚ್ಚರಿಕೆಯಿಂದಿರುವಂತೆ ಸಲಹೆ ನೀಡಿರುವ ಹವಾಮಾನ ಇಲಾಖೆ, ಬೆಚ್ಚನೆಯ ಉಡುಪು ಧರಿಸುವುದರ ಜೊತೆಗೆ ಸಮತೋಲನ ಆಹಾರ ಸೇವನೆಗೆ ಒತ್ತು ನೀಡುವಂತೆ ಸಲಹೆ ನೀಡಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ಹಾಳಾದ ಲಿಫ್ಟ್​​ನಲ್ಲಿ ಸಿಲುಕಿದ ವ್ಯಕ್ತಿಯ ಶಾಕಿಂಗ್ ವಿಡಿಯೋ ಇಲ್ಲಿದೆ
ಹಾಳಾದ ಲಿಫ್ಟ್​​ನಲ್ಲಿ ಸಿಲುಕಿದ ವ್ಯಕ್ತಿಯ ಶಾಕಿಂಗ್ ವಿಡಿಯೋ ಇಲ್ಲಿದೆ
ಕ್ಲಾಸ್ ರೂಂನಲ್ಲೇ ಶಿಕ್ಷಕನಿಗೆ ಹೊಡೆದ 10ನೇ ತರಗತಿ ವಿದ್ಯಾರ್ಥಿ!
ಕ್ಲಾಸ್ ರೂಂನಲ್ಲೇ ಶಿಕ್ಷಕನಿಗೆ ಹೊಡೆದ 10ನೇ ತರಗತಿ ವಿದ್ಯಾರ್ಥಿ!
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ
ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ
ದಂಪತಿ ಜಗಳ ಶಾಲೆ ತನಕ:ಶಿಕ್ಷಕನಿಗಾಗಿ ಗಲಾಟೆ ಮಾಡಿದ ಪತ್ನಿ ಹೇಳಿದ್ದೇನು?
ದಂಪತಿ ಜಗಳ ಶಾಲೆ ತನಕ:ಶಿಕ್ಷಕನಿಗಾಗಿ ಗಲಾಟೆ ಮಾಡಿದ ಪತ್ನಿ ಹೇಳಿದ್ದೇನು?