AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಹವಾಮಾನ ವರದಿ: ರಾಜ್ಯದಲ್ಲಿ ಚಳಿಗಾಲದ ಪ್ರಭಾವ ಹೆಚ್ಚಳ; ಇಂದು ಕೂಡ ಹಲವೆಡೆ ಒಣ ಹವೆ

Karnataka Weather: ರಾಜ್ಯದಲ್ಲಿ ಚಳಿಯ ಪ್ರಭಾವ ಹೆಚ್ಚಿದ್ದು, ಬೆಂಗಳೂರು ಸೇರಿ ದಕ್ಷಿಣ ಒಳನಾಡು, ಕರಾವಳಿ ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಒಣ ಹವೆಯ ವಾತಾವರಣ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಮೋಡ ಮುಸುಕಿದ ವಾತಾವರಣ ಇರಲಿದೆ ಎಂದು ಇಲಾಖೆ ತಿಳಿಸಿದ್ದು, ಸಮತೋಲನ ಆಹಾರ ಸೇವನೆಯೊಂದಿಗೆ ಬೆಚ್ಚನೆಯ ಉಡುಪು ಧರಿಸುವಂತೆ ಸಾರ್ವಜನಿಕರಿಗೆ ಸಲಹೆ ನೀಡಲಾಗಿದೆ.

ಕರ್ನಾಟಕ ಹವಾಮಾನ ವರದಿ: ರಾಜ್ಯದಲ್ಲಿ ಚಳಿಗಾಲದ ಪ್ರಭಾವ ಹೆಚ್ಚಳ; ಇಂದು ಕೂಡ ಹಲವೆಡೆ ಒಣ ಹವೆ
Bengaluru Temperature
ಭಾವನಾ ಹೆಗಡೆ
|

Updated on:Jan 06, 2026 | 7:46 AM

Share

ಬೆಂಗಳೂರು, ಜನವರಿ 06: ರಾಜ್ಯದಲ್ಲಿ ಚಳಿಗಾಲದ ಪ್ರಭಾವ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಹಲವೆಡೆ ಮಂಜು ಹಾಗೂ ಒಣ ಹವೆಯ (Weather Forecast) ವಾತಾವರಣ ಜನಜೀವನದ ಮೇಲೆ ಪ್ರಭಾವ ಬೀರುತ್ತಿದೆ. ಕಳೆದ ಕೆಲ ದಿನಗಳಿಂದ ಕೆಲವೆಡೆ ತುಂತುರು ಮಳೆಯಾದರೂ, ರಾಜ್ಯದ ಬಹುತೇಕ ಭಾಗಗಳಲ್ಲಿ ಒಣ ಹವೆಯೇ ಮುಂದುವರಿದಿದೆ. ಹವಾಮಾನ ಇಲಾಖೆ ನೀಡಿರುವ ಮುನ್ಸೂಚನೆಯಂತೆ, ನಿನ್ನೆಯಂತೆಯೇ ಇಂದೂ ದಕ್ಷಿಣ ಒಳನಾಡು, ಕರಾವಳಿ ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯಲಿದೆ.

ಎಲ್ಲೆಲ್ಲಿ ಒಣಹವೆ?

ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಚಾಮರಾಜನಗರ, ಮೈಸೂರು, ತುಮಕೂರು ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಮಳೆಯ ಲಕ್ಷಣಗಳಿಲ್ಲದೆ ಒಣ ಹವೆಯ ವಾತಾವರಣವಿರಲಿದೆ.

ಇದೇ ವೇಳೆ ಕರಾವಳಿ ಭಾಗದ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿಯೂ ಒಣ ಹವೆ ಮುಂದುವರಿಯಲಿದೆ ಎಂದು ಇಲಾಖೆ ತಿಳಿಸಿದೆ. ಉತ್ತರ ಒಳನಾಡಿನ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಹಾಗೂ ವಿಜಯನಗರ ಜಿಲ್ಲೆಗಳಲ್ಲಿಯೂ ಕಳೆದ ಹಲವು ದಿನಗಳಿಂದ ಕಾಣಿಸಿಕೊಂಡಿರುವ ಒಣ ಹವೆಯ ವಾತಾವರಣ ಇಂದು ಸಹ ಮುಂದುವರಿಯಲಿದೆ.

ರಾಜಧಾನಿಯಲ್ಲಿ ಚಳಿ

ರಾಜಧಾನಿ ಬೆಂಗಳೂರಿನಲ್ಲಿ ಚಳಿಯ ತೀವ್ರತೆ ಹೆಚ್ಚಾಗಿದ್ದು, ಬೆಳಗಿನ ಜಾವ ಮಂಜು ಮುಸುಕಿದ ವಾತಾವರಣ ಕಂಡುಬರುತ್ತಿದೆ. ಇಂದು ನಗರದ ಕನಿಷ್ಠ ತಾಪಮಾನ 15 ಡಿಗ್ರಿ ಸೆಲ್ಸಿಯಸ್ ಹಾಗೂ ಗರಿಷ್ಠ 28 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಳಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜನರ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇರುವುದರಿಂದ, ಬೆಚ್ಚಗಿನ ಉಡುಪು ಧರಿಸುವುದು ಹಾಗೂ ಬಿಸಿ ಆಹಾರ ಸೇವಿಸುವಂತೆ ವೈದ್ಯರು ಸಲಹೆ ನೀಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:33 am, Tue, 6 January 26

Follow Us
Bhavana Hegde
Bhavana Hegde

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?