AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಒಣ ಹವೆಯ ವಾತಾವರಣ

Karnataka Weather: ಕಳೆದ ಹಲವಾರು ದಿನಗಳಿಂದ ರಾಜ್ಯದೆಲ್ಲೆಡೆ ಒಣ ಹವೆಯ ವಾತಾವರಣ ಆವರಿಸಿದ್ದು, ಬೆಂಗಳೂರಿನಲ್ಲೂ ತಾಪಮಾನ ಸ್ವಲ್ಪ ಸುಧಾರಣೆ ಕಂಡಿದೆ. ಇಂದೂ ಸಹ ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಶುಷ್ಕ ವಾತಾವರಣವಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು, ಇನ್ನೂ ಹಲವು ದಿನಗಳವರೆಗೂ ಇದೇ ವಾತಾವರಣ ಇರಬಹುದು ಎಂದು ಇಲಾಖೆ ಮುನ್ಸೂಚನೆ ನಿಡಿದೆ.

ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಒಣ ಹವೆಯ ವಾತಾವರಣ
ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಒಣ ಹವೆಯ ವಾತಾವರಣ
ಭಾವನಾ ಹೆಗಡೆ
|

Updated on: Feb 17, 2026 | 7:48 AM

Share

ಬೆಂಗಳೂರು, ಫೆಬ್ರವರಿ 17: ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಒಣ ಹವೆ (Weather Forecast) ಇಂದೂ ಮುಂದುವರೆಯಲಿದ್ದು, ದಕ್ಷಿಣ ಒಳನಾಡಿನಲ್ಲಿಯೂ ಶುಷ್ಕ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಹತ್ತಾರು ದಿನಗಳಿಂದ ರಾಜ್ಯದಲ್ಲಿ ಒಣ ಹವೆ ಆವರಿಸಿದೆ. ಬೆಂಗಳೂರಿನಲ್ಲಿ ಚಳಿಯ ಹವಾಮಾನ ತಕ್ಕಮಟ್ಟಿಗೆ ಇಂದು ಸುಧಾರಿಸಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಕೆಲ ದಿನಗಳಿಂದ ಒಣ ಹವೆಯ ವಾತಾವರಣವಿದೆ. ಇನ್ನೂ ಕೆಲ ದಿನಗಳ ಕಾಲ ಇದೇ ವಾತಾವರಣ ಮುಂದುವರೆಯಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ.

ಎಲ್ಲೆಲ್ಲಿ ಒಣಹವೆ?

ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರದಲ್ಲಿ ಕಳೆದ ಹಲವು ದಿನಗಳಿಂದ ಒಣಹವೆಯ ವಾತಾವರಣವಿದ್ದು, ಇಂದೂ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿಯ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆಯಿರಲಿದೆ ಎಂದು ಇಲಾಖೆ ತಿಳಿಸಿದೆ. ದಕ್ಷಿಣ ಒಳನಾಡಿನ ಮೈಸೂರು , ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಚಾಮರಾಜನಗರ , ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬಳ್ಳಾರಿ, ತುಮಕೂರು, ಚಿಕ್ಕಬಳ್ಳಾಪುರ, ರಾಮನಗರ, ಮಂಡ್ಯ ಮತ್ತು, ಚಿತ್ರದುರ್ಗ, ದಾವಣಗೆರೆ ಮತ್ತು ವಿಜಯನಗರ ಜಿಲ್ಲೆಗಳಲ್ಲಿಯೂ ಒಣ ಹವೆಯ ವಾತಾವರಣ ಇರಲಿದೆ.

ಬೆಂಗಳೂರಿನಲ್ಲಿ ಶುಷ್ಕ ವಾತಾವರಣ

ಇಂದು ಬೆಂಗಳೂರಿನ ತಾಪಮಾನ ಕನಿಷ್ಠ 17°C ಇದ್ದು, ಗರಿಷ್ಠ 31°C ಇರಲಿದೆ ಎಂದು ಇಲಾಖೆ ತಿಳಿಸಿದೆ. ಈ ರೀತಿಯ ತೀವ್ರ ಚಳಿಯಿಂದ ಜನರ ಆರೋಗ್ಯದಲ್ಲಿ ಏರುಪೇರಾಗುತ್ತಿದ್ದು, ಬೆಚ್ಚಗಿನ ಹೊದಿಕೆ ಹೊತ್ತುಕೊಳ್ಳಬೇಕು ಹಾಗೂ ಬಿಸಿ ಆಹಾರ ಸೇವನೆ ಮಾಡಬೇಕೆಂದು ವೈದ್ಯರು ಸೂಚಿಸಿದ್ದಾರೆ. ಇಂದು ನಗರದಲ್ಲಿ ಎಂದಿನಂತೆ ಚಳಿಯ ವಾತಾವರಣವಿರುವುದರಿಂದ ಮಕ್ಕಳಿಂದ ಹಿಡಿದು ವೃದ್ಧರವರೆಗೂ ಎಚ್ಚರಿಕೆಯಿಂದಿರುವಂತೆ ಸಲಹೆ ನೀಡಿರುವ ಹವಾಮಾನ ಇಲಾಖೆ, ಬೆಚ್ಚನೆಯ ಉಡುಪು ಧರಿಸುವುದರ ಜೊತೆಗೆ ಸಮತೋಲನ ಆಹಾರ ಸೇವನೆಗೆ ಒತ್ತು ನೀಡುವಂತೆ ಸಲಹೆ ನೀಡಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Bhavana Hegde
Bhavana Hegde

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​
ಬೆಂಗಳೂರಿನ ಆಟೋ ಚಾಲಕನಿಗೆ ಹಿಂದಿಯಲ್ಲಿ ನಿಂದಿಸಿದ ಮಹಿಳೆ
ಬೆಂಗಳೂರಿನ ಆಟೋ ಚಾಲಕನಿಗೆ ಹಿಂದಿಯಲ್ಲಿ ನಿಂದಿಸಿದ ಮಹಿಳೆ