AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಹವಾಮಾನ ವರದಿ: ರಾಜ್ಯದೆಲ್ಲೆಡೆ ಶೀತದ ವಾತಾವರಣ, ಒಣ ಹವೆ

Karnataka Weather: ರಾಜ್ಯದಲ್ಲಿ ಹಲವು ದಿನಗಳಿಂದ ಒಣ ಹವೆಯಿದ್ದು, ನಿನ್ನೆಯಷ್ಟೇ ತುಂತುರು ಮಳೆಯಾಗಿತ್ತು. ಆದರೆ ಇಂದು ಮತ್ತೊಮ್ಮೆ ರಾಜ್ಯದೆಲ್ಲೆಡೆ ಒಣ ಹವೆ ಆವರಿಸಿದೆ. ಬೆಂಗಳೂರಿನಲ್ಲಿಮೋಡ ಕವಿದ ವಾತಾವರಣವಿದ್ದು, ರಾಜ್ಯದಲ್ಲಿ ತೀವ್ರ ಚಳಿ ಮತ್ತು ಒಣ ಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮಕ್ಕಳಿಂದ ವೃದ್ಧರವರೆಗೆ ಎಲ್ಲರೂ ಬೆಚ್ಚನೆಯ ಉಡುಪು ಧರಿಸಲು ಮತ್ತು ಸಮತೋಲಿತ ಆಹಾರ ಸೇವಿಸಲು ವೈದ್ಯರು ಸಲಹೆ ನೀಡಿದ್ದಾರೆ.

ಕರ್ನಾಟಕ ಹವಾಮಾನ ವರದಿ: ರಾಜ್ಯದೆಲ್ಲೆಡೆ ಶೀತದ ವಾತಾವರಣ, ಒಣ ಹವೆ
ರಾಜ್ಯದೆಲ್ಲೆಡೆ ಶೀತದ ವಾತಾವರಣ, ಒಣ ಹವೆ
ಭಾವನಾ ಹೆಗಡೆ
|

Updated on: Jan 27, 2026 | 7:40 AM

Share

ಬೆಂಗಳೂರು, ಜನವರಿ 27: ಬೆಂಗಳೂರು ಸೇರಿ ರಾಜ್ಯದ ಹಲವೆಡೆ ನಿನ್ನೆ ಮೋಡ ಕವಿದು, ಸಾಧಾರಣ ಪ್ರಮಾಣದ ಮಳೆಯಾಗಿತ್ತು. ಆದರೆ ಇಂದು ರಾಜ್ಯದ ಹವಾಮಾನ (Weather Forecast) ಯಥಾಸ್ಥಿತಿ ತಲುಪಿದೆ. ಕರಾವಳಿ ಮತ್ತು ಉತ್ತರ ಒಳನಾಡು ತೀವ್ರ ಚಳಿಯ ಜೊತೆಗೆ ಒಣಹವೆಯಿರಲಿದ್ದು, ದಕ್ಷಿಣ ಒಳನಾಡಿನಲ್ಲಿಯೂ ಶುಷ್ಕ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಶೀತದೊಂದಿಗೆ ಮಂಜು ಕವಿದ ವಾತಾವರಣ ಇರಲಿದ್ದು, ಬೆಚ್ಚಗಿನ ಉಡುಪು ಧರಿಸುವಂತೆ ವೈದ್ಯರು ಸಲಹೆ ನೀಡಿದ್ದಾರೆ.

ಎಲ್ಲೆಲ್ಲಿ ಒಣಹವೆ?

ದಕ್ಷಿಣ ಒಳನಾಡಿನ ಮೈಸೂರು , ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಚಾಮರಾಜನಗರ , ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬಳ್ಳಾರಿ, ತುಮಕೂರು, ಚಿಕ್ಕಬಳ್ಳಾಪುರ, ರಾಮನಗರ, ಮಂಡ್ಯ ಮತ್ತು, ಚಿತ್ರದುರ್ಗ, ದಾವಣಗೆರೆ ಮತ್ತು ವಿಜಯನಗರ ಜಿಲ್ಲೆಗಳಲ್ಲಿಯೂ ಒಣ ಹವೆಯ ವಾತಾವರಣ ಇರಲಿದೆ.

ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರದಲ್ಲಿ ಕಳೆದ ಹಲವು ದಿನಗಳಿಂದ ಒಣಹವೆಯ ವಾತಾವರಣವಿದ್ದು, ಇಂದೂ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿಯ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆಯಿರಲಿದೆ ಎಂದು ಇಲಾಖೆ ತಿಳಿಸಿದೆ.

ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ

ಇಂದು ನಗರದಲ್ಲಿ ಎಂದಿನಂತೆ ಚಳಿಯ ಜೊತೆಗೆ ಮೋಡ ಕವಿದ ವಾತಾವರಣವಿರುವುದರಿಂದ ಮಕ್ಕಳಿಂದ ಹಿಡಿದು ವೃದ್ಧರವರೆಗೂ ಎಚ್ಚರಿಕೆಯಿಂದಿರುವಂತೆ ಸಲಹೆ ನೀಡಿರುವ ಹವಾಮಾನ ಇಲಾಖೆ, ಬೆಚ್ಚನೆಯ ಉಡುಪು ಧರಿಸುವುದರ ಜೊತೆಗೆ ಸಮತೋಲನ ಆಹಾರ ಸೇವನೆಗೆ ಒತ್ತು ನೀಡುವಂತೆ ಸಲಹೆ ನೀಡಿದೆ. ಇಂದು ಬೆಂಗಳೂರಿನ ತಾಪಮಾನ ಕನಿಷ್ಠ 17°C ಇದ್ದು, ಗರಿಷ್ಠ 30°C ಇರಲಿದೆ ಎಂದು ಇಲಾಖೆ ತಿಳಿಸಿದೆ. ಈ ರೀತಿಯ ತೀವ್ರ ಚಳಿಯಿಂದ ಜನರ ಆರೋಗ್ಯದಲ್ಲಿ ಏರುಪೇರಾಗುತ್ತಿದ್ದು, ಬೆಚ್ಚಗಿನ ಹೊದಿಕೆ ಹೊತ್ತುಕೊಳ್ಳಬೇಕು ಹಾಗೂ ಬಿಸಿ ಆಹಾರ ಸೇವನೆ ಮಾಡಬೇಕೆಂದು ವೈದ್ಯರು ಸೂಚಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಇದೆಂಥಾ ಪ್ರಶ್ನೆ? ಪತ್ರಕರ್ತರ ಪ್ರಶ್ನೆಗೆ ಕೆರಳಿದ ಇಶಾನ್ ಕಿಶನ್
ಇದೆಂಥಾ ಪ್ರಶ್ನೆ? ಪತ್ರಕರ್ತರ ಪ್ರಶ್ನೆಗೆ ಕೆರಳಿದ ಇಶಾನ್ ಕಿಶನ್
ಒಳಮೀಸಲಾತಿ ಜಟಾಪಟಿ: ಸಭೆಯಲ್ಲಿ ಮಹತ್ವದ ತೀರ್ಮಾನ
ಒಳಮೀಸಲಾತಿ ಜಟಾಪಟಿ: ಸಭೆಯಲ್ಲಿ ಮಹತ್ವದ ತೀರ್ಮಾನ
ಅಶ್ಲೀಲ ಕಮೆಂಟ್ ಪ್ರಕರಣ: ರಮ್ಯಾ ಹಠ ಹಿಡಿದು ಕೇಸ್ ಹಾಕಿದ್ದಕ್ಕೆ ಇದೇ ಕಾರಣ
ಅಶ್ಲೀಲ ಕಮೆಂಟ್ ಪ್ರಕರಣ: ರಮ್ಯಾ ಹಠ ಹಿಡಿದು ಕೇಸ್ ಹಾಕಿದ್ದಕ್ಕೆ ಇದೇ ಕಾರಣ
ಆರ್​ ಅಶೋಕ್‌ ಹೇಳಿದ ಮನಕಲಕುವ ಸತ್ಯ ಘಟನೆಗೆ ಸದನವೇ ನಿಶ್ಯಬ್ದ
ಆರ್​ ಅಶೋಕ್‌ ಹೇಳಿದ ಮನಕಲಕುವ ಸತ್ಯ ಘಟನೆಗೆ ಸದನವೇ ನಿಶ್ಯಬ್ದ
ಯುಗಾದಿ ವರ್ಷ ಭವಿಷ್ಯ; ಈ ರಾಶಿಗೆ ಆರ್ಥಿಕ ಪ್ರಗತಿ ಮತ್ತು ಆಕಸ್ಮಿಕ ಧನಯೋಗ
ಯುಗಾದಿ ವರ್ಷ ಭವಿಷ್ಯ; ಈ ರಾಶಿಗೆ ಆರ್ಥಿಕ ಪ್ರಗತಿ ಮತ್ತು ಆಕಸ್ಮಿಕ ಧನಯೋಗ
ಅಶ್ಲೀಲ ಕಮೆಂಟ್ ಕೇಸು, ನ್ಯಾಯಾಲಯಕ್ಕೆ ಬಂದ ನಟಿ ರಮ್ಯಾ: ವಿಡಿಯೋ
ಅಶ್ಲೀಲ ಕಮೆಂಟ್ ಕೇಸು, ನ್ಯಾಯಾಲಯಕ್ಕೆ ಬಂದ ನಟಿ ರಮ್ಯಾ: ವಿಡಿಯೋ
ಯುಗಾದಿ ವರ್ಷ ಭವಿಷ್ಯ; ವೃಶ್ಚಿಕ ರಾಶಿಗೆ ಈ ವರ್ಷ ಹೇಗಿರಲಿದೆ?
ಯುಗಾದಿ ವರ್ಷ ಭವಿಷ್ಯ; ವೃಶ್ಚಿಕ ರಾಶಿಗೆ ಈ ವರ್ಷ ಹೇಗಿರಲಿದೆ?
ಬೆಂಗಳೂರಿನಲ್ಲಿ ತಲೆ ಎತ್ತಲಿದೆ ಅಂತಾರಾಷ್ಟ್ರೀಯ ಮಟ್ಟದ ಬಸ್​ ನಿಲ್ದಾಣ
ಬೆಂಗಳೂರಿನಲ್ಲಿ ತಲೆ ಎತ್ತಲಿದೆ ಅಂತಾರಾಷ್ಟ್ರೀಯ ಮಟ್ಟದ ಬಸ್​ ನಿಲ್ದಾಣ
ಶಾರ್ಟ್​ ಸರ್ಕೂಟ್​ನಿಂದ ಹೊತ್ತಿ ಉರಿದ ಕೊಳ್ಳೇಗಾಲ ಸಿಪಿಐ ಕಚೇರಿ!
ಶಾರ್ಟ್​ ಸರ್ಕೂಟ್​ನಿಂದ ಹೊತ್ತಿ ಉರಿದ ಕೊಳ್ಳೇಗಾಲ ಸಿಪಿಐ ಕಚೇರಿ!
ಚಿನ್ನದ ಸರ ಕಸಿದು ಪರಾರಿಯಾಗಲು ಯತ್ನಿಸಿದ ಕಳ್ಳ; ಮುಂದೇನಾಯಿತು ನೋಡಿ
ಚಿನ್ನದ ಸರ ಕಸಿದು ಪರಾರಿಯಾಗಲು ಯತ್ನಿಸಿದ ಕಳ್ಳ; ಮುಂದೇನಾಯಿತು ನೋಡಿ