AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಹವಾಮಾನ ವರದಿ: ಬೆಂಗಳೂರಿನಲ್ಲಿ ಇಂದೂ ಒಣ ಹವೆ, ತಾಪಮಾನದಲ್ಲಿ ಏರಿಕೆ

Karnataka Weather: ಬೆಂಗಳೂರಿನಲ್ಲಿ ಹೀಟ್ ಸ್ಟ್ರೋಕ್ ಭೀತಿ ಹಿನ್ನೆಲೆಯಲ್ಲಿ ಬೆಳಗ್ಗೆ 11ರಿಂದ ಸಂಜೆ 4ರವರೆಗೆ ಹೊರಗೆ ಹೋಗದಂತೆ ಸೂಚನೆ ನೀಡಲಾಗಿದೆ. ಬೆಂಗಳೂರಿನಲ್ಲಿ ಬೇಸಿಗೆ ತೀವ್ರಗೊಂಡಿದ್ದು, ತಾಪಮಾನ 39 ಡಿಗ್ರಿ ತಲುಪುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬೆಂಗಳೂರು, ಮಂಗಳೂರು ಸೇರಿದಂತೆ ಹಲವೆಡೆ ಇಂದು ಒಣ ಹವೆಯಿದ್ದು, ಇನ್ನೂ ಕೆಲ ದಿನ ಇದೇ ವಾತಾವರಣವಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರ್ನಾಟಕ ಹವಾಮಾನ ವರದಿ: ಬೆಂಗಳೂರಿನಲ್ಲಿ ಇಂದೂ ಒಣ ಹವೆ, ತಾಪಮಾನದಲ್ಲಿ ಏರಿಕೆ
ಬಿಸಿಲಿನ ಬೇಗೆ ಜೊತೆ ಬೆಂಗಳೂರಲ್ಲಿ ಮುಂದುವರೆದ ಶುಷ್ಕ ವಾತಾವರಣ
ಭಾವನಾ ಹೆಗಡೆ
|

Updated on: Mar 09, 2026 | 7:28 AM

Share

ಬೆಂಗಳೂರು, ಮಾರ್ಚ್​ 09: ಆದರೆ ಇಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಒಣ ಹವೆ (Weather Forecast) ಇರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಇಂದು ಬೆಂಗಳೂರಿನಲ್ಲಿ ತಾಪಮಾನದಲ್ಲಿ ಕೊಂಚ ಏರಿಕೆಯಾಗಬಹುದು ಎಂದು ಇಲಾಖೆ ತಿಳಿಸಿದೆ. ರಾಜ್ಯದಲ್ಲಿ ಹಲವು ದಿನಗಳಿಂದ ತಾಪಮಾನ ಹೆಚ್ಚಿದ್ದು, ಕೆಲ ದಿನಗಳಿಂದ ಒಣ ಹವೆಯ ವಾತಾವರಣವೇ ಕಂಡುಬಂದಿದೆ.

ಎಲ್ಲೆಲ್ಲಿ ಒಣ ಹವೆ?

ಕರಾವಳಿಯ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆಯಿರಲಿದೆ ಎಂದು ಇಲಾಖೆ ತಿಳಿಸಿದೆ. ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರದಲ್ಲಿ ಕಳೆದ ಹಲವು ದಿನಗಳಿಂದ ಒಣಹವೆಯ ವಾತಾವರಣವಿದ್ದು, ಇಂದೂ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇಂದಿನಿಂದ ಕೆಲ ದಿನ ರಾಜ್ಯದಲ್ಲಿ ಶುಷ್ಕ ವಾತಾವರಣವೇ ಇರಲಿದೆ ಎಂದು ಇಲಾಖೆ ತಿಳಿಸಿದ್ದು, ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಚಾಮರಾಜನಗರ, ಮೈಸೂರು, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿಯೂ ಒಣ ಹವೆಯ ವಾತಾವರಣ ಇರಲಿದೆ.

ಮಾರ್ಚ್​ ಎರಡನೇ ವಾರದಲ್ಲಿ ತಾಪಮಾನ ಹೆಚ್ಚಳ

ನಗರದಲ್ಲಿ ಮಾರ್ಚ್ ಎರಡನೇ ವಾರದ ಬಳಿಕ ಬಿಸಿಲಿನ ತೀವ್ರತೆ ಇನ್ನಷ್ಟು ಹೆಚ್ಚಲಿದೆ. ಈ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಕೂಡ ಅಲರ್ಟ್ ಆಗಿದೆ. ಬೆಳಿಗ್ಗೆ 11ರಿಂದ ಸಂಜೆ 4ರವರೆಗೆ ಅನಗತ್ಯವಾಗಿ ಹೊರಗೆ ಹೋಗದಂತೆ ಸೂಚನೆ ನೀಡಲಾಗಿದೆ. ಹೀಟ್ ಸ್ಟ್ರೋಕ್ ಹಾಗೂ ಡಿಹೈಡ್ರೇಶನ್ ಅಪಾಯ ಇರುವುದರಿಂದ ವೃದ್ಧರು, ಗರ್ಭಿಣಿಯರು, ಮಕ್ಕಳು ಮತ್ತು ಹೃದಯ ಸಂಬಂಧಿ ಕಾಯಿಲೆ ಇರುವವರು ವಿಶೇಷ ಎಚ್ಚರಿಕೆ ವಹಿಸಬೇಕು.

ಹೆಚ್ಚಾಗಿ ನೀರು, ತಂಪು ಪಾನೀಯಗಳು ಹಾಗೂ ಹಣ್ಣುಗಳನ್ನು ಸೇವಿಸಿ ದೇಹದ ತಾಪಮಾನ ನಿಯಂತ್ರಿಸಿಕೊಳ್ಳುವಂತೆ ವೈದ್ಯರು ಸಲಹೆ ನೀಡಿದ್ದಾರೆ. ಒಟ್ಟಿನಲ್ಲಿ, ಈ ವರ್ಷವೂ ಬೆಂಗಳೂರು ಮಂದಿಗೆ ಕಠಿಣ ಬೇಸಿಗೆ ಎದುರಾಗುವ ಸೂಚನೆಗಳಿವೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Bhavana Hegde
Bhavana Hegde

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?