AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಹವಾಮಾನ ವರದಿ: ಬಿಸಿಲಿನ ಬೇಗೆ ಜೊತೆ ಬೆಂಗಳೂರಲ್ಲಿ ಮುಂದುವರೆದ ಶುಷ್ಕ ವಾತಾವರಣ!

Karnataka Weather: ಬೆಂಗಳೂರು, ಮಂಗಳೂರು ಸೇರಿದಂತೆ ಹಲವೆಡೆ ಇಂದು ಒಣ ಹವೆಯಿದ್ದು, ಇನ್ನೂ ಕೆಲ ದಿನ ಇದೇ ವಾತಾವರಣವಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಹೀಟ್ ಸ್ಟ್ರೋಕ್ ಭೀತಿ ಹಿನ್ನೆಲೆಯಲ್ಲಿ ಬೆಳಗ್ಗೆ 11ರಿಂದ ಸಂಜೆ 4ರವರೆಗೆ ಹೊರಗೆ ಹೋಗದಂತೆ ಸೂಚನೆ ನೀಡಲಾಗಿದೆ. ಬೆಂಗಳೂರಿನಲ್ಲಿ ಬೇಸಿಗೆ ತೀವ್ರಗೊಂಡಿದ್ದು, ತಾಪಮಾನ 39 ಡಿಗ್ರಿ ತಲುಪುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಕರ್ನಾಟಕ ಹವಾಮಾನ ವರದಿ: ಬಿಸಿಲಿನ ಬೇಗೆ ಜೊತೆ ಬೆಂಗಳೂರಲ್ಲಿ ಮುಂದುವರೆದ ಶುಷ್ಕ ವಾತಾವರಣ!
ಬಿಸಿಲಿನ ಬೇಗೆ ಜೊತೆ ಬೆಂಗಳೂರಲ್ಲಿ ಮುಂದುವರೆದ ಶುಷ್ಕ ವಾತಾವರಣ!
ಭಾವನಾ ಹೆಗಡೆ
|

Updated on: Mar 08, 2026 | 7:52 AM

Share

ಬೆಂಗಳೂರು, ಮಾರ್ಚ್​ 08: ರಾಜ್ಯದಲ್ಲಿ ಹಲವು ದಿನಗಳಿಂದ ತಾಪಮಾನ ಹೆಚ್ಚಿದ್ದು, ಕೆಲ ದಿನಗಳಿಂದ ಒಣ ಹವೆಯ (Weather Forecast) ವಾತಾವರಣವೇ ಕಂಡುಬಂದಿದೆ. ಆದರೆ ಇಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಒಣ ಹವೆ ಇರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಇಂದು ಬೆಂಗಳೂರಿನಲ್ಲಿ ತಾಪಮಾನದಲ್ಲಿ ಕೊಂಚ ಏರಿಕೆಯಾಗಬಹುದು ಎಂದು ಇಲಾಖೆ ತಿಳಿಸಿದೆ.

ಎಲ್ಲೆಲ್ಲಿ ಒಣ ಹವೆ?

ಕರಾವಳಿಯ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆಯಿರಲಿದೆ ಎಂದು ಇಲಾಖೆ ತಿಳಿಸಿದೆ. ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರದಲ್ಲಿ ಕಳೆದ ಹಲವು ದಿನಗಳಿಂದ ಒಣಹವೆಯ ವಾತಾವರಣವಿದ್ದು, ಇಂದೂ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇಂದಿನಿಂದ ಕೆಲ ದಿನ ರಾಜ್ಯದಲ್ಲಿ ಶುಷ್ಕ ವಾತಾವರಣವೇ ಇರಲಿದೆ ಎಂದು ಇಲಾಖೆ ತಿಳಿಸಿದ್ದು, ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಚಾಮರಾಜನಗರ, ಮೈಸೂರು, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿಯೂ ಒಣ ಹವೆಯ ವಾತಾವರಣ ಇರಲಿದೆ.

ಮಾರ್ಚ್​ ಎರಡನೇ ವಾರದಲ್ಲಿ ತಾಪಮಾನ ಹೆಚ್ಚಳ

ನಗರದಲ್ಲಿ ಮಾರ್ಚ್ ಎರಡನೇ ವಾರದ ಬಳಿಕ ಬಿಸಿಲಿನ ತೀವ್ರತೆ ಇನ್ನಷ್ಟು ಹೆಚ್ಚಲಿದೆ. ಈ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಕೂಡ ಅಲರ್ಟ್ ಆಗಿದೆ. ಬೆಳಿಗ್ಗೆ 11ರಿಂದ ಸಂಜೆ 4ರವರೆಗೆ ಅನಗತ್ಯವಾಗಿ ಹೊರಗೆ ಹೋಗದಂತೆ ಸೂಚನೆ ನೀಡಲಾಗಿದೆ. ಹೀಟ್ ಸ್ಟ್ರೋಕ್ ಹಾಗೂ ಡಿಹೈಡ್ರೇಶನ್ ಅಪಾಯ ಇರುವುದರಿಂದ ವೃದ್ಧರು, ಗರ್ಭಿಣಿಯರು, ಮಕ್ಕಳು ಮತ್ತು ಹೃದಯ ಸಂಬಂಧಿ ಕಾಯಿಲೆ ಇರುವವರು ವಿಶೇಷ ಎಚ್ಚರಿಕೆ ವಹಿಸಬೇಕು.

ಹೆಚ್ಚಾಗಿ ನೀರು, ತಂಪು ಪಾನೀಯಗಳು ಹಾಗೂ ಹಣ್ಣುಗಳನ್ನು ಸೇವಿಸಿ ದೇಹದ ತಾಪಮಾನ ನಿಯಂತ್ರಿಸಿಕೊಳ್ಳುವಂತೆ ವೈದ್ಯರು ಸಲಹೆ ನೀಡಿದ್ದಾರೆ. ಒಟ್ಟಿನಲ್ಲಿ, ಈ ವರ್ಷವೂ ಬೆಂಗಳೂರು ಮಂದಿಗೆ ಕಠಿಣ ಬೇಸಿಗೆ ಎದುರಾಗುವ ಸೂಚನೆಗಳಿವೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಇಂದು ಈ ರಾಶಿಯವರಿಗೆ ಧನಾತ್ಮಕ ಶಕ್ತಿ
ಇಂದು ಈ ರಾಶಿಯವರಿಗೆ ಧನಾತ್ಮಕ ಶಕ್ತಿ
30 ಅಡಿ ಆಳದ ಬಾವಿಗೆ ಬಿದ್ದ ಆನೆ: ಅರಣ್ಯಾಧಿಕಾರಿಗಳ 6 ಗಂಟೆಗಳ ಕಾರ್ಯಚರಣೆ
30 ಅಡಿ ಆಳದ ಬಾವಿಗೆ ಬಿದ್ದ ಆನೆ: ಅರಣ್ಯಾಧಿಕಾರಿಗಳ 6 ಗಂಟೆಗಳ ಕಾರ್ಯಚರಣೆ
ಸುದೀಪ್ ಸುಮ್ಮನಿದ್ದಾರೆ ರಜತ್, ವಿನಯ್ ಪ್ರಚೋದಿಸುತ್ತಿದ್ದಾರೆ: ಡಾಗ್ ಸತೀಶ್
ಸುದೀಪ್ ಸುಮ್ಮನಿದ್ದಾರೆ ರಜತ್, ವಿನಯ್ ಪ್ರಚೋದಿಸುತ್ತಿದ್ದಾರೆ: ಡಾಗ್ ಸತೀಶ್
ಕಾರ್ಯಕ್ರಮಕ್ಕೆ ಬಾರದ ಬ್ಯಾನರ್ಜಿ ಬಗ್ಗೆ ದ್ರೌಪದಿ ಮುರ್ಮು ಬೇಸರದ ಮಾತು
ಕಾರ್ಯಕ್ರಮಕ್ಕೆ ಬಾರದ ಬ್ಯಾನರ್ಜಿ ಬಗ್ಗೆ ದ್ರೌಪದಿ ಮುರ್ಮು ಬೇಸರದ ಮಾತು
ಯುಗಾದಿ ವರ್ಷ ಭವಿಷ್ಯ; ಮಿಥುನ ರಾಶಿಗೆ ಈ ವರ್ಷ ಹೇಗಿರಲಿದೆ ಗೊತ್ತಾ?
ಯುಗಾದಿ ವರ್ಷ ಭವಿಷ್ಯ; ಮಿಥುನ ರಾಶಿಗೆ ಈ ವರ್ಷ ಹೇಗಿರಲಿದೆ ಗೊತ್ತಾ?
ಲೋಕಸಭೆ ಸ್ಪೀಕರ್ ವಿರುದ್ಧ ಅವಿಶ್ವಾಸ ನಿರ್ಣಯಕ್ಕೆ ಸಿದ್ಧತೆ
ಲೋಕಸಭೆ ಸ್ಪೀಕರ್ ವಿರುದ್ಧ ಅವಿಶ್ವಾಸ ನಿರ್ಣಯಕ್ಕೆ ಸಿದ್ಧತೆ
ಹುಟ್ಟುಹಬ್ಬದಂದು ಅಭಿಮಾನಿಗಳ ಭೇಟಿ ಮಾಡಿದ ರಾಧಿಕಾ ಪಂಡಿತ್: ವಿಡಿಯೋ
ಹುಟ್ಟುಹಬ್ಬದಂದು ಅಭಿಮಾನಿಗಳ ಭೇಟಿ ಮಾಡಿದ ರಾಧಿಕಾ ಪಂಡಿತ್: ವಿಡಿಯೋ
ಟ್ರೋಫಿಗಾಗಿ ಕೆಲವರ ಹೃದಯ ಛಿದ್ರಗೊಳಿಸುವುದರಲ್ಲಿ ತಪ್ಪಿಲ್ಲ; ಸ್ಯಾಂಟ್ನರ್
ಟ್ರೋಫಿಗಾಗಿ ಕೆಲವರ ಹೃದಯ ಛಿದ್ರಗೊಳಿಸುವುದರಲ್ಲಿ ತಪ್ಪಿಲ್ಲ; ಸ್ಯಾಂಟ್ನರ್
ಯುಗಾದಿ ವರ್ಷ ಭವಿಷ್ಯ; ವೃಷಭ ರಾಶಿಗೆ ಈ ವರ್ಷ ಹೇಗಿರಲಿದೆ ಗೊತ್ತಾ?
ಯುಗಾದಿ ವರ್ಷ ಭವಿಷ್ಯ; ವೃಷಭ ರಾಶಿಗೆ ಈ ವರ್ಷ ಹೇಗಿರಲಿದೆ ಗೊತ್ತಾ?
ಯುಗಾದಿ ವರ್ಷ ಭವಿಷ್ಯ; ಮೇಷ ರಾಶಿಯ ಶುಭ -ಅಶುಭ ಫಲಗಳ ಮಾಹಿತಿ ಇಲ್ಲಿದೆ
ಯುಗಾದಿ ವರ್ಷ ಭವಿಷ್ಯ; ಮೇಷ ರಾಶಿಯ ಶುಭ -ಅಶುಭ ಫಲಗಳ ಮಾಹಿತಿ ಇಲ್ಲಿದೆ