AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಹವಾಮಾನ ವರದಿ: ರಾಜ್ಯದಲ್ಲಿ ನಿಲ್ಲದ ಶೀತದಲೆಯ ಅಬ್ಬರ; 5 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​!

Karnataka Weather: ಕಲಬುರಗಿ, ಬೀದರ್ ಸೇರಿ ಹಲವೆಡೆ ಶೀತದಲೆಯ ಪರಿಣಾಮ ಹೆಚ್ಚುತ್ತಿದ್ದು, ರಾಜ್ಯದಲ್ಲಿ 5 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಇನ್ನೂ 10 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದ್ದು, ವೈದ್ಯರು ಆರೋಗ್ಯ ಕಾಪಾಡಿಕೊಳ್ಳುವಂತೆ ಸಲಹೆ ನೀಡಿದ್ದಾರೆ. ಸಮತೋಲನ ಆಹಾರ ಸೇವನೆಯೊಂದಿಗೆ ಬೆಚ್ಚನೆಯ ಉಡುಪು ಧರಿಸುವಂತೆ ಇಲಾಖೆ ಮತ್ತು ವೈದ್ಯರು ಸಾರ್ವಜನಿಕರಿಗೆ ಸಲಹೆ ನೀಡಿದ್ದಾರೆ.

ಕರ್ನಾಟಕ ಹವಾಮಾನ ವರದಿ: ರಾಜ್ಯದಲ್ಲಿ ನಿಲ್ಲದ ಶೀತದಲೆಯ ಅಬ್ಬರ; 5 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​!
ರಾಜ್ಯದಲ್ಲಿ ನಿಲ್ಲದ ಶೀತದಲೆಯ ಅಬ್ಬರ; 5 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​!
ಭಾವನಾ ಹೆಗಡೆ
|

Updated on: Dec 20, 2025 | 7:37 AM

Share

ಬೆಂಗಳೂರು, ಡಿಸೆಂಬರ್ 20: ರಾಜ್ಯದೆಲ್ಲೆಡೆ ಶೀತದಲೆ (Weather Forecast) ಅಬ್ಬರಿಸುತ್ತಿದ್ದು, ಚಳಿಯ ಪ್ರಭಾವದಿಂದ ಜನಜೀವನ ಅಸ್ತವ್ಯಸ್ತವಾಗಿದೆ. ಬೆಂಗಳೂರಿನಲ್ಲೂ ಮೈಕೊರೆಯುವ ಚಳಿ ಜನರನ್ನು ಬೆಂಬಿಡದೆ ಕಾಡುತ್ತಿದ್ದು, ಮೋಡ ಮುಸುಕಿದ ವಾತಾವರಣವಿರಲಿದೆ ಎಂದು ಇಲಾಖೆ ತಿಳಿಸಿದೆ. ಕಲಬುರಗಿ, ರಾಯಚೂರು ಸೇರಿದಂತೆ 5 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಿರುವ ಇಲಾಖೆ, 10 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಿದೆ.

ಯಾವ ಜಿಲ್ಲೆಗಳಿಗೆ ಅಲರ್ಟ್​?

ಬೀದರ್, ಕಲಬುರಗಿ, ರಾಯಚೂಎಉ, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಚಳಿಯ ಪ್ರಮಾಣ ಹೆಚ್ಚಿದ್ದು, ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಬೆಳಗಾವಿ, ಬಾಗಲಕೋಟೆ, ಕೊಪ್ಪಳ, ಗದಗ, ಧಾರವಾಡ, ಹಾವೇರಿ, ಬಳ್ಳಾರಿ, ದಾವಣಗೆರೆ, ಚಿತ್ರದುರ್ಗ, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಸೂಚಿಸಿದೆ.

ಎಲ್ಲೆಲ್ಲಿ ಒಣ ಹವೆ

ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಚಾಮರಾಜನಗರ, ಮೈಸೂರು, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿಯೂ ಒಣ ಹವೆಯ ವಾತಾವರಣ ಇರಲಿದೆ.

ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರದಲ್ಲಿ ಕಳೆದ ಹಲವು ದಿನಗಳಿಂದ ಒಣಹವೆಯ ವಾತಾವರಣವಿದ್ದು, ಇಂದೂ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿಯ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆಯಿರಲಿದೆ ಎಂದು ಇಲಾಖೆ ತಿಳಿಸಿದೆ.

ಬೆಂಗಳೂರಿನಲ್ಲಿ ಮುಂದುವರೆದ ಚಳಿ

ಕಳೆದ ಕೆಲ ದಿನಗಳಿಂದ ರಾಜಧಾನಿಯ ವಾತಾವರಣ ಜನರನ್ನು ಗಡ ಗಡ ನಡುಗಿಸುತ್ತಿದೆ. ಮಕ್ಕಳಿಂದ ಹಿಡಿದು ವೃದ್ಧರವರೆಗೂ ಎಚ್ಚರಿಕೆಯಿಂದಿರುವಂತೆ ಸಲಹೆ ನೀಡಿರುವ ಹವಾಮಾನ ಇಲಾಖೆ, ಬೆಚ್ಚನೆಯ ಉಡುಪು ಧರಿಸುವುದರ ಜೊತೆಗೆ ಸಮತೋಲನ ಆಹಾರ ಸೇವನೆಗೆ ಒತ್ತು ನೀಡುವಂತೆ ಸಲಹೆ ನೀಡಿದೆ. ಈ ಮಧ್ಯೆ ಬೆಂಗಳೂರಿನ ತಾಪಮಾನ ಕನಿಷ್ಠ 15°C ಇದ್ದು, ಗರಿಷ್ಠ 27°C ಇರಲಿದೆ ಎಂದು ಇಲಾಖೆ ತಿಳಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಭಾವನಾ ಹೆಗಡೆ
ಭಾವನಾ ಹೆಗಡೆ

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More
ಮಧ್ಯಪ್ರದೇಶದಿಂದ ಬೆಂಗಳೂರಿಗೆ ಬರಬೇಕಿದ್ದ 'ಕೈ' ಶಾಸಕರ ಪ್ರವಾಸ ರದ್ದು
ಮಧ್ಯಪ್ರದೇಶದಿಂದ ಬೆಂಗಳೂರಿಗೆ ಬರಬೇಕಿದ್ದ 'ಕೈ' ಶಾಸಕರ ಪ್ರವಾಸ ರದ್ದು
ಹೆಜ್ಜೇನು ದಾಳಿಗೆ ಶಾಲೆಯ 21ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ
ಹೆಜ್ಜೇನು ದಾಳಿಗೆ ಶಾಲೆಯ 21ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ
ಮೊದಲ ಬಾರಿ ಜಡ್ಜ್ ಪಾತ್ರದಲ್ಲಿ ನಟಿ ತಾರಾ, ಪಾತ್ರದ ಬಗ್ಗ ನಟಿ ಮಾತು
ಮೊದಲ ಬಾರಿ ಜಡ್ಜ್ ಪಾತ್ರದಲ್ಲಿ ನಟಿ ತಾರಾ, ಪಾತ್ರದ ಬಗ್ಗ ನಟಿ ಮಾತು
ಸಚಿವ ಸ್ಥಾನಕ್ಕಾಗಿ ಶಾಸಕರ ಲಾಬಿ: ಸಂಚಲನ ಮೂಡಿಸಿದ ಕೃಷ್ಣಭೈರೇಗೌಡ ನಡೆ
ಸಚಿವ ಸ್ಥಾನಕ್ಕಾಗಿ ಶಾಸಕರ ಲಾಬಿ: ಸಂಚಲನ ಮೂಡಿಸಿದ ಕೃಷ್ಣಭೈರೇಗೌಡ ನಡೆ
ಮಾಲೂರಿನಲ್ಲಿ 80 ಕೋಟಿ ರೂ. ಸರ್ಕಾರಿ ಭೂ ಹಗರಣ
ಮಾಲೂರಿನಲ್ಲಿ 80 ಕೋಟಿ ರೂ. ಸರ್ಕಾರಿ ಭೂ ಹಗರಣ
ಬೆಂಗಳೂರಿನಲ್ಲಿ ಮತ್ತೊಂದು ಅವೈಜ್ಞಾನಿಕ ಕಾಮಗಾರಿ
ಬೆಂಗಳೂರಿನಲ್ಲಿ ಮತ್ತೊಂದು ಅವೈಜ್ಞಾನಿಕ ಕಾಮಗಾರಿ
ನಲಪಾಡ್​ಗೆ ಮತ್ತೆ ಶಾಕ್: SIT ಚಾರ್ಜ್​ಶೀಟ್ ಬೆನ್ನಲ್ಲೇ ಇಡಿ 3ನೇ ಸಮನ್ಸ್
ನಲಪಾಡ್​ಗೆ ಮತ್ತೆ ಶಾಕ್: SIT ಚಾರ್ಜ್​ಶೀಟ್ ಬೆನ್ನಲ್ಲೇ ಇಡಿ 3ನೇ ಸಮನ್ಸ್
ನನ್ನ ಮಗ ಕ್ಯಾಪ್ಟನ್: ಶ್ರೇಯಸ್ ಅಯ್ಯರ್ ತಂದೆಯ ಡ್ಯಾನ್ಸ್ ವಿಡಿಯೋ ವೈರಲ್
ನನ್ನ ಮಗ ಕ್ಯಾಪ್ಟನ್: ಶ್ರೇಯಸ್ ಅಯ್ಯರ್ ತಂದೆಯ ಡ್ಯಾನ್ಸ್ ವಿಡಿಯೋ ವೈರಲ್
ಕೊಟ್ಟಿಯೂರು ದೇವಾಲಯದಲ್ಲಿ ಕನ್ನಡಿಗರ ಮೇಲೆ ದೌರ್ಜನ್ಯ: ಭಕ್ತರ ಅಸಮಾಧಾನ
ಕೊಟ್ಟಿಯೂರು ದೇವಾಲಯದಲ್ಲಿ ಕನ್ನಡಿಗರ ಮೇಲೆ ದೌರ್ಜನ್ಯ: ಭಕ್ತರ ಅಸಮಾಧಾನ
ಬೈಲಹೊಂಗಲದಲ್ಲಿ ವರುಣಾರ್ಭಟ: ಅಂಗಡಿಗಳಿಗೆ ಮಳೆನೀರು ನುಗ್ಗಿ ಅಪಾರ ನಷ್ಟ
ಬೈಲಹೊಂಗಲದಲ್ಲಿ ವರುಣಾರ್ಭಟ: ಅಂಗಡಿಗಳಿಗೆ ಮಳೆನೀರು ನುಗ್ಗಿ ಅಪಾರ ನಷ್ಟ