AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಹವಾಮಾನ ವರದಿ: ರಾಜ್ಯದೆಲ್ಲೆಡೆ ಒಣ ಹವೆ; ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ

Karnataka Weather: ಬೆಂಗಳೂರಿನಲ್ಲಿ ಮಂಜು ಮುಸುಕಿದ ವಾತಾವರಣವಿದ್ದು, ಚಳಿಯ ಪ್ರಮಾಣವೂ ತೀವ್ರವಿರಲಿದೆ ಎಂದು ಇಲಾಖೆ ತಿಳಿಸಿದೆ. ವೈದ್ಯರು ಆರೋಗ್ಯ ಕಾಪಾಡಿಕೊಳ್ಳುವಂತೆ ಹೇಳಿದ್ದು, ಸಮತೋಲನ ಆಹಾರ ಸೇವನೆಯೊಂದಿಗೆ ಬೆಚ್ಚನೆಯ ಉಡುಪು ಧರಿಸುವಂತೆ ಇಲಾಖೆ ಮತ್ತು ವೈದ್ಯರು ಸಾರ್ವಜನಿಕರಿಗೆ ಸಲಹೆ ನೀಡಿದ್ದಾರೆ. ಉತ್ತರ ಕರ್ನಾಟಕದಲ್ಲಿ ಶೀತದಲೆಯ ಪರಿಣಾಮ ಹೆಚ್ಚುತ್ತಿದ್ದು, ರಾಜ್ಯ ಚಳಿಗಾಳಿಯಿಂದ ತತ್ತರಿಸುತ್ತಿದೆ.

ಕರ್ನಾಟಕ ಹವಾಮಾನ ವರದಿ: ರಾಜ್ಯದೆಲ್ಲೆಡೆ ಒಣ ಹವೆ; ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ
ರಾಜ್ಯದೆಲ್ಲೆಡೆ ಒಣ ಹವೆ; ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ
ಭಾವನಾ ಹೆಗಡೆ
|

Updated on: Dec 24, 2025 | 7:35 AM

Share

ಬೆಂಗಳೂರು, ಡಿಸೆಂಬರ್ 23: ಬೆಂಗಳೂರಿನ ಹಲವೆಡೆ ಮೈಕೊರೆಯುವ ಚಳಿಯಿದ್ದು (Weather Forecast) , ರಾಜ್ಯದಲ್ಲೂ ಶೀತದಲೆಯ ಅಬ್ಬರ ಹೆಚ್ಚಿದೆ. ಉತ್ತರ ಒಳನಾಡು, ದಕ್ಷಿಣ ಒಳನಾಡು ಸೇರಿದಂತೆ ಕರಾವಳಿಯಲ್ಲೂ ಒಣಹವೆ ಇರಲಿದ್ದು, ತಾಪಮಾನದಲ್ಲೂ ಏರುಪೇರಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರು ನಗರ ಹಾಗೂ ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಬೆಳಗಿನ ಸಮಯ ದಟ್ಟ ಮಂಜು ಕಾಣಿಸಿಕೊಲ್ಳುವ ಸಾಧ್ಯತೆ ಇದ್ದು, ವಾಹನ ಸವಾರರು ಎಚ್ಚರಿಕೆಯಿಂದ ಚಾಲನೆ ಮಾಡಬೇಕೆಂದು ಸೂಚಿಸಲಾಗಿದೆ.

ಬೆಂಗಳೂರಿನಲ್ಲಿ ಮಂಜು ಮುಸುಕಿದ ವಾತಾವರಣ

ಈ ಮಧ್ಯೆ ಬೆಂಗಳೂರಿನ ತಾಪಮಾನ ಕನಿಷ್ಠ 15°C ಇದ್ದು, ಗರಿಷ್ಠ 27°C ಇರಲಿದೆ ಎಂದು ಇಲಾಖೆ ತಿಳಿಸಿದೆ. ಈ ರೀತಿಯ ತೀವ್ರ ಚಳಿಯಿಂದ ಜನರ ಆರೋಗ್ಯದಲ್ಲಿ ಏರುಪೇರಾಗುತ್ತಿದ್ದು, ಬೆಚ್ಚಗಿನ ಹೊದಿಕೆ ಹೊತ್ತುಕೊಳ್ಳಬೇಕು ಹಾಗೂ ಬಿಸಿ ಆಹಾರ ಸೇವನೆ ಮಾಡಬೇಕೆಂದು ವೈದ್ಯರು ಸೂಚಿಸಿದ್ದಾರೆ. ಕಳೆದ ಕೆಲ ದಿನಗಳಿಂದ ರಾಜಧಾನಿಯ ವಾತಾವರಣದಲ್ಲಿ ಸಾಕಷ್ಟು ಏರು ಪೇರಾಗುತ್ತಿದ್ದು, ಚಳಿಯ ಪ್ರಮಾಣ ಹೆಚ್ಚುತ್ತಿದೆ. ಇಂದು ಎಂದಿನಂತೆ ಚಳಿಯ ಜೊತೆಗೆ ಮಂಜು ಮುಸುಕಿದ ವಾತಾವರಣವಿರುವುದರಿಂದ ಮಕ್ಕಳಿಂದ ಹಿಡಿದು ವೃದ್ಧರವರೆಗೂ ಎಚ್ಚರಿಕೆಯಿಂದಿರುವಂತೆ ಸಲಹೆ ನೀಡಿರುವ ಹವಾಮಾನ ಇಲಾಖೆ, ಬೆಚ್ಚನೆಯ ಉಡುಪು ಧರಿಸುವುದರ ಜೊತೆಗೆ ಸಮತೋಲನ ಆಹಾರ ಸೇವನೆಗೆ ಒತ್ತು ನೀಡುವಂತೆ ಸಲಹೆ ನೀಡಿದೆ.

ಎಲ್ಲೆಲ್ಲಿ ಒಣ ಹವೆ

ಕರಾವಳಿಯ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆಯಿರಲಿದೆ ಎಂದು ಇಲಾಖೆ ತಿಳಿಸಿದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಚಾಮರಾಜನಗರ, ಮೈಸೂರು, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿಯೂ ಒಣ ಹವೆಯ ವಾತಾವರಣ ಇರಲಿದೆ.

ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರದಲ್ಲಿ ಕಳೆದ ಹಲವು ದಿನಗಳಿಂದ ಒಣಹವೆಯ ವಾತಾವರಣವಿದ್ದು, ಇಂದೂ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಭಾವನಾ ಹೆಗಡೆ
ಭಾವನಾ ಹೆಗಡೆ

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More
ನನ್ನ ಮಗ ಕ್ಯಾಪ್ಟನ್: ಶ್ರೇಯಸ್ ಅಯ್ಯರ್ ತಂದೆಯ ಡ್ಯಾನ್ಸ್ ವಿಡಿಯೋ ವೈರಲ್
ನನ್ನ ಮಗ ಕ್ಯಾಪ್ಟನ್: ಶ್ರೇಯಸ್ ಅಯ್ಯರ್ ತಂದೆಯ ಡ್ಯಾನ್ಸ್ ವಿಡಿಯೋ ವೈರಲ್
ಕೊಟ್ಟಿಯೂರು ದೇವಾಲಯದಲ್ಲಿ ಕನ್ನಡಿಗರ ಮೇಲೆ ದೌರ್ಜನ್ಯ: ಭಕ್ತರ ಅಸಮಾಧಾನ
ಕೊಟ್ಟಿಯೂರು ದೇವಾಲಯದಲ್ಲಿ ಕನ್ನಡಿಗರ ಮೇಲೆ ದೌರ್ಜನ್ಯ: ಭಕ್ತರ ಅಸಮಾಧಾನ
ಬೈಲಹೊಂಗಲದಲ್ಲಿ ವರುಣಾರ್ಭಟ: ಅಂಗಡಿಗಳಿಗೆ ಮಳೆನೀರು ನುಗ್ಗಿ ಅಪಾರ ನಷ್ಟ
ಬೈಲಹೊಂಗಲದಲ್ಲಿ ವರುಣಾರ್ಭಟ: ಅಂಗಡಿಗಳಿಗೆ ಮಳೆನೀರು ನುಗ್ಗಿ ಅಪಾರ ನಷ್ಟ
ಡಿಕೆಶಿ ಸಂಪುಟದಲ್ಲಿ ನನಗೇನೂ ಬೇಡ: ರಾಜಣ್ಣ ಖಡಕ್ ಮಾತು
ಡಿಕೆಶಿ ಸಂಪುಟದಲ್ಲಿ ನನಗೇನೂ ಬೇಡ: ರಾಜಣ್ಣ ಖಡಕ್ ಮಾತು
ಸೂರಜ್ ಹೆಗ್ಡೆ ಅಂತಿಮ ದರ್ಶನ ಪಡೆದ ರಾಹುಲ್​​ ಗಾಂಧಿ
ಸೂರಜ್ ಹೆಗ್ಡೆ ಅಂತಿಮ ದರ್ಶನ ಪಡೆದ ರಾಹುಲ್​​ ಗಾಂಧಿ
ಮುಗಿಯದ ಖಾತೆ ಕ್ಯಾತೆ: ದೆಹಲಿಗೆ ತೆರಳಿದ ಸಚಿವ ಕೃಷ್ಣ ಭೈರೇಗೌಡ
ಮುಗಿಯದ ಖಾತೆ ಕ್ಯಾತೆ: ದೆಹಲಿಗೆ ತೆರಳಿದ ಸಚಿವ ಕೃಷ್ಣ ಭೈರೇಗೌಡ
ಲ್ಯಾಡಲ್ ಸ್ಫೋಟ: 25 ಲಕ್ಷ ರೂ. ಪರಿಹಾರ ಘೋಷಿಸಿದ ಹೆಚ್​ಡಿ ಕುಮಾರಸ್ವಾಮಿ
ಲ್ಯಾಡಲ್ ಸ್ಫೋಟ: 25 ಲಕ್ಷ ರೂ. ಪರಿಹಾರ ಘೋಷಿಸಿದ ಹೆಚ್​ಡಿ ಕುಮಾರಸ್ವಾಮಿ
ಕರಗಿದ ಉಕ್ಕನ್ನು ಹೊತ್ತೊಯ್ಯುತ್ತಿದ್ದ ಲ್ಯಾಡಲ್ ಸ್ಫೋಟ, 8 ಮಂದಿ ಸಾವು
ಕರಗಿದ ಉಕ್ಕನ್ನು ಹೊತ್ತೊಯ್ಯುತ್ತಿದ್ದ ಲ್ಯಾಡಲ್ ಸ್ಫೋಟ, 8 ಮಂದಿ ಸಾವು
‘ಕ್ಷೇತ್ರಪಾಲ’ ಸಿನಿಮಾದಲ್ಲಿ ದೈವದ ಕಥೆ? ವಿವರಿಸಿದ ತಂಡ
‘ಕ್ಷೇತ್ರಪಾಲ’ ಸಿನಿಮಾದಲ್ಲಿ ದೈವದ ಕಥೆ? ವಿವರಿಸಿದ ತಂಡ
ಗೋಕರ್ಣದ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗವನ್ನೇ ಆವರಿಸಿದ ಕೊಳಚೆ ನೀರು
ಗೋಕರ್ಣದ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗವನ್ನೇ ಆವರಿಸಿದ ಕೊಳಚೆ ನೀರು