AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಹವಾಮಾನ ವರದಿ: ರಾಜ್ಯದಲ್ಲಿ ಗುಡುಗು ಸಹಿತ ಸಾಧಾರಣ ಮಳೆ; 3 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​

Karnataka Weather: ರಾಜ್ಯದ ಹಲವೆಡೆ ಇಂದು ಗುಡುಗು, ಸಿಡಿಲು ಅಬ್ಬರಿಸಲಿದ್ದು 3 ಜಿಲ್ಲೆಗಳಿಗೆ ಇಲಾಖೆ ಯೆಲ್ಲೋ ಅಲರ್ಟ್​ ನೀಡಿದೆ. ಬೆಂಗಳೂರಿನಲ್ಲಿ ಬೇಸಿಗೆ ತೀವ್ರಗೊಂಡಿದ್ದು, ತಾಪಮಾನ 39 ಡಿಗ್ರಿ ತಲುಪುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಹೀಟ್ ಸ್ಟ್ರೋಕ್ ಭೀತಿ ಹಿನ್ನೆಲೆಯಲ್ಲಿ ಬೆಳಗ್ಗೆ 11ರಿಂದ ಸಂಜೆ 4ರವರೆಗೆ ಹೊರಗೆ ಹೋಗದಂತೆ ಸೂಚನೆ ನೀಡಲಾಗಿದೆ.

ಕರ್ನಾಟಕ ಹವಾಮಾನ ವರದಿ: ರಾಜ್ಯದಲ್ಲಿ ಗುಡುಗು ಸಹಿತ ಸಾಧಾರಣ ಮಳೆ; 3 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​
ರಾಜ್ಯದಲ್ಲಿ ಗುಡುಗು ಸಹಿತ ಸಾಧಾರಣ ಮಳೆ; 3 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​
ಭಾವನಾ ಹೆಗಡೆ
|

Updated on: Feb 27, 2026 | 8:00 AM

Share

ಬೆಂಗಳೂರು, ಫೆಬ್ರವರಿ 27: ರಾಜ್ಯದಲ್ಲಿ ಹಲವು ದಿನಗಳಿಂದ ತಾಪಮಾನ ಹೆಚ್ಚಿದ್ದು, ಕೆಲ ಕಡೆಗಳಲ್ಲಿ ಗುಡುಗು ಸಹಿತ (Weather Forecast) ಮಳೆಯಾಗಿರುವುದೂ ಕಂಡುಬಂದಿದೆ. ಇಂದೂ ಸಹ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಸಹಿತ ಲಘು ಮಳೆ ಇರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಈ ಹಿನ್ನೆಲೆ 3 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಸೂಚಿಸಲಾಗಿದೆ

ಹಾಸನ, ಕೊಡಗು ಮತ್ತು ಮೈಸೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಸೂಚಿಸಲಾಗಿದೆ. ನಗರದಲ್ಲಿ ಮಾರ್ಚ್ ಎರಡನೇ ವಾರದ ಬಳಿಕ ಬಿಸಿಲಿನ ತೀವ್ರತೆ ಇನ್ನಷ್ಟು ಹೆಚ್ಚಲಿದೆ. ಈ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಕೂಡ ಅಲರ್ಟ್ ಆಗಿದೆ. ಬೆಳಿಗ್ಗೆ 11ರಿಂದ ಸಂಜೆ 4ರವರೆಗೆ ಅನಗತ್ಯವಾಗಿ ಹೊರಗೆ ಹೋಗದಂತೆ ಸೂಚನೆ ನೀಡಲಾಗಿದೆ. ಹೀಟ್ ಸ್ಟ್ರೋಕ್ ಹಾಗೂ ಡಿಹೈಡ್ರೇಶನ್ ಅಪಾಯ ಇರುವುದರಿಂದ ವೃದ್ಧರು, ಗರ್ಭಿಣಿಯರು, ಮಕ್ಕಳು ಮತ್ತು ಹೃದಯ ಸಂಬಂಧಿ ಕಾಯಿಲೆ ಇರುವವರು ವಿಶೇಷ ಎಚ್ಚರಿಕೆ ವಹಿಸಬೇಕು.

ಹೆಚ್ಚಾಗಿ ನೀರು, ತಂಪು ಪಾನೀಯಗಳು ಹಾಗೂ ಹಣ್ಣುಗಳನ್ನು ಸೇವಿಸಿ ದೇಹದ ತಾಪಮಾನ ನಿಯಂತ್ರಿಸಿಕೊಳ್ಳುವಂತೆ ವೈದ್ಯರು ಸಲಹೆ ನೀಡಿದ್ದಾರೆ. ಒಟ್ಟಿನಲ್ಲಿ, ಈ ವರ್ಷವೂ ಬೆಂಗಳೂರು ಮಂದಿಗೆ ಕಠಿಣ ಬೇಸಿಗೆ ಎದುರಾಗುವ ಸೂಚನೆಗಳಿವೆ.

ಎಲ್ಲೆಲ್ಲಿ ಒಣ ಹವೆ?

ಕರಾವಳಿಯ ಜಿಲ್ಲೆಗಳಾದ ದಕ್ಷಿಣ ಕನ್ನಡ , ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆಯಿರಲಿದೆ ಎಂದು ಇಲಾಖೆ ತಿಳಿಸಿದೆ. ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಯಾದಗಿರಿ, ರಾಯಚೂರು, ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ಮತ್ತು ವಿಜಯನಗರದಲ್ಲಿ ಕಳೆದ ಹಲವು ದಿನಗಳಿಂದ ಒಣಹವೆಯ ವಾತಾವರಣವಿದ್ದು, ಇಂದೂ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ದಕ್ಷಿಣ ಒಳನಾಡಿನ ಚಾಮರಾಜನಗರ, ಮಂಡ್ಯ, ಶಿವಮೊಗ್ಗ,ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬಳ್ಳಾರಿ, ತುಮಕೂರು, ಚಿಕ್ಕಬಳ್ಳಾಪುರ, ರಾಮನಗರ, ಚಿತ್ರದುರ್ಗ, ದಾವಣಗೆರೆ ಮತ್ತು ವಿಜಯನಗರ, ಹಾಸನ, ಕೊಡಗು, ಮೈಸೂರು, ಚಿಕ್ಕಮಗಳೂರಿನಲ್ಲಿಒಣ ಹವೆಯ ವಾತಾವರಣ ಇರಲಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಕಾವೇರಿ ಸಂಧಾನ ಸೂತ್ರಕ್ಕೆ‌ ದಿನಾಂಕ ಫಿಕ್ಸ್, ಆ.3ರಂದು ಸಿಎಂಗಳ ಸಭೆ ನಿಗದಿ
ಕಾವೇರಿ ಸಂಧಾನ ಸೂತ್ರಕ್ಕೆ‌ ದಿನಾಂಕ ಫಿಕ್ಸ್, ಆ.3ರಂದು ಸಿಎಂಗಳ ಸಭೆ ನಿಗದಿ
ಕೆ.ಆರ್.ಪೇಟೆ ಕಾಂಗ್ರೆಸ್ ಸಭೆಯಲ್ಲಿ ಕಾರ್ಯಕರ್ತರ ಹೈಡ್ರಾಮಾ!
ಕೆ.ಆರ್.ಪೇಟೆ ಕಾಂಗ್ರೆಸ್ ಸಭೆಯಲ್ಲಿ ಕಾರ್ಯಕರ್ತರ ಹೈಡ್ರಾಮಾ!
ಪಶುವೈದ್ಯರ ನೇಮಕಾತಿಯಲ್ಲಿ ಅಕ್ರಮ ಪ್ರಕರಣ: CID ತನಿಖೆಗೆ ಆದೇಶ
ಪಶುವೈದ್ಯರ ನೇಮಕಾತಿಯಲ್ಲಿ ಅಕ್ರಮ ಪ್ರಕರಣ: CID ತನಿಖೆಗೆ ಆದೇಶ
ಮಳೆ ಅಭಾವ: ತುಮಕೂರಲ್ಲಿ ಸಂಪೂರ್ಣ ಬತ್ತಿದ 300ಕ್ಕೂ ಹೆಚ್ಚು ಕೆರೆಗಳು
ಮಳೆ ಅಭಾವ: ತುಮಕೂರಲ್ಲಿ ಸಂಪೂರ್ಣ ಬತ್ತಿದ 300ಕ್ಕೂ ಹೆಚ್ಚು ಕೆರೆಗಳು
ಅಳ್ನಾವರದಲ್ಲಿ ನಾಲ್ಕು ಗಂಟೆಗೂ ಹೆಚ್ಚು ರೈಲುಗಳ ನಿಲುಗಡೆ: ಪ್ರಯಾಣಿಕರ ಪರದಾಟ
ಅಳ್ನಾವರದಲ್ಲಿ ನಾಲ್ಕು ಗಂಟೆಗೂ ಹೆಚ್ಚು ರೈಲುಗಳ ನಿಲುಗಡೆ: ಪ್ರಯಾಣಿಕರ ಪರದಾಟ
ಆರ್​ಎಸ್​ಎಸ್ ನೋಂದಣಿ ಬಗ್ಗೆ ರಾಷ್ಟ್ರಮಟ್ಟದಲ್ಲಿ ಅಭಿಯಾನ
ಆರ್​ಎಸ್​ಎಸ್ ನೋಂದಣಿ ಬಗ್ಗೆ ರಾಷ್ಟ್ರಮಟ್ಟದಲ್ಲಿ ಅಭಿಯಾನ
ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಪದಕ ಗೆದ್ದ ಕನ್ನಡತಿ; ಭಾರತೀಯ ವನಿತೆಯರ ಕಮಾಲ್
ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಪದಕ ಗೆದ್ದ ಕನ್ನಡತಿ; ಭಾರತೀಯ ವನಿತೆಯರ ಕಮಾಲ್
ಚಾಮರಾಜೇಶ್ವರಸ್ವಾಮಿ ಆಷಾಢ ಮಾಸದ ರಥೋತ್ಸವಕ್ಕೆ ಕ್ಷಣಗಣನೆ ಆರಂಭ
ಚಾಮರಾಜೇಶ್ವರಸ್ವಾಮಿ ಆಷಾಢ ಮಾಸದ ರಥೋತ್ಸವಕ್ಕೆ ಕ್ಷಣಗಣನೆ ಆರಂಭ
‘ಟಾಕ್ಸಿಕ್ ನೋಡಿದವರು ವಾಟ್​ ದಿ ಹೆಲ್​ ವಾಸ್ ದ್ಯಾಟ್ ಅಂತ ಹೊರಗೆ ಬರ್ತಾರೆ’
‘ಟಾಕ್ಸಿಕ್ ನೋಡಿದವರು ವಾಟ್​ ದಿ ಹೆಲ್​ ವಾಸ್ ದ್ಯಾಟ್ ಅಂತ ಹೊರಗೆ ಬರ್ತಾರೆ’
ಸಿಟಿ ರವಿ ಚಿಕ್ಕಮಗಳೂರಿಗೆ ಬರದಂತೆ ತಡೀತೇವೆ, ಮುಸ್ಲಿಂ ಮುಖಂಡರ ಎಚ್ಚರಿಕೆ
ಸಿಟಿ ರವಿ ಚಿಕ್ಕಮಗಳೂರಿಗೆ ಬರದಂತೆ ತಡೀತೇವೆ, ಮುಸ್ಲಿಂ ಮುಖಂಡರ ಎಚ್ಚರಿಕೆ