AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಹವಾಮಾನ ವರದಿ: ಕರಾವಳಿ ಸೇರಿದಂತೆ ರಾಜ್ಯದೆಲ್ಲೆಡೆ ಇಂದು ವರುಣಾರ್ಭಟ ಸಾಧ್ಯತೆ! 17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​

Karnataka Weather: ಬೆಂಗಳೂರು ಸೇರಿದಂತೆ ಹಲವೆಡೆ ಇಂದು ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು, 17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಸೂಚಿಸಿದೆ. ಉಳಿದೆಡೆ ಒಣ ಹವೆಯಿರಲಿದೆ ಎಂದು ಇಲಾಖೆ ತಿಳಿಸಿದೆ. ಇನ್ನೂ ಕೆಲ ದಿನ ಇದೇ ವಾತಾವರಣವಿರಲಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.

ಕರ್ನಾಟಕ ಹವಾಮಾನ ವರದಿ: ಕರಾವಳಿ ಸೇರಿದಂತೆ ರಾಜ್ಯದೆಲ್ಲೆಡೆ ಇಂದು ವರುಣಾರ್ಭಟ ಸಾಧ್ಯತೆ! 17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​
ಕರಾವಳಿ ಸೇರಿದಂತೆ ರಾಜ್ಯದೆಲ್ಲೆಡೆ ಇಂದು ವರುಣಾರ್ಭಟ ಸಾಧ್ಯತೆ! 17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​
ಭಾವನಾ ಹೆಗಡೆ
|

Updated on: Mar 24, 2026 | 8:17 AM

Share

ಬೆಂಗಳೂರು, ಮಾರ್ಚ್​ 24: ನಿನ್ನೆ ಒಣಹವೆಯಿಂದ ಕೂಡಿದ್ದ ರಾಜ್ಯದ ಹವಾಮಾನ (Weather Forecast)ಇಂದು ಹಠಾತ್ತನೆ ಬದಲಾಗಿದೆ. ಕರಾವಳಿಯೂ ಸೇರಿದಂತೆ ರಾಜ್ಯದ ಹತ್ತಾರು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ನೀಡಿರುವ ಹವಾಮಾನ ಇಲಾಖೆ, 17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಸೂಚಿಸಿದೆ.

ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​

ಬೀದರ್, ಕಲಬುರ್ಗಿ, ವಿಜಯಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಬೆಳಗಾವಿ, ಬಳ್ಳಾರಿ, ಕೊಪ್ಪಳ, ಗದಗ, ಧಾರವಾಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್​

ಎಲ್ಲೆಲ್ಲಿ ಮಳೆಯಾಗುವ ಸಾಧ್ಯತೆ?

ಕರಾವಳಿಯ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ 30-40 ಕಿ.ಮೀ/ಸೆ ವೆಗದ ಗಾಳಿಯೊಂದಿಗೆ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲ್ಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿಯೂ ವರುಣಾರ್ಭಟವಿರಲಿದ್ದು, ಉಳಿದೆಡೆ ಒಣ ಹವೆಯಿರಲಿದೆ.

ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ಮೈಸೂರು, ಚಾಮರಾಜನಗರ, ದಾವಣಗೆರೆ, ಬಳ್ಳಾರಿ, ವಿಜಯನಗರ, ತುಮಕೂರು ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿಯೂ ಗುಡುಗು ಸಿಡಿಲು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ಹೇಳಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಅಜ್ಜಿಯ ಪಾರ್ಥಿವ ಶರೀರ ಕಂಡು ಕಣ್ಣೀರಿಟ್ಟ ವಿಜಯ್ ರಾಘವೇಂದ್ರ ಮಗ ಶೌರ್ಯ
ಅಜ್ಜಿಯ ಪಾರ್ಥಿವ ಶರೀರ ಕಂಡು ಕಣ್ಣೀರಿಟ್ಟ ವಿಜಯ್ ರಾಘವೇಂದ್ರ ಮಗ ಶೌರ್ಯ
ಯಾವ ಯಾವ ರೀತಿಯ ಕ್ಯಾನ್ಸರ್​ ಮಕ್ಕಳನ್ನ ಕಾಡುತ್ತೆ?
ಯಾವ ಯಾವ ರೀತಿಯ ಕ್ಯಾನ್ಸರ್​ ಮಕ್ಕಳನ್ನ ಕಾಡುತ್ತೆ?
ಆರ್‌ಎಸ್‌ಎಸ್​ನವರು ಹಿಂದುಗಳಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ
ಆರ್‌ಎಸ್‌ಎಸ್​ನವರು ಹಿಂದುಗಳಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ
66 ರೌಡಿಶೀಟರ್​ಗಳಿಗೆ ಮುಕ್ತಿ ಸದ್ಯಕ್ಕಿಲ್ಲ: ಕ್ರಮ ತಡೆಹಿಡಿದ ಸಚಿವ ಖರ್ಗೆ
66 ರೌಡಿಶೀಟರ್​ಗಳಿಗೆ ಮುಕ್ತಿ ಸದ್ಯಕ್ಕಿಲ್ಲ: ಕ್ರಮ ತಡೆಹಿಡಿದ ಸಚಿವ ಖರ್ಗೆ
ತಾಯಿ ಪಾರ್ಥೀವ ಶರೀರದ ಎದುರು ಕಣ್ಣೀರು ಹಾಕಿದ ಶ್ರೀಮುರಳಿ
ತಾಯಿ ಪಾರ್ಥೀವ ಶರೀರದ ಎದುರು ಕಣ್ಣೀರು ಹಾಕಿದ ಶ್ರೀಮುರಳಿ
ಸಿಎಂ ಡಿಕೆಶಿಗೆ ಮೋಹನ್ ದಾಸ್ ಪೈ ಸಲಹೆ: ಉದ್ಯಮಿ ಹೇಳಿದ್ದೇನು?
ಸಿಎಂ ಡಿಕೆಶಿಗೆ ಮೋಹನ್ ದಾಸ್ ಪೈ ಸಲಹೆ: ಉದ್ಯಮಿ ಹೇಳಿದ್ದೇನು?
ಕೊನೆಗೂ ಖಾತೆ ವಹಿಸಿಕೊಂಡ ಸಚಿವ ಕೃಷ್ಣ ಭೈರೇಗೌಡ: ಜಿಬಿಎ ಕಚೇರಿಯಲ್ಲಿ ಸಭೆ
ಕೊನೆಗೂ ಖಾತೆ ವಹಿಸಿಕೊಂಡ ಸಚಿವ ಕೃಷ್ಣ ಭೈರೇಗೌಡ: ಜಿಬಿಎ ಕಚೇರಿಯಲ್ಲಿ ಸಭೆ
ಹುಬ್ಬಳ್ಳಿ ಭಂಡಿವಾಡದಲ್ಲಿ ಹತ್ತೇ ನಿಮಿಷದಲ್ಲಿ ಉಳೀತು ಇನ್ನೂರು ಮಕ್ಕಳ ಜೀವ
ಹುಬ್ಬಳ್ಳಿ ಭಂಡಿವಾಡದಲ್ಲಿ ಹತ್ತೇ ನಿಮಿಷದಲ್ಲಿ ಉಳೀತು ಇನ್ನೂರು ಮಕ್ಕಳ ಜೀವ
ಒಬ್ಬೊಬ್ರಿಗೆ ಕೊಡ್ತೀನಿ ನೋಡಿ; ಸಮಂತಾ ಎಚ್ಚರಿಕೆ ನೀಡಿದ್ದು ಯಾರಿಗೆ?
ಒಬ್ಬೊಬ್ರಿಗೆ ಕೊಡ್ತೀನಿ ನೋಡಿ; ಸಮಂತಾ ಎಚ್ಚರಿಕೆ ನೀಡಿದ್ದು ಯಾರಿಗೆ?
ಎಸಿಎಫ್​​ ಮನೆಯಲ್ಲಿ ಖಜಾನೆ ಕಂಡು ಲೋಕಾಯಕ್ತ ಅಧಿಕಾರಿಗಳೇ ಶಾಕ್​​
ಎಸಿಎಫ್​​ ಮನೆಯಲ್ಲಿ ಖಜಾನೆ ಕಂಡು ಲೋಕಾಯಕ್ತ ಅಧಿಕಾರಿಗಳೇ ಶಾಕ್​​