AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಹವಾಮಾನ ವರದಿ: ಮಳೆರಾಯನ ಅವಾಂತರಕ್ಕೆ ಹಾರಿ ಹೋಯ್ತು ಸೂರು! ಇಂದೂ ವರುಣನ ಆರ್ಭಟ ಜೋರು

Karnataka Weather: ಕಳೆದೆರಡು ದಿನಗಳಿಂದ ಸುರಿದ ಮಳೆಯಿಂದಾಗಿ ರಾಜ್ಯದ ಹಲವೆಡೆ ಅವಾಂತರಗಳು ಸೃಷ್ಟಿಯಾಗಿದೆ. ಅಲ್ಲದೆ ಇಂದೂ ಸಹ ಹಲವೆಡೆ ಗಾಳಿ ಸಹಿತ ಮಳೆಯಾಗುವ ಸಾಧ್ಯತೆಗಳಿರುವುದರಿಂದ 20ಕ್ಕೂ ಹೆಚ್ಚು ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್​ ನೀಡಿದೆ. ಇನ್ನೂ 3 ದಿನಗಳ ಕಾಲ ಇದೇ ವಾತಾವರಣ ಮುಂದುವರೆಯಲಿದೆ ಎಂದು ಇಲಖೆ ತಿಳಿಸಿದೆ.

ಕರ್ನಾಟಕ ಹವಾಮಾನ ವರದಿ: ಮಳೆರಾಯನ ಅವಾಂತರಕ್ಕೆ ಹಾರಿ ಹೋಯ್ತು ಸೂರು! ಇಂದೂ ವರುಣನ ಆರ್ಭಟ ಜೋರು
ಮಳೆರಾಯನ ಅವಾಂತರಕ್ಕೆ ಹಾರಿ ಹೋಯ್ತು ಸೂರು! 20ಕ್ಕೂ ಹೆಚ್ಚು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ Image Credit source: timeforkids.com
ಭಾವನಾ ಹೆಗಡೆ
|

Updated on:Mar 25, 2026 | 8:08 AM

Share

ಬೆಂಗಳೂರು, ಮಾರ್ಚ್​ 25: ಮಂಗಳವಾರ ಸುರಿದ ಮಳೆಯಿಂದಾಗಿ (Weather Forecast) ಹಲವೆಡೆ ಅವಾಂತಗಳು ಸೃಷ್ಟಿಯಾಗಿವೆ. ಜೋರಾದ ಗಾಳಿಗೆ ಮನೆ ಮೇಲಿನ ಸೂರು ಸಹ ಹಾರಿ ಹೋಗಿದ್ದು, ಜನರು ಕಂಗಾಲಾಗಿದ್ದಾರೆ. ಇಂದೂ ಸಹ ರಾಜ್ಯದೆಲ್ಲೆಡೆ ಗುಡುಗು ಸಹಿತ ಮಳೆಯಿರಲಿದ್ದು, ಹವಾಮಾನ ಇಲಾಖೆ 20ಕ್ಕೂ ಹೆಚ್ಚು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಸೂಚಿಸಿದೆ.

ಜೋರು ಗಾಳಿ ಮಳೆಗೆ ಗದಗದಲ್ಲಿ ಅವಾಂತರ

ಗದಗ ಜಿಲ್ಲೆಯಲ್ಲಿ ಮಂಗಳವಾರ ರಾತ್ರಿ ಭಾರಿ ಗಾಳಿ, ಗುಡುಗು ಸಹಿತ ಮಳೆಯ ಅಬ್ಬರದಿಂದ ಹಲವು ಕಡೆ ಅವಾಂತರಗಳು ಸಂಭವಿಸಿವೆ. ವಿಶೇಷವಾಗಿ ಮುಂಡರಗಿ ತಾಲೂಕಿನ ದಿಂಡೂರ ತಾಂಡಾದಲ್ಲಿ ಗಾಳಿಯ ತೀವ್ರತೆಗೆ ನಾಲ್ಕಕ್ಕೂ ಹೆಚ್ಚು ಮನೆಗಳ ಮೇಲಿನ ತಗಡಿನ ಶೀಟ್‌ಗಳು ಹಾರಿ ಹೋಗಿ ನಿವಾಸಿಗಳಿಗೆ ಭಾರೀ ತೊಂದರೆ ಉಂಟಾಗಿದೆ. ಶೀಟ್‌ಗಳು ಹಾರಿದ ಪರಿಣಾಮ ಶಿವಪ್ಪ ಲಮಾಣಿ ಕಾಲಿಗೆ ಗಾಯಗೊಂಡಿದ್ದು, ಸೋಮವ್ವ ಲಮಾಣಿ ಅವರ ಕೈ ಮುರಿದಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು ಗ್ರಾಮಸ್ಥರು ಪರದಾಡಿದ ಘಟನೆ ನಡೆದಿದೆ.

ಇದಲ್ಲದೆ ಭಾರಿ ಮಳೆ ಮತ್ತು ಗಾಳಿಯಿಂದ ವಿದ್ಯುತ್ ಸಂಪರ್ಕ ಕಡಿತಗೊಂಡು ಗ್ರಾಮಸ್ಥರು ಕತ್ತಲಿನಲ್ಲಿ ಕಂಗಾಲಾಗಿದ್ದಾರೆ. ಬಿರುಗಾಳಿಯಿಂದ ಹಲವು ದೊಡ್ಡ ಮರಗಳು ಧರೆಗೆ ಉರುಳಿದ್ದು, ಮನೆಗಳ ಮುಂದೆ ನಿಲ್ಲಿಸಿದ್ದ ಟ್ರ್ಯಾಕ್ಟರ್ ಸೇರಿದಂತೆ ವಾಹನಗಳು ಹಾನಿಗೊಳಗಾಗಿವೆ. ಇನ್ನೂ ಗಾಳಿ ಮತ್ತು ಮಳೆ ಮುಂದುವರಿದಿರುವುದರಿಂದ ಸ್ಥಳೀಯರಲ್ಲಿ ಆತಂಕ ಹೆಚ್ಚಾಗಿದೆ.

ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​

ಬೀದರ್, ಕಲಬುರ್ಗಿ, ಬಾಗಲಕೋಟೆ, ವಿಜಯಪುರ, ಯಾದಗಿರಿ,ರಾಯಚೂರು, ಕೊಪ್ಪಳ, ಗದಗ, ಬೆಳಗಾವಿ, ಧಾರವಾಡ, ಉತ್ತರ ಕನ್ನಡ, ಬಳ್ಳಾರಿ, ಹಾವೇರಿ, ವಿಜಯನಗರ, ಉಡುಪಿ, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ಮೈಸೂರು, ಕೊಡಗು, ಹಾಸನ, ತುಮಕೂರು, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆಯಿದ್ದು, ಯೆಲ್ಲೋ ಅಲರ್ಟ್​ ನೀಡಲಾಗಿದೆ. ಇನ್ನುಳಿದ ಜಿಲ್ಲೆಗಳಲ್ಲಿ ಒಣ ಹವೆಯಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:08 am, Wed, 25 March 26

Follow Us
ಬೋಳು ತಲೆಯಿದ್ದವರಿಗೆ ಅದೃಷ್ಟವೋ ಅದೃಷ್ಟ! ಯಾಕೆ ಗೊತ್ತಾ?
ಬೋಳು ತಲೆಯಿದ್ದವರಿಗೆ ಅದೃಷ್ಟವೋ ಅದೃಷ್ಟ! ಯಾಕೆ ಗೊತ್ತಾ?
ಇಂದು ಈ ರಾಶಿಯವರು ಸ್ನೇಹಿತರೊಂದಿಗೆ ಹಣಕಾಸು ವ್ಯವಹಾರ ಮಾಡಬೇಡಿ
ಇಂದು ಈ ರಾಶಿಯವರು ಸ್ನೇಹಿತರೊಂದಿಗೆ ಹಣಕಾಸು ವ್ಯವಹಾರ ಮಾಡಬೇಡಿ
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?