AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಹವಾಮಾನ ವರದಿ: ಬೆಂಗಳೂರಿನಲ್ಲಿ ಚಳಿಯೋ ಚಳಿ, ರಾಜ್ಯದಲ್ಲಿ ಮುಂದುವರೆದ ಒಣ ಹವೆ

Karnataka Weather: ಬೆಂಗಳೂರಿನಲ್ಲಿ ಮಂಜು ಮುಸುಕಿದ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು, ರಾಜ್ಯದೆಲ್ಲೆಡೆ ಒಣ ಹವೆ ಮುಂದುವರೆಯಲಿದೆ ಎಂದು ಹೇಳಲಾಗಿದೆ. ರಾಜ್ಯದೆಲ್ಲೆಡೆ ಇಂದು ಚಳಿಯಿರಲಿದ್ದು, ವೈದ್ಯರು ಆರೋಗ್ಯ ಕಾಪಾಡಿಕೊಳ್ಳುವಂತೆ ಹೇಳಿದ್ದು, ಸಮತೋಲನ ಆಹಾರ ಸೇವನೆಯೊಂದಿಗೆ ಬೆಚ್ಚನೆಯ ಉಡುಪು ಧರಿಸುವಂತೆ ಸಾರ್ವಜನಿಕರಿಗೆ ಸಲಹೆ ನೀಡಿದ್ದಾರೆ.

ಕರ್ನಾಟಕ ಹವಾಮಾನ ವರದಿ: ಬೆಂಗಳೂರಿನಲ್ಲಿ ಚಳಿಯೋ ಚಳಿ, ರಾಜ್ಯದಲ್ಲಿ ಮುಂದುವರೆದ ಒಣ ಹವೆ
ಬೆಂಗಳೂರಿನಲ್ಲಿ ಚಳಿಯೋ ಚಳಿ
ಭಾವನಾ ಹೆಗಡೆ
|

Updated on: Dec 27, 2025 | 7:43 AM

Share

ಬೆಂಗಳೂರು, ಡಿಸೆಂಬರ್ 27: ಕರಾವಳಿ ಸೇರಿದಂತೆ ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನಲ್ಲಿಯೂ ತೀವ್ರ ಚಳಿಯ ಜೊತೆಗೆ ಒಣಹವೆಯಿರಲಿದೆ  (Weather Forecast) ಎಂದು ಹವಾಮಾನ ಇಲಾಖೆ ಹೇಳಿದೆ. ಬೆಂಗಳೂರಿನಲ್ಲಿ ಶೀತದೊಂದಿಗೆ ಮಂಜು ಕವಿದ ವಾತಾವರಣ ಇರಲಿದ್ದು, ಬೆಚ್ಚಗಿನ ಉಡುಪು ಧರಿಸುವಂತೆ ವೈದ್ಯರು ಸಲಹೆ ನೀಡಿದ್ದಾರೆ. ಬೆಂಗಳೂರು ನಗರ ಹಾಗೂ ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಬೆಳಗಿನ ಸಮಯ ದಟ್ಟ ಮಂಜು ಕಾಣಿಸಿಕೊಳ್ಳುವ ಸಾಧ್ಯತೆ ಇದ್ದು, ವಾಹನ ಸವಾರರು ಎಚ್ಚರಿಕೆಯಿಂದ ಚಾಲನೆ ಮಾಡಬೇಕೆಂದು ಸೂಚಿಸಲಾಗಿದೆ.

ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ

ಇಂದು ಬೆಂಗಳೂರಿನ ತಾಪಮಾನ ಕನಿಷ್ಠ 15°C ಇದ್ದು, ಗರಿಷ್ಠ 28°C ಇರಲಿದೆ ಎಂದು ಇಲಾಖೆ ತಿಳಿಸಿದೆ. ಈ ರೀತಿಯ ತೀವ್ರ ಚಳಿಯಿಂದ ಜನರ ಆರೋಗ್ಯದಲ್ಲಿ ಏರುಪೇರಾಗುತ್ತಿದ್ದು, ಬೆಚ್ಚಗಿನ ಹೊದಿಕೆ ಹೊತ್ತುಕೊಳ್ಳಬೇಕು ಹಾಗೂ ಬಿಸಿ ಆಹಾರ ಸೇವನೆ ಮಾಡಬೇಕೆಂದು ವೈದ್ಯರು ಸೂಚಿಸಿದ್ದಾರೆ. ಇಂದು ಎಂದಿನಂತೆ ಚಳಿಯ ಜೊತೆಗೆ ಮಂಜು ಮುಸುಕಿದ ವಾತಾವರಣವಿರುವುದರಿಂದ ಮಕ್ಕಳಿಂದ ಹಿಡಿದು ವೃದ್ಧರವರೆಗೂ ಎಚ್ಚರಿಕೆಯಿಂದಿರುವಂತೆ ಸಲಹೆ ನೀಡಿರುವ ಹವಾಮಾನ ಇಲಾಖೆ, ಬೆಚ್ಚನೆಯ ಉಡುಪು ಧರಿಸುವುದರ ಜೊತೆಗೆ ಸಮತೋಲನ ಆಹಾರ ಸೇವನೆಗೆ ಒತ್ತು ನೀಡುವಂತೆ ಸಲಹೆ ನೀಡಿದೆ.

ಎಲ್ಲೆಲ್ಲಿ ಒಣ ಹವೆ

ಕರಾವಳಿಯ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆಯಿರಲಿದೆ ಎಂದು ಇಲಾಖೆ ತಿಳಿಸಿದೆ. ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರದಲ್ಲಿ ಕಳೆದ ಹಲವು ದಿನಗಳಿಂದ ಒಣಹವೆಯ ವಾತಾವರಣವಿದ್ದು, ಇಂದೂ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಚಾಮರಾಜನಗರ, ಮೈಸೂರು, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿಯೂ ಒಣ ಹವೆಯ ವಾತಾವರಣ ಇರಲಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ರಾಜ್ಯಸಭೆಯಲ್ಲಿ ಪ್ರಧಾನಿ ಮೋದಿ ಭಾಷಣ ಮಾಡುವಾಗಲೇ ವಿಪಕ್ಷದಿಂದ ಸಭಾತ್ಯಾಗ
ರಾಜ್ಯಸಭೆಯಲ್ಲಿ ಪ್ರಧಾನಿ ಮೋದಿ ಭಾಷಣ ಮಾಡುವಾಗಲೇ ವಿಪಕ್ಷದಿಂದ ಸಭಾತ್ಯಾಗ
ಲಂಚ ನೀಡಲು ಹಣವಿಲ್ಲದ್ದಕ್ಕೆ ಮೂಲಂಗಿಯನ್ನೇ ತಾಲೂಕು ಕಚೇರಿಗೆ ತಂದ ರೈತ
ಲಂಚ ನೀಡಲು ಹಣವಿಲ್ಲದ್ದಕ್ಕೆ ಮೂಲಂಗಿಯನ್ನೇ ತಾಲೂಕು ಕಚೇರಿಗೆ ತಂದ ರೈತ
ಶುಲ್ಕ ವಿವಾದ: ಸಂಶೋಧನಾ ಪ್ರಬಂಧ ಸುಟ್ಟುಹಾಕಿ ಕಣ್ಣೀರಿಟ್ಟ ವಿದ್ಯಾರ್ಥಿಗಳು
ಶುಲ್ಕ ವಿವಾದ: ಸಂಶೋಧನಾ ಪ್ರಬಂಧ ಸುಟ್ಟುಹಾಕಿ ಕಣ್ಣೀರಿಟ್ಟ ವಿದ್ಯಾರ್ಥಿಗಳು
PM Modi Speech Live: ರಾಜ್ಯಸಭೆಯಲ್ಲಿ ಪ್ರಧಾನಿ ಮೋದಿ ಭಾಷಣದ ನೇರಪ್ರಸಾರ
PM Modi Speech Live: ರಾಜ್ಯಸಭೆಯಲ್ಲಿ ಪ್ರಧಾನಿ ಮೋದಿ ಭಾಷಣದ ನೇರಪ್ರಸಾರ
ಸಿಗರೇಟ್ ಸೇದಿದ್ರೆ ರಜತ್ ದೊಡ್ಡ ಹೀರೋನಾ? ದೂರು ನೀಡಿದ ಕರ್ನಾಟಕ ಸೇನಾ ಪಡೆ
ಸಿಗರೇಟ್ ಸೇದಿದ್ರೆ ರಜತ್ ದೊಡ್ಡ ಹೀರೋನಾ? ದೂರು ನೀಡಿದ ಕರ್ನಾಟಕ ಸೇನಾ ಪಡೆ
ಕಾರು ಚಾಲಕನ ಮೇಲೆ ಬೈಕ್​​ ಸವಾರನ ದರ್ಪ: ಮಿರರ್​​ ಮುರಿದಿದ್ದಲ್ಲದೆ ನಿಂದನೆ
ಕಾರು ಚಾಲಕನ ಮೇಲೆ ಬೈಕ್​​ ಸವಾರನ ದರ್ಪ: ಮಿರರ್​​ ಮುರಿದಿದ್ದಲ್ಲದೆ ನಿಂದನೆ
ಕಾವೇರಿ ನದಿ ತವರಲ್ಲೇ ಹನಿ ನೀರಿಗೂ ಹಾಹಾಕಾರ: ಕುಡಿಯಲು ಕೊಳಚೆ ನೀರೇ ಗತಿ!
ಕಾವೇರಿ ನದಿ ತವರಲ್ಲೇ ಹನಿ ನೀರಿಗೂ ಹಾಹಾಕಾರ: ಕುಡಿಯಲು ಕೊಳಚೆ ನೀರೇ ಗತಿ!
ಇಬ್ಬಲೂರು ಜಂಕ್ಷನ್​ನಲ್ಲಿ ನಿರ್ಮಾಣವಾಗಲಿದೆ ಹೊಸ ಫ್ಲೈಓವರ್
ಇಬ್ಬಲೂರು ಜಂಕ್ಷನ್​ನಲ್ಲಿ ನಿರ್ಮಾಣವಾಗಲಿದೆ ಹೊಸ ಫ್ಲೈಓವರ್
ಅಕ್ರಮ ವಲಸಿಗರಿಗೆ ನಡುಕ ಶುರು: ರಾಜ್ಯ ಸರ್ಕಾರದಿಂದ ವಿಶೇಷ ಕಾರ್ಯಾಚರಣೆ
ಅಕ್ರಮ ವಲಸಿಗರಿಗೆ ನಡುಕ ಶುರು: ರಾಜ್ಯ ಸರ್ಕಾರದಿಂದ ವಿಶೇಷ ಕಾರ್ಯಾಚರಣೆ
ಬಯಲಾಯ್ತು ಕಲಬುರಗಿ ಆರ್​ಟಿಒ ಕಚೇರಿ ಬ್ರಹ್ಮಾಂಡ ಭ್ರಷ್ಟಾಚಾರ
ಬಯಲಾಯ್ತು ಕಲಬುರಗಿ ಆರ್​ಟಿಒ ಕಚೇರಿ ಬ್ರಹ್ಮಾಂಡ ಭ್ರಷ್ಟಾಚಾರ