ಕರ್ನಾಟಕ ಹವಾಮಾನ ವರದಿ: ಹಾಸನ ಸೇರಿದಂತೆ ಹಲವೆಡೆ ಇಂದು ಗುಡುಗು ಸಹಿತ ಮಳೆ; 13 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​

Karnataka Weather: ರಾಜ್ಯದಲ್ಲಿ ಹಲವು ದಿನಗಳು ಸಾಧಾರಣ ಮಳೆಯ ವಾತಾವರಣ ಕಂಡು ಬಂದಿದೆ. ಇಂದೂ ಸಹ ಹಲವೆಡೆ ಗಾಳಿ, ಗುಡುಗು ಸಹಿತ ಮಳೆಯಾಗುವ ಸಾಧ್ಯತೆಗಳಿರುವುದರಿಂದ 13 ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್​ ನೀಡಿದೆ. ಉಳಿದ ಜಿಲ್ಲೆಗಳಲ್ಲಿ ಒಣ ಹವೆಯ ವಾತಾವರಣವಿರಲಿದೆ ಎಂದು ಹೇಳಲಾಗಿದೆ.

ಕರ್ನಾಟಕ ಹವಾಮಾನ ವರದಿ: ಹಾಸನ ಸೇರಿದಂತೆ ಹಲವೆಡೆ ಇಂದು ಗುಡುಗು ಸಹಿತ ಮಳೆ; 13 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​
ಹಾಸನ ಸೇರಿದಂತೆ ಹಲವೆಡೆ ಇಂದು ಗುಡುಗು ಸಹಿತ ಮಳೆ; 13 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​
Image Credit source: Hindustan Times

Updated on: Mar 29, 2026 | 7:33 AM

ಬೆಂಗಳೂರು, ಮಾರ್ಚ್​ 29: ರಾಜ್ಯದ ಹಲವೆಡೆ ಕಳೆದ ಮೂರು-ನಾಲ್ಕು ದಿನಗಳಿಂದ ಗುಡುಗು ಸಹಿತ ಮಳೆಯಾಗಿದೆ. ಇಂದೂ ಸಹ ಹಲವೆಡೆ ಮಳೆಯಾಗುವ  (Weather Forecast)  ಸೂಚನೆಯಿದ್ದು, ಹವಾಮಾನ ಇಲಾಖೆ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಿದೆ. ಉಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದ್ದು, ಕೆಲ ಭಾಗಗಳಲ್ಲಿ ಒಣ ಹವೆಯ ವಾತಾವರಣವಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಯಾವೆಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​? ​

ಕಲಬುರ್ಗಿ, ವಿಜಯಪುರ, ಗದಗ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಉತ್ತರ ಕನ್ನಡ, ಶಿವಮೊಗ್ಗ, ಉಡುಪಿ, ಹಾವೇರಿ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಆದ್ದರಿಂದ ಈ 13 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಸೂಚಿಸಲಾಗಿದೆ.

ಎಲ್ಲೆಲ್ಲಿ ಒಣ ಹವೆ?

ದಕ್ಷಿಣ ಕನ್ನಡ ಸೇರಿದಂತೆ ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೀದರ್, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರದಲ್ಲಿ ಒಣ ಹವೆಯಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ಚಾಮರಾಜನಗರ, ಮೈಸೂರು, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿಯೂ ಒಣ ಹವೆಯ ವಾತಾವರಣ ಇರಲಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:29 am, Sun, 29 March 26

Follow Us