AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಹವಾಮಾನ ವರದಿ: ಬೆಂಗಳೂರಿನಲ್ಲಿ ಮೈಕೊರೆಯುವ ಚಳಿ, ತುಂತುರು ಮಳೆ! ರಾಜ್ಯದ 4 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​

Karnataka Weather: ಕಳೆದ ಕೆಲ ದಿನಗಳಿಂದ ರಾಜ್ಯದಲ್ಲಿ ಶೀತದಲೆಯ ಪ್ರಮಾಣ ಹೆಚ್ಚಾಗಿದ್ದು, 4 ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್​ ನೀಡಿದೆ. ಬೆಂಗಳೂರಿನಲ್ಲಿ ಮಂಜು ಮುಸುಕಿದ ವಾತಾವರಣದ ಜೊತೆ ತುಂತುರು ಮಳೆಯೂ ಇರಲಿದೆ ಎಂದು ಇಲಾಖೆ ತಿಳಿಸಿದ್ದು, ಸಮತೋಲನ ಆಹಾರ ಸೇವನೆಯೊಂದಿಗೆ ಬೆಚ್ಚನೆಯ ಉಡುಪು ಧರಿಸುವಂತೆ ಸಾರ್ವಜನಿಕರಿಗೆ ಸಲಹೆ ನೀಡಲಾಗಿದೆ.

ಕರ್ನಾಟಕ ಹವಾಮಾನ ವರದಿ: ಬೆಂಗಳೂರಿನಲ್ಲಿ ಮೈಕೊರೆಯುವ ಚಳಿ, ತುಂತುರು ಮಳೆ! ರಾಜ್ಯದ 4 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​
ರಾಜ್ಯದ 4 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​
ಭಾವನಾ ಹೆಗಡೆ
|

Updated on:Jan 11, 2026 | 7:37 AM

Share

ಬೆಂಗಳೂರು, ಜನವರಿ 11: ರಾಜ್ಯದಲ್ಲಿ ನಿನ್ನೆಯಿಂದ ಚಳಿಯ ಪ್ರಮಾಣ ಹೆಚ್ಚಾಗಿದ್ದು, ನಿನ್ನೆ ಹಲವು ಜಿಲ್ಲೆಗಳಿಗೆ ಅಲರ್ಟ್​ ನೀಡಲಾಗಿತ್ತು. ಇಂದೂ ಸಹ ತಾಪಮಾನದಲ್ಲಿ (Weather Forecast) ಸುಧಾರಣೆಯಾಗದ ಕಾರಣ ಹಲವೆಡೆ ಮಂಜು ಹಾಗೂ ಒಣ ಹವೆಯ ವಾತಾವರಣ ಜನಜೀವನದ ಮೇಲೆ ಪ್ರಭಾವ ಬೀರುತ್ತಿದೆ. ಪರಿಣಾಮವಾಗಿ ಹವಾಮಾನ ಇಲಾಖೆ ರಾಜ್ಯದ 4 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಸೂಚಿಸಲಾಗಿದೆ. ಭಾರಿ ಚಳಿಗೆ ಬೆಂಗಳೂರು ನಡುಗಿದ್ದು, ರಾಜಧಾನಿಯಲ್ಲಿ ಮೈಕೊರೆಯುವ ಚಳಿಯ ಅಬ್ಬರ ಮುಂದುವರಿದಿದೆ.

ಚಳಿಗೆ ಬೆಂಗಳೂರಿಗರು ಗಡಗಡ

ಬೆಂಗಳೂರಿನಲ್ಲಿ ಚಳಿಯೊಂದಿಗೆ ತುಂತುರು ಮಳೆಯೂ ಸುರಿಯುತ್ತಿದ್ದು, ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದು ತೀವ್ರ ಶೀತ ವಾತಾವರಣ ಕಂಡುಬಂದಿದೆ. ಕಳೆದ ಎರಡು ದಿನಗಳಿಂದ ರಾಜಧಾನಿಯಲ್ಲಿ ಕನಿಷ್ಠ ತಾಪಮಾನ 14 ಡಿಗ್ರಿಗೆ ಇಳಿಕೆಯಾಗಿದೆ. ಹಗಲಿನ ವೇಳೆಯಲ್ಲಿಯೂ ತಾಪಮಾನ ಕುಸಿತ ಕಂಡುಬಂದಿದ್ದು, ಸದಾ ಮೋಡ ಮುಸಕಿದ ವಾತಾವರಣ ನೆಲೆಸಿದೆ. ಮೈಕೊರೆಯುವ ಚಳಿಯಿಂದ ಉದ್ಯೋಗಿಗಳು ಕೆಲಸಕ್ಕೆ ತೆರಳುವಾಗ ಹಾಗೂ ಲಾಲ್‌ಬಾಗ್‌ನಲ್ಲಿ ವಾಕಿಂಗ್‌ಗೆ ಬರುವವರು ಟೋಪಿ, ಮಫ್ಲರ್ ಧರಿಸಿ ಕಾಣಿಸಿಕೊಂಡಿದ್ದಾರೆ. ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಹಗುರ ಮಳೆಯಾಗುವ ಸಾಧ್ಯತೆ ಇದ್ದು, ಜನವರಿ 14ರವರೆಗೂ ಕೆಲವು ಜಿಲ್ಲೆಗಳಲ್ಲಿ ಮಂಜಿನ ವಾತಾವರಣ ಮತ್ತು ಶೀತಗಾಳಿ ಬೀಸುವ ಸಾಧ್ಯತೆ ಇದೆ.

ಎಲ್ಲೆಲ್ಲಿ ಒಣಹವೆ?

ರಾಜ್ಯದಲ್ಲಿ ಅತಿಯಾದ ಶೀತದಲೆಯ ಕಾರಣದಿಂದಾಗಿ ಬೀದರ್, ಕಲಬುರಗಿ, ಧಾರವಾಡ ಹಾಗೂ ವಿಜಯಪುರ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್​ ಸೂಚಿಸಿದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಚಾಮರಾಜನಗರ, ಮೈಸೂರು, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿಯೂ ಒಣ ಹವೆಯ ವಾತಾವರಣ ಇರಲಿದೆ.

ಕರಾವಳಿಯ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆಯಿರಲಿದೆ ಎಂದು ಇಲಾಖೆ ತಿಳಿಸಿದೆ. ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರದಲ್ಲಿ ಕಳೆದ ಹಲವು ದಿನಗಳಿಂದ ಒಣಹವೆಯ ವಾತಾವರಣವಿದ್ದು, ಇಂದೂ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:22 am, Sun, 11 January 26

Follow Us
ಮತ್ತೆ ಕುದಿಯುತ್ತಿದೆ ಮಣಿಪುರ; ಇಂಪಾಲ್​ನ ಘರ್ಷಣೆಯಲ್ಲಿ ಹಲವರಿಗೆ ಗಾಯ
ಮತ್ತೆ ಕುದಿಯುತ್ತಿದೆ ಮಣಿಪುರ; ಇಂಪಾಲ್​ನ ಘರ್ಷಣೆಯಲ್ಲಿ ಹಲವರಿಗೆ ಗಾಯ
ಕೇಜ್ರಿವಾಲ್ ಸಿಎಂ ಆದಮೇಲೆ 100 ಕೋಟಿ ಮನೆ ಕಟ್ಟಿದರು; ಸ್ವಾತಿ ಮಲಿವಾಲ್ ಟೀಕೆ
ಕೇಜ್ರಿವಾಲ್ ಸಿಎಂ ಆದಮೇಲೆ 100 ಕೋಟಿ ಮನೆ ಕಟ್ಟಿದರು; ಸ್ವಾತಿ ಮಲಿವಾಲ್ ಟೀಕೆ
ತುಂಗಭದ್ರಾದಿಂದ ಕದ್ದುಮುಚ್ಚಿ ಕಾರ್ಖಾನೆಗಳಿಗೆ ಹರಿಸಲಾಗುತ್ತಿದ್ದ ನೀರು ಬಂದ್
ತುಂಗಭದ್ರಾದಿಂದ ಕದ್ದುಮುಚ್ಚಿ ಕಾರ್ಖಾನೆಗಳಿಗೆ ಹರಿಸಲಾಗುತ್ತಿದ್ದ ನೀರು ಬಂದ್
ಸತತ 4 ಸಿಕ್ಸರ್; ಪ್ರಫುಲ್ ಹಿಂಗೆ ವಿರುದ್ಧ ಸೇಡು ತೀರಿಸಿಕೊಂಡ ವೈಭವ್
ಸತತ 4 ಸಿಕ್ಸರ್; ಪ್ರಫುಲ್ ಹಿಂಗೆ ವಿರುದ್ಧ ಸೇಡು ತೀರಿಸಿಕೊಂಡ ವೈಭವ್
ರಾಹುಲ್ ಗಾಂಧಿಯ ಪ್ರತಿಕೃತಿ ದಹನದ ವೇಳೆ ಬಿಜೆಪಿ ಶಾಸಕಿಗೆ ಗಾಯ
ರಾಹುಲ್ ಗಾಂಧಿಯ ಪ್ರತಿಕೃತಿ ದಹನದ ವೇಳೆ ಬಿಜೆಪಿ ಶಾಸಕಿಗೆ ಗಾಯ
ಸಚಿವ ಡಿ ಸುಧಾಕರ್ ಆರೋಗ್ಯದ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಸಿದ್ದರಾಮಯ್ಯ
ಸಚಿವ ಡಿ ಸುಧಾಕರ್ ಆರೋಗ್ಯದ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಸಿದ್ದರಾಮಯ್ಯ
ರಾಜ್​​ಕುಮಾರ್ ಸಮಾಧಿ ಬಗ್ಗೆ ಪ್ರಶ್ನೆ, ವಿತಂಡ ವಾದ ಮುಂದುವರೆಸಿದ ಚೇತನ್
ರಾಜ್​​ಕುಮಾರ್ ಸಮಾಧಿ ಬಗ್ಗೆ ಪ್ರಶ್ನೆ, ವಿತಂಡ ವಾದ ಮುಂದುವರೆಸಿದ ಚೇತನ್
ಶಾಲೆಗಳಲ್ಲಿ ಶಿಕ್ಷಕರೇ ಇಲ್ಲ, SSLC ಫಲಿತಾಂಶ ಏರಿಕೆ ಆಗಿದ್ಹೇಗೆ? ವಿಶ್ವನಾಥ್
ಶಾಲೆಗಳಲ್ಲಿ ಶಿಕ್ಷಕರೇ ಇಲ್ಲ, SSLC ಫಲಿತಾಂಶ ಏರಿಕೆ ಆಗಿದ್ಹೇಗೆ? ವಿಶ್ವನಾಥ್
ಉಕ್ರೇನ್ ಮೇಲೆ ಮತ್ತೆ ರಷ್ಯಾದಿಂದ ಡ್ರೋನ್ ದಾಳಿ; ನಾಲ್ವರು ಸಾವು
ಉಕ್ರೇನ್ ಮೇಲೆ ಮತ್ತೆ ರಷ್ಯಾದಿಂದ ಡ್ರೋನ್ ದಾಳಿ; ನಾಲ್ವರು ಸಾವು
3 ತಿಂಗಳ ಕಂದನನ್ನ ತನ್ನದೇ ಮಗು ಎಂಬಂತೆ ಅಪ್ಪಿಕೊಂಡು ಮುದ್ದಾಡಿದ ಮಂಗ
3 ತಿಂಗಳ ಕಂದನನ್ನ ತನ್ನದೇ ಮಗು ಎಂಬಂತೆ ಅಪ್ಪಿಕೊಂಡು ಮುದ್ದಾಡಿದ ಮಂಗ