AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಹವಾಮಾನ ವರದಿ: ಕೊಡಗು, ಮೈಸೂರು ಸೇರಿದಂತೆ ಕೆಲವೆಡೆ ಸಾಧಾರಣ ಮಳೆ, 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​!

Karnataka Weather: ಬೆಂಗಳೂರು ಸೇರಿದಂತೆ ಇಂದು ಹಲವೆಡೆ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು, 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಸೂಚಿಸಲಾಗಿದೆ. ಉಳಿದೆಡೆ ಒಣಹವೆಯಿರಲಿದ್ದು,ಇನ್ನೂ ಕೆಲ ದಿನ ಇದೇ ವಾತಾವರಣವಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರ್ನಾಟಕ ಹವಾಮಾನ ವರದಿ: ಕೊಡಗು, ಮೈಸೂರು ಸೇರಿದಂತೆ ಕೆಲವೆಡೆ ಸಾಧಾರಣ ಮಳೆ, 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​!
ಕೊಡಗು, ಮೈಸೂರು ಸೇರಿದಂತೆ ಕೆಲವೆಡೆ ಸಾಧಾರಣ ಮಳೆ, 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​!
ಭಾವನಾ ಹೆಗಡೆ
|

Updated on: Mar 22, 2026 | 7:47 AM

Share

ಬೆಂಗಳೂರು, ಮಾರ್ಚ್​ 22: ಹಲವು ದಿನಗಳಿಂದ ರಾಜ್ಯದೆಲ್ಲೆಡೆ ಒಣಹವೆಯಿತ್ತು. ಆದರೆ ಇತ್ತೀಚಿಗೆ ಕೆಲ ಜಿಲ್ಲೆಗಳಲ್ಲಿ ಮಳೆ ಸುರಿದು ತಾಪಮಾನ ಸುಧಾರಿಸಿತ್ತು. ಇಂದೂ ಸಹ ಹಲವೆಡೆ ಗುಡುಗು-ಸಿಡಿಲು  (Weather Forecast) ಸಹಿತ ಸಾಧಾರಣ ಮಳೆಯಾಗಲಿದ್ದು, ಬೆಂಗಳೂರಿನಿಂದ ಬೀದರ್​ವರೆಗೆ ಒಟ್ಟೂ 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಸೂಚಿಸಲಾಗಿದೆ. ಉಳಿದೆಡೆ ಒಣ ಹವೆಯ ವಾತಾವರಣವಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಯಾವೆಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​?

ಬೆಳಗಾವಿ, ಧಾರವಾಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿರುವುದರಿಂದ ಯೆಲ್ಲೋ ಅಲರ್ಟ್​ ಸೂಚಿಸಲಾಗಿದೆ. ಉತ್ತರ ಒಳನಾಡಿನ ಅದರಂತೆ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿಯೂ ಗುಡುಗು, ಸಿಡಿಲು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.

ಎಲ್ಲೆಲ್ಲಿ ಒಣ ಹವೆ?

ಕರಾವಳಿಯ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆ ಆವರಿಸಲಿದೆ. ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ಚಾಮರಾಜನಗರ, ತುಮಕೂರು, ವಿಜಯನಗರ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಮೈಸೂರು ಜಿಲ್ಲೆಗಳಲ್ಲಿಯೂ ಒಣ ಹವೆಯ ವಾತಾವರಣ ಇರಲಿದೆ.

ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೆಳಗಾವಿ, ಹಾವೇರಿ, ಗದಗ ಮತ್ತು ಧಾರವಾಡ ಬೀದರ್, ವಿಜಯಪುರ, ಬಾಗಲಕೋಟೆ, ಗದಗ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರದಲ್ಲಿ ಕಳೆದ ಹಲವು ದಿನಗಳಿಂದ ಒಣಹವೆಯ ವಾತಾವರಣವಿದ್ದು, ಇಂದೂ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us