ಕರ್ನಾಟಕ ಹವಾಮಾನ ವರದಿ: ಇಂದೂ ಹಲವೆಡೆ ಇರಲಿದೆ ಮಳೆಯ ಆರ್ಭಟ; 22 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​!

Karnataka Weather: ರಾಜ್ಯದಲ್ಲಿ ಹಲವು ದಿನಗಳು ಸಾಧಾರಣ ಮಳೆಯಾಗಿದೆ. ಇಂದೂ ಸಹ ಹಲವೆಡೆ ಗಾಳಿ, ಗುಡುಗು ಸಹಿತ ಮಳೆಯಾಗುವ ಸಾಧ್ಯತೆಗಳಿರುವುದರಿಂದ ಹವಾಮಾನ ಇಲಾಖೆ 22 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ನೀಡಿದೆ. ಉಳಿದೆಡೆ ಒಣಹವೆಯಿರಲಿದ್ದು, ಬೆಂಗಳೂರಿನಲ್ಲಿ ಇಂದೂ ಮೋಡ ಕವಿದ ವಾತಾವರಣವಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರ್ನಾಟಕ ಹವಾಮಾನ ವರದಿ: ಇಂದೂ ಹಲವೆಡೆ ಇರಲಿದೆ ಮಳೆಯ ಆರ್ಭಟ; 22 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​!
ಇಂದೂ ಹಲವೆಡೆ ಇರಲಿದೆ ಮಳೆಯ ಆರ್ಭಟ; 22 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​!
Image Credit source: moldova1.md

Updated on: Apr 04, 2026 | 7:40 AM

ಬೆಂಗಳೂರು, ಏಪ್ರಿಲ್ 04: ಹಲವು ದಿನಗಳಲ್ಲಿ ರಾಜ್ಯದ ಹಲವು ಭಾಗಗಳಲ್ಲಿ ಮಳೆಯಾರ್ಭಟ (Weather Forecast)  ಕಾಣಸಿಗುತ್ತಿದೆ. ಅಂತೆಯೇ ಇಂದೂ ಸಹ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು, 22 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಸೂಚಿಸಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಯಾವೆಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​? ​

ವಿಜಯಪುರ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ವಿಜಯನಗರ, ಬಳ್ಳಾರಿ, ದಾವಣಗೆರೆ, ಉತ್ತರ ಕನ್​ನಡ, ಶಿವಮೊಗ್ಗ, ಹಾವೇರಿ, ಉಡುಪಿ, ದಕ್ಷಿಣ ಕನ್ನಡ, ಹಾಸನ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಮೈಸೂರು, ಕೊಡಗು ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಆದ್ದರಿಂದ ಈ 22 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಸೂಚಿಸಲಾಗಿದೆ.

ಇದನ್ನೂ ಓದಿ 1,2,3,4,5,6,7 ಈ ದಿನದಂದು ಮಧ್ಯಾಹ್ನದ ನಂತರ ಬರಲಿದೆ ಗುಡುಗು ಸಹಿತ ಮಳೆ; ಎಲ್ಲೆಲ್ಲಿ ಮಳೆಯಾಗಬಹುದು?

ಎಲ್ಲೆಲ್ಲಿ ಮಳೆ

ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಸೇರಿದಂತೆ ಉತ್ತರ ಒಳನಾಡಿನ ವಿಜಯಪುರ, ಕಲ್ಬುರ್ಗಿ, ಬೀದರ್, ಕೊಪ್ಪಳ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ. ದಕ್ಷಿಣ ಒಳನಾಡಿನ ಬಳ್ಳಾರಿ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಹಾಸನ, ಮಂಡ್ಯ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಚಿಕ್ಕಬಳ್ಳಾಪುರ, ಕೋಲಾರದಲ್ಲಿ 30-40 ಕೀ.ಮಿ/ಗಂ ವೇಗದಲ್ಲಿ ಗಾಳಿ ಮಳೆ ಜೋರಾಗಿರಲಿದೆ. ಉಳಿದೆಡೆ ಒಣ ಹವೆಯ ವಾತಾವರಣವಿರಲಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:39 am, Sat, 4 April 26

Follow Us