AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಹವಾಮಾನ ವರದಿ: ಬೆಂಗಳೂರಿನಲ್ಲಿ ಇಂದೂ ಇರಲಿದೆ ವರುಣಾರ್ಭಟ! ಕರಾವಳಿಯಲ್ಲಿ ಹೀಟ್​ ವೇವ್ ಜೊತೆ ಮಳೆಯ ಸಾಧ್ಯತೆ

Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಇಂದು ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆಯಿದ್ದು, ದಕ್ಷಿಣ ಒಳನಾಡಿನ ಹಲವು ಕಡೆ ಗಾಳಿ ಮಳೆಯೂ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಆದಾಗ್ಯೂ ಕಲಬುರಗಿ ಸೇರಿದಂತೆ ಹಲವೆಡೆ ಮುಂಬರುವ 3 ದಿನಗಳಲ್ಲಿ ತಾಪಮಾನ ಏರಿಕೆಯಾಗಲಿದ್ದು, ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ಅನಗತ್ಯವಾಗಿ ಹೊರಗೆ ಬರಬೇಡಿ, ಹೆಚ್ಚು ನೀರು ಸೇವಿಸಿ ಎಂದು ವೈದ್ಯರು ಸಲಹೆ ನೀಡಿದ್ದಾರೆ.

ಕರ್ನಾಟಕ ಹವಾಮಾನ ವರದಿ: ಬೆಂಗಳೂರಿನಲ್ಲಿ ಇಂದೂ ಇರಲಿದೆ ವರುಣಾರ್ಭಟ! ಕರಾವಳಿಯಲ್ಲಿ ಹೀಟ್​ ವೇವ್ ಜೊತೆ ಮಳೆಯ ಸಾಧ್ಯತೆ
ಬೆಂಗಳೂರಿನಲ್ಲೂ ಇಂದೂ ಇರಲಿದೆ ವರುಣಾರ್ಭಟ! Image Credit source: google Gemini
ಭಾವನಾ ಹೆಗಡೆ
|

Updated on: May 02, 2026 | 7:17 AM

Share

ಬೆಂಗಳೂರು, ಮೇ 02: ರಾಜ್ಯದಲ್ಲಿ ಮೂರು ದಿನಗಳಿಂದ ಆಲಿಕಲ್ಲು ಮಳೆಯಾರ್ಭಟ ಕಾಣಸಿಗುತ್ತಿದೆ. ಇಂದೂ ಸಹ ಬೆಂಗಳೂರು ಸೇರಿ ಹಲವೆಡೆ ಗಾಳಿ ಮಳೆಯಿರಲಿದೆ (Karnataka Weather) ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕಲಬುರಗಿ, ರಾಯಚೂರು ಸೇರಿದಂತೆ ಹಲವೆಡೆ ಇಂದು ಗರಿಷ್ಠ 42-42 ಡಿಗ್ರಿ ಸೆಲ್ಸಿಯಸ್​ನಷ್ಟು ತಾಪಮಾನವಿರಲಿದ್ದು, ಇನ್ನೂ 3 ದಿನ ಇದೇ ವಾತಾವರಣ ಇರಲಿದೆ ಎಂದು ಎಚ್ಚರಿಕೆ ನೀಡಲಾಗಿದೆ.

ರಾಜಧಾನಿಯಲ್ಲಿ ಮಳೆಯ ಅಲರ್ಟ್​!

ಕರಾವಳಿಯ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ. ಉತ್ತರ ಕನ್ನಡ ಜಿಲ್ಲೆಯಲ್ಲೂ ಮಳೆಯಾರ್ಭಟವಿದ್ದು, ಕೆಲವೆಡೆ ಹೀಟ್ ವೇವ್ ಅಲರ್ಟ್​ ಘೋಷಿಸಲಾಗಿದೆ. ಉತ್ತರ ಕರ್ನಾಟಕದ ಕಲ್ಬುರ್ಗಿ, ರಾಯಚೂರು, ಯಾದಗಿರಿ, ಧಾರವಾಡ, ಹಾವೇರಿ ಮತ್ತು ಗದಗ ಜಿಲ್ಲೆಗಳಲ್ಲಿ 30-40 ಕಿ.ಮೀ ವೇಗದ ಗಾಳಿಯೊಂದಿಗೆ ಸಾಧಾರಣ ಮಳೆಯಾಗುವ ಸಂಭವವಿದ್ದು, ಉಳಿದೆಡೆ ಶುಷ್ಕ ವಾತಾವರಣವಿರಲಿದೆ ಎಂದು ಇಲಾಖೆ ತಿಳಿಸಿದೆ.

ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ 30-40 ಕಿ. ಮೀ ವೇಗದ ಗಾಳಿಯೊಂದಿಗೆ ಗುಡುಗು ಸಹಿತ ಜೋರು ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.

ಮಳೆಯ ಅವಾಂತರ!

ಬುಧವಾರ ಸಂಜೆ ಬೆಂಗಳೂರಿನಲ್ಲಿ ಸುರಿದ ಮಳೆ ಹಲವರನ್ನು ಬಲಿ ಪಡೆದಿದೆ. ಜೆ.ಪಿ. ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ ಯುವಕನೊಬ್ಬ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಇದಕ್ಕೂ ಮುನ್ನ ಶಿವಾಜಿನಗರದ ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಕುಸಿತದಿಂದ 7 ಜನರು ಸಾವನ್ನಪ್ಪಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Bhavana Hegde
Bhavana Hegde

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More
ಸಿದ್ದರಾಮಯ್ಯ ದೆಹಲಿ ಭೇಟಿ ಹಿಂದೆಯೇ 7 ಮಂದಿ ಸಚಿವರ ಪಟಲಾಂ ಸಹ ದೌಡು!
ಸಿದ್ದರಾಮಯ್ಯ ದೆಹಲಿ ಭೇಟಿ ಹಿಂದೆಯೇ 7 ಮಂದಿ ಸಚಿವರ ಪಟಲಾಂ ಸಹ ದೌಡು!
ಮೂರಿನ್ ಕಟ್ಟೆ ಧ್ವಂಸವನ್ನು ಸಮರ್ಥಿಸಿಕೊಂಡ ಮುಸ್ಲಿಂ ಮುಖಂಡ
ಮೂರಿನ್ ಕಟ್ಟೆ ಧ್ವಂಸವನ್ನು ಸಮರ್ಥಿಸಿಕೊಂಡ ಮುಸ್ಲಿಂ ಮುಖಂಡ
ಸಿಎಂ ಸಿದ್ದರಾಮಯ್ಯಗೆ ಹೈಕಮಾಂಡ್ ಬುಲಾವ್ ಹಿಂದಿದೆ ರೋಚಕ ಸ್ಟೋರಿ
ಸಿಎಂ ಸಿದ್ದರಾಮಯ್ಯಗೆ ಹೈಕಮಾಂಡ್ ಬುಲಾವ್ ಹಿಂದಿದೆ ರೋಚಕ ಸ್ಟೋರಿ
ಬೆಂಗಳೂರಿನಲ್ಲಿ ರಾಮ್ ಚರಣ್ ‘ಪೆದ್ದಿ’ ಸಿನಿಮಾ ಸುದ್ದಿಗೋಷ್ಠಿ; ಲೈವ್ ವಿಡಿಯೋ
ಬೆಂಗಳೂರಿನಲ್ಲಿ ರಾಮ್ ಚರಣ್ ‘ಪೆದ್ದಿ’ ಸಿನಿಮಾ ಸುದ್ದಿಗೋಷ್ಠಿ; ಲೈವ್ ವಿಡಿಯೋ
ಬ್ಯಾಂಕ್ ಆಫ್ ಬರೋಡಾದಲ್ಲಿ 8.70 ಕೋಟಿ ರೂ. ದರೋಡೆ
ಬ್ಯಾಂಕ್ ಆಫ್ ಬರೋಡಾದಲ್ಲಿ 8.70 ಕೋಟಿ ರೂ. ದರೋಡೆ
ಸಿಎಂಗೆ ಹೈಕಮಾಂಡ್​ ದಿಲ್ಲಿ ಬುಲಾವ್ ಬಗ್ಗೆ ಜಾರಕಿಹೊಳಿ ಶಾಕಿಂಗ್ ಮಾತು
ಸಿಎಂಗೆ ಹೈಕಮಾಂಡ್​ ದಿಲ್ಲಿ ಬುಲಾವ್ ಬಗ್ಗೆ ಜಾರಕಿಹೊಳಿ ಶಾಕಿಂಗ್ ಮಾತು
ಮಂಡ್ಯ: ಜಿಂಕೆಯನ್ನು ನುಂಗಿದ್ದ 10 ಅಡಿ ಉದ್ದದ ಬೃಹತ್ ಹೆಬ್ಬಾವು ಸೆರೆ!
ಮಂಡ್ಯ: ಜಿಂಕೆಯನ್ನು ನುಂಗಿದ್ದ 10 ಅಡಿ ಉದ್ದದ ಬೃಹತ್ ಹೆಬ್ಬಾವು ಸೆರೆ!
ಗೃಹಲಕ್ಷ್ಮಿ ಯೋಜನೆ ಹಣ ದುರ್ಬಳಕೆ ಆರೋಪ: ಡಿಕೆ ಶಿವಕುಮಾರ್ ಮಹತ್ವದ ಹೇಳಿಕೆ
ಗೃಹಲಕ್ಷ್ಮಿ ಯೋಜನೆ ಹಣ ದುರ್ಬಳಕೆ ಆರೋಪ: ಡಿಕೆ ಶಿವಕುಮಾರ್ ಮಹತ್ವದ ಹೇಳಿಕೆ
ಇಂಧನ ಬೆಲೆ ಏರಿಕೆ: ಕೇಂದ್ರ, ರಾಜ್ಯಕ್ಕೆಷ್ಟು ಪಾಲೆಂಬ ಮಾಹಿತಿ ಇಲ್ಲಿದೆ
ಇಂಧನ ಬೆಲೆ ಏರಿಕೆ: ಕೇಂದ್ರ, ರಾಜ್ಯಕ್ಕೆಷ್ಟು ಪಾಲೆಂಬ ಮಾಹಿತಿ ಇಲ್ಲಿದೆ
ಬಕ್ರೀದ್ ಸ್ಪೆಷಲ್: ಪೆರೆಸಂದ್ರ ಸಂತೆಯಲ್ಲಿ ಕುರಿಗಳಿಗೆ ಭಾರೀ ಬೇಡಿಕೆ!
ಬಕ್ರೀದ್ ಸ್ಪೆಷಲ್: ಪೆರೆಸಂದ್ರ ಸಂತೆಯಲ್ಲಿ ಕುರಿಗಳಿಗೆ ಭಾರೀ ಬೇಡಿಕೆ!