AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಹವಾಮಾನ ವರದಿ: ಬೆಂಗಳೂರಿನಲ್ಲಿ ಇಂದೂ ಇರಲಿದೆ ವರುಣಾರ್ಭಟ! ಕೊಡಗು, ಹಾಸನದಲ್ಲಿ ಆಲಿಕಲ್ಲು ಮಳೆ​

Karnataka Weather: ಬೆಂಗಳೂರು ಸೇರಿದಂತೆ ಇಂದು ಹಲವೆಡೆ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಒಳನಾಡಿನಲ್ಲಿ ಬಿರುಗಾಳಿಯೊಂದಿಗೆ ಆಲಿಕಲ್ಲು ಮಳೆಯಾಗಲಿದ್ದು, ಹಾಸನ ಸೇರಿದಂತೆ 4 ಜಿಲ್ಲೆಗಳಿಗೆ ಇಂದು ಯೆಲ್ಲೋ ಅಲರ್ಟ್​ ನೀಡಲಾಗಿದೆ. ಇನ್ನೂ ಮೂರು ದಿನ ರಾಜ್ಯದಲ್ಲಿ ವರುಣಾರ್ಭಟವಿರಲಿದೆ ಎಂದು ಇಲಾಖೆ ತಿಳಿಸಿದೆ.

ಕರ್ನಾಟಕ ಹವಾಮಾನ ವರದಿ: ಬೆಂಗಳೂರಿನಲ್ಲಿ ಇಂದೂ ಇರಲಿದೆ ವರುಣಾರ್ಭಟ! ಕೊಡಗು, ಹಾಸನದಲ್ಲಿ ಆಲಿಕಲ್ಲು ಮಳೆ​
ಬೆಂಗಳೂರಿನಲ್ಲಿ ಇಂದೂ ಇರಲಿದೆ ವರುಣಾರ್ಭಟ!
ಭಾವನಾ ಹೆಗಡೆ
|

Updated on: May 07, 2026 | 7:35 AM

Share

ಬೆಂಗಳೂರು, ಮೇ 07: ಬೆಂಗಳೂರು ಸೇರಿದಂತೆ ಇಂದು ರಾಜ್ಯದ ಹಲವೆಡೆ ಮಳೆಯಾಗುವ ಮುನ್ಸೂಚನೆಯಿದೆ ಎಂದು ಹವಾಮಾನ ಇಲಾಖೆ (Weather) ತಿಳಿಸಿದೆ. ಹಾಸನ, ಕೊಡಗು ಸೇರಿದಂತೆ ದಕ್ಷಿಣ ಒಳನಾಡಿನ ಹಲವೆಡೆ ಇಂದು ಆಲಿಕಲ್ಲು ಮಳೆಯಾಗಲಿದ್ದು, 4 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಮುಂದಿನ ಎರಡು ದಿನಗಳ ಕಾಲ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮುಖ್ಯಾಂಶಗಳು

  • ಮುಂದಿನ 3 ದಿನಗಳವರೆಗೆ ಬೆಂಗಳೂರಿನಲ್ಲಿ ಮಳೆ
  • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಲಿಕಲ್ಲು ಮಳೆಯಬ್ಬರ
  • ಕೊಡಗು, ಹಾಸನ ಸೇರಿದಂತೆ 4 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​

ಆಲಿಕಲ್ಲು ಮಳೆ

ಕರಾವಳಿಯ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ 30-40 ಕಿ.ಮೀ ವೇಗದ ಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಶುಷ್ಕ ವಾತಾವರಣ ಇರಲಿದೆ. ದಕ್ಷಿಣ ಒಳನಾಡಿನ ಹಾಸನ, ಮಂಡ್ಯ, ಮೈಸೂರು ಮತ್ತು ಕೊಡಗು, ಶಿವಮೊಗ್ಗ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ತುಮಕೂರು ಜಿಲ್ಲೆಗಳಲ್ಲಿ ಗಂಟೆಗೆ 40-50 ಕಿ.ಮೀ ಬಿರುಗಾಳಿಯೊಂದಿಗೆ ಗುಡುಗು ಸಹಿತ ಆಲಿಕಲ್ಲು ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ. ಉತ್ತರ ಒಳನಾಡಿನ ಧಾರವಾಡ, ಹಾವೇರಿ, ಗದಗ, ಬೆಳಗಾವಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದ್ದು, ಉಳಿದೆಡೆ ಒಳಹವೆಯಿರಲಿದೆ.

ಇದನ್ನೂ ಓದಿ ಮುಂದಿನ 7 ದಿನ ರಾಜ್ಯದಲ್ಲಿ ಬಿಸಿಲಿನ ನಡುವೆ ಅಲ್ಲಲ್ಲಿ ಮಳೆ ಸಾಧ್ಯತೆ

ಇನ್ನೂ ಮೂರು ದಿನ ಗುಡುಗು, ಮಳೆಯಬ್ಬರ!

ಮೇ 7 ಮತ್ತು 8 ರಂದು ಬೆಳಗಾವಿ, ಉತ್ತರ ಕನ್ನಡ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದ್ದು, ಇವುಗಳನ್ನು ಹೊರತುಪಡಿಸಿ ರಾಜ್ಯದ ಉಳಿದೆಲ್ಲಾ ಜಿಲ್ಲೆಗಳಲ್ಲಿ ಮಳೆ ಮುಂದುವರಿಯಲಿದ್ದು, ಎಲ್ಲೋ ಅಲರ್ಟ್ ಜಾರಿಯಲ್ಲಿರುತ್ತದೆ. ಬೀದರ್, ಕಲಬುರ್ಗಿ, ವಿಜಯಪುರ, ಯಾದಗಿರಿ, ರಾಯಚೂರು ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಸಾಧಾರಣ ಮಳೆಯ ನಿರೀಕ್ಷೆಯಿದೆ. ಈ ಆರು ಜಿಲ್ಲೆಗಳನ್ನು ಹೊರತುಪಡಿಸಿ ರಾಜ್ಯದ ಇತರೆಲ್ಲಾ ಭಾಗಗಳಲ್ಲಿ ಯೆಲ್ಲೋ ಅಲರ್ಟ್ ಇರಲಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಭಾವನಾ ಹೆಗಡೆ
ಭಾವನಾ ಹೆಗಡೆ

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ
ಮುಸ್ಲಿಂ ಮತದಾರರ ಹೆಸರು ಡಿಲೀಟ್ ಆರೋಪ
ಮುಸ್ಲಿಂ ಮತದಾರರ ಹೆಸರು ಡಿಲೀಟ್ ಆರೋಪ