AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಹವಾಮಾನ ವರದಿ: ಇಂದು ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ; 15 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​!

Karnataka Weather: ರಾಜ್ಯದಲ್ಲಿ ಹಲವು ದಿನಗಳು ಸಾಧಾರಣ ಮಳೆಯಾಗಿದೆ. ಇಂದೂ ಸಹ ಹಲವೆಡೆ ಗಾಳಿ, ಗುಡುಗು ಸಹಿತ ಮಳೆಯಾಗುವ ಸಾಧ್ಯತೆಗಳಿರುವುದರಿಂದ ಹವಾಮಾನ ಇಲಾಖೆ 15 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ನೀಡಿದೆ. ಉಳಿದೆಡೆ ಒಣಹವೆಯಿರಲಿದ್ದು, ಬೆಂಗಳೂರಿನಲ್ಲಿ ಇಂದೂ ಮೋಡ ಕವಿದ ವಾತಾವರಣವಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರ್ನಾಟಕ ಹವಾಮಾನ ವರದಿ: ಇಂದು ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ; 15 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​!
ಇಂದು ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ; 15 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​!
ಭಾವನಾ ಹೆಗಡೆ
|

Updated on: Apr 03, 2026 | 7:23 AM

Share

ಬೆಂಗಳೂರು, ಏಪ್ರಿಲ್ 03: ಹಲವು ದಿನಗಳಲ್ಲಿ ರಾಜ್ಯದ ಹಲವು ಭಾಗಗಳಲ್ಲಿ ಮಳೆಯಾರ್ಭಟ (Weather Forecast)  ಕಾಣಸಿಗುತ್ತಿದೆ. ಅಂತೆಯೇ ಇಂದೂ ಸಹ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು, 15 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಸೂಚಿಸಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಯಾವೆಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​? ​

ಬೀದರ್, ಕಲಬುರ್ಗಿ, ಯಾದಗಿರಿ, ವಿಜಯಪುರ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಉತ್ತರ ಕನ್ನಡ, ಹಾವೇರಿ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಆದ್ದರಿಂದ ಈ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಸೂಚಿಸಲಾಗಿದೆ.

ಇದನ್ನೂ ಓದಿ 1,2,3,4,5,6,7 ಈ ದಿನದಂದು ಮಧ್ಯಾಹ್ನದ ನಂತರ ಬರಲಿದೆ ಗುಡುಗು ಸಹಿತ ಮಳೆ; ಎಲ್ಲೆಲ್ಲಿ ಮಳೆಯಾಗಬಹುದು?

ಎಲ್ಲೆಲ್ಲಿ ಮಳೆ

ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಸೇರಿದಂತೆ ಉತ್ತರ ಒಳನಾಡಿನ ವಿಜಯಪುರ, ಬಾಗಲಕೋಟೆ, ಕಲ್ಬುರ್ಗಿ, ಬೀದರ್, ಕೊಪ್ಪಳ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ. ದಕ್ಷಿಣ ಒಳನಾಡಿನ ಬಳ್ಳಾರಿ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗಿನಲ್ಲಿ 30-40 ಕೀ.ಮಿ/ಗಂ ವೇಗದಲ್ಲಿ ಗಾಳಿ ಮಳೆ ಜೋರಾಗಿರಲಿದೆ. ಉಳಿದೆಡೆ ಒಣ ಹವೆಯ ವಾತಾವರಣವಿರಲಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಅಮಿತ್ ಶಾ ಅವರನ್ನು ಸದನಕ್ಕೆ ಕರೆಸಿ; ಸರ್ಕಾರಕ್ಕೆ ರಾಜ್ಯಸಭಾ ಸಭಾಪತಿ ಸೂಚನೆ
ಅಮಿತ್ ಶಾ ಅವರನ್ನು ಸದನಕ್ಕೆ ಕರೆಸಿ; ಸರ್ಕಾರಕ್ಕೆ ರಾಜ್ಯಸಭಾ ಸಭಾಪತಿ ಸೂಚನೆ
ಮೀಸಲಾತಿ ವ್ಯವಸ್ಥೆ ಬಗ್ಗೆ RSS​ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದೇನು?
ಮೀಸಲಾತಿ ವ್ಯವಸ್ಥೆ ಬಗ್ಗೆ RSS​ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದೇನು?
‘ಸಿಟಿ ಲೈಟ್ಸ್’ ಸಿನಿಮಾದಲ್ಲಿ ಅನಾವರಣ ಆಗಲಿದೆ ಬೆಂಗಳೂರಿನ ಮೆಜೆಸ್ಟಿಕ್ ಲೋಕ
‘ಸಿಟಿ ಲೈಟ್ಸ್’ ಸಿನಿಮಾದಲ್ಲಿ ಅನಾವರಣ ಆಗಲಿದೆ ಬೆಂಗಳೂರಿನ ಮೆಜೆಸ್ಟಿಕ್ ಲೋಕ
‘ಸಿಟಿ ಲೈಟ್ಸ್’ ಸಿನಿಮಾ ಚಿತ್ರೀಕರಣದ ಅನುಭವ ಹಂಚಿಕೊಂಡ ಮೋನಿಷಾ: ವಿಡಿಯೋ
‘ಸಿಟಿ ಲೈಟ್ಸ್’ ಸಿನಿಮಾ ಚಿತ್ರೀಕರಣದ ಅನುಭವ ಹಂಚಿಕೊಂಡ ಮೋನಿಷಾ: ವಿಡಿಯೋ
ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಭೀಮಾ: ನದಿ ತೀರಕ್ಕೆ ತೆರಳದಂತೆ ಕಟ್ಟೆಚ್ಚರ
ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಭೀಮಾ: ನದಿ ತೀರಕ್ಕೆ ತೆರಳದಂತೆ ಕಟ್ಟೆಚ್ಚರ
ಭೈರತಿ ಸುರೇಶ್ ವಿರುದ್ಧ ಅವಹೇಳನಕಾರಿ ಕಮೆಂಟ್: ಸಿದ್ದರಾಮಯ್ಯ ಅಭಿಮಾನಿ ಬಂಧನ
ಭೈರತಿ ಸುರೇಶ್ ವಿರುದ್ಧ ಅವಹೇಳನಕಾರಿ ಕಮೆಂಟ್: ಸಿದ್ದರಾಮಯ್ಯ ಅಭಿಮಾನಿ ಬಂಧನ
ಕಂಚಿನ ಪದಕ ವಿಜೇತೆ ಕನ್ನಡತಿ ಶಿಲ್ಪಾಗೆ ಅದ್ಧೂರಿ ಸ್ವಾಗತ
ಕಂಚಿನ ಪದಕ ವಿಜೇತೆ ಕನ್ನಡತಿ ಶಿಲ್ಪಾಗೆ ಅದ್ಧೂರಿ ಸ್ವಾಗತ
‘ಬಾಸ್’ ಸಿನಿಮಾ ನೋಡಿದ ದರ್ಶನ್ ವಕೀಲರು ಹೇಳಿದ್ದೇನು? ವಿಡಿಯೋ
‘ಬಾಸ್’ ಸಿನಿಮಾ ನೋಡಿದ ದರ್ಶನ್ ವಕೀಲರು ಹೇಳಿದ್ದೇನು? ವಿಡಿಯೋ
ನೂತನ 19 ಸಚಿವರಿಗೆ ಇಂದೇ ಖಾತೆ ಹಂಚಿಕೆ?
ನೂತನ 19 ಸಚಿವರಿಗೆ ಇಂದೇ ಖಾತೆ ಹಂಚಿಕೆ?
ಸಿದ್ದರಾಮಯ್ಯ ಮೇಲೆ ಅಹಿಂದ ಶಾಸಕರ ಅಸಮಾಧಾನ
ಸಿದ್ದರಾಮಯ್ಯ ಮೇಲೆ ಅಹಿಂದ ಶಾಸಕರ ಅಸಮಾಧಾನ