AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಹವಾಮಾನ ವರದಿ: ರಾಜ್ಯದೆಲ್ಲೆಡೆ ಚಳಿಯ ಅಬ್ಬರ, ಬೆಂಗಳೂರಿನಲ್ಲಿ ಮಂಜು ಮುಸುಕಿದ ವಾತಾವರಣ

Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳು ಶೀತದಲೆಯ ಪ್ರಭಾವಕ್ಕೆ ತತ್ತರಿಸಿದ್ದು, ಎಲ್ಲೆಡೆ ಒಣ ಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಮಂಜು ಮುಸುಕಿದ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು, ವೈದ್ಯರು ಆರೋಗ್ಯ ಕಾಪಾಡಿಕೊಳ್ಳುವಂತೆ ಹೇಳಿದ್ದು, ಸಮತೋಲನ ಆಹಾರ ಸೇವನೆಯೊಂದಿಗೆ ಬೆಚ್ಚನೆಯ ಉಡುಪು ಧರಿಸುವಂತೆ ಸಾರ್ವಜನಿಕರಿಗೆ ಸಲಹೆ ನೀಡಿದ್ದಾರೆ.

ಕರ್ನಾಟಕ ಹವಾಮಾನ ವರದಿ: ರಾಜ್ಯದೆಲ್ಲೆಡೆ ಚಳಿಯ ಅಬ್ಬರ, ಬೆಂಗಳೂರಿನಲ್ಲಿ ಮಂಜು ಮುಸುಕಿದ ವಾತಾವರಣ
ರಾಜ್ಯದೆಲ್ಲೆಡೆ ಚಳಿಯ ಅಬ್ಬರ, ಬೆಂಗಳೂರಿನಲ್ಲಿ ಮಂಜು ಮುಸುಕಿದ ವಾತಾವರಣ
ಭಾವನಾ ಹೆಗಡೆ
|

Updated on: Dec 28, 2025 | 7:34 AM

Share

ಬೆಂಗಳೂರು, ಡಿಸೆಂಬರ್ 28: ರಾಜ್ಯದ ಹಲವು ಜಿಲ್ಲೆಗಳಲ್ಲಿ ಶೀತದಲೆಯ ಪ್ರಭಾವ ಹೆಚ್ಚಿದ್ದು, ಕಳೆದ ಹಲವು ತಿಂಗಳಿಂದ ಎಲ್ಲೆಡೆ ಒಣ ಹವೆಯ (Weather Forecast) ವಾತಾವರಣವಿದೆ. ಇಂದೂ ಸಹ ಕರಾವಳಿ ಸೇರಿದಂತೆ ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನಲ್ಲಿಯೂ ತೀವ್ರ ಚಳಿಯ ಜೊತೆಗೆ ಒಣಹವೆಯಿರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಬೆಂಗಳೂರಿನಲ್ಲಿ ಶೀತದೊಂದಿಗೆ ಮಂಜು ಕವಿದ ವಾತಾವರಣ ಇರಲಿದ್ದು, ಬೆಚ್ಚಗಿನ ಉಡುಪು ಧರಿಸುವಂತೆ ವೈದ್ಯರು ಸಲಹೆ ನೀಡಿದ್ದಾರೆ. ಬೆಂಗಳೂರು ನಗರ ಹಾಗೂ ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಬೆಳಗಿನ ಸಮಯ ದಟ್ಟ ಮಂಜು ಕಾಣಿಸಿಕೊಲ್ಳುವ ಸಾಧ್ಯತೆ ಇದ್ದು, ವಾಹನ ಸವಾರರು ಎಚ್ಚರಿಕೆಯಿಂದ ಚಾಲನೆ ಮಾಡಬೇಕೆಂದು ಸೂಚಿಸಲಾಗಿದೆ.

ಬೆಂಗಳೂರಿನಲ್ಲಿ ಮಂಜು

ಇಂದು ಎಂದಿನಂತೆ ಚಳಿಯ ಜೊತೆಗೆ ಮಂಜು ಮುಸುಕಿದ ವಾತಾವರಣವಿರುವುದರಿಂದ ಮಕ್ಕಳಿಂದ ಹಿಡಿದು ವೃದ್ಧರವರೆಗೂ ಎಚ್ಚರಿಕೆಯಿಂದಿರುವಂತೆ ಸಲಹೆ ನೀಡಿರುವ ಹವಾಮಾನ ಇಲಾಖೆ, ಬೆಚ್ಚನೆಯ ಉಡುಪು ಧರಿಸುವುದರ ಜೊತೆಗೆ ಸಮತೋಲನ ಆಹಾರ ಸೇವನೆಗೆ ಒತ್ತು ನೀಡುವಂತೆ ಸಲಹೆ ನೀಡಿದೆ. ಇಂದು ಬೆಂಗಳೂರಿನ ತಾಪಮಾನ ಕನಿಷ್ಠ 15°C ಇದ್ದು, ಗರಿಷ್ಠ 28°C ಇರಲಿದೆ ಎಂದು ಇಲಾಖೆ ತಿಳಿಸಿದೆ. ಈ ರೀತಿಯ ತೀವ್ರ ಚಳಿಯಿಂದ ಜನರ ಆರೋಗ್ಯದಲ್ಲಿ ಏರುಪೇರಾಗುತ್ತಿದ್ದು, ಬೆಚ್ಚಗಿನ ಹೊದಿಕೆ ಹೊತ್ತುಕೊಳ್ಳಬೇಕು ಹಾಗೂ ಬಿಸಿ ಆಹಾರ ಸೇವನೆ ಮಾಡಬೇಕೆಂದು ವೈದ್ಯರು ಸೂಚಿಸಿದ್ದಾರೆ.

ಎಲ್ಲೆಲ್ಲಿ ಒಣ ಹವೆ

ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಚಾಮರಾಜನಗರ, ಮೈಸೂರು, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿಯೂ ಒಣ ಹವೆಯ ವಾತಾವರಣ ಇರಲಿದೆ.

ಕರಾವಳಿಯ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆಯಿರಲಿದೆ ಎಂದು ಇಲಾಖೆ ತಿಳಿಸಿದೆ. ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರದಲ್ಲಿ ಕಳೆದ ಹಲವು ದಿನಗಳಿಂದ ಒಣಹವೆಯ ವಾತಾವರಣವಿದ್ದು, ಇಂದೂ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Bhavana Hegde
Bhavana Hegde

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಗಿನ್ನಿಸ್​​ ದಾಖಲೆ ಬರೆದ ತುಮಕೂರು: ಪ್ರಮಾಣಪತ್ರ ಸ್ವೀಕರಿಸಿದ ಸಿದ್ದರಾಮಯ್ಯ
ಗಿನ್ನಿಸ್​​ ದಾಖಲೆ ಬರೆದ ತುಮಕೂರು: ಪ್ರಮಾಣಪತ್ರ ಸ್ವೀಕರಿಸಿದ ಸಿದ್ದರಾಮಯ್ಯ