ಬೆಂಗಳೂರಿನಲ್ಲಿ ಐವರು ಶಂಕಿತ ಉಗ್ರರ ಬಂಧನ ಕೇಸ್: ಪ್ರಮುಖ ಆರೋಪಿ ಪತ್ತೆಗೆ ಲುಕ್​​ಔಟ್​ ನೋಟಿಸ್​​ ಜಾರಿಗೆ ಸಿದ್ಧತೆ 

ಬೆಂಗಳೂರಿನಲ್ಲಿ ಶಂಕಿತ ಉಗ್ರರ ಬಂಧನ ಪ್ರಕರಣಕ್ಕೆ ಸಂಧಿಸಿದಂತೆ ವಿದೇಶದಲ್ಲಿ ತಲೆಮರೆಸಿಕೊಂಡಿರುವ ಪ್ರಮುಖ ಆರೋಪಿ ಪತ್ತೆಗೆ ಸಿಸಿಬಿ ಕಾರ್ಯಚರಣೆ ನಡೆಸಿದೆ.

ಬೆಂಗಳೂರಿನಲ್ಲಿ ಐವರು ಶಂಕಿತ ಉಗ್ರರ ಬಂಧನ ಕೇಸ್: ಪ್ರಮುಖ ಆರೋಪಿ ಪತ್ತೆಗೆ ಲುಕ್​​ಔಟ್​ ನೋಟಿಸ್​​ ಜಾರಿಗೆ ಸಿದ್ಧತೆ 
ಸಿಸಿಬಿ ಕಚೇರಿ
Follow us
Jagadisha B
| Updated By: ರಮೇಶ್ ಬಿ. ಜವಳಗೇರಾ

Updated on: Jul 23, 2023 | 10:28 AM

ಬೆಂಗಳೂರು, (ಜುಲೈ 23): ರಾಜ್ಯದಲ್ಲಿ ವಿಧ್ವಂಸಕ ಕೃತ್ಯ ಎಸಗಲು ಸಂಚು ರೂಪಿಸಿದ್ದ ಐವರು ಶಂಕಿತ ಉಗ್ರರ (suspected terrorist ) ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಜುನೈದ್​ ಪತ್ತೆಗೆ ಸಿಸಿಬಿ(CCB) ಕಾರ್ಯಚರಣೆ ನಡೆಸಿದೆ. ವಿದೇಶದಲ್ಲಿ ತಲೆಮರೆಸಿಕೊಂಡಿರುವ ಪ್ರಮುಖ ಆರೋಪಿ ಜುನೈದ್​ ಪತ್ತೆಗೆ ಇಂಟರ್​ಪೋಲ್​ ಮೂಲಕ ಲುಕ್​​​ಔಟ್‌ ನೋಟಿಸ್ (Look Out Notice) ನೀಡಲು ಸಿಸಿಬಿ ಸಿದ್ಧತೆ ನಡೆಸಿದೆ. ಕಳೆದ 2 ವರ್ಷಗಳ ಹಿಂದೆ ಜೈಲಿನಿಂದ ಹೊರಬಂದಿದ್ದ ಜುನೈದ್, ಬಳಿಕ ದುಬೈಗೆ ಪರಾರಿಯಾಗಿರುವ ಶಂಕಿಸಲಾಗಿದೆ. ಶಂಕಿತ ಉಗ್ರ ಜುನೈದ್ 2021ರಲ್ಲಿ ದುಬೈಗೆ ಪರಾರಿಯಾದ ಬಗ್ಗೆ ಸಿಸಿಬಿ ಮಾಹಿತಿ ಕಲೆಹಾಕಿದೆ. ಅಲ್ಲದೇ ಜುನೈದ್​​ ಬಗ್ಗೆ ರಾಷ್ಟ್ರೀಯ ತನಿಖಾ ದಳಕ್ಕೂ ಮಾಹಿತಿ ನೀಡಿದ್ದು, ಈ ಸಂಬಂಧ ಪರಿಶೀಲನೆ ನಡೆಸಿ ಶೀಘ್ರ ಲುಕ್​ಔಟ್ ನೋಟಿಸ್ ಜಾರಿಗೆ ಮುಂದಾಗಿದೆ.

ಇದನ್ನೂ ಓದಿ: Bengaluru: ಶಂಕಿತ ಉಗ್ರರ ಬಂಧನ ಪ್ರಕರಣ: ಪ್ರಾಥಮಿಕ ತನಿಖಾ ವರದಿಯನ್ನ ಕೇಂದ್ರಕ್ಕೆ ಕಳುಹಿಸಿದ ಸಿಸಿಬಿ 

ಜುನೈದ್ ವಿದೇಶದಲ್ಲಿದ್ದುಕೊಂಡೇ ಬೆಂಗಳೂರಿನಲ್ಲಿರುವ ಬಂಧಿತ ಶಂಕಿತ ಉಗ್ರರಿಗೆ ಗ್ರೆನೇಡ್​ ಸೇರಿದಂತೆ ಬೇಕಾದ ಹಣ ಸಹಾಯ ಮಾಡುತ್ತಿದ್ದ. ಅಪರಿಚಿತ ವ್ಯಕ್ತಿಯ ಪರಿಚಯ ಮೂಲಕ ಶಂಕಿತ ಉಗ್ರರಿಗೆ ಗ್ರೆನೇಡ್​ ಪೂರೈಕೆ ಮಾಡಿದ್ದಾನೆ ಎನ್ನುವ ಮಾಹಿತಿ ಹೊರಬಿದ್ದಿದೆ. ಹೀಗೆ ಜುನೈದ್​ ಬೆಂಗಳೂರಿನ ಶಂಕಿತ ಉಗ್ರರಿಗೆ ಏನೆಲ್ಲ ಸಹಾಯಕ ಬೇಕೋ ಅದನ್ನು ವಿದೇಶದಲ್ಲಿದ್ದುಕೊಂಡು ಸಹಾಯ ಮಾಡುತ್ತಿದ್ದ ಎಂದು ಸಿಸಿಬಿ ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ಹೀಗಾಗಿ ಜುನೈದ್​ ಪತ್ತೆಗೆ ಸಿಸಿಬಿ ಕಾರ್ಯಚರಣೆಗಿಳಿದಿದೆ.

ಬೆಂಗಳೂರಿನಲ್ಲಿ ಇದ್ದುಕೊಂಡು ರಾಜ್ಯದ ವಿವಿಧೆಡೆ ವಿಧ್ವಂಸಕ ಕೃತ್ಯ ಎಸಗಲು ಸಂಚು ರೂಪಿಸಿದ್ದ ಬಂಧಿತ ಐವರು ಶಂಕಿತ ಉಗ್ರರ ಬಗ್ಗೆ ಪ್ರಕರಣದ ಪ್ರಾಥಮಿಕ ತನಿಖಾ ವರದಿಯನ್ನು ಸಿಸಿಬಿ ಪೊಲೀಸರು ಕೇಂದ್ರ ಗೃಹ ಇಲಾಖೆಗೆ (Central Home Affairs) ವರದಿ ರವಾನೆ ಮಾಡಿದ್ದಾರೆ. ಬಂಧನವಾದ ಶಂಕಿತ ಉಗ್ರರ ಸಂಖ್ಯೆ, ಹೆಸರು, ಯಾವ ಸೆಕ್ಷನ್​ನಲ್ಲಿ ಕೇಸ್ ದಾಖಲಾಗಿದೆ. ಶಂಕಿತರ ಮೇಲಿರುವ ಆರೋಪಗಳು ಹಾಗೂ ಸಂಚಿನ ಬಗ್ಗೆ ವರದಿಯಲ್ಲಿ ಉಲ್ಲೇಖಿಸಿದೆ. ಇನ್ನು ಸಿಸಿಬಿ ಪೊಲೀಸರು ಶಂಕಿತ ಉಗ್ರರ ಕಳೆದ ಎರಡು ವರ್ಷಗಳ ಕರೆಗಳ ಮಾಹಿತಿ ಕಲೆ ಹಾಕುತ್ತಿದ್ದಾರೆ. ಶಂಕಿತರು ಈವರೆಗೆ ಯಾರ ಯಾರ ಜೊತೆ ಸಂಪರ್ಕ ಹೊಂದಿದ್ದರು ಎಂದು ಯುಎಪಿಎ ಸೆಕ್ಷನ್ ಅಡಿಯಲ್ಲಿ ಎರಡು ವರ್ಷಗಳ ಸಿಡಿಆರ್ ಪಡೆದು ಪರಿಶೀಲನೆಗೆ ಮುಂದಾಗಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ