ಬೆಂಗಳೂರು: ಕುರುಬರಹಳ್ಳಿಯ ಕಾವೇರಿ ನಗರದಲ್ಲಿ ಮನೆಯ ಮುಂದೆ ನಿಲ್ಲಿಸಿದ್ದ ಸುಬ್ರಹ್ಮಣ್ಯ ಎಂಬುವರಿಗೆ ಸೇರಿದ ಕಾರು ಮತ್ತು ಬೈಕ್ಗೆ ತಡರಾತ್ರಿ ಕಿಡಿಗೇಡಿಗಳು ಬೆಂಕಿ ಹಾಕಿ ಪರಾರಿಯಾಗಿದ್ದಾರೆ. ಬೆಂಕಿ ಹೊತ್ತಿ ಉರಿಯುವಾಗ ಪಕ್ಕದ ಮನೆಗಳಿಗೂ ಹಾನಿಯಾಗಿದ್ದು, ಸ್ಥಳಕ್ಕೆ ಮಹಾಲಕ್ಷ್ಮೀ ಲೇಔಟ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನು ಎರಡು ಜನ ದುಷ್ಕರ್ಮಿಗಳು ಸೇರಿ ಸುಬ್ರಹ್ಮಣ್ಯ ಅವರ ಟಿಯುವಿ 300(TUV 300) ಕಾರು ಹಾಗೂ ಬೈಕ್ಗೆ ಬೆಂಕಿ ಹಾಕಿರುವ ಶಂಕೆ ವ್ಯಕ್ತವಾಗಿದೆ.
ಹಾಸನದಲ್ಲಿ ರಸ್ತೆ ಬದಿ ನಿಲ್ಲಿಸಿದ್ದ ಬೈಕ್‌ನಲ್ಲಿ ದಿಢೀರ್ ಕಾಣಿಸಿಕೊಂಡ ಬೆಂಕಿ
ಹಾಸನ ತಾಲೂಕಿನ ಕೋರವಂಗಲ ಗೇಟ್ ಬಳಿ ನೋಡ ನೋಡುತ್ತಿದ್ದಂತೆ ಬೈಕ್ ಹೊತ್ತಿ ಉರಿದಿರುವ
ಘಟನೆ ನಡೆದಿದೆ. ಜೋಡಿ ಕೃಷ್ಣಾಪುರದ ನಿವಾಸಿ ಚಿದಾನಂದ್ ಎಂಬುವವರಿಗೆ ಸೇರಿದ್ದ ಬಜಾಜ್ ಎನ್.ಎಸ್ 160 ಬೈಕ್, ಕೋರುವಂಗಲ ಗೇಟ್ ಬಳಿ ನಿಲ್ಲಿಸಿ ಸಿಹಿ ತಿನಿಸು ತರಲು ಬೇಕರಿಗೆ ಹೋಗಿದ್ದ ಸಮಯದಲ್ಲಿ ಇದ್ದಕ್ಕಿದ್ದಂತೆ
ಬೈಕ್ ಹೊತ್ತಿ ಉರಿಯಲಾರಂಭಿಸಿದೆ, ಬೈಕ್ ಉರಿಯುತ್ತಿರುವುದು ಕಂಡು ಬೈಕ್ ಮಾಲೀಕ ಚಿದಾನಂದ್ ಕಣ್ಣೀರಿಟ್ಟಿದ್ದಾರೆ. ಈ ಕುರಿತು ದುದ್ದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದಾಖಲಾಗಿದೆ.
ಇದನ್ನೂ ಓದಿ:ತನ್ನ ಮೇಲೆ ಅತ್ಯಾಚಾರವೆಸಗಿದ್ದ ಯುವಕನ ತಾಯಿಯ ಮೇಲೆ ಗುಂಡು ಹಾರಿಸಿದ ಬಾಲಕಿ
ತುಮಕೂರು: ಮನೆಯಿಂದ ಹೊರಗೆ ಹೋಗಿದ್ದ ವೃದ್ದ ಶವವಾಗಿ ಪತ್ತೆ
ತುಮಕೂರು: ಜಿಲ್ಲೆಯ ತುರುವೇಕೆರೆ ತಾಲ್ಲೂಕಿನ ಕೋಡಿಹಳ್ಳಿ ಗ್ರಾಮದ ನಿಂಗಪ್ಪ(84) ಎಂಬಾತ ಕಳೆದ ನಾಲ್ಕು ದಿನಗಳ ಹಿಂದೆ ಮನೆಯಿಂದ ಹೊರ ಹೋಗಿದ್ದ, ಆದರೆ ಇದೀಗ ನಿನ್ನೆ(ಜ.7) ಸಂಜೆ ಅದೇ ಗ್ರಾಮದ ನೀರಿನ ಕಟ್ಟೆಯಲ್ಲಿ ಅನುಮಾನಸ್ಪದವಾಗಿ ಶವ ಪತ್ತೆಯಾಗಿದೆ. ಸ್ಥಳಕ್ಕೆ ದಂಡಿನ ಶಿವರ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ. ಮರಣೋತ್ತರ ಪರೀಕ್ಷೆಗೆ ತುಮಕೂರು ಜಿಲ್ಲಾಸ್ಪತ್ರೆಗೆ ಮೃತದೇಹ ರವಾನೆ ಮಾಡಲಾಗಿದ್ದು, ಮೃತ ಲಿಂಗಪ್ಪ ಪುತ್ರ ರಮೇಶ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ತನಿಖೆ ಮುಂದುವರೆಸಿದ್ದಾರೆ.
ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ