AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನ್ಯೂ ಇಯರ್​​ಗೆ ಡ್ರಗ್ಸ್​​ ಮಾರಲು ಯತ್ನಿಸ್ತಿದ್ದವರು ಲಾಕ್; 28 ಲಕ್ಷ ರೂ. ಡ್ರಗ್ಸ್ ಜಪ್ತಿ

ಹೊಸ ವರ್ಷಕ್ಕೆ(New Year) ಡ್ರಗ್ಸ್​​ ಮಾರಲು ಯತ್ನಿಸುತ್ತಿದ್ದ ಕೇರಳ ಮೂಲದ ಮೂವರು ಡ್ರಗ್​​ ಪೆಡ್ಲರ್​ಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಇವರಿಂದ ಬರೊಬ್ಬರಿ 28 ಲಕ್ಷ ರೂ. ಮೌಲ್ಯದ 170 MDMA ಕ್ರಿಸ್ಟಲ್, 25 MDMA ಎಕ್ಸಟೆಸಿ ಮಾತ್ರೆಗಳು, 200 LSD ಸ್ಟ್ರಿಪ್​ಗಳು ಹಾಗೂ 3 ಕೆಜಿ ಗಾಂಜಾ ಜಪ್ತಿ ಮಾಡಲಾಗಿದೆ.

ನ್ಯೂ ಇಯರ್​​ಗೆ ಡ್ರಗ್ಸ್​​ ಮಾರಲು ಯತ್ನಿಸ್ತಿದ್ದವರು ಲಾಕ್; 28 ಲಕ್ಷ ರೂ. ಡ್ರಗ್ಸ್ ಜಪ್ತಿ
ಬೆಂಗಳೂರಿನಲ್ಲಿ ಡ್ರಗ್ಸ್​ ವಶಕ್ಕೆ
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on: Dec 28, 2023 | 3:22 PM

Share

ಬೆಂಗಳೂರು, ಡಿ.28: ಹೊಸ ವರ್ಷಕ್ಕೆ(New Year) ಡ್ರಗ್ಸ್​​ ಮಾರಲು ಯತ್ನಿಸುತ್ತಿದ್ದ ಕೇರಳ ಮೂಲದ ಮೂವರು ಡ್ರಗ್​​ ಪೆಡ್ಲರ್​ಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಇವರಿಂದ ಬರೊಬ್ಬರಿ 28 ಲಕ್ಷ ರೂ. ಮೌಲ್ಯದ 170 MDMA ಕ್ರಿಸ್ಟಲ್, 25 MDMA ಎಕ್ಸಟೆಸಿ ಮಾತ್ರೆಗಳು, 200 LSD ಸ್ಟ್ರಿಪ್​ಗಳು ಹಾಗೂ 3 ಕೆಜಿ ಗಾಂಜಾ ಜಪ್ತಿ ಮಾಡಲಾಗಿದ್ದು, ಈ ಕುರಿತು ಕೆಂಗೇರಿ ಹಾಗೂ ಅಮೃತಹಳ್ಳಿ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣ ದಾಖಲು ಮಾಡಲಾಗಿದೆ.

ಗಾಂಜಾ ಮಾರಾಟ ವೇಳೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಆರೋಪಿಗಳು

ಬೆಂಗಳೂರು ಗ್ರಾಮಾಂತರ: ಜಿಲ್ಲೆಯ ದೇವನಹಳ್ಳಿ ಪಟ್ಟಣದ ದೊಡ್ಡಬಳ್ಳಾಪುರ ರಸ್ತೆಯ ಸ್ಮಶಾನದ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ವೇಳೆ ಪೋಲೀಸರು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ. ಬ್ಯಾಗ್​ನಲ್ಲಿ ತಂದು ಗಾಂಜಾ ಮಾರಾಟ ಮಾಡುವ ವೇಳೆ ಬಂಧಿಸಲಾಗಿದ್ದು, ದಾಳಿ ವೇಳೆ ಆರೋಪಿಗಳಿಂದ 2 ಕೆಜಿ 200 ಗ್ರಾಂ ಗಾಂಜಾ ವಶ‌ಕ್ಕೆ ಪಡೆಯಲಾಗಿದೆ. ನಿತೀಶ್ ಕುಮಾರ್ (25) ಹಾಗೂ ವೆಂಕಟೇಶ್ (30) ಬಂಧಿತ ಆರೋಪಿಗಳು.

ಇದನ್ನೂ ಓದಿ:ಹೊಸ ವರ್ಷಾಚರಣೆಗೆ ನಶೆ ಏರಿಸಲು 100 ಕೋಟಿ ಮೌಲ್ಯದ ಡ್ರಗ್ಸ್ ಬೆಂಗಳೂರಿಗೆ ಸಪ್ಲೈ! ಸ್ಪೆಷಲ್ ಡ್ರೈವ್​​ಗೆ ಸಜ್ಜಾದ ನಗರ ಪೊಲೀಸರು

ಸುಮಾರು 6 ಸಾವಿರ ರೂಪಾಯಿ ಮೌಲ್ಯದ ಗಾಂಜಾ ವಶ

ಅಂದಾಜು 6 ಸಾವಿರ ರೂಪಾಯಿ ಮೌಲ್ಯದ ಗಾಂಜಾವನ್ನು ಬ್ಯಾಗ್​ನಲ್ಲಿ ಇಟ್ಟುಕೊಂಡು ಗಿರಾಕಿಗಳಿಗೆ ಮಾರಾಟ ಮಾಡುತ್ತಿದ್ದರು. ಬಿಹಾರ ಮೂಲದವನಾದ ಆರೋಪಿ ನಿತೀಶ್ ಕುಮಾರ್,  ದೇವನಹಳ್ಳಿಯಲ್ಲಿ ಶೆಡ್ ಹಾಕಿಕೊಂಡು ವಾಸ ಮಾಡುತ್ತಿದ್ದ. ಇನ್ನೋರ್ವ ಆರೋಪಿ ವೆಂಕಟೇಶ್ ದೇವನಹಳ್ಳಿ ಪಟ್ಟಣದ ಗಾಣಿಗರ ಪೇಟೆ ನಿವಾಸಿಯಾಗಿದ್ದು, ದೇವನಹಳ್ಳಿ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳನ್ನು ವಶಕ್ಕೆ ಪಡೆದ ಪೋಲೀಸರು, ಹೆಚ್ಚಿನ ವಿಚಾರಣೆ ಮಾಡುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ
ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
ನಮಗೊಂದು ಟ್ವೀಟ್ ಮಾಡಿಕೊಡಿ: ಕೇರಳ ಸಿಎಂಗೆ ದುಂಬಾಲು ಬಿದ್ದ ಬಿಜೆಪಿ!
ನಮಗೊಂದು ಟ್ವೀಟ್ ಮಾಡಿಕೊಡಿ: ಕೇರಳ ಸಿಎಂಗೆ ದುಂಬಾಲು ಬಿದ್ದ ಬಿಜೆಪಿ!