AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಪಶ್ಚಿಮ ಬಂಗಾಳದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಕೇಸ್​​: ಮೂವರ ಬಂಧನ

ಬೆಂಗಳೂರಿನ ಮಾದನಾಯಕನಹಳ್ಳಿಯಲ್ಲಿ ಪಶ್ಚಿಮ ಬಂಗಾಳ ಮೂಲದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮೂವರು ಆರೋಪಿಗಳ ಬಂಧನವಾಗಿದೆ. ತಲೆಮರೆಸಿಕೊಂಡಿರುವ ಮತ್ತಿಬ್ಬರು ಆರೋಪಿಗಳಿಗಾಗಿ ಪೊಲೀಸರು ಶೋಧ ನಡೆಸಿದ್ದಾರೆ. ಘಟನೆ ಬಗ್ಗೆ ಬೆಂಗಳೂರು ಗ್ರಾಮಾಂತರ ಎಸ್‌ಪಿ ಸಿಕೆ ಬಾಬಾ ಹೇಳಿದ್ದು ಹೀಗೆ.

ಬೆಂಗಳೂರಿನಲ್ಲಿ ಪಶ್ಚಿಮ ಬಂಗಾಳದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಕೇಸ್​​: ಮೂವರ ಬಂಧನ
ಮಾದನಾಯಕನಹಳ್ಳಿ ಪೊಲೀಸ್​​ ಠಾಣೆ
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on: Oct 22, 2025 | 7:53 PM

Share

ಬೆಂಗಳೂರು, ಅಕ್ಟೋಬರ್​ 22: ಪಶ್ಚಿಮ ಬಂಗಾಳ ಮೂಲದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ (Physically Assaulted) ಪ್ರಕರಣಕ್ಕೆ ಸಂಬಂಧಿಸಿದಂತೆ ಮಾದನಾಯಕನಹಳ್ಳಿ ಪೊಲೀಸರಿಂದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಕಾರ್ತಿಕ್, ಗ್ಲೆನ್, ಸಿಯೋಗ್ ಬಂಧಿತರು (Arrest). ತಲೆಮರೆಸಿಕೊಂಡಿರುವ ಮತ್ತಿಬ್ಬರು ಆರೋಪಿಗಳಿಗಾಗಿ ಪೊಲೀಸರು ಶೋಧ ನಡೆಸಿದ್ದಾರೆ. ಬೆಂಗಳೂರು ಉತ್ತರ ತಾಲೂಕಿನ ಗಂಗೊಂಡನಹಳ್ಳಿಯಲ್ಲಿ ಆರೋಪಿಗಳು ಕೃತ್ಯವೆಸಗಿದ್ದರು.

ಎಸ್​ಪಿ ಸಿಕೆ ಬಾಬಾ ಹೇಳಿದ್ದಿಷ್ಟು 

ಕೇಸ್​​ ಕುರಿತಾಗಿ ಬೆಂಗಳೂರು ಗ್ರಾಮಾಂತರ ಎಸ್​ಪಿ ಸಿಕೆ ಬಾಬಾ ಪ್ರತಿಕ್ರಿಯಿಸಿದ್ದು, ಮಂಗಳವಾರ ರಾತ್ರಿ ಮಾದನಾಯಕನ ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಒಟ್ಟು ಐವರು ಆರೋಪಿಗಳು ಮೂರು ಮನೆಯಲ್ಲಿ ವಾಸವಾಗಿದ್ದ ಪಶ್ಚಿಮ ಬಂಗಾಳದ ಮಹಿಳೆ ಮನೆಗೆ ನುಗ್ಗಿದ್ದಾರೆ. ಇಬ್ಬರು ಗಂಡಸರನ್ನ ಕಟ್ಟಿ ಹಾಕಿ, ಬಳಿಕ ಹಲ್ಲೆ ಮಾಡಿ ಅತ್ಯಾಚಾರ ಮಾಡಲಾಗಿದೆ. ಘಟನೆ ಬೆಳಕಿಗೆ ಬಂದ ಬಳಿಕ ಸ್ಥಳಕ್ಕೆ ಹೋಗಿ ಪರಿಶೀಲನೆ ಮಾಡಿದ್ದೇವೆ. ಗ್ಯಾಂಗ್ ರೇಪ್ ಹಾಗೂ ರಾಬರಿ ಕೇಸ್ ದಾಖಲು ಮಾಡಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.

ಇದನ್ನೂ ಓದಿ: ಬೆಂಗಳೂರಿನಲ್ಲಿ ಪಶ್ಚಿಮ ಬಂಗಾಳದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ

ಘಟನೆಯಲ್ಲಿ ಹಲ್ಲೆಗೊಳಗಾದ ಇಬ್ಬರು ಪುರುಷರಿಗೆ ನಿಮಾನ್ಸ್​ನಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಮಹಿಳೆಯ ಬಳಿ ಇರುವ ಮೊಬೈಲ್ ಹಾಗೂ 50 ಸಾವಿರ ರೂ. ನಗದು ದೋಚಿಕೊಂಡು ಹೋಗಿದ್ದಾರೆ. ಘಟನೆ ಸಂಬಂಧ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮತ್ತಿಬ್ಬರಿಗಾಗಿ ಮೂರು ತಂಡಗಳನ್ನ ಮಾಡಿ ಹುಡುಕಾಟ ಮಾಡಲಾಗುತ್ತಿದೆ ಎಂದರು.

ಪ್ರಕರಣ ಗಂಭೀರವಾಗಿರುವುದರಿಂದ ಡಿವೈಎಸ್ ನೆಲಮಂಗಲದ ಅಧಿಕಾರಿಯಿಂದ ತನಿಖೆ ಮಾಡಿಸಲಾಗುತ್ತಿದೆ. ಕೆಲವರ ಫೋಟೋ ತೋರಿಸಿದಾಗ ಹೆಸರು ಸಮೇತವಾಗಿ ಹೇಳುತ್ತಿದ್ದಾರೆ. ಹಾಗಾಗಿ ಅವರಿಗೆ ಪರಿಚಯ ಇದ್ದಾರಾ, ಇಲ್ಲವಾ ಎನ್ನುವುದನ್ನು ನೋಡಬೇಕು ಎಂದು ಎಸ್​​ಪಿ ಹೇಳಿದ್ದಾರೆ.

ಘಟನೆ ಹಿನ್ನೆಲೆ

ಬೆಂಗಳೂರು ಉತ್ತರ ತಾಲೂಕಿನ ಗಂಗೊಂಡನಹಳ್ಳಿ ಬಾಡಿಗೆ ಮನೆಯಲ್ಲಿ ವಾಸವಿದ್ದ ಮಹಿಳೆ ಮನೆಗೆ  ರಾತ್ರೋರಾತ್ರಿ ಐವರು ಆರೋಪಿಗಳು ನುಗ್ಗಿದ್ದಾರೆ. ಪೀಣ್ಯ ಪೊಲೀಸರ ಇನ್ಫರ್ಮರ್ಸ್ ಎಂದು ಮನೆಗೆ ನುಗ್ಗಿದ್ದ ಆರೋಪಿಗಳು, ನಿಮ್ಮ ಮನೆಯಲ್ಲಿ ಗಾಂಜಾ ಮಾರಾಟ, ವೇಶ್ಯಾವಾಟಿಕೆ ನಡೆಸ್ತಿದ್ದೀರೆಂದು ದಾಳಿ ಮಾಡಿದ್ದಾರೆ.

ಇದನ್ನೂ ಓದಿ: ಸಮಸ್ಯೆ ಹೇಳಿಕೊಂಡು ಬಂದ ಮಹಿಳೆಯನ್ನ ಬಲೆಗೆ ಬೀಳಿಸಿಕೊಂಡ ಇನ್ಸ್​​​ಪೆಕ್ಟರ್: ಪೊಲೀಸಪ್ಪನ ಕಾಮ ಪುರಾಣ ಬಟಾಬಯಲು

ಸಂತ್ರಸ್ತ ಮಹಿಳೆಯ 14 ವರ್ಷದ ಮಗ ಸೇರಿದಂತೆ ಸಂತ್ರಸ್ತೆ ಸ್ನೇಹಿತೆ ಮೇಲೂ ಹಲ್ಲೆ ಮಾಡಿದ್ದಾರೆ. ಹಲ್ಲೆ ಬಳಿಕ ಪಕ್ಕದ ಮನೆಯ ರೂಂಗೆ ಎಳೆದೊಯ್ದು ರೇಪ್ ಮಾಡಿದ್ದರು. ಘಟನೆಯ ವೇಳೆ ಸಂತ್ರಸ್ತ ಮಹಿಳೆಯ ಪುತ್ರ 112ಗೆ ಕರೆ ಮಾಡಿದ್ದ. ಪೊಲೀಸರು ಸ್ಥಳಕ್ಕೆ ಆಗಮಿಸುತ್ತಿದ್ದಂತೆ ಆರೋಪಿಗಳು ಎಸ್ಕೇಪ್ ಆಗಿದ್ದರು. ಇಬ್ಬರ ಗುರುತು ಹಿಡಿದು ಪೊಲೀಸರಿಗೆ ಸಂತ್ರಸ್ತೆ ಕುಟುಂಬ ಮಾಹಿತಿ ನೀಡಿದ್ದು ಸದ್ಯ ಮೂವರನ್ನು ಬಂಧಿಸಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ
‘ಕರಾವಳಿ’ ಸಿನಿಮಾ ಪ್ರೀಮಿಯರ್ ಶೋ ನೋಡಿದವರು ಹೇಳಿದ್ದೇನು?
‘ಕರಾವಳಿ’ ಸಿನಿಮಾ ಪ್ರೀಮಿಯರ್ ಶೋ ನೋಡಿದವರು ಹೇಳಿದ್ದೇನು?
ಕಬ್ಬಿಣದ ಬಾಗಿಲು ಮುರಿದು ಬಲ್ಡೋಟಾ ಕಾರ್ಖಾನೆ ನುಗ್ಗಿದ ರೈತರು
ಕಬ್ಬಿಣದ ಬಾಗಿಲು ಮುರಿದು ಬಲ್ಡೋಟಾ ಕಾರ್ಖಾನೆ ನುಗ್ಗಿದ ರೈತರು
ಪೂರ್ವ ಮಾಹಿತಿ ಇಲ್ಲದೆ ಶಿವಾಜಿನಗರದಲ್ಲಿ ವ್ಯಾಪಾರಿಗಳ ಅಂಗಡಿ ಧ್ವಂಸ ಆರೋಪ
ಪೂರ್ವ ಮಾಹಿತಿ ಇಲ್ಲದೆ ಶಿವಾಜಿನಗರದಲ್ಲಿ ವ್ಯಾಪಾರಿಗಳ ಅಂಗಡಿ ಧ್ವಂಸ ಆರೋಪ
ಆಲಮಟ್ಟಿ ಜಲಾಶಯಕ್ಕೆ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಭೇಟಿ
ಆಲಮಟ್ಟಿ ಜಲಾಶಯಕ್ಕೆ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಭೇಟಿ
ಸೊಳ್ಳೆ ಕಾಟಕ್ಕೆ ಬ್ರೇಕ್, ಡೆಂಘೀಗೆ ಬಂತು ವ್ಯಾಕ್ಸಿನ್!
ಸೊಳ್ಳೆ ಕಾಟಕ್ಕೆ ಬ್ರೇಕ್, ಡೆಂಘೀಗೆ ಬಂತು ವ್ಯಾಕ್ಸಿನ್!
ಕೊಪ್ಪಳದಲ್ಲಿ ಬಲ್ಡೋಟಾ ಕಾರ್ಖಾನೆ ವಿರುದ್ಧ ಅನ್ನದಾತರ ಆಕ್ರೋಶ
ಕೊಪ್ಪಳದಲ್ಲಿ ಬಲ್ಡೋಟಾ ಕಾರ್ಖಾನೆ ವಿರುದ್ಧ ಅನ್ನದಾತರ ಆಕ್ರೋಶ