AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಮತ್ತೆ ಮೂವರು ಪಾಕಿಸ್ತಾನ ಪ್ರಜೆಗಳ ಬಂಧನ, ವಿಚಾರಣೆ ವೇಳೆ ಸ್ಫೋಟಕ ಮಾಹಿತಿ ಬಯಲು

ಕರ್ನಾಟಕದಲ್ಲಿ, ಅದರಲ್ಲಿಯೂ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪಾಕಿಸ್ತಾನ ಪ್ರಜೆಗಳು ಅಕ್ರಮವಾಗಿ ದಾಖಲೆಗಳನ್ನಿಟ್ಟುಕೊಂಡು ವಾಸ ಮಾಡುತ್ತಿರುವ ವಿಚಾರ ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದೆ. ಇದೀಗ ಪೀಣ್ಯದಲ್ಲಿ ವಾಸವಿದ್ದ ಪಾಕಿಸ್ತಾನ ಮೂಲದ ಮೂವರನ್ನು ಬಂಧಿಸಲಾಗಿದೆ. ಇದರೊಂದಿಗೆ, ಹಲವು ಸ್ಫೋಟಕ ಅಂಶಗಳು ಬೆಳಕಿಗೆ ಬಂದಿದೆ. ಆ ಕುರಿತ ವಿವರ ಇಲ್ಲಿದೆ.

ಬೆಂಗಳೂರು: ಮತ್ತೆ ಮೂವರು ಪಾಕಿಸ್ತಾನ ಪ್ರಜೆಗಳ ಬಂಧನ, ವಿಚಾರಣೆ ವೇಳೆ ಸ್ಫೋಟಕ ಮಾಹಿತಿ ಬಯಲು
ಪಾಕಿಸ್ತಾನ ಪ್ರಜೆಗಳನ್ನು ಬಂಧಿಸಿ ವೈದ್ಯಕೀಯ ತಪಾಸಣೆಗೆ ಕರೆದೊಯ್ದ ಪೊಲೀಸರು
ರಾಮು, ಆನೇಕಲ್​
| Edited By: |

Updated on:Oct 03, 2024 | 2:19 PM

Share

ಆನೇಕಲ್, ಅಕ್ಟೋಬರ್ 3: ಕರ್ನಾಟಕ ರಾಜಧಾನಿ ಬೆಂಗಳೂರಿನ ಪೀಣ್ಯದಲ್ಲಿ ಅಕ್ರಮವಾಗಿ ವಾಸವಿದ್ದ ಪಾಕಿಸ್ತಾನದ ಕುಟುಂಬವನ್ನು ಪೊಲೀಸರು ಪತ್ತೆಹಚ್ಚಿದ್ದು, ಮೂವರನ್ನು ಜಿಗಣಿಯಲ್ಲಿ ಬಂಧಿಸಿದ್ದಾರೆ. ಇದರೊಂದಿಗೆ, ಕಳೆದ ಮೂರ್ನಾಲ್ಕು ದಿನಗಳ ಅವಧಿಯಲ್ಲಿ ಐದಕ್ಕೂ ಹೆಚ್ಚು ಮಂದಿ ಪಾಕಿಸ್ತಾನ ಪ್ರಜೆಗಳನ್ನು ಬಂಧಿಸಿದಂತಾಗಿದೆ. ಹಿಂದೂ ಹೆಸರುಗಳನ್ನಿಟ್ಟುಕೊಂಡು ದಾವಣೆಗರೆಯಲ್ಲಿ ವಾಸವಿದ್ದ ಪಾಕಿಸ್ತಾನಿ ಪ್ರಜೆಗಳನ್ನು ಬುಧವಾರವಷ್ಟೇ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದರು.

ಕಳೆದ ಸೋಮವಾರ ಜಿಗಣಿ ಬಳಿ ನಾಲ್ವರು ಪಾಕ್ ಪ್ರಜೆಗಳನ್ನು ಬಂಧಿಸಲಾಗಿತ್ತು. ಪಾಕಿಸ್ತಾನದ ಪೇಶಾವರ ಮೂಲದ ರಷೀದ್ ಅಲಿ ಸಿದ್ದಿಕಿ ಕುಟುಂಬದ ನಾಲ್ವರು ಅರೆಸ್ಟ್ ಆಗಿದ್ದರು. ಅವರನ್ನು ತನಿಖೆಗೆ ಒಳಪಡಿಸಿದಾಗ ತಿಳಿದುಬಂದ ಮಾಹಿತಿ ಮೇರೆಗೆ ಇದೀಗ ಪೀಣ್ಯದಲ್ಲಿ ವಾಸವಿದ್ದ ಪತಿ, ಪತ್ನಿ ಹಾಗೂ ಪುತ್ರಿಯನ್ನು ಬಂಧಿಸಲಾಗಿದೆ.

ಭಾರತಕ್ಕೆ ನುಸುಳಿದ್ದಾರೆ 15ಕ್ಕೂ ಹೆಚ್ಚು ಮಂದಿ!

ಬಂಧಿತ ಪಾಕಿಸ್ತಾನ ಪ್ರಜೆಗಳ ವಿಚಾರಣೆ ವೇಳೆ ಮತ್ತಷ್ಟು ಸ್ಪೋಟಕ ಮಾಹಿತಿ ಬಹಿರಂಗವಾಗಿದೆ. ಪಾಕಿಸ್ತಾನದಿಂದ 15ಕ್ಕೂ ಹೆಚ್ಚು ಜನ ಭಾರತಕ್ಕೆ ಅಕ್ರಮವಾಗಿ ನುಸುಳಿ ಬಂದಿರುವುದು ಗೊತ್ತಾಗಿದೆ. ಹದಿನೈದಕ್ಕೂ ಅಧಿಕ ಮಂದಿ ಮೆಹದಿ ಫೌಂಡೇಷನ್ ಸೇರಿದ್ದರು. ಇವರೆಲ್ಲ ಯೂನಸ್ ಅಲ್ಗೋರ್ ಧರ್ಮ ಗುರುಗಳ ಪರ ಪ್ರಚಾರಕ್ಕಾಗಿ ಆಗಮಿಸಿದ್ದಾರೆ ಎನ್ನಲಾಗಿದೆ.

ಬೆಂಗಳೂರಿನಲ್ಲಿದ್ದರು 7 ಮಂದಿ

ರಷೀದ್ ಅಲಿ ಸಿದ್ದಿಕಿ‌ ಕುಟುಂಬದ ಜೊತೆ ಭಾರತಕ್ಕೆ ನುಸುಳಿದವರಲ್ಲಿ ಏಳು ಮಂದಿ ಬೆಂಗಳೂರಿಗೆ ಬಂದಿದ್ದರೆ ಉಳಿದವರು ಅಸ್ಸಾಂ, ಒರಿಸ್ಸಾ ಮತ್ತು ಹೈದರಾಬಾದ್ ಕಡೆ ತೆರಳಿದ್ದರು. ಜಿಗಣಿಯಲ್ಲಿ ರಷೀದ್ ಕುಟುಂಬ ಅರೆಸ್ಟ್ ಆಗುತ್ತಿದ್ದಂತೆಯೇ ಮತ್ತಷ್ಟು ಮಾಹಿತಿ ಹೊರಬರಲಾರಂಭವಾಗಿದೆ.

ಸದ್ಯ ಪೀಣ್ಯದಲ್ಲಿದ್ದ ಪಾಕ್ ಕುಟುಂಬವನ್ನ ಬಂಧಿಸಿದ ಪೊಲೀಸರು ಜಿಗಣಿ ಪೊಲೀಸ್ ಠಾಣೆಗೆ ಕರೆತಂದಿದ್ದಾರೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಪಾಕ್ ಪ್ರಜೆಗಳು ಬಂಧನವಾಗುವ ಸಾಧ್ಯತೆ ಇದೆ.

ಬಂಧಿತ ಮೂವರು ಪಾಕ್‌ ಪ್ರಜೆಗಳಿಗೆ ಸದ್ಯ ಜಿಗಣಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ‌ ವೈದ್ಯಕೀಯ ತಪಾಸಣೆ ನಡೆಸಲಾಗಿದೆ.

ಇದನ್ನೂ ಓದಿ: ಹಿಂದೂ ಹೆಸರಿಟ್ಟುಕೊಂಡು ದಾವಣಗೆರೆಯಲ್ಲಿ ವಾಸವಿದ್ದ ಪಾಕಿಸ್ತಾನ ಪ್ರಜೆಗಳು ಬೆಂಗಳೂರಲ್ಲಿ ಬಂಧನ

ಬೆಂಗಳೂರಿನ ಜಿಗಣಿಯಲ್ಲಿ ಪಾಕಿಸ್ತಾನ ಪ್ರಜೆಗಳು ಬಂಧನವಾಗಿರುವ ಸಂಬಂಧ ಹೆಚ್ಚಿನ ತನಿಖೆಗಾಗಿ ಪೊಲೀಸರ 4 ತಂಡಗಳ ರಚನೆ ಮಾಡಲಾಗಿತ್ತು. ತನಿಖೆ ಚುರುಕುಪಡೆದ ಬೆನ್ನಲ್ಲೇ ಒಂದೊಂದೇ ಸ್ಫೋಟಕ ಮಾಹಿತಿ ಹೊರಬರುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 2:05 pm, Thu, 3 October 24

ಕುಡಿದು ಅಪಘಾತ ಮಾಡಿದ ಮಯೂರ್ ಪಟೇಲ್​ಗೆ ಹೆಚ್ಚಿತು ಸಂಕಷ್ಟ
ಕುಡಿದು ಅಪಘಾತ ಮಾಡಿದ ಮಯೂರ್ ಪಟೇಲ್​ಗೆ ಹೆಚ್ಚಿತು ಸಂಕಷ್ಟ
ಕೊಲಂಬಿಯಾದಲ್ಲಿ ವಿಮಾನ ಪತನ, ಸಂಸದ ಸೇರಿ 15 ಮಂದಿ ಸಾವು
ಕೊಲಂಬಿಯಾದಲ್ಲಿ ವಿಮಾನ ಪತನ, ಸಂಸದ ಸೇರಿ 15 ಮಂದಿ ಸಾವು
ಯತೀಂದ್ರ ಹಸ್ತಕ್ಷೇಪ ವಿಚಾರ ಸದನದಲ್ಲಿ ಚರ್ಚೆ: ಕೆಜೆ ಜಾರ್ಜ್ ಹೇಳಿದ್ದೇನು?
ಯತೀಂದ್ರ ಹಸ್ತಕ್ಷೇಪ ವಿಚಾರ ಸದನದಲ್ಲಿ ಚರ್ಚೆ: ಕೆಜೆ ಜಾರ್ಜ್ ಹೇಳಿದ್ದೇನು?
ಟ್ರಕ್​ನಲ್ಲಿ ಪ್ಲಾಸ್ಟಿಕ್​ ಬಾಟಲಿಗಳ ನಡುವೆ ಹಸುಗಳನ್ನು ತುಂಬಿ ಕಳ್ಳಸಾಗಣೆ
ಟ್ರಕ್​ನಲ್ಲಿ ಪ್ಲಾಸ್ಟಿಕ್​ ಬಾಟಲಿಗಳ ನಡುವೆ ಹಸುಗಳನ್ನು ತುಂಬಿ ಕಳ್ಳಸಾಗಣೆ
ನಾವು ಈಗ ಸುಧಾರಣಾ ಎಕ್ಸ್​​ಪ್ರೆಸ್​ನಲ್ಲಿದ್ದೇವೆ: ಪ್ರಧಾನಿ ಮೋದಿ
ನಾವು ಈಗ ಸುಧಾರಣಾ ಎಕ್ಸ್​​ಪ್ರೆಸ್​ನಲ್ಲಿದ್ದೇವೆ: ಪ್ರಧಾನಿ ಮೋದಿ
‘ಟಾಕ್ಸಿಕ್’ ವಿಷಯದಲ್ಲಿ ಯಶ್ ಬೆಂಬಲಕ್ಕೆ ನಿಂತ ಮಹಿಳಾ ನಿರ್ದೇಶಕಿ
‘ಟಾಕ್ಸಿಕ್’ ವಿಷಯದಲ್ಲಿ ಯಶ್ ಬೆಂಬಲಕ್ಕೆ ನಿಂತ ಮಹಿಳಾ ನಿರ್ದೇಶಕಿ
ಟ್ರಕ್​ಗಳ ನಡುವೆ ಅಪಘಾತ, ಹೊತ್ತಿಕೊಂಡ ಬೆಂಕಿ, ಚಾಲಕ ಸಜೀವದಹನ
ಟ್ರಕ್​ಗಳ ನಡುವೆ ಅಪಘಾತ, ಹೊತ್ತಿಕೊಂಡ ಬೆಂಕಿ, ಚಾಲಕ ಸಜೀವದಹನ
400 ಕೋಟಿ ದರೋಡೆ ಪ್ರಕರಣಕ್ಕೆ ಸಿಗುತ್ತಾ ಮತ್ತೊಂದು ಟ್ವಿಸ್ಟ್?
400 ಕೋಟಿ ದರೋಡೆ ಪ್ರಕರಣಕ್ಕೆ ಸಿಗುತ್ತಾ ಮತ್ತೊಂದು ಟ್ವಿಸ್ಟ್?
ಮೊದಲ ಎಸೆತಗಳಲ್ಲೇ ವಿಶ್ವ ದಾಖಲೆ ಬರೆದ ಮ್ಯಾಟ್ ಹೆನ್ರಿ
ಮೊದಲ ಎಸೆತಗಳಲ್ಲೇ ವಿಶ್ವ ದಾಖಲೆ ಬರೆದ ಮ್ಯಾಟ್ ಹೆನ್ರಿ
ಸಾರ್ವಜನಿಕ ಸಾಮಾರಂಭದಲ್ಲಿ ಡ್ಯಾನ್ಸ್​ ಮಾಡುತ್ತಿದ್ದ ಮಹಿಳೆಗೆ ಒದ್ದ ವ್ಯಕ್ತಿ
ಸಾರ್ವಜನಿಕ ಸಾಮಾರಂಭದಲ್ಲಿ ಡ್ಯಾನ್ಸ್​ ಮಾಡುತ್ತಿದ್ದ ಮಹಿಳೆಗೆ ಒದ್ದ ವ್ಯಕ್ತಿ