ಬೆಂಗಳೂರಿನಲ್ಲಿ ಕಾಮುಕನ ಅಟ್ಟಹಾಸ; ಮೂರು ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಹೇಯ ಕೃತ್ಯವೊಂದು ಬೆಳಕಿಗೆ ಬಂದಿದೆ. 3 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ ಘಟನೆ ಕಾಮಾಕ್ಷಿಪಾಳ್ಯ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಬೆಂಗಳೂರಿನಲ್ಲಿ ಕಾಮುಕನ ಅಟ್ಟಹಾಸ; ಮೂರು ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆ
ಸಾಂದರ್ಭಿಕ ಚಿತ್ರ
Follow us
TV9 Web
| Updated By: Rakesh Nayak Manchi

Updated on:Jan 31, 2023 | 10:09 PM

ಬೆಂಗಳೂರ: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಹೇಯ ಕೃತ್ಯವೊಂದು ಬೆಳಕಿಗೆ ಬಂದಿದೆ. 3 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆ (Rape And Murder In Bengaluru) ಮಾಡಿದ ಘಟನೆ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ನಿನ್ನೆ (ಜನವರಿ 30) ರಾತ್ರಿ ಪರಿಚಯಸ್ಥನಿಂದಲೇ ಈ ಹೇಯ ಕೃತ್ಯ ಎಸಗಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿ 22 ವರ್ಷದ ಯುವಕನ ಬಂಧನಕ್ಕೆ ತನಿಖೆ ಆರಂಭಿಸಿದ್ದಾರೆ.

ಬೆಂಗಳೂರಿನಲ್ಲಿ ನಡುರಸ್ತೆಯಲ್ಲೇ ಹೊತ್ತಿ ಉರಿದ ಸ್ವಿಫ್ಟ್ ಕಾರು

ಬೆಂಗಳೂರು: ನಡುರಸ್ತೆಯಲ್ಲೇ ಕಾರೊಂದು ಹೊತ್ತಿ ಉರಿದ ಘಟನೆ ಬೆಂಗಳೂರು ನಗರದ ಪರಪ್ಪನ ಅಗ್ರಹಾರ ಸಮೀಪದ ಕೂಡ್ಲು ಗೇಟ್​ ಬಳಿ ಇಂದು (ಜ.31) ರಾತ್ರಿ ಎಂಟು ಗಂಟೆ ಸುಮಾರಿಗೆ ನಡೆದಿದೆ. ಚಲಿಸುತ್ತಿದ್ದ ಸ್ವಿಫ್ಟ್ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ವಿಚಾರ ತಿಳಿಯುತ್ತಿದ್ದಂತೆ ಚಂದಾಪುರ ಸಮೀಪದ ಬಾಲಾಜಿ ಸೆರ್ನಿಟಿ ಅಪಾರ್ಟ್ಮೆಂಟ್ ನಿವಾಸಿಯಾಗಿರುವ ಬರುಣ್ ಕುಮಾರ್ ಜೈ ಕಾರಿನಿಂದ ಇಳಿದಿದ್ದು, ಕ್ಷಣಾರ್ಧದಲ್ಲೇ ಕಾರು ಸುಟ್ಟು ಕರಕಳಾಗಿದೆ. ಸ್ಥಳಕ್ಕೆ ಬಂದ ಅಗ್ನಿಶಾಮಕದಳ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಮಾಹಿತಿ ತಿಳಿದ ಎಲೆಕ್ಟ್ರಾನಿಕ್ ಸಿಟಿ ಸಂಚಾರಿ ಪೊಲೀಸರು, ಪರಿಶೀಲನೆ ನಡೆಸಿದ್ದಾರೆ. ಇನ್ನು ಘಟನೆಯಿಂದಾಗಿ ವಾಹನ ಸಂಚಾರಕ್ಕೆ ಅಡಚಣೆ ಉಂಟಾಯಿತು. 3 ಕಿಲೋ ಮೀಟರ್​​ವರೆಗೂ ವಾಹನಗಳು ಸಾಲುಗಟ್ಟಿ ನಿಂತವು.

ಇದನ್ನೂ ಓದಿ: ತುಮಕೂರು: ವರದಕ್ಷಿಣೆ ಆಸೆಗಾಗಿ ಪತ್ನಿಯನ್ನು ಕೊಂದು ಡ್ರಾಮ ಮಾಡಿದ್ದ ಆರೋಪಿ ಅರೆಸ್ಟ್

ಆರ್​ಐ ವಸಂತ್ ಕುಮಾರ್ ಲೋಕಾಯುಕ್ತ ಬಲೆಗೆ

ಬೆಂಗಳೂರು: ಇ-ಖಾತೆ ಅಪ್ಲೋಡ್ ಮಾಡಲು ಲಂಚಕ್ಕೆ ಬೇಡಿಕೆಯಿಟ್ಟದ್ದ ಆರ್​ಐ ವಸಂತ್ ಕುಮಾರ್ ಲೋಕಾಯುಕ್ತ ಅಧಿಕಾರಿಗಳ ಕೈಗೆ ರೆಡ್​ಹ್ಯಾಂಡ್ ಆಗಿ ಸಿಕ್ಕಿಬಿದ್ದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇ-ಖಾತೆ ಅಪ್ಲೋಡ್ ಮಾಡಲು ಸುಬ್ರಮಣಿ ಎಂಬುವರಿಗೆ ಸಂಜಯನಗರ ವಾರ್ಡ್ ನಂ.19ರಲ್ಲಿ ಆರ್​ಐ ಆಗಿರುವ ವಸಂತ್ ಕುಮಾರ್ 5 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ. ಅದರಂತೆ ಲಂಚದ ಹಣ ಪಡೆಯುತ್ತಿದ್ದಾಗ ಎಂಟ್ರಿಕೊಟ್ಟ ಲೋಕಾಯುಕ್ತ ಅಧಿಕಾರಿಗಳು, ವಸಂತ್ ಕುಮಾರ್​ರನ್ನು ಬಂಧಿಸಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:54 pm, Tue, 31 January 23