AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾಹನ ಪ್ರಯಾಣಿಕರಿಗೆ ಶಾಕಿಂಗ್​ ನ್ಯೂಸ್​​: ದೇವನಹಳ್ಳಿ ಏರ್ಪೋರ್ಟ್ ರಸ್ತೆಯ ಟೋಲ್ ದರ ಹೆಚ್ಚಳ

ಬೆಂಗಳೂರಿನಿಂದ ದೇವನಹಳ್ಳಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹೋಗುವ ಟೋಲ್​ ದರ ಏರಿಕೆಯಾಗಿದೆ. ಏರ್​​ಪೋರ್ಟ್​​ ರಸ್ತೆಯ ನಿರ್ವಹಣೆ ಹೊತ್ತಿರುವ ಅಥಾಂಗ್ ಟೋಲ್ ವೇ ಪ್ರವೈಟ್ ಲಿಮಿಟೆಡ್‌ ಮಧ್ಯರಾತ್ರಿಯಿಂದಲೇ ಟೋಲ್ ದರವನ್ನು ಏರಿಸಿದೆ.

ವಾಹನ ಪ್ರಯಾಣಿಕರಿಗೆ ಶಾಕಿಂಗ್​ ನ್ಯೂಸ್​​: ದೇವನಹಳ್ಳಿ ಏರ್ಪೋರ್ಟ್ ರಸ್ತೆಯ ಟೋಲ್ ದರ ಹೆಚ್ಚಳ
ದೇವನಹಳ್ಳಿ ಟೋಲ್​
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on:Apr 01, 2023 | 9:58 AM

Share

ದೇವನಹಳ್ಳಿ: ಬೆಂಗಳೂರು-ಮೈಸೂರು ಎಕ್ಸಪ್ರೆಸ್​ ವೇ (Bengaluru Mysore Express way) ಟೋಲ್​ ದರ (Toll Rate) ಏರಿಕೆಯಾಗಿದ್ದು ಒಂದಡೆಯಾದರೆ, ಬೆಂಗಳೂರಿನಿಂದ ದೇವನಹಳ್ಳಿಯ (Bengaluru-Devanahalli) ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ (Bengaluru International Airport) ಹೋಗುವ ಟೋಲ್​ ದರ ಕೂಡ ಏರಿಕೆಯಾಗಿದೆ. ಏರ್​​ಪೋರ್ಟ್​​ ರಸ್ತೆಯ ನಿರ್ವಹಣೆ ಹೊತ್ತಿರುವ ಅಥಾಂಗ್ ಟೋಲ್ ವೇ ಪ್ರವೈಟ್ ಲಿಮಿಟೆಡ್‌ ಮಧ್ಯರಾತ್ರಿಯಿಂದಲೇ ಟೋಲ್ ದರವನ್ನು ಏರಿಸಿದೆ.

ದೇವನಹಳ್ಳಿ ಟೋಲ್​ ದರ ಏರಿಕೆ

ಕಾರು, ಜೀಪು, ವ್ಯಾನ್ ಲಘು ‌ಮೋಟಾರು ವಾಹನ ಏಕಮುಖ ಸಂಚಾರಕ್ಕೆ 110 ರೂ. 24 ಗಂಟೆಯೊಳಗೆ ಹಿಂತಿರುಗುವ ಶುಲ್ಕ 170 ರೂ ನಿಗದಿ ಮಾಡಲಾಗಿದೆ. ಇಷ್ಟು ದಿನ ಏಕಮುಖ ಸಂಚಾರಕ್ಕೆ 105 ರೂ. ಹಾಗೂ ದ್ವಿಮುಖ ಸಂಚಾರ 165 ರೂಪಾಯಿ ಇತ್ತು. 3555 ರೂಪಾಯಿಯಿದ್ದ ಮಾಸಿಕ ಪಾಸ್ ಶುಲ್ಕ 3755 ರೂಪಾಯಿಗೆ ಏರಿಕೆಯಾಗಿದೆ.

ಇದನ್ನೂ ಓದಿ: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇ ಟೋಲ್ ದರ ಮತ್ತಷ್ಟು ಹೆಚ್ಚಳ

ಲಘು ವಾಣಿಜ್ಯ ವಾಹನ ಲಘು ಸರಕು ವಾಹನ ಮಿನಿ ಬಸ್- ಏಕಮುಖ ಸಂಚಾರಕ್ಕೆ 165 ರಿಂದ 170 ರೂ. ಗೆ ಏರಿಕೆ. ಹಿಂತಿರುಗುವ ಶುಲ್ಕ 245 ರಿಂದ 260 ರೂಪಾಯಿಗೆ ಏರಿಕೆ. ಮಾಸಿಕ ಪಾಸ್ 5465 ರೂ. ಯಿಂದ 5745 ರೂ. ಗೆ ಏರಿಸಲಾಗಿದೆ.

ಟ್ರಕ್ ಬಸ್ 2 ಆಕ್ಸೆಲ್ ವಾಹನಗಳ ಏಕಮುಖ ಸಂಚಾರಕ್ಕೆ 330 ರಿಂದ 345 ರೂ. ಗೆ ಏರಿಕೆ. ದ್ವಿಮುಖ ಸಂಚಾರಕ್ಕೆ 495 ರೂ. ನಿಂದ 520 ರೂ. ಗೆ ಏರಿಕೆ ಮಾಡಲಾಗಿದೆ. 10,990 ರೂಪಾಯಿ ಇದ್ದ ಮಾಸಿಕ ಪಾಸ್ 11,550 ರೂ. ಆಗಿದೆ. ಭಾರೀ ವಾಹನಗಳು 03 ರಿಂದ 06 ಅಕ್ಸೆಲ್ ವಾಹನಗಳ ಏಕಮುಖ ಸಂಚಾರಕ್ಕೆ 500 ರಿಂದ 525 ರೂ. ದ್ವಿಮುಖ ಸಂಚಾರ 750 ರೂ. ನಿಂದ 790 ರೂ. 16,680 ರೂ. ಇದ್ದ ಮಾಸಿಕ ಪಾಸ್ 17, 525 ರೂ. ಹೆಚ್ಚಿಗೆಯಾಗಿದೆ.

ಭಾರೀ ಗಾತ್ರದ ವಾಹನಗಳಿಗೆ 07 ಆಕ್ಸೆಲ್ ಹಾಗೂ ಅದಕ್ಕಿಂತ ಹೆಚ್ಚು ಆಕ್ಸೆಲ್ ವಾಹನಗಳಿಗೆ ಏಕಮುಖ ಸಂಚಾರಕ್ಕೆ 650 ರಿಂದ 685 ರೂ. ಗೆ ಏರಿಕೆ. ದ್ವಿಮುಖ 980 ರೂ. ನಿಂದ 1025 ರೂ. ಗೆ ಏರಿಕೆ. 21, 730 ರೂ. ಇದ್ದ ಮಾಸಿಕ ಪಾಸ್ 22, 830 ರೂಪಾಯಿಯಷ್ಟು ಹೆಚ್ಚಿಸಲಾಗಿದೆ. ಸ್ಥಳೀಯ ಮಾಸಿಕ ಪಾಸ್ 315 ರಿಂದ 330 ರೂಪಾಯಿಗೆ ಏರಿಕೆ (ಕಾರುಗಳಿಗೆ ಮಾತ್ರ ಅನ್ವಯವಾಗುತ್ತದೆ)

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:56 am, Sat, 1 April 23

Follow Us
ವಿವೇಕ ಬಿರಾದಾರ
ವಿವೇಕ ಬಿರಾದಾರ

ಮೂಲತಃ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯವ. ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿದ್ದೇನೆ. ಕಳೆದ ಮೂರು ವರ್ಷಗಳಿಂದ ಡಿಜಿಟಲ್​ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಚಲಿತ ವಿದ್ಯಮಾನ, ರಾಜಕೀಯ, ಅಪರಾಧ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದೇನೆ.

ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ