ವಾಹನ ಪ್ರಯಾಣಿಕರಿಗೆ ಶಾಕಿಂಗ್​ ನ್ಯೂಸ್​​: ದೇವನಹಳ್ಳಿ ಏರ್ಪೋರ್ಟ್ ರಸ್ತೆಯ ಟೋಲ್ ದರ ಹೆಚ್ಚಳ

|

Updated on: Apr 01, 2023 | 9:58 AM

ಬೆಂಗಳೂರಿನಿಂದ ದೇವನಹಳ್ಳಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹೋಗುವ ಟೋಲ್​ ದರ ಏರಿಕೆಯಾಗಿದೆ. ಏರ್​​ಪೋರ್ಟ್​​ ರಸ್ತೆಯ ನಿರ್ವಹಣೆ ಹೊತ್ತಿರುವ ಅಥಾಂಗ್ ಟೋಲ್ ವೇ ಪ್ರವೈಟ್ ಲಿಮಿಟೆಡ್‌ ಮಧ್ಯರಾತ್ರಿಯಿಂದಲೇ ಟೋಲ್ ದರವನ್ನು ಏರಿಸಿದೆ.

ವಾಹನ ಪ್ರಯಾಣಿಕರಿಗೆ ಶಾಕಿಂಗ್​ ನ್ಯೂಸ್​​: ದೇವನಹಳ್ಳಿ ಏರ್ಪೋರ್ಟ್ ರಸ್ತೆಯ ಟೋಲ್ ದರ ಹೆಚ್ಚಳ
ದೇವನಹಳ್ಳಿ ಟೋಲ್​
Follow us on

ದೇವನಹಳ್ಳಿ: ಬೆಂಗಳೂರು-ಮೈಸೂರು ಎಕ್ಸಪ್ರೆಸ್​ ವೇ (Bengaluru Mysore Express way) ಟೋಲ್​ ದರ (Toll Rate) ಏರಿಕೆಯಾಗಿದ್ದು ಒಂದಡೆಯಾದರೆ, ಬೆಂಗಳೂರಿನಿಂದ ದೇವನಹಳ್ಳಿಯ (Bengaluru-Devanahalli) ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ (Bengaluru International Airport) ಹೋಗುವ ಟೋಲ್​ ದರ ಕೂಡ ಏರಿಕೆಯಾಗಿದೆ. ಏರ್​​ಪೋರ್ಟ್​​ ರಸ್ತೆಯ ನಿರ್ವಹಣೆ ಹೊತ್ತಿರುವ ಅಥಾಂಗ್ ಟೋಲ್ ವೇ ಪ್ರವೈಟ್ ಲಿಮಿಟೆಡ್‌ ಮಧ್ಯರಾತ್ರಿಯಿಂದಲೇ ಟೋಲ್ ದರವನ್ನು ಏರಿಸಿದೆ.

ದೇವನಹಳ್ಳಿ ಟೋಲ್​ ದರ ಏರಿಕೆ

ಕಾರು, ಜೀಪು, ವ್ಯಾನ್ ಲಘು ‌ಮೋಟಾರು ವಾಹನ ಏಕಮುಖ ಸಂಚಾರಕ್ಕೆ 110 ರೂ. 24 ಗಂಟೆಯೊಳಗೆ ಹಿಂತಿರುಗುವ ಶುಲ್ಕ 170 ರೂ ನಿಗದಿ ಮಾಡಲಾಗಿದೆ. ಇಷ್ಟು ದಿನ ಏಕಮುಖ ಸಂಚಾರಕ್ಕೆ 105 ರೂ. ಹಾಗೂ ದ್ವಿಮುಖ ಸಂಚಾರ 165 ರೂಪಾಯಿ ಇತ್ತು. 3555 ರೂಪಾಯಿಯಿದ್ದ ಮಾಸಿಕ ಪಾಸ್ ಶುಲ್ಕ 3755 ರೂಪಾಯಿಗೆ ಏರಿಕೆಯಾಗಿದೆ.

ಇದನ್ನೂ ಓದಿ: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇ ಟೋಲ್ ದರ ಮತ್ತಷ್ಟು ಹೆಚ್ಚಳ

ಲಘು ವಾಣಿಜ್ಯ ವಾಹನ ಲಘು ಸರಕು ವಾಹನ ಮಿನಿ ಬಸ್- ಏಕಮುಖ ಸಂಚಾರಕ್ಕೆ 165 ರಿಂದ 170 ರೂ. ಗೆ ಏರಿಕೆ. ಹಿಂತಿರುಗುವ ಶುಲ್ಕ 245 ರಿಂದ 260 ರೂಪಾಯಿಗೆ ಏರಿಕೆ. ಮಾಸಿಕ ಪಾಸ್ 5465 ರೂ. ಯಿಂದ 5745 ರೂ. ಗೆ ಏರಿಸಲಾಗಿದೆ.

ಟ್ರಕ್ ಬಸ್ 2 ಆಕ್ಸೆಲ್ ವಾಹನಗಳ ಏಕಮುಖ ಸಂಚಾರಕ್ಕೆ 330 ರಿಂದ 345 ರೂ. ಗೆ ಏರಿಕೆ. ದ್ವಿಮುಖ ಸಂಚಾರಕ್ಕೆ 495 ರೂ. ನಿಂದ 520 ರೂ. ಗೆ ಏರಿಕೆ ಮಾಡಲಾಗಿದೆ. 10,990 ರೂಪಾಯಿ ಇದ್ದ ಮಾಸಿಕ ಪಾಸ್ 11,550 ರೂ. ಆಗಿದೆ.
ಭಾರೀ ವಾಹನಗಳು 03 ರಿಂದ 06 ಅಕ್ಸೆಲ್ ವಾಹನಗಳ ಏಕಮುಖ ಸಂಚಾರಕ್ಕೆ 500 ರಿಂದ 525 ರೂ. ದ್ವಿಮುಖ ಸಂಚಾರ 750 ರೂ. ನಿಂದ 790 ರೂ. 16,680 ರೂ. ಇದ್ದ ಮಾಸಿಕ ಪಾಸ್ 17, 525 ರೂ. ಹೆಚ್ಚಿಗೆಯಾಗಿದೆ.

ಭಾರೀ ಗಾತ್ರದ ವಾಹನಗಳಿಗೆ 07 ಆಕ್ಸೆಲ್ ಹಾಗೂ ಅದಕ್ಕಿಂತ ಹೆಚ್ಚು ಆಕ್ಸೆಲ್ ವಾಹನಗಳಿಗೆ ಏಕಮುಖ ಸಂಚಾರಕ್ಕೆ 650 ರಿಂದ 685 ರೂ. ಗೆ ಏರಿಕೆ. ದ್ವಿಮುಖ 980 ರೂ. ನಿಂದ 1025 ರೂ. ಗೆ ಏರಿಕೆ. 21, 730 ರೂ. ಇದ್ದ ಮಾಸಿಕ ಪಾಸ್ 22, 830 ರೂಪಾಯಿಯಷ್ಟು ಹೆಚ್ಚಿಸಲಾಗಿದೆ. ಸ್ಥಳೀಯ ಮಾಸಿಕ ಪಾಸ್ 315 ರಿಂದ 330 ರೂಪಾಯಿಗೆ ಏರಿಕೆ (ಕಾರುಗಳಿಗೆ ಮಾತ್ರ ಅನ್ವಯವಾಗುತ್ತದೆ)

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:56 am, Sat, 1 April 23