Bangalore Power Cut: ಬೆಂಗಳೂರಿನಲ್ಲಿ ಇಂದು ವಿದ್ಯುತ್ ವ್ಯತ್ಯಯ, ನಿಮ್ಮ ಏರಿಯಾದಲ್ಲಿ ಕರೆಂಟ್ ಇರುತ್ತಾ ಇಲ್ವಾ? ಚೆಕ್ ಮಾಡಿ
ಮೇ 24ರ (ಬುಧವಾರ) ಬೆಳಗ್ಗೆ 10ರಿಂದ ಸಂಜೆ 4ಗಂಟೆಯವರೆಗೆ 66/11 ಕೆ.ವಿ ಹೆಚ್.ಬಿ.ಆರ್ ಸ್ಟೇಷನ್‍ನಲ್ಲಿ ತುರ್ತು ನಿರ್ವಹಣಾ ಕೆಲಸಗಳನ್ನು ನಿರ್ವಹಿಸುವುದರಿಂದ ನಗರದ ಕೆಲ ಏರಿಯಾಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.ನಿಮ್ಮ ಏರಿಯಾ ಬಗ್ಗೆ ಈಗಲೇ ಚೆಕ್ ಮಾಡಿ!
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ (Bengaluru) ಕಳೆದ ಎರಡ್ಮೂರು ದಿನದಿಂದ ಸುರಿಯುತ್ತಿರುವ ಮಳೆಯಿಂದ ತಗ್ಗು ಪ್ರದೇಶಗಳಲ್ಲಿ ಮನೆಗಳಿಗೆ ನೀರು ನುಗ್ಗಿದ್ದು, ಜನ ಹೈರಾಣಾಗಿದ್ದಾರೆ. ಇದರ ಮಧ್ಯೆ ಇಂದು ಬೆಂಗಳೂರು ಜಿಲ್ಲಾ ವ್ಯಾಪ್ತಿಯಲ್ಲಿ ಬೆಸ್ಕಾಂ ನಿರ್ವಹಣಾ ಕಾಮಗಾರಿ ಕೈಗೊಂಡಿದೆ. ಮೇ 24ರ (ಬುಧವಾರ) ಬೆಳಗ್ಗೆ 10ರಿಂದ ಸಂಜೆ 4ಗಂಟೆಯವರೆಗೆ 66/11 ಕೆ.ವಿ ಹೆಚ್.ಬಿ.ಆರ್ ಸ್ಟೇಷನ್‍ನಲ್ಲಿ ತುರ್ತು ನಿರ್ವಹಣಾ ಕೆಲಸಗಳನ್ನು ನಿರ್ವಹಿಸುವುದರಿಂದ ನಗರದ ಕೆಲ ಏರಿಯಾಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.
ಹೆಚ್.ಬಿ.ಆರ್ 1ನೇ ಬ್ಲಾಕ್, 2ನೇ ಬ್ಲಾಕ್, ಯಾಸಿನ್ ನಗರ, ಸುಭಾಶ್ ಲೇಔಟ್, ರಾಮ ದೇವಸ್ಥಾನದ ರಸ್ತೆ, ರಾಮದೇವ್ ಗಾರ್ಡನ್, ಟೀಚರ್ಸ್ ಕಾಲೋನಿ, ಹೆಚ್.ಬಿ.ಆರ್ 3ನೇ ಬ್ಲಾಕ್, ಶಿವರಾಮಯ್ಯ ಲೇಔಟ್, ರಿಂಗ್ ರಸ್ತೆ, ಸರ್ವೀಸ್ ರಸ್ತೆ, ಕೆ.ಕೆ.ಹಳ್ಳಿ ಗ್ರಾಮ, ಸಿ.ಎಂ.ಆರ್ ರಸ್ತೆ, ಕಮ್ಮನಹಳ್ಳಿ ಮುಖ್ಯರಸ್ತೆ, ರಾಮಯ್ಯ ಲೇಔಟ್, ಲಿಂಗರಾಜಪುರ, ಜಾನಕೀರಾಮ್ ಲೇಔಟ್, ಕನಕದಾಸ ಲೇಔಟ್, ಗೋವಿಂದಪುರ ಮುಖ್ಯರಸ್ತೆ, ರಶದ್ ನಗರ, ಫರೀದಾ ಶೂ ಫ್ಯಾಕ್ಟರಿ, ಅರೇಬಿಕ್ ಕಾಲೇಜ್, ಕೆ.ಜಿ.ಹಳ್ಳಿ, ಗೋವಿಂದಪುರ ಗ್ರಾಮ, ಕೆ.ಜಿ.ಹಳ್ಳಿ, ವಿನೋಬನಗರ, ಬಿ.ಎಂ.ಲೇಔಟ್, ಆರೋಗ್ಯಮ್ಮ ಲೇಔಟ್ ಮತ್ತು ಕಾವೇರಿ ಗಾರ್ಡನ್ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಹೆಚ್.ಬಿ.ಆರ್ 4ನೇ ಬ್ಲಾಕ್, ಯಾಸಿನ್ ನಗರ, 5ನೇ ಬ್ಲಾಕ್, ಹೆಚ್.ಬಿ.ಆರ್.ನಾಗವಾರ ಮುಖ್ಯರಸ್ತೆ, ನಾಗವಾರ, ಎನ್.ಜೆ.ಕೆ.ಗಾರ್ಮೆಂಟ್ಸ್, ಬೈರನಕುಂಟೆ, ಕುಪ್ಪುಸ್ವಾಮಿ ಲೇಔಟ್, ಹೆಚ್.ಕೆ.ಬಿ.ಕೆ ಕಾಲೇಜ್, 4ನೇ ಮತ್ತು 5ನೇ ಹೆಚ್.ಬಿ.ಆರ್ ಲೇಔಟ್, ವಿದ್ಯಾಸಾಗರ, ಥಣಿಸಂದ್ರ, ಆರ್.ಕೆ.ಹೆಗಡೆನಗರ, ಕೆ.ನಾರಾಯಣಪುರ, ಎನ್.ಎನ್.ಹಳ್ಳಿ, ಬಾಲಾಜಿ ಲೇಔಟ್, ಫೇಸ್ 1ರಿಂದ 3, ರೈಲ್ವೆ ಮೆನ್ಸ್ ಲೇಔಟ್, ಬಿ.ಡಿ.ಎಸ್ ಲೇಔಟ್, ಸೆಂಟ್ರಲ್ ಎಕ್ಸೈಸ್, ಕೆ.ಕೆ.ಹಳ್ಳಿ, ಹೆಣ್ಣೂರು ಮುಖ್ಯರಸ್ತೆಯಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
ಹೆಚ್.ಆರ್.ಬಿ.ಆರ್ 3ನೇ ಬ್ಲಾಕ್, ಆಯಿಲ್ ಮಿಲ್ ರಸ್ತೆ, ಅರವಿಂದನಗರ, ನೆಹರೂ ರಸ್ತೆ, ಕಮ್ಮನಹಳ್ಳಿ ಮುಖ್ಯರಸ್ತೆ, ಬೆಥೆಲ್ ಸ್ಟ್ರೀಟ್, ಎ.ಕೆ.ಕಾಲೋನಿ, ಹೆಚ್.ಆರ್.ಬಿ.ಆರ್ 1ನೇ ಬ್ಲಾಕ್, 80 ಅಡಿ ರಸ್ತೆ, ಸಿ.ಎಂ.ಆರ್ ರಸ್ತೆ, ಕಾರ್ಲೆ, ಹೆಗಡೆನಗರ, ನಾಗೇನಹಳ್ಳಿ, ಪೊಲೀಸ್ ಕ್ವಾಟರ್ಸ್, ಕೆಂಪೇಗೌಡ ಲೇಔಟ್, ಶಬರೀನಗರ, ಕೆಎಂಟಿ ಲೇಔಟ್, ಭಾರತೀಯ ಸಿಟಿ, ನೂರ್ ನಗರ ಭಾರತ ಲೇಔಟ್, ಭಾರತ್ ಮಾತಾಲೇಔಟ್, ಹಿದಾಯತ್ ನಗರದಲ್ಲಿ ಪ್ರದೇಶದಲ್ಲಿ ಕರೆಂಟ್ ಇರುವುದಿಲ್ಲ. ಹೀಗಾಗಿ ಸಾರ್ವಜನಿಕರು ಸಹಕರಿಸಬೇಕೆಂದು ಬೆಸ್ಕಾ ತಿಳಿಸಿದೆ.
ಬೆಂಗಳೂರು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ
Published On - 10:37 am, Wed, 24 May 23