ಕೈ ಕೊಟ್ಟ ಮುಂಗಾರು ಮಳೆ, ಕೆಆರ್ಎಸ್ನಲ್ಲೂ ನೀರಿಲ್ಲ; ಬೆಂಗಳೂರಿಗೆ ಕಾದಿದೆ ನೀರಿನ ಸಮಸ್ಯೆ
BWSSB ಬೆಂಗಳೂರು ನಗರದ 6 ಲಕ್ಷಕ್ಕೂ ಹೆಚ್ಚು ಮನೆಗಳಿಗೆ ಕಾವೇರಿ ನೀರು ಸರಬರಾಜು ಯೋಜನೆ ಮೂಲಕ ನೀರಿನ ಪೂರೈಕೆ ಮಾಡುತ್ತದೆ. ಆದರೆ ಸಧ್ಯ ವಾಡಿಕೆಯಂತೆ ಮುಂಗಾರು ಮಳೆ ಆಗದೆ. ಮಳೆಯ ಪ್ರಮಾಣ ಕಡಿಮೆಯಾಗಿದ್ದರಿಂದ ಕೆಆರ್‌ಎಸ್ ಜಲಾನಯನ ಪ್ರದೇಶದಲ್ಲಿ ನೀರಿನ ಪ್ರಮಾಣ ಕಡಿಮೆ ಇದೆ. ಹೀಗಿರುವಾಗ ಸರ್ಕಾರ ತಮಿಳುನಾಡಿಗೆ ನೀರು ಹರಿಬಿಟ್ಟ ಪರಿಣಾಮ ಮುಂದಿನ ದಿನಗಳಲ್ಲಿ ಬೆಂಗಳೂರು ನಿವಾಸಿಗಳಿಗೆ ನೀರಿನ ಕೊರತೆಯಾಗುವ ಸಾಧ್ಯತೆ ಹೆಚ್ಚಾಗಿದೆ.
ಬೆಂಗಳೂರು, ಆ.26: ರಾಜ್ಯದಲ್ಲಿ ಮುಂಗಾರು(Monsoon) ಮಳೆ ಅಭಾವದಿಂದಾಗಿ ಕಾವೇರಿ ನದಿಯಲ್ಲಿ ನೀರಿನ ಪ್ರಮಾಣ ಕಡಿಮೆಯಾಗಿದೆ. ಹಾಗೂ ಕೆಆರ್‌ಎಸ್(KRS Dam) ನಿಂದ ತಮಿಳುನಾಡಿಗೆ ನೀರು ಹರಿಬಿಟ್ಟ ಪರಿಣಾಮ ಬೆಂಗಳೂರಿಗೆ ಮುಂದಿನ ದಿನಗಳಲ್ಲಿ ನೀರಿನ ಕೊರತೆ ಉಂಟಾಗುವ ಸಾಧ್ಯತೆ ಇದೆ. ಈಗಾಗಲೇ ಬೆಂಗಳೂರಿಗೆ ಸೇರ್ಪಡೆಯಾದ 110 ಹಳ್ಳಿಗಳಿಗೆ ಪ್ರದೇಶಗಳ ಜನರಿಗೆ ನೀರಿನ ಅಭಾವ ಎದುರಾಗಿದ್ದು ಹನಿ ನೀರಿಗೂ ಪರದಾಡುವ ಪರಿಸ್ಥಿತಿ ಇದೆ(Water Crisis).
ಹೌದು ಸಿಲಿಕಾನ್ ಸಿಟಿ ಬೆಂಗಳೂರಿಗೆ ಕಾವೇರಿ ಯೋಜನೆಯ ವಿವಿಧ ಹಂತಗಳಲ್ಲಿ ನಗರಕ್ಕೆ ಸರಬರಾಜಾಗುವ ನೀರಿನ ಪ್ರಮಾಣವು ಬೇಡಿಕೆಗಿಂತ ಕಡಿಮೆಯಿರುವುದರಿಂದ ಬೆಂಗಳೂರಿನ ನಿವಾಸಿಗಳಿಗೆ ನೀರಿನ ಅಗತ್ಯತೆ ಹೆಚ್ಚಾಗುತ್ತಿದೆ. BWSSB ಬೆಂಗಳೂರು ನಗರದ 6 ಲಕ್ಷಕ್ಕೂ ಹೆಚ್ಚು ಮನೆಗಳಿಗೆ ಕಾವೇರಿ ನೀರು ಸರಬರಾಜು ಯೋಜನೆ ಮೂಲಕ ನೀರಿನ ಪೂರೈಕೆ ಮಾಡುತ್ತದೆ. ಆದರೆ ಸಧ್ಯ ವಾಡಿಕೆಯಂತೆ ಮುಂಗಾರು ಮಳೆ ಆಗದೆ. ಮಳೆಯ ಪ್ರಮಾಣ ಕಡಿಮೆಯಾಗಿದ್ದರಿಂದ ಕೆಆರ್‌ಎಸ್ ಜಲಾನಯನ ಪ್ರದೇಶದಲ್ಲಿ ನೀರಿನ ಪ್ರಮಾಣ ಕಡಿಮೆ ಇದೆ. ಹೀಗಿರುವಾಗ ಸರ್ಕಾರ ತಮಿಳುನಾಡಿಗೆ ನೀರು ಹರಿಬಿಟ್ಟ ಪರಿಣಾಮ ಮುಂದಿನ ದಿನಗಳಲ್ಲಿ ಬೆಂಗಳೂರು ನಿವಾಸಿಗಳಿಗೆ ನೀರಿನ ಕೊರತೆಯಾಗುವ ಸಾಧ್ಯತೆ ಹೆಚ್ಚಾಗಿದೆ.
ಇದನ್ನೂ ಓದಿ: ಕಾವೇರಿ ಕ್ಯಾತೆ: ಇಲ್ಲೇ ನೀರಿನ ಸಮಸ್ಯೆ ಇದೆ, ತಮಿಳುನಾಡಿಗೆ ನೀರು ಬಿಡಲಾಗುತ್ತಿಲ್ಲ ಎಂದ ಸಚಿವ ಎನ್ ಚಲುವರಾಯಸ್ವಾಮಿ
ಇನ್ನೂ ಬೆಂಗಳೂರಿನಲ್ಲಿ ಸೇರ್ಪಡೆಯಾಗಿರುವ 110 ಹಳ್ಳಿಗಳ ಸ್ಥಿತಿಯಂತೂ ಇನ್ನೂ ಚಿಂತಾಜನಕವಾಗಿದೆ. ಈ ಪ್ರದೇಶಗಳ ಜನಗಳಿಗೆ ಕೊಳವೆಬಾವಿ ಹಾಗೂ ಟ್ಯಾಂಕರ್ ಮೂಲಕ ಪೂರೈಕೆಯಾಗುತ್ತಿರುವ ನೀರನ್ನೇ ಹೆಚ್ಚಾಗಿ ಅವಲಂಬಿಸಬೇಕಾಗಿದೆ. ಬಿಬಿಎಂಪಿ ನಗರ ವ್ಯಾಪ್ತಿಯ ದಾಸರಹಳ್ಳಿ, ಯಲಹಂಕ ವ್ಯಾಪ್ತಿ ಹಳ್ಳಿಗಳಲ್ಲಿ ನೀರಿಗೆ ಹಾಹಾಕಾರವಿದ್ದು ಹೊಸದಾಗಿ ಬೋರ್ವೆಲ್ ಕೊರೆಸಲು ಬಿಬಿಎಂಪಿ ಮುಂದಾಗಿದೆ. ನಗರಾದ್ಯಂತ ನೀರಿನ ತೊಂದರೆ ಆಗದಂತೆ ಹಾಗೂ ಸಮಸ್ಯೆಗಳನ್ನು ಕ್ಷಿಪ್ರವಾಗಿ ಎದುರಿಸಲು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಗತ್ಯ ಸಿದ್ಧತೆ ಮಾಡಿಕೊಂಡಿದೆಯಾದರು ಬೆಂಗಳೂರು ನಗರಕ್ಕೆ ವರ್ಷಕ್ಕೆ 19 ಟಿಎಂಸಿ ನೀರು ಬೇಕು. ತಿಂಗಳಿಗೆ 1.5 ಟಿಎಂಸಿ ನೀರು ಹಾಗೂ ದಿನಕ್ಕೆ 1800 ಎನ್‌ಎಲ್‌ಡಿ ನೀರು ಬೇಕಾಗುತ್ತದೆ. ಆದರೆ ಸಧ್ಯದ ಸ್ಥಿತಿಗತಿನೋಡೋದಾದರೆ ಮುಂದಿನ ದಿನಗಳಲ್ಲಿ ಸಾಕಷ್ಟು ನೀರಿನ ಸಮಸ್ಯೆಯಾಗುವ ಎಲ್ಲ ಲಕ್ಷಣಗಳು ಕಾಣುತ್ತಿವೆ. ಇನ್ನೂ ಈ ಬಗ್ಗೆ BWSSB ಅಧಿಕಾರಿಗಳನ್ನ ಸಂಪರ್ಕಿಸಿದರೆ ಯಾರೋಬ್ಬರು ಉತ್ತರ ನೀಡುತ್ತಿಲ್ಲ.
ಒಟ್ಟಿನಲ್ಲಿ ಮೊದಲೆ ಮಳೆ ಪ್ರಮಾಣ ಕಡಿಮೆಯಾದ್ದರಿಂದ ಬಾವಿ, ಬೋರ್ ವೆಲ್ಗಳಲ್ಲಿ ಕೂಡ ನೀರಿನ ಪ್ರಮಾಣ ಕಡಿಮೆಯಾಗಿದ್ದು, ಈಗಾಗಲೇ 110 ಹಳ್ಳಿಗಳಿಗೆ ಟ್ಯಾಂಕರ್ ಬೋರ್ ವೆಲ್ ಗಳ ಮೂಲಕ ನೀರು ಸರಬರಾಜುಗೆ BWSSB ಮುಂದಾಗಿದೆ. ಆದರೆ ಪ್ರಮುಖವಾಗಿ ಕೆಆರ್‌ಎಸ್ ನಿಂದ ತಮಿಳುನಾಡಿಗೆ ನೀರು ಹರಿಬಿಟ್ಟ ಪರಿಣಾಮ ಬೆಂಗಳೂರು ನಗರಕ್ಕೆ ಮುಂದಿನ ದಿನಗಳಲ್ಲಿ ಇನ್ನಷ್ಟು ನೀರಿನ ಕೊರತೆ ಉಂಟಾಗುವುದರಲ್ಲಿ ಯಾವುದೇ ಸಂಶಯವಿಲ್ಲ. ಇದನ್ನ ಮುಂದೆ BWSSB ಯಾವ ರೀತಿಯಾಗಿ ನಿರ್ವಹಣೆ ಮಾಡುತ್ತೆ ಅನ್ನೋದನ್ನ ಕಾದು ನೋಡಬೇಕಿದೆ.
ಬೆಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ
Published On - 2:23 pm, Sat, 26 August 23