ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಬೆದರಿಕೆ ಹಾಕಿದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ಪ್ರಯಾಣಿಕ ಅರೆಸ್ಟ್

|

Updated on: May 18, 2024 | 12:41 PM

ವಿಮಾನ ನಿಲ್ದಾಣದ ಮೂಲಗಳ ಪ್ರಕಾರ, ಗುರುವಾರ ರಾತ್ರಿ 9 ಗಂಟೆ ಸುಮಾರಿಗೆ ಟರ್ಮಿನಲ್ 2 ರಲ್ಲಿ ಕೌಂಟರ್ ಸಂಖ್ಯೆ E9 ಎದುರು ಈ ಘಟನೆ ಸಂಭವಿಸಿದೆ. ಹರಿಯಾಣದ ಹಿಸ್ಸಾರ್ ಜಿಲ್ಲೆಯ ನಿವಾಸಿಯಾದ ಬೇನಿವಾಲ್ ಎಂಬ ಪ್ರಯಾಣಿಕ ಬ್ಯಾಗ್‌ಗಳನ್ನು ತಪಾಸಣೆಗಾಗಿ ಏರ್‌ಲೈನ್‌ನ ಚೆಕ್-ಇನ್ ಕೌಂಟರ್‌ನಲ್ಲಿ ಹಸ್ತಾಂತರಿಸುತ್ತಿದ್ದಾಗ ತನ್ನ ಬ್ಯಾಗ್‌ನಲ್ಲಿ ಬಾಂಬ್ ಇದೆ ಎಂದು ಗಟ್ಟಿಯಾಗಿ ಹೇಳಿದ್ದಾನೆ.

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಬೆದರಿಕೆ ಹಾಕಿದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ಪ್ರಯಾಣಿಕ ಅರೆಸ್ಟ್
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಬೆದರಿಕೆ ಹಾಕಿದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ಪ್ರಯಾಣಿಕ ಅರೆಸ್ಟ್
Follow us on

ಬೆಂಗಳೂರು, ಮೇ 18: ಚೆಕ್-ಇನ್ ಬ್ಯಾಗ್‌ನಲ್ಲಿ ಬಾಂಬ್ ಅಡಗಿಸಿಟ್ಟಿರುವುದಾಗಿ ಸುಳ್ಳು ಬೆದರಿಕೆ (Bomb Threat) ಹಾಕಿ ಭೀತಿ ಸೃಷ್ಟಿಸಿದ್ದಕ್ಕಾಗಿ ಬೆಂಗಳೂರಿನಿಂದ ಪುಣೆಗೆ ಹೊರಟಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ (Air India Express) ವಿಮಾನದ ಪ್ರಯಾಣಿಕರೊಬ್ಬರ ಮೇಲೆ ಪ್ರಕರಣ ದಾಖಲಿಸಿ ಬಂಧಿಸಲಾಗಿದೆ. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (KIA) ಭದ್ರತಾ ತಪಾಸಣೆ ವೇಳೆ ವ್ಯಕ್ತಿಯು ಬ್ಯಾಗ್​ನಲ್ಲಿ ಬಾಂಬ್ ಇದೆ ಎಂದು ಹೇಳಿ ಆತಂಕ ಸೃಷ್ಟಿಸಿದ್ದ. ಈ ವಿಚಾರವಾಗಿ ಪ್ರಯಾಣಿಕ ರಾಜೇಶ್‌ಕುಮಾರ್ ಬೇನಿವಾಲ್ ವಿರುದ್ಧ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನಯಾನ ಸಂಸ್ಥೆಯ ಸಿಬ್ಬಂದಿ ವಿಮಾನ ನಿಲ್ದಾಣ ಪೊಲೀಸರಿಗೆ ದೂರು ನೀಡಿದ್ದರು. ನಂತರ ಆರೋಪಿಯನ್ನು ಬಂಧಿಸಲಾಗಿದೆ. ಆರೋಪಿಯ ವಿರುದ್ಧ ನಾನ್ ಕಾಗ್ನಿಸಿಬಲ್ ರಿಪೋರ್ಟ್ (NCR) ದಾಖಲಿಸಲಾಗಿದೆ.

ನಾನ್ ಕಾಗ್ನಿಸಿಬಲ್ ರಿಪೋರ್ಟ್ ಎಂದರೆ, ನ್ಯಾಯಾಲಯವು ನೀಡಿದ ವಾರಂಟ್ ಇಲ್ಲದೆ ಪೊಲೀಸರು ಆರೋಪಿಯ ವಿರುದ್ಧ ಯಾವುದೇ ಕ್ರಮ ಕೈಗೊಳ್ಳಲು ಸಾಧ್ಯವಾಗುವುದಿಲ್ಲ.

ವಿಮಾನ ನಿಲ್ದಾಣದ ಮೂಲಗಳ ಪ್ರಕಾರ, ಗುರುವಾರ ರಾತ್ರಿ 9 ಗಂಟೆ ಸುಮಾರಿಗೆ ಟರ್ಮಿನಲ್ 2 ರಲ್ಲಿ ಕೌಂಟರ್ ಸಂಖ್ಯೆ E9 ಎದುರು ಈ ಘಟನೆ ಸಂಭವಿಸಿದೆ. ಹರಿಯಾಣದ ಹಿಸ್ಸಾರ್ ಜಿಲ್ಲೆಯ ನಿವಾಸಿಯಾದ ಬೇನಿವಾಲ್ ವಿಮಾನ ಸಂಖ್ಯೆ 15 821 ರಲ್ಲಿ ಪ್ರಯಾಣಿಸಲು ಮುಂದಾಗಿದ್ದ. ಪ್ರಯಾಣಿಕರು ಬ್ಯಾಗ್‌ಗಳನ್ನು ತಪಾಸಣೆಗಾಗಿ ಏರ್‌ಲೈನ್‌ನ ಚೆಕ್-ಇನ್ ಕೌಂಟರ್‌ನಲ್ಲಿ ಹಸ್ತಾಂತರಿಸುತ್ತಿದ್ದಾಗ ಬೇನಿವಾಲ್ ತನ್ನ ಬ್ಯಾಗ್‌ನಲ್ಲಿ ಬಾಂಬ್ ಇದೆ ಎಂದು ಗಟ್ಟಿಯಾಗಿ ಹೇಳಿದ್ದಾನೆ. ವಿಮಾನಯಾನ ಸಿಬ್ಬಂದಿ ತಕ್ಷಣವೇ ವಿಮಾನ ನಿಲ್ದಾಣದ ಭದ್ರತಾ ಏಜೆನ್ಸಿಗಳಿಗೆ ಮಾಹಿತಿ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ನಂತರ ಬೇನಿವಾಲ್​ರನ್ನು ಇತರ ಪ್ರಯಾಣಿಕರಿಂದ ಪ್ರತ್ಯೇಕಿಸಿ ತನಿಖೆಗೆ ಒಳಪಡಿಸಲಾಯಿತು. ಆತನ ಬ್ಯಾಗ್‌ಗಳನ್ನು ತೀವ್ರ ಪರಿಶೀಲನೆಗೆ ಒಳಪಡಿಸಲಾಯಿತು. ಈ ವೇಳೆ ಆತನ ಬೆದರಿಕೆ ಹುಸಿ ಎಂಬುದು ತಿಳಿದುಬಂದಿದೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: ವಿಮಾನ ಹೊರಡುವುದಕ್ಕೂ ಕೆಲವೇ ಕ್ಷಣ ಮುನ್ನ ಬ್ಯಾಗ್​​ನಲ್ಲಿ ಬಾಂಬ್​ ಇದೆ ಎಂದ ವ್ಯಕ್ತಿ!

ಬ್ಯಾಗ್​ನಲ್ಲಿ ಬಾಂಬ್ ಇದೆ ಎಂದು ವಿಮಾನ ಹೊರಡುವುದಕ್ಕೂ ಮುನ್ನ ಕೆಲವೇ ಕ್ಷಣಗಳ ಮುನ್ನ ವ್ಯಕ್ತಿಯೊಬ್ಬ ಹೇಳಿದ್ದು, ಸಹ ಪ್ರಯಾಣಿಕರು ಆತಂಕಕ್ಕೀಡಾದ ಘಟನೆ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಜನವರಿಯಲ್ಲಿ ನಡೆದಿತ್ತು.

ಈ ಮಧ್ಯೆ, ನಗರದ ಶಾಲೆಗಳಿಗೂ ಹುಸಿ ಬಾಂಬ್ ಬೆದರಿಕೆ ಸಂದೇಶಗಳು ಬರುತ್ತಿರುವ ಪ್ರಕರಣಗಳು ಇತ್ತೀಚೆಗೆ ಹೆಚ್ಚಾಗಿದ್ದು ಪೊಲೀಸರ ನಿದ್ದೆಗೆಡಿಸಿದೆ. ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಸಂಭವಿಸಿದ ಬೆನ್ನಲ್ಲೇ ನಗರದಲ್ಲಿ ಇಂಥ ವಿದ್ಯಮಾನಗಳು ಹೆಚ್ಚಾಗಿವೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ