AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಿಳೆಯರಿಗೆ ಬೆಂಗಳೂರು ಸೇಫ್: ಲೇಟ್ ನೈಟ್ ಶೋ ಟಿಕೆಟ್ ಬುಕ್ಕಿಂಗ್‌ನಲ್ಲಿ ದೇಶಕ್ಕೇ ನಂ.1

ಮಹಿಳೆಯರ ಸುರಕ್ಷತೆ ವಿಚಾರದಲ್ಲಿ ಬೆಂಗಳೂರಿಗೆ ಮಹತ್ವದ ಹೆಗ್ಗಳಿಕೆ ಸಿಕ್ಕಿದೆ. ಮೇಕ್ ಮೈ ಟ್ರಿಪ್ ದತ್ತಾಂಶದ ಪ್ರಕಾರ, ತಡರಾತ್ರಿಯ ಸಿನಿಮಾ ಪ್ರದರ್ಶನಗಳು ಮತ್ತು ಮನರಂಜನಾ ಕಾರ್ಯಕ್ರಮಗಳಿಗೆ ಅತಿ ಹೆಚ್ಚು ಟಿಕೆಟ್ ಬುಕ್ ಮಾಡುವ ಮಹಿಳೆಯರು ಬೆಂಗಳೂರಿನಲ್ಲಿದ್ದಾರೆ. ಈ ಬಗ್ಗೆ ನೂತನ ಪೊಲೀಸ್ ಆಯುಕ್ತ ಆರ್. ಹಿತೇಂದ್ರ ಮಾಹಿತಿ ಹಂಚಿಕೊಂಡಿದ್ದು, ಮಹಿಳೆಯರ ಸುರಕ್ಷತೆ, ಸೈಬರ್ ಅಪರಾಧ ನಿಯಂತ್ರಣ ಮತ್ತು ಮಾದಕ ವಸ್ತುಗಳ ವಿರುದ್ಧದ ಕ್ರಮಗಳ ಕುರಿತು ಮಾತನಾಡಿದ್ದಾರೆ.

ಮಹಿಳೆಯರಿಗೆ ಬೆಂಗಳೂರು ಸೇಫ್: ಲೇಟ್ ನೈಟ್ ಶೋ ಟಿಕೆಟ್ ಬುಕ್ಕಿಂಗ್‌ನಲ್ಲಿ ದೇಶಕ್ಕೇ ನಂ.1
ಮಹಿಳೆಯರಿಗೆ ಬೆಂಗಳೂರು ಸೇಫ್
ಭಾವನಾ ಹೆಗಡೆ
|

Updated on: Nov 25, 2026 | 12:53 PM

Share

ಮುಖ್ಯಾಂಶಗಳು

  • ತಡರಾತ್ರಿ ಶೋಗಳ ಟಿಕೆಟ್ ಬುಕ್ಕಿಂಗ್‌ನಲ್ಲಿ ಬೆಂಗಳೂರಿನ ಮಹಿಳೆಯರಿಗೆ ದೇಶದಲ್ಲೇ ಮೊದಲ ಸ್ಥಾನ.
  • ಮಹಿಳೆಯರ ಸುರಕ್ಷತೆ ಹೆಚ್ಚಿಸುವುದು ಪೊಲೀಸ್ ಇಲಾಖೆಯ ಪ್ರಮುಖ ಆದ್ಯತೆ ಎಂದು ಆಯುಕ್ತರು ತಿಳಿಸಿದ್ದಾರೆ.
  • 2028ರ ವೇಳೆಗೆ ಮಾದಕ ವಸ್ತು ಮುಕ್ತ ಕರ್ನಾಟಕ ನಿರ್ಮಾಣಕ್ಕೆ ಪೊಲೀಸರ ಬದ್ಧತೆ.

ಬೆಂಗಳೂರು, ನವೆಂಬರ್ 25: ಮಹಿಳೆಯರ ಸುರಕ್ಷತೆ ವಿಚಾರದಲ್ಲಿ ಆಗಾಗ್ಗೆ ಚರ್ಚೆಗೆ ಗ್ರಾಸವಾಗುವ ಬೆಂಗಳೂರಿನ ಬಗ್ಗೆ ಇದೀಗ ಪೊಲೀಸ್ ಇಲಾಖೆಯಿಂದ ಮಹತ್ವದ ಮಾಹಿತಿ ಹೊರಬಿದ್ದಿದೆ. ತಡರಾತ್ರಿಯ ಸಿನಿಮಾ ಪ್ರದರ್ಶನಗಳು, ಮನರಂಜನಾ ಕಾರ್ಯಕ್ರಮಗಳು ಹಾಗೂ ವಿವಿಧ ಶೋಗಳಿಗೆ ಟಿಕೆಟ್ ಬುಕ್ ಮಾಡುವ ಮಹಿಳೆಯರ ಸಂಖ್ಯೆ ದೇಶದಲ್ಲೇ ಬೆಂಗಳೂರಿನಲ್ಲಿ ಅತಿ ಹೆಚ್ಚಾಗಿದೆ. ಮೇಕ್ ಮೈ ಟ್ರಿಪ್ ಆ್ಯಪ್​ನ ದತ್ತಾಂಶವನ್ನು ಉಲ್ಲೇಖಿಸಿರುವ ಬೆಂಗಳೂರಿನ ನೂತನ ಮುಖ್ಯ ಪೊಲೀಸ್ ಆಯುಕ್ತ ಆರ್. ಹಿತೇಂದ್ರ, ಮಹಿಳೆಯರು ನಗರದಲ್ಲಿ ಸುರಕ್ಷಿತವಾಗಿದ್ದಾರೆ ಎಂಬುದಕ್ಕೆ ಇದು ಉತ್ತಮ ಸೂಚನೆ ಎಂದು ಹೇಳಿದ್ದಾರೆ.

ಮಹಿಳೆಯರ ಸುರಕ್ಷತೆಗೆ ಪೊಲೀಸರ ಮೊದಲ ಆದ್ಯತೆ

ನವೆಂಬರ್ 18ರಂದು ಬೆಂಗಳೂರಿನ ಮೊದಲ ಮುಖ್ಯ ಪೊಲೀಸ್ ಆಯುಕ್ತರಾಗಿ ಅಧಿಕಾರ ವಹಿಸಿಕೊಂಡಿರುವ ಆರ್. ಹಿತೇಂದ್ರ ಅವರು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ನೀಡಿದ ಸಂದರ್ಶನದಲ್ಲಿ ಈ ಮಾಹಿತಿ ಹಂಚಿಕೊಂಡಿದ್ದಾರೆ. ಮೇಕ್ ಮೈ ಟ್ರಿಪ್ ದತ್ತಾಂಶದ ಪ್ರಕಾರ, ತಡರಾತ್ರಿಯ ಸಿನಿಮಾ ಪ್ರದರ್ಶನಗಳು ಮತ್ತು ಕಾರ್ಯಕ್ರಮಗಳಿಗೆ ಮಹಿಳೆಯರು ಅತಿ ಹೆಚ್ಚು ಟಿಕೆಟ್ ಬುಕ್ ಮಾಡುತ್ತಿರುವುದು ಬೆಂಗಳೂರಿನಿಂದಲೇ. ಮಹಿಳೆಯರು ನಗರದಲ್ಲಿ ಸುರಕ್ಷಿತವಾಗಿ ಸಂಚರಿಸಲು ಮತ್ತು ಮನರಂಜನಾ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಸಾಧ್ಯವಾಗುತ್ತಿರುವುದು ಸಂತಸದ ವಿಚಾರ ಎಂದಿದ್ದಾರೆ.

ಆದರೆ, ಮಹಿಳೆಯರ ಸುರಕ್ಷತೆಯನ್ನು ಮತ್ತಷ್ಟು ಹೆಚ್ಚಿಸುವುದು ಪೊಲೀಸ್ ಇಲಾಖೆಯ ಗುರಿಯಾಗಿದೆ. ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವುದು, ಮಹಿಳೆಯರ ರಕ್ಷಣೆ, ಸೈಬರ್ ಅಪರಾಧ ನಿಯಂತ್ರಣ ಹಾಗೂ ಮಾದಕ ವಸ್ತುಗಳ ಹಾವಳಿಗೆ ಕಡಿವಾಣ ಹಾಕುವುದು ಪ್ರಮುಖ ಆದ್ಯತೆಗಳಾಗಿವೆ ಎಂದು ತಿಳಿಸಿದ್ದಾರೆ.

ಐದು ಪೊಲೀಸ್ ಕಮಿಷನರೇಟ್‌ಗಳಾಗಿ ವಿಭಜನೆ

ಬೆಂಗಳೂರು ನಗರ ಪೊಲೀಸ್ ವ್ಯವಸ್ಥೆಯನ್ನು ಐದು ಪೊಲೀಸ್ ಕಮಿಷನರೇಟ್‌ಗಳಾಗಿ ಪುನರ್‌ರಚಿಸಿರುವುದರ ಉದ್ದೇಶ ಪೊಲೀಸ್ ಸೇವೆಯನ್ನು ಜನರಿಗೆ ಮತ್ತಷ್ಟು ಹತ್ತಿರವಾಗಿಸುವುದಾಗಿದೆ ಎಂದು ಹಿತೇಂದ್ರ ವಿವರಿಸಿದ್ದಾರೆ. ಇನ್ನು ಮುಂದೆ ಸಾರ್ವಜನಿಕರು ತಮ್ಮ ವಲಯದ ಪೊಲೀಸ್ ಆಯುಕ್ತರನ್ನು ನೇರವಾಗಿ ಸಂಪರ್ಕಿಸಿ ಸಮಸ್ಯೆಗಳಿಗೆ ಪರಿಹಾರ ಪಡೆಯಬಹುದು. ಪೊಲೀಸ್ ಆಯುಕ್ತರ ಕಚೇರಿಗೆ ಬರಬೇಕಾದ ಅನಿವಾರ್ಯತೆ ಇರುವುದಿಲ್ಲ ಎಂದಿದ್ದಾರೆ.

ಇದೇ ವೇಳೆ, ಮಾದಕ ವಸ್ತುಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ವಿಶೇಷ ಸಂಸ್ಥೆಗಳ ನೆರವು ಪಡೆಯಲಾಗುವುದು. 2028ರ ವೇಳೆಗೆ ಮಾದಕ ವಸ್ತು ಮುಕ್ತ ಕರ್ನಾಟಕ ನಿರ್ಮಿಸುವ ಸರ್ಕಾರದ ಗುರಿಗೆ ಪೊಲೀಸ್ ಇಲಾಖೆ ಬದ್ಧವಾಗಿದೆ ಎಂದು ಹೇಳಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಭಾವನಾ ಹೆಗಡೆ
ಭಾವನಾ ಹೆಗಡೆ

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ. ಪತ್ರಿಕೋದ್ಯಮ ಇವರು ಇಷ್ಟಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್‌ನಲ್ಲಿ ವೃತ್ತಿ ಜೀವನ ಆರಂಭಿಸಿರುವ ಇವರು, ಸಂಸ್ಥೆಯಲ್ಲಿ ಒಂದು ವರ್ಷದ ವೃತ್ತಿ ಅನುಭವ ಹೊಂದಿದ್ದಾರೆ. ರಾಜ್ಯ ಮತ್ತು ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More
ಕಾಫಿತೋಟದಿಂದ ಇಳಿದು ಭತ್ತದ ಗದ್ದೆಗಳನ್ನ ದಾಟಿ ಹೋಗಿರುವ ಕಾಡಾನೆಗಳು
ಕಾಫಿತೋಟದಿಂದ ಇಳಿದು ಭತ್ತದ ಗದ್ದೆಗಳನ್ನ ದಾಟಿ ಹೋಗಿರುವ ಕಾಡಾನೆಗಳು
9ನೇ ದಿನಕ್ಕೆ ಕಾಲಿಟ್ಟ ಆಶಾ ಕಾರ್ಯಕರ್ತೆಯರ ಪ್ರತಿಭಟನೆ
9ನೇ ದಿನಕ್ಕೆ ಕಾಲಿಟ್ಟ ಆಶಾ ಕಾರ್ಯಕರ್ತೆಯರ ಪ್ರತಿಭಟನೆ
ಫಾಸ್ಟ್‌ಟ್ರ್ಯಾಕ್‌ ನೇಮಕಾತಿ: ಸರ್ಕಾರಿ ಹುದ್ದೆಗಳ ಭರ್ತಿಗೆ ಹೊಸ ದಾರಿ
ಫಾಸ್ಟ್‌ಟ್ರ್ಯಾಕ್‌ ನೇಮಕಾತಿ: ಸರ್ಕಾರಿ ಹುದ್ದೆಗಳ ಭರ್ತಿಗೆ ಹೊಸ ದಾರಿ
ಹಾಸನಕ್ಕೆ ಕಾಲಿಟ್ಟ ‘ರಾಪಿಡೋ’; ಆಟೋ ಚಾಲಕರ ಆಕ್ರೋಶ, ಬೈಕ್ ಸವಾರನ ಕಣ್ಣೀರು!
ಹಾಸನಕ್ಕೆ ಕಾಲಿಟ್ಟ ‘ರಾಪಿಡೋ’; ಆಟೋ ಚಾಲಕರ ಆಕ್ರೋಶ, ಬೈಕ್ ಸವಾರನ ಕಣ್ಣೀರು!
ಬೆಂಗಳೂರಿನಲ್ಲಿ ದಿಲ್ಜಿತ್ ಸಂಗೀತ ಕಾರ್ಯಕ್ರಮಕ್ಕೆ ಬಾಂಬ್ ಬೆದರಿಕೆ
ಬೆಂಗಳೂರಿನಲ್ಲಿ ದಿಲ್ಜಿತ್ ಸಂಗೀತ ಕಾರ್ಯಕ್ರಮಕ್ಕೆ ಬಾಂಬ್ ಬೆದರಿಕೆ
‘ಆಪರೇಷನ್ ಗಜ’ ಕಾರ್ಯಾಚರಣೆಗೆ ವ್ಯಾಪಕ ವಿರೋಧ: ಮೂಡಿಗೆರೆ ಬಂದ್‌
‘ಆಪರೇಷನ್ ಗಜ’ ಕಾರ್ಯಾಚರಣೆಗೆ ವ್ಯಾಪಕ ವಿರೋಧ: ಮೂಡಿಗೆರೆ ಬಂದ್‌
ಕ್ಯಾನ್ಸರ್ ಪೀಡಿತ ವಿದ್ಯಾರ್ಥಿನಿಗೆ ವಿಡಿಯೋ ಕರೆ ಮಾಡಿ ಧೈರ್ಯ ತುಂಬಿದ ಸಿಎಂ
ಕ್ಯಾನ್ಸರ್ ಪೀಡಿತ ವಿದ್ಯಾರ್ಥಿನಿಗೆ ವಿಡಿಯೋ ಕರೆ ಮಾಡಿ ಧೈರ್ಯ ತುಂಬಿದ ಸಿಎಂ
ಇಂದು ರಾಶಿಯವರಿಗೆ ಹಣಕಾಸಿನ ವ್ಯವಹಾರದಲ್ಲಿ ಸಂಕಷ್ಟ
ಇಂದು ರಾಶಿಯವರಿಗೆ ಹಣಕಾಸಿನ ವ್ಯವಹಾರದಲ್ಲಿ ಸಂಕಷ್ಟ
ಕಲಬುರ್ಗಿಯಲ್ಲಿ ನಾಳೆ ರಾಜನಾಥ್ ಸಿಂಗ್ ನೇತೃತ್ವದಲ್ಲಿ ಕೇಸರಿ ಕಹಳೆ
ಕಲಬುರ್ಗಿಯಲ್ಲಿ ನಾಳೆ ರಾಜನಾಥ್ ಸಿಂಗ್ ನೇತೃತ್ವದಲ್ಲಿ ಕೇಸರಿ ಕಹಳೆ
‘ಕಂಠೀಹಾರ ಕೊಡಲು ಆಗಲ್ಲ’: ನರೇಂದ್ರಸ್ವಾಮಿ ಹೇಳಿಕೆಗೆ ರಮ್ಯಾ ಖಂಡನೆ
‘ಕಂಠೀಹಾರ ಕೊಡಲು ಆಗಲ್ಲ’: ನರೇಂದ್ರಸ್ವಾಮಿ ಹೇಳಿಕೆಗೆ ರಮ್ಯಾ ಖಂಡನೆ