ವೈಟ್ ಟಾಪಿಂಗ್ ಕಾಮಗಾರಿ: ಬೆಂಗಳೂರಿನ ಈ ರಸ್ತೆಯಲ್ಲಿ ವಾಹನ ಸಂಚಾರ 2 ತಿಂಗಳು ಬಂದ್​​

ಬೆಂಗಳೂರಿನ ದೇವರಬೀಸನಹಳ್ಳಿ ಸಕ್ತಾ ಆಸ್ಪತ್ರೆ ಮುಖ್ಯರಸ್ತೆಯಲ್ಲಿ (ಮಿಂತ್ರಾ ಅಪಾರ್ಟ್‌ಮೆಂಟ್‌ನಿಂದ ಬೆಳ್ಳಂದೂರು ಕೋಡಿವರೆಗೆ) 60 ದಿನಗಳ ಕಾಲ ವೈಟ್ ಟಾಪಿಂಗ್ ಕಾಮಗಾರಿ ನಡೆಯಲಿದೆ. ಈ ಅವಧಿಯಲ್ಲಿ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದೆ. ಪರ್ಯಾಯ ಮಾರ್ಗಗಳನ್ನು ಬೆಂಗಳೂರು ಸಂಚಾರಿ ಪೊಲೀಸರು ತಿಳಿಸಿದ್ದಾರೆ.

ವೈಟ್ ಟಾಪಿಂಗ್ ಕಾಮಗಾರಿ: ಬೆಂಗಳೂರಿನ ಈ ರಸ್ತೆಯಲ್ಲಿ ವಾಹನ ಸಂಚಾರ 2 ತಿಂಗಳು ಬಂದ್​​
ಸಾಂದರ್ಭಿಕ ಚಿತ್ರ
Follow us
ವಿವೇಕ ಬಿರಾದಾರ
|

Updated on:Dec 03, 2024 | 12:46 PM

ಬೆಂಗಳೂರು, ನವೆಂಬರ್​​ 14: ಬೃಹತ್​ ಬೆಂಗಳೂರು ಮಹಾನಗರ ಪಾಲೀಕೆ (BBMP) ವತಿಯಿಂದ ನಗರ ಹಲವು ರಸ್ತೆಗಳಿಗೆ ವೈಟ್ ಟಾಪಿಂಗ್ (White Topping) ಹಾಕಲಾಗುತ್ತಿದೆ. ವೈಟ್​ ಟಾಪಿಂಗ್​ ಕಾಮಗಾರಿ ಕೈಗೊಳ್ಳುವ ಹಿನ್ನಲೆಯಲ್ಲಿ ಬೆಂಗಳೂರಿನ (Bengaluru) ಈ ರಸ್ತೆಯಲ್ಲಿ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದೆ. ದೇವರಬೀಸನಹಳ್ಳಿ ಸಕ್ತಾ ಆಸ್ಪತ್ರೆ ಮುಖ್ಯರಸ್ತೆಯಲ್ಲಿ (ಮಿಂತ್ರಾ ಅಪಾರ್ಟ್ ಮೆಂಟ್ ಮುಂಭಾಗದ ರಸ್ತೆಯಿಂದ ಬೆಳ್ಳಂದೂರು ಕೋಡಿವರೆಗೆ) ವಾಹನ ಸಂಚಾರ 60 ದಿನಗಳ ಕಾಲ ನಿರ್ಬಂಧಿಸಲಾಗಿದೆ. ಬೆಂಗಳೂರು ಸಂಚಾರಿ ಪೊಲೀಸ್​​ ಸಾಮಾಜಿಕ ಮಾಧ್ಯಮ ಎಕ್ಸ್​ ಮುಖಾಂತರ ಮಾಹಿತಿ ನೀಡಿದೆ.

ವಾಹನ ಸಂಚಾರ ನಿರ್ಬಂಧಿಸಿರುವ ರಸ್ತೆ:

ದೇವರಬೀಸನಹಳ್ಳಿ ಸಕ್ತಾ ಆಸ್ಪತ್ರೆ ಮುಖ್ಯರಸ್ತೆ (ಮಿಂತ್ರಾ ಅಪಾರ್ಟ್‌ಮೆಂಟ್ ಮುಂಭಾಗದ ರಸ್ತೆಯಿಂದ ಬೆಳ್ಳಂದೂರು ಕೋಡಿವರೆಗೆ) ವಾಹನ ಸಂಚಾರ ನಿರ್ಬಂಧಿಸಲಾಗಿದೆ.

ಪರ್ಯಾಯ ಮಾರ್ಗ:

ಯಮಲೂರು ಕಡೆಯಿಂದ ದೇವರಬೀಸನಹಳ್ಳಿ ಮತ್ತು ಬೆಳ್ಳಂದೂರು ಕಡೆಗೆ ಸಂಚರಿಸುವವರು ಹಳೆ ವಿಮಾನ ನಿಲ್ದಾಣ ರಸ್ತೆ – ಯಮಲೂರು ಜಂಕ್ಷನ್ – ಮಾರತ್ತಹಳ್ಳಿ ಬ್ರಿಡ್ಜ್ – ಕಾಡುಬೀಸನಹಳ್ಳಿ ಬ್ರಿಡ್ಜ್ – ಹೊರವರ್ತುಲ ರಸ್ತೆ ಮಾರ್ಗವಾಗಿ ದೇವರಬೀಸನಹಳ್ಳಿ ಮತ್ತು ಬೆಳ್ಳಂದೂರು ಕಡೆಗೆ ಸಂಚರಿಸಬಹುದಾಗಿದೆ.

ಯಮಲೂರು ಕಡೆಯಿಂದ ಕಾಡುಬೀಸನಹಳ್ಳಿ ಮತ್ತು ದೇವರಬೀಸನಹಳ್ಳಿ ಕಡೆಗೆ ಸಂಚರಿಸುವವರು ಹಳೆ ವಿಮಾನ ನಿಲ್ದಾಣ ರಸ್ತೆ ಮಾರ್ಗವಾಗಿ ಯಮಲೂರು ಜಂಕ್ಷನ್ – ಯಮಲೂರು ವಿಲೇಜ್ ಮಾರ್ಗವಾಗಿ ಯಮಲೂರು ಕೋಡಿಯಲ್ಲಿ ಎಡ ತಿರುವು ಪಡೆದು ಕರಿಯಮ್ಮನ ಅಗ್ರಹಾರ ಮೂಲಕ ಕಾಡುಬೀಸನಹಳ್ಳಿ ಮತ್ತು ದೇವರಬೀಸನಹಳ್ಳಿ ಕಡೆಗೆ ಸಂಚರಿಸಬಹುದಾಗಿದೆ.

ಇದನ್ನೂ ಓದಿ: ಪ್ರಯಾಣಿಕರಿಗೆ ಸಿಹಿ ಸುದ್ದಿ: ನಮ್ಮ ಮೆಟ್ರೋ ನಿಲ್ದಾಣಗಳಲ್ಲಿ ಡಿಜಿಟಲ್ ಲಾಕರ್ ಸೌಲಭ್ಯ

ಯಮಲೂರು ಕಡೆಯಿಂದ ಹೊರವರ್ತುಲ ರಸ್ತೆ ಕಡೆಗೆ ಸಂಚರಿಸುವವರು ಹಳೆ ವಿಮಾನ ನಿಲ್ದಾಣ ರಸ್ತೆ – ಯಮಲೂರು ಜಂಕ್ಷನ್ – ಯಮಲೂರು ವಿಲೇಜ್ ಮೂಲಕ ಯಮಲೂರು ಕೋಡಿ – ಬೆಳ್ಳಂದೂರು ಕೋಡಿ ಬಲ ತಿರುವು ಪಡೆದು ಬೆಳ್ಳಂದೂರು ವಿಲೇಜ್ ಮಾರ್ಗವಾಗಿ ಹೊರವರ್ತುಲ ರಸ್ತೆ ಕಡೆಗೆ ಸಂಚರಿಸಬಹುದಾಗಿದೆ.

ಟ್ವಿಟರ್​ ಪೋಸ್ಟ್​

ದೇವರಬೀಸನಹಳ್ಳಿ ಮತ್ತು ಬೆಳ್ಳಂದೂರು ಕಡೆಯಿಂದ ನಗರದ ಕಡೆಗೆ ಸಂಚರಿಸುವವರು ಹೊರವರ್ತುಲ ರಸ್ತೆ ಕಾಡುಬೀಸನಹಳ್ಳಿ ಬ್ರಿಡ್ಜ್ ಮಾರತ್ತಹಳ್ಳಿ ಬ್ರಿಡ್ಜ್ ಮೇಲೆ ಎಡ ತಿರುವು ಪಡೆದು ಯಮಲೂರು ಜಂಕ್ಷನ್ ಹಳೆ ವಿಮಾನ ನಿಲ್ದಾಣ ರಸ್ತೆ ಮೂಲಕ ನಗರದ ಕಡೆಗೆ ಸಂಚರಿಸಬಹುದಾಗಿದೆ.

ಕಾಡುಬೀಸನಹಳ್ಳಿ ಮತ್ತು ದೇವರಬೀಸನಹಳ್ಳಿ ಕಡೆಯಿಂದ ನಗರದ ಕಡೆಗೆ ಸಂಚರಿಸುವವರು ಕರಿಯಮ್ಮನ ಅಗ್ರಹಾರ – ಯಮಲೂರು ಕೋಡಿಯಲ್ಲಿ ಬಲ ತಿರುವು ಪಡೆದು ಯಮಲೂರು ವಿಲೇಜ್ ಮಾರ್ಗವಾಗಿ ಯಮಲೂರು ಜಂಕ್ಷನ್ ಹಳೆ ವಿಮಾನ ನಿಲ್ದಾಣ ರಸ್ತೆ ಮಾರ್ಗವಾಗಿ ನಗರದ ಕಡೆಗೆ ಸಂಚರಿಸಬಹುದಾಗಿದೆ.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:57 am, Thu, 14 November 24

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ