ಬೆಂಗಳೂರು, ಆಗಸ್ಟ್ 24: ಬೆಂಗಳೂರು ನಗರದಲ್ಲಿ ಆಗಸ್ಟ್ 25 ಮತ್ತು 26 ರಂದು ಶ್ರೀಕೃಷ್ಣ ಜನ್ಮಾಷ್ಟಮಿ ಉತ್ಸವದ ಪ್ರಯುಕ್ತ ಸಂಚಾರ ನಿರ್ಬಂಧ, ಪರ್ಯಾಯ ರಸ್ತೆಗಳ ವಿವರ, ವಾಹನ ನಿಲುಗಡೆ ಮತ್ತು ನಿಲುಗಡೆ ನಿಷೇಧ ಸಂಬಂಧ ಸಂಚಾರ ಪೊಲೀಸರು ಮಾರ್ಗಸೂಚಿ ಬಿಡುಗಡೆ ಮಾಡಿದ್ದಾರೆ. ಶ್ರೀಕೃಷ್ಣ ಜನ್ಮಾಷ್ಟಮಿ ಸಂದರ್ಭದಲ್ಲಿ ಪ್ರಸಿದ್ಧ ಇಸ್ಕಾನ್ ದೇವಾಲಯಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಭೇಟಿ ನೀಡುವ ನಿರೀಕ್ಷೆಯಿದೆ. ಹೀಗಾಗಿ ಮಾರ್ಗಗಳಲ್ಲಿ ಭಾರಿ ಸಂಚಾರ ದಟ್ಟಣೆ ಸಾಧ್ಯತೆ ಇದೆ. ಆದ್ದರಿಂದ, ಸಂಚಾರ ಪೊಲೀಸರು ಮಾರ್ಗಸೂಚಿ ಬಿಡುಗಡೆ ಮಾಡಿದ್ದಾರೆ.
ಬೆಂಗಳೂರು ನಗರ ಮಲ್ಲೇಶ್ವರಂ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ವೆಸ್ಟ್‌ಆಫ್ ಕಾರ್ಡ್ ರಸ್ತೆಯಲ್ಲಿರುವ ಇಸ್ಕಾನ್ ದೇಗುಲದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಹಬ್ಬದ ಪ್ರಯುಕ್ತ ಆಗಸ್ಟ್ 25 ಹಾಗೂ 26 ರಂದು ಲಕ್ಷಾಂತರ ಭಕ್ತಾದಿಗಳು ಸೇರಿದಂತೆ ಗಣ್ಯ ವ್ಯಕ್ತಿಗಳು ದೇವರ ದರ್ಶನಕ್ಕೆ ಬರುವ ನಿರೀಕ್ಷೆ ಇದೆ. ಹೀಗಾಗಿ ದೇವಾಲಯದ ಸುತ್ತಮುತ್ತಲಿನ ರಸ್ತೆಗಳಲ್ಲಿ ಹೆಚ್ಚಿನ ದಟ್ಟಣೆ ಉಂಟಾಗುವ ಸಾಧ್ಯತೆ ಇದ್ದು, ಸಾರ್ವಜನಿಕರ ಸುಗಮ ಸಂಚಾರದ ಹಿತದೃಷ್ಟಿಯಿಂದ ಸಂಚಾರ ಮಾರ್ಪಾಡು ಮಾಡಲಾಗಿದೆ ಎಂದು ಬೆಂಗಳೂರು ಟ್ರಾಫಿಕ್ ಪೊಲೀಸ್ ಪ್ರಕಟಣೆ ಉಲ್ಲೇಖಿಸಿದೆ.
ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಸಂದೇಶ ಪ್ರಕಟಿಸುವ ಮೂಲಕವೂ ಸಂಚಾರ ಪೊಲೀಸರು ಸಂಚಾರ್ ನಿರ್ಬಂಧ, ಪರ್ಯಾಯ ಮಾರ್ಗಗಳ ಬಗ್ಗೆ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: ಮೊನ್ನೆ ಅಷ್ಟೇ ಮೋದಿ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದ್ದ 3ನೇ ಹಂತದ ನಮ್ಮ ಮೆಟ್ರೋಗೆ ಆರಂಭಿಕ ವಿಘ್ನ..!
“ಸಂಚಾರ ಸಲಹೆ/Traffic advisory” pic.twitter.com/FLE9inXjxK
— ಬೆಂಗಳೂರು ಸಂಚಾರ ಪೊಲೀಸ್ BengaluruTrafficPolice (@blrcitytraffic) August 23, 2024
ಬೆಂಗಳೂರಿನಲ್ಲಿ ಹೆಚ್ಚುತ್ತಿದೆ ಸಂಚಾರ ದಟ್ಟಣೆ
2023 ರ ಏಪ್ರಿಲ್ನಿಂದ 2024 ರ ಮಾರ್ಚ್ ರವರೆಗೆ ಬೆಂಗಳೂರಿನಲ್ಲಿ ಹೊಸ ಖಾಸಗಿ ಕಾರುಗಳು ಮತ್ತು ದ್ವಿಚಕ್ರ ವಾಹನಗಳ ನೋಂದಣಿಯಲ್ಲಿ ಗಮನಾರ್ಹ ಏರಿಕೆ ದಾಖಲಾಗಿದೆ. ಒಟ್ಟು 6.37 ಲಕ್ಷ ವಾಹನಗಳು ನೋಂದಣಿಯಾಗಿವೆ. ಇದು ಹಿಂದಿನ ವರ್ಷದ 4.37 ಲಕ್ಷ ನೋಂದಣಿಗಿಂತ ಗಮನಾರ್ಹ ಹೆಚ್ಚಳವಾಗಿದೆ. ಪರಿಣಾಮವಾಗಿ ಸಂಚಾರ ದಟ್ಟಣೆಯೂ ಹೆಚ್ಚಾಗುತ್ತಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ