AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ನಾಳೆ RCB ಮ್ಯಾಚ್​: ವಾಹನ ಪಾರ್ಕಿಂಗ್ ವಿವರ, ಸಂಚಾರ ಸಲಹೆ ಇಲ್ಲಿದೆ

Bengaluru Traffic Advisory: ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಕೋಲ್ಕತ್ತಾ ನೈಟ್​ ರೈಡರ್ಸ್​ ನಡುವಿನ ಐಪಿಎಲ್ ಪಂದ್ಯಕ್ಕಾಗಿ ಬೆಂಗಳೂರಿನಲ್ಲಿ ಟ್ರಾಫಿಕ್ ನಿರ್ವಹಣೆಗಾಗಿ ವಿಶೇಷ ವ್ಯವಸ್ಥೆ ಮಾಡಲಾಗಿದೆ. ಚಿನ್ನಸ್ವಾಮಿ ಕ್ರೀಡಾಂಗಣದ ಸುತ್ತಮುತ್ತ ಹಲವು ಪ್ರದೇಶಗಳಲ್ಲಿ ವಾಹನ ನಿಲುಗಡೆ ನಿಷೇಧಿಸಲಾಗಿದೆ. ಪಂದ್ಯಕ್ಕೆ ಬರುವವರಿಗೆ ಪರ್ಯಾಯ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ವಾಹನ ನಿಲುಗಡೆ ನಿಷೇಧ ಪ್ರದೇಶಗಳ ಹಾಗೂ ಪಾರ್ಕಿಂಗ್ ಏರಿಯಾಗಳ ಸಂಪೂರ್ಣ ವಿವರ ಈ ಕೆಳಗಿನಂತಿದೆ.

ಬೆಂಗಳೂರಿನಲ್ಲಿ ನಾಳೆ RCB ಮ್ಯಾಚ್​: ವಾಹನ ಪಾರ್ಕಿಂಗ್ ವಿವರ, ಸಂಚಾರ ಸಲಹೆ ಇಲ್ಲಿದೆ
ಪ್ರಾತಿನಿಧಿಕ ಚಿತ್ರ
ರಮೇಶ್ ಬಿ. ಜವಳಗೇರಾ
|

Updated on: May 16, 2025 | 3:54 PM

Share

ಬೆಂಗಳೂರು, (ಮೇ 16): ಭಾರತ ಮತ್ತು ಪಾಕಿಸ್ತಾನದ (India And Pakistan) ನಡುವಿನ ಸಂಘರ್ಷದಿಂದಾಗಿ ಅರ್ಧಕ್ಕೆ ಸ್ಥಗಿತಗೊಂಡಿದ್ದ 2025ರ ಐಪಿಎಲ್ ಟೂರ್ನಮೆಂಟ್ (indian premier league 2025) ಮರು ಆರಂಭಕ್ಕೆ ಬಿಸಿಸಿಐ ದಿನಾಂಕ ಘೋಷಣೆ ಮಾಡಿದೆ. ಇಂಡಿಯನ್ ಪ್ರೀಮಿಯರ್ ಲೀಗ್ (IPL) ಕ್ರಿಕೆಟ್ ಟೂರ್ನಿಯ ದ್ವಿತೀಯಾರ್ಧದ ಮೊದಲ ಪಂದ್ಯ ನಾಳೆ ಅಂದ್ರೆ ಮೇ 17 ಬೆಂಗಳೂರಿನಲ್ಲಿ (Bengaluru) ನಡೆಯಲಿದೆ. ರಾಯಲ್ ಚಾಲೆಂಜರ್ಸ್​ ಬೆಂಗಳೂರು (Royal challengers bengaluru) ಹಾಗೂ ಕೋಲ್ಕತ್ತಾ ನೈಟ್​ ರೈಡರ್ಸ್ (kolkata knight riders)​ ನಡುವೆ ನಾಳೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿದ್ದು, ಇದಕ್ಕಾಗಿ ಬೆಂಗಳೂರು ಟ್ರಾಫಿಕ್​ ಪೊಲೀಸರು (Bengaluru Traffic Advisory), ವಾಹನ ಸಂಚಾರ ಹಾಗೂ ಪಾರ್ಕಿಂಗ್ ಸಲಹೆ ನೀಡಿದ್ದಾರೆ. ಹಾಗೇ ಸಾರ್ವಜನಿಕರ ಅನೂಕೂಲಕ್ಕಾಗಿ ನಮ್ಮ ಮೆಟ್ರೋ (Namma Metro) ಸಂಚಾರ ಸಮಯಾವಧಿ ವಿಸ್ತರಣೆ ಮಾಡಿದೆ.

ಚಿನ್ನಸ್ವಾಮಿ ಸ್ಟೇಡಿಯಂ ಸುತ್ತಮುತ್ತ ನೋ ಪಾರ್ಕಿಂಗ್

ಸ್ಟೇಡಿಯಂ ಸುತ್ತಮುತ್ತ ಸಂಚಾರ ದಟ್ಟಣೆ ತಡೆಗಟ್ಟಲು ಹಲವು ಕ್ರಮಗಳನ್ನು ಕೈಗೊಳ್ಳಲಾಗಿದೆ. ಶನಿವಾರ(ಮೇ 17) ಮಧ್ಯಾಹ್ನ 3 ಗಂಟೆಯಿಂದ ರಾತ್ರಿ 11 ಗಂಟೆ ವರೆಗೂ ಸ್ಟೇಡಿಯಂ ಸುತ್ತಮುತ್ತ ವಾಹನ ಪಾರ್ಕಿಂಗ್ ನಿಷೇಧಿಸಲಾಗಿದೆ. ಪಂದ್ಯ ವೀಕ್ಷಿಸಲು ಬರುವರಿಗೆ ಪ್ರತ್ಯೇಕ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ಕ್ರೀಡಾಂಗಣ ಸುತ್ತಮುತ್ತ ವಾಹನಗಳ ನಿಲುಗಡೆಗೆ ಸ್ಥಳ ಕೊರತೆ ಇರುವುದರಿಂದ ಬಿಎಂಟಿಸಿ,‌ ಮೆಟ್ರೋ ಬಳಸಲು ಸಾರ್ವಜನಿಕರಿಗೆ ಮನವಿ ಮಾಡಲಾಗಿದೆ. ಓಲಾ, ಉಬರ್, ಆಟೋ ಇತ್ಯಾದಿ ಕ್ಯಾಬ್‌ಗಳು ಪಿಕ್ ಆಪ್ ಮತ್ತು ಡ್ರಾಪ್ ಮಾಡಲು ಸ್ಥಳ ನಿಗದಿಪಡಿಸಲಾಗಿದೆ.

ಇದನ್ನೂ ಓದಿ
Image
ಐಪಿಎಲ್ ಆರಂಭಕ್ಕೆ ಇನ್ನೊಂದೇ ದಿನ ಬಾಕಿ; ಹೊಸ ವೇಳಾಪಟ್ಟಿ ನೋಡಿ
Image
ಚಿನ್ನಸ್ವಾಮಿ ಮೈದಾನದಲ್ಲಿ ಸ್ವಿಮ್ಮಿಂಗ್ ಮಾಡಿದ ಟಿಮ್ ಡೇವಿಡ್: VIDEO
Image
IPL 2025: ಜೋಶ್ ಹೇಝಲ್​ವುಡ್ ರಿಟರ್ನ್​... ಆದರೆ
Image
ದ್ವಿತೀಯಾರ್ಧ ಮುಗಿಸಲು ನಿಯಮ ಬದಲಿಸಿದ ಬಿಸಿಸಿಐ

ಇದನ್ನೂ ಓದಿ: IPL 2025: ಬೆಂಗಳೂರಿನಲ್ಲಿ ನಾಳೆ ಶೇ. 84 ರಷ್ಟು ಮಳೆ..! ಆರ್​ಸಿಬಿ- ಕೆಕೆಆರ್ ಪಂದ್ಯ ನಡೆಯುವುದು ಡೌಟ್

ಎಲ್ಲೆಲ್ಲಿ ವಾಹನಗಳ ನಿಲುಗಡೆ ನಿಷೇಧ?

  • ಕ್ವೀನ್ಸ್ ರಸ್ತೆಯಲ್ಲಿ ಬಾಳೇಕುಂದ್ರಿ ವೃತ್ತದಿಂದ ಕ್ವೀನ್ಸ್ ವೃತ್ತದ ವರೆಗೆ ರಸ್ತೆಯ ಎರಡೂ ಕಡೆ ಪಾರ್ಕಿಂಗ್ ನಿಷೇಧಿಸಲಾಗಿದೆ.
  • ಎಂ.ಜಿ ರಸ್ತೆಯಲ್ಲಿ ಅನಿಲ್ ಕುಂಬ್ಳೆ ವೃತ್ತದಿಂದ ಕ್ವೀನ್ಸ್ ವೃತ್ತದ ವರೆಗೆ ರಸ್ತೆಯ ಎರಡೂ ಕಡೆ ವಾಹನ ನಿಲುಗಡೆ ನಿಷೇಧಿಸಲಾಗಿದೆ.
  • ಲಿಂಕ್ ರಸ್ತೆಯಲ್ಲಿ ಎಂ.ಜಿ ರಸ್ತೆಯಿಂದ ಕಬ್ಬನ್ ರಸ್ತೆ ವರೆಗೆ ನೋ ಪಾರ್ಕಿಂಗ್ ಇರಲಿದೆ.
  • ರಾಜಭವನ ರಸ್ತೆಯ ಟಿ.ಚೌಡಯ್ಯ ರಸ್ತೆ ಮತ್ತು ರೇಸ್ ಕೋರ್ಸ್ ರಸ್ತೆಗಳಲ್ಲಿ ಪಾರ್ಕಿಂಗ್​ಗೆ ಅನುಮತಿ ಇಲ್ಲ.
  • ಸೆಂಟ್ರಲ್ ಸ್ಟ್ರಿಟ್ ರಸ್ತೆಯ ಎರಡೂ ಕಡೆ ನೋ ಪಾರ್ಕಿಂಗ್.
  • ಕಬ್ಬನ್ ರಸ್ತೆಯಲ್ಲಿ ಸಿ.ಟಿ.ಓ. ವೃತ್ತದಿಂದ ಡಿಕೆನ್ಸ್ನ್ ರಸ್ತೆ ಜಂಕ್ಷನ್ ವರೆಗೆ ರಸ್ತೆಯ ಎರಡೂ ಕಡೆ ವಾಹನ ನಿಲುಗಡೆಗೆ ಅವಕಾಶ ಇಲ್ಲ.
  • ಸೆಂಟ್ ಮಾರ್ಕ್ಸ್ ರಸ್ತೆಯಲ್ಲಿ, ಕ್ಯಾಶ್ ಫಾರ್ಮಸಿ ಜಂಕ್ಷನ್​ನಿಂದ ಅನಿಲ್ ಕುಂಬ್ಳೆ ವೃತ್ತದ ವರೆಗೆ ಪಾರ್ಕಿಂಗ್​ ಮಾಡುವಂತಿಲ್ಲ.
  • ಮ್ಯೂಸಿಯಂ ರಸ್ತೆಯಲ್ಲಿ, ಎಂ.ಜಿ ರಸ್ತೆಯಿಂದ ಸೆಂಟ್ ಮಾರ್ಕ್ಸ್ ರಸ್ತೆ ವರೆಗೆ ಹಾಗೂ ಆಶಿರ್ವಾದಂ ವೃತ್ತದ ವರೆಗೆ ಪಾರ್ಕಿಂಗ್​ಗೆ ಅನುಮತಿಸಲಾಗುವುದಿಲ್ಲ.
  • ಕಸ್ತೂರಬಾ ರಸ್ತೆಯಲ್ಲಿ, ಕ್ವೀನ್ಸ್ ವೃತ್ತದಿಂದ ಹಡ್ಸನ್ ವೃತ್ತದ ವರೆಗೆ ಹಾಗೂ ಮಲ್ಯ ಆಸ್ಪತ್ರೆ ರಸ್ತೆಯಲ್ಲಿ ಸಿದ್ದಲಿಂಗಯ್ಯ ವೃತ್ತದಿಂದ ಆರ್.ಆರ್.ಎಂ.ಆರ್ ವೃತ್ತದವರೆಗೆ ನೋ ಪಾರ್ಕಿಂಗ್.
  • ಕಬ್ಬನ್‌ಪಾರ್ಕ್ ಒಳಭಾಗದ ಕಿಂಗ್ ರಸ್ತೆ, ಪ್ರೆಸ್ ಕ್ಲಬ್ ಮುಂಭಾಗ, ಬಾಲಭವನ ಮುಂಭಾಗ ವಾಹನ ನಿಲುಗಡೆ ನಿಷೇಧಿಸಲಾಗಿದೆ.
  • ಲ್ಯಾವೆಲ್ಲೆ ರಸ್ತೆಯಲ್ಲಿ, ಕ್ವೀನ್ಸ್ ವೃತ್ತದಿಂದ ವಿಠಲ್ ಮಲ್ಯ ರಸ್ತೆ ಜಂಕ್ಷನ್‌ವರೆಗೆ ಹಾಗೂ ವಿಠಲ್ ಮಲ್ಯ ರಸ್ತೆಯ ಸಿದ್ದಲಿಂಗಯ್ಯ ವೃತ್ತದಿಂದ ಸೆಂಟ್ ಮಾರ್ಕ್ಸ್ ರಸ್ತೆಯ ಬಿಷಪ್‌ಕಾಟನ್ ಬಾಲಕೀಯರ ಶಾಲೆಯವರೆಗೆ ವಾಹನ ನಿಲುಗಡೆ ನಿಷೇಧಿಸಲಾಗಿದೆ.

    ಎಲ್ಲೆಲ್ಲಿ ಪಾರ್ಕಿಂಗ್​ಗೆ ಅವಕಾಶ?

  • ಪಂದ್ಯ ವೀಕ್ಷಣೆ ಮಾಡಲು ಬರುವವರಿಗೆ ಸೆಂಟ್ ಜೋಸೆಫ್ ಹೈಸ್ಕೂಲ್ ಗ್ರೌಂಡ್ ಹಾಗೂ ಯು.ಬಿ.ಸಿಟಿ ನಿಲುಗಡೆ ಸ್ಥಳದಲ್ಲಿ ವಾಹನಗಳ ನಿಲುಗಡೆಗೆ ವ್ಯವಸ್ಥೆ ಮಾಡಲಾಗಿದೆ.
  • ಶಿವಾಜಿನಗರ ಬಸ್ ನಿಲ್ದಾಣದ 1ನೇ ಮಹಡಿಯಲ್ಲಿ ಪಾರ್ಕಿಂಗ್ ಇದೆ.
  • ಕೆ.ಎಸ್.ಸಿ.ಎ. ಸದಸ್ಯರ ವಾಹನಗಳನ್ನು ಸೆಂಟ್ ಜೋಸೆಫ್ ಬಾಲಕರ ಶಾಲೆ ಮೈದಾನದಲ್ಲಿ ನಿಲ್ಲಿಸಲು ಸೂಚಿಸಲಾಗಿದೆ.

ಮೆಟ್ರೋ ಸಮಯಾವಧಿ ವಿಸ್ತರಣೆ

ಇನ್ನು ಆರ್​ಸಿಬಿ-ಕೋಲ್ಕತ್ತಾ ಪಂದ್ಯದ ವೇಳೆ ಸಾರ್ವಜನಿಕರ ಅನೂಕೂಲಕ್ಕಾಗಿ ನಮ್ಮ ಮೆಟ್ರೋ (Namma Metro) ಪಂದ್ಯಗಳ ದಿನ ಸಮಯಾವಧಿ ವಿಸ್ತರಣೆ ಮಾಡಿದೆ. ಮೇ 17 ಮತ್ತು ಮೇ 23ರಂದು ಬೆಂಗಳೂರಿನಲ್ಲಿ ಐಪಿಎಲ್ ಪಂದ್ಯ ನಡೆಯಲಿದೆ. ಈ ದಿನಗಳಲ್ಲಿ ನಮ್ಮ ಮೆಟ್ರೋ ಎಲ್ಲಾ ಟರ್ಮಿನಲ್ ಅಂದರೆ ವೈಟ್ ಫೀಲ್ಡ್ (ಕಾಡುಗೋಡಿ), ಚಲ್ಲಘಟ್ಟ, ರೇಷ್ಮೆ ಸಂಸ್ಥೆ ಮತ್ತು ಮಾದವರ ಮಟ್ರೋ ನಿಲ್ದಾಣಗಳಿಂದ ಕೊನೆಯ ರೈಲು ಸೇವೆಯನ್ನು ಮಧ್ಯರಾತ್ರಿ 1ರ ವರೆಗೆ ವಿಸ್ತರಿಸಿದೆ. ನಾಡಪ್ರಭು ಕೆಂಪೇಗೌಡ ನಿಲ್ದಾಣ ಮಜೆಸ್ಟಿಕ್‌ನಿಂದ ಎಲ್ಲಾ ನಾಲ್ಕು ದಿಕ್ಕುಗಳ ಕಡೆಗೆ ಕೊನೆಯ ರೈಲು ಮಧ್ಯರಾತ್ರಿ 1:35ಕ್ಕೆ ಹೊರಡಲಿದೆ. ಪ್ರಯಾಣಿಕರು ಈ ಸೌಲಭ್ಯವನ್ನು ಬಳಸಿಕೊಳ್ಳಬೇಕು ಎಂದು ನಮ್ಮ ಮೆಟ್ರೋ ಕೋರಿದೆ.

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!