AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೀಪಾವಳಿ ಹಬ್ಬಕ್ಕೆ ಊರಿಗೆ ಹೊರಟ ಜನ: ಬೆಂಗಳೂರಿನ ಹಲವು ರಸ್ತೆಗಳಲ್ಲಿ ಟ್ರಾಫಿಕ್ ಜಾಮ್

Bengaluru Traffic Advisory: ದೀಪಾವಳಿ ಹಬ್ಬ ​ಹಿನ್ನೆಲೆಯಲ್ಲಿ ಜನರು ಊರುಗಳತ್ತ ಮುಖ ಮಾಡಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ವಾಹನಗಳು ಒಮ್ಮೆಲೆ ರಸ್ತೆಗೆ ಇಳಿದಿರುವುದರಿಂದ ಬೆಂಗಳೂರಿನಿಂದ ವಿವಿಧ ಜಿಲ್ಲೆಗಳಿಗೆ ಮತ್ತು ಹೊರ ರಾಜ್ಯಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳಲ್ಲಿ ಸಂಚಾರ ದಟ್ಟಣೆ ಉಂಟಾಗಿದೆ. ಯಾವ ಯಾವ ರಸ್ತೆಗಳಲ್ಲಿ ಸಂಚಾರ ದಟ್ಟಣೆ ಉಂಟಾಗಿದೆ? ಇಲ್ಲಿದೆ ಮಾಹಿತಿ.

ದೀಪಾವಳಿ ಹಬ್ಬಕ್ಕೆ ಊರಿಗೆ ಹೊರಟ ಜನ: ಬೆಂಗಳೂರಿನ ಹಲವು ರಸ್ತೆಗಳಲ್ಲಿ ಟ್ರಾಫಿಕ್ ಜಾಮ್
ಬೆಂಗಳೂರು ಟ್ರಾಫಿಕ್​
ವಿವೇಕ ಬಿರಾದಾರ
|

Updated on:Oct 30, 2024 | 8:40 PM

Share

ಬೆಂಗಳೂರು, ಅಕ್ಟೋಬರ್​ 30: ದೀಪಾವಳಿ (Deepavali) ಹಬ್ಬ ​​ಹಿನ್ನೆಲೆಯಲ್ಲಿ ಜನರು ತಮ್ಮ ತಮ್ಮ ಊರುಗಳಿಗೆ ತೆರಳುತ್ತಿದ್ದಾರೆ. ಇದರಿಂದ, ಬೆಂಗಳೂರು (Bengaluru) ನಗರದಿಂದ ರಾಜ್ಯದ ವಿವಿಧ ಜಿಲ್ಲೆಗಳಿಗೆ ಮತ್ತು ಹೊರ ರಾಜ್ಯಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳಲ್ಲಿ (Roads) ಸಂಚಾರ ದಟ್ಟಣೆ (Traffic Jam) ಉಂಟಾಗಿದೆ. ಸಂಚಾರ ದಟ್ಟಣೆಯಲ್ಲಿ ಸಿಲುಕಿ ವಾಹನ ಸವಾರರು ಗಂಟೆಗಟ್ಟಲೇ ರಸ್ತೆಗಳಲ್ಲೇ ನಿಂತಿದ್ದಾರೆ.

ಬೆಂಗಳೂರು ನಗರದಿಂದ ಹೊರ ಹೋಗುವ ತುಮಕೂರು, ಮೈಸೂರು, ಹೊಸೂರು ಮತ್ತು ಬಳ್ಳಾರಿ ರಸ್ತೆಗಳಲ್ಲಿ ಸಂಚಾರ ದಟ್ಟಣೆ ಉಂಟಾಗಿದೆ. ನಿಧಾನಗತಿಯ ಸಂಚಾರವಿದೆ. ಪೀಣ್ಯ ಮೇಲ್ಸೇತುವೆಯಲ್ಲಿ ಸಂಚಾರ ದಟ್ಟಣೆ ಉಂಟಾಗಿದ್ದು, ಗೊರಗುಂಟೆಪಾಳ್ಯ ಕಡೆಗೆ ನಿಧಾನಗತಿಯ ಸಂಚಾರವಿದ್ದು ವಾಹನ ಸವಾರರು ಸಹಕರಿಸಬೇಕೆಂದು ಬೆಂಗಳೂರು ಸಂಚಾರಿ ಪೊಲೀಸರು ಮನವಿ ಮಾಡಿದ್ದಾರೆ.

ಟ್ವಿಟರ್​ ಪೋಸ್ಟ್​​

ಮೆಜೆಸ್ಟಿಕ್ ಬಸ್ ನಿಲ್ದಾಣದಿಂದ ತಮ್ಮ ಊರುಗಳಿಗೆ ತೆರಳುತ್ತಿದ್ದು ಕೆಎಸ್​ಆರ್​ಟಿಸಿ ವತಿಯಿಂದ ಹೆಚ್ಚುವರಿ ಬಸ್ ಹೋಗುವ ಹಿನ್ನೆಲೆಯಲ್ಲಿ ಮೆಜೆಸ್ಟಿಕ್ ಸುತ್ತಮುತ್ತ ಸಂಚಾರ ದಟ್ಟಣೆಯಾಗಿದೆ. ಹೀಗಾಗಿ ಸಾರ್ವಜನಿಕರು ಬದಲಿ ರಸ್ತೆ ಮೂಲಕ ತೆರಳಲುವಂತೆ ಬೆಂಗಳೂರು ಸಂಚಾರಿ ಪೊಲೀಸರು ಸಾಮಾಜಿಕ ಮಾಧ್ಯಮ ಎಕ್ಸ್​ ಮುಖಾಂತರ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: ಬೆಂಗಳೂರು ನಗರದ ಹಲವೆಡೆ ಮತ್ತೆ ಧಾರಾಕಾರ ಮಳೆ, ಟ್ರಾಫಿಕ್​ ಜಾಮ್

ಸಂಚಾರ ದಟ್ಟಣೆ ಹೆಚ್ಚಳವಾದ ಹಿನ್ನೆಲೆಯಲ್ಲಿ ಪ್ರಯಾಣಿಕರು ಬಸ್​ ಅಥವಾ ರೈಲುಗಳ ಮುಖಾಂತರ ಸಂಚರಿಸುವಂತೆ ಸಂಚಾರಿ ಪೊಲೀಸರು ಮನವಿ ಮಾಡಿದ್ದಾರೆ. ಜೊತೆಗೆ ವಾಹನ ಸವಾರರು ಟ್ರಾಫಿಕ್ ನಿಯಮಗಳನ್ನು ಪಾಲಿಸಿ ಮತ್ತು ತಾಳ್ಮೆಯಿಂದಿರುವುದು ಸುರಕ್ಷಿತ ಪ್ರಯಾಣ ಮಾಡಿ ಎಂದು ಕೋರಿದ್ದಾರೆ.

ಟ್ವಿಟರ್​ ಪೋಸ್ಟ್​​

ದೀಪಾವಳಿ ಹಬ್ಬಕ್ಕೆ ಹೆಚ್ಚುವರಿ KSRTC ಬಸ್ ವ್ಯವಸ್ಥೆ

ದೀಪಾವಳಿ ಹಬ್ಬ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಹಾಗೂ ಇತರೆ ರಾಜ್ಯಗಳಿಗೆ ಸಂಪರ್ಕ ಕಲ್ಪಿಸಲು ಕೆಎಸ್​ಆರ್​ಟಿಸಿ ಹೆಚ್ಚುವರಿಯಾಗಿ ಎರಡು ಸಾವಿರ ಬಸ್​ಗಳನ್ನು ರಸ್ತೆಗೆ ಇಳಿಸಿದೆ. ಬೆಂಗಳೂರಿನ ಮೆಜೆಸ್ಟಿಕ್ ಬಸ್ ನಿಲ್ದಾಣ, ಸ್ಯಾಟಲೈಟ್, ಪೀಣ್ಯಾ, ಶಾಂತಿನಗರ ಬಸ್ ನಿಲ್ದಾಣದಿಂದ ಬಸ್​ಗಳು ಹೊರಡುತ್ತಿವೆ.

ಕರ್ನಾಟಕ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 8:20 pm, Wed, 30 October 24