AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Traffic Advisory: ಬೆಂಗಳೂರಿನಲ್ಲಿ ಆರ್​ಸಿಬಿ ಪಂದ್ಯ; ಪಾರ್ಕಿಂಗ್ ವಿವರ, ಸಂಚಾರ ಸಲಹೆ ಇಲ್ಲಿದೆ

ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟನ್ಸ್ ನಡುವಿನ ಐಪಿಎಲ್ ಪಂದ್ಯಕ್ಕಾಗಿ ಬೆಂಗಳೂರಿನಲ್ಲಿ ಟ್ರಾಫಿಕ್ ನಿರ್ವಹಣೆಗಾಗಿ ವಿಶೇಷ ವ್ಯವಸ್ಥೆ ಮಾಡಲಾಗಿದೆ. ಚಿನ್ನಸ್ವಾಮಿ ಕ್ರೀಡಾಂಗಣದ ಸುತ್ತಮುತ್ತ ಹಲವು ಪ್ರದೇಶಗಳಲ್ಲಿ ವಾಹನ ನಿಲುಗಡೆ ನಿಷೇಧಿಸಲಾಗಿದೆ. ಪಂದ್ಯಕ್ಕೆ ಬರುವವರಿಗೆ ಪರ್ಯಾಯ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ವಾಹನ ನಿಲುಗಡೆ ನಿಷೇಧ ಪ್ರದೇಶಗಳ ಹಾಗೂ ಪಾರ್ಕಿಂಗ್ ಏರಿಯಾಗಳ ಸಂಪೂರ್ಣ ವಿವರ ಇಲ್ಲಿ ನೀಡಲಾಗಿದೆ.

Bengaluru Traffic Advisory: ಬೆಂಗಳೂರಿನಲ್ಲಿ ಆರ್​ಸಿಬಿ ಪಂದ್ಯ; ಪಾರ್ಕಿಂಗ್ ವಿವರ, ಸಂಚಾರ ಸಲಹೆ ಇಲ್ಲಿದೆ
ಸಾಂದರ್ಭಿಕ ಚಿತ್ರ
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on:Apr 01, 2025 | 11:43 AM

Share

ಬೆಂಗಳೂರು, ಏಪ್ರಿಲ್ 1: ಇಂಡಿಯನ್ ಪ್ರೀಮಿಯರ್ ಲೀಗ್ (IPL) ಕ್ರಿಕೆಟ್ ಟೂರ್ನಿಯಲ್ಲಿ ಸತತ ಎರಡು ಪಂದ್ಯಗಳನ್ನು ಗೆದ್ದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಬುಧವಾರ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ (Chinnaswamy Stadium) ಗುಜರಾತ್ ಟೈಟನ್ಸ್ ವಿರುದ್ಧ ಸೆಣಸಲಿದೆ. ಇದರೊಂದಿಗೆ, ಬೆಂಗಳೂರಿನಲ್ಲಿ ಪ್ರಸಕ್ತ ಋತುವಿನ ಮೊದಲ ಐಪಿಎಲ್ ಪಂದ್ಯ ನಡೆದಂತಾಗಲಿದೆ. ಇದಕ್ಕಾಗಿ ಬೆಂಗಳೂರು ಟ್ರಾಫಿಕ್ ಪೊಲೀಸರೂ ಸಿದ್ಧತೆ ಮಾಡಿಕೊಂಡಿದ್ದಾರೆ. ವಾಹನ ನಿಲುಗಡೆ, ವಾಹನ ನಿಲುಗಡೆ ನಿಷೇಧ ವಿವರವನ್ನು ಹಂಚಿಕೊಂಡಿದ್ದಾರೆ.

ಚಿನ್ನಸ್ವಾಮಿ ಸ್ಟೇಡಿಯಂ ಸುತ್ತಮುತ್ತ ನೋ ಪಾರ್ಕಿಂಗ್

ಸ್ಟೇಡಿಯಂ ಸುತ್ತಮುತ್ತ ಸಂಚಾರ ದಟ್ಟಣೆ ತಡೆಗಟ್ಟಲು ಹಲವು ಕ್ರಮಗಳನ್ನು ಕೈಗೊಳ್ಳಲಾಗಿದೆ. ಬುಧವಾರ ಮಧ್ಯಾಹ್ನ 3 ಗಂಟೆಯಿಂದ ರಾತ್ರಿ 11 ಗಂಟೆ ವರೆಗೂ ಸ್ಟೇಡಿಯಂ ಸುತ್ತಮುತ್ತ ನೋ ಪಾರ್ಕಿಂಗ್ ಇರಲಿದೆ. ಪಂದ್ಯ ವೀಕ್ಷಿಸಲು ಬರುವರಿಗೆ ಪ್ರತ್ಯೇಕ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ಕ್ರೀಡಾಂಗಣ ಸುತ್ತಮುತ್ತ ವಾಹನಗಳ ನಿಲುಗಡೆಗೆ ಸ್ಥಳ ಕೊರತೆ ಇರುವುದರಿಂದ ಬಿಎಂಟಿಸಿ,‌ ಮೆಟ್ರೋ ಬಳಸಲು ಸಾರ್ವಜನಿಕರಿಗೆ ಮನವಿ ಮಾಡಲಾಗಿದೆ. ಓಲಾ, ಉಬರ್, ಆಟೋ ಇತ್ಯಾದಿ ಕ್ಯಾಬ್‌ಗಳು ಪಿಕ್ ಆಪ್ ಮತ್ತು ಡ್ರಾಪ್ ಮಾಡಲು ಸ್ಥಳ ನಿಗದಿಪಡಿಸಲಾಗಿದೆ.

ಎಲ್ಲೆಲ್ಲಿ ವಾಹನಗಳ ನಿಲುಗಡೆ ನಿಷೇಧ?

  • ಕ್ವೀನ್ಸ್ ರಸ್ತೆಯಲ್ಲಿ ಬಾಳೇಕುಂದ್ರಿ ವೃತ್ತದಿಂದ ಕ್ವೀನ್ಸ್ ವೃತ್ತದ ವರೆಗೆ ರಸ್ತೆಯ ಎರಡೂ ಕಡೆ ಪಾರ್ಕಿಂಗ್ ನಿಷೇಧಿಸಲಾಗಿದೆ.
  • ಎಂ.ಜಿ ರಸ್ತೆಯಲ್ಲಿ ಅನಿಲ್ ಕುಂಬ್ಳೆ ವೃತ್ತದಿಂದ ಕ್ವೀನ್ಸ್ ವೃತ್ತದ ವರೆಗೆ ರಸ್ತೆಯ ಎರಡೂ ಕಡೆ ವಾಹನ ನಿಲುಗಡೆ ನಿಷೇಧಿಸಲಾಗಿದೆ.
  • ಲಿಂಕ್ ರಸ್ತೆಯಲ್ಲಿ ಎಂ.ಜಿ ರಸ್ತೆಯಿಂದ ಕಬ್ಬನ್ ರಸ್ತೆ ವರೆಗೆ ನೋ ಪಾರ್ಕಿಂಗ್ ಇರಲಿದೆ.
  • ರಾಜಭವನ ರಸ್ತೆಯ ಟಿ.ಚೌಡಯ್ಯ ರಸ್ತೆ ಮತ್ತು ರೇಸ್ ಕೋರ್ಸ್ ರಸ್ತೆಗಳಲ್ಲಿ ಪಾರ್ಕಿಂಗ್​ಗೆ ಅನುಮತಿ ಇಲ್ಲ.
  • ಸೆಂಟ್ರಲ್ ಸ್ಟ್ರಿಟ್ ರಸ್ತೆಯ ಎರಡೂ ಕಡೆ ನೋ ಪಾರ್ಕಿಂಗ್.
  • ಕಬ್ಬನ್ ರಸ್ತೆಯಲ್ಲಿ ಸಿ.ಟಿ.ಓ. ವೃತ್ತದಿಂದ ಡಿಕೆನ್ಸ್ನ್ ರಸ್ತೆ ಜಂಕ್ಷನ್ ವರೆಗೆ ರಸ್ತೆಯ ಎರಡೂ ಕಡೆ ವಾಹನ ನಿಲುಗಡೆಗೆ ಅವಕಾಶ ಇಲ್ಲ.
  • ಸೆಂಟ್ ಮಾರ್ಕ್ಸ್ ರಸ್ತೆಯಲ್ಲಿ, ಕ್ಯಾಶ್ ಫಾರ್ಮಸಿ ಜಂಕ್ಷನ್​ನಿಂದ ಅನಿಲ್ ಕುಂಬ್ಳೆ ವೃತ್ತದ ವರೆಗೆ ಪಾರ್ಕಿಂಗ್​ ಮಾಡುವಂತಿಲ್ಲ.
  • ಮ್ಯೂಸಿಯಂ ರಸ್ತೆಯಲ್ಲಿ, ಎಂ.ಜಿ ರಸ್ತೆಯಿಂದ ಸೆಂಟ್ ಮಾರ್ಕ್ಸ್ ರಸ್ತೆ ವರೆಗೆ ಹಾಗೂ ಆಶಿರ್ವಾದಂ ವೃತ್ತದ ವರೆಗೆ ಪಾರ್ಕಿಂಗ್​ಗೆ ಅನುಮತಿಸಲಾಗುವುದಿಲ್ಲ.
  • ಕಸ್ತೂರಬಾ ರಸ್ತೆಯಲ್ಲಿ, ಕ್ವೀನ್ಸ್ ವೃತ್ತದಿಂದ ಹಡ್ಸನ್ ವೃತ್ತದ ವರೆಗೆ ಹಾಗೂ ಮಲ್ಯ ಆಸ್ಪತ್ರೆ ರಸ್ತೆಯಲ್ಲಿ ಸಿದ್ದಲಿಂಗಯ್ಯ ವೃತ್ತದಿಂದ ಆರ್.ಆರ್.ಎಂ.ಆರ್ ವೃತ್ತದವರೆಗೆ ನೋ ಪಾರ್ಕಿಂಗ್.
  • ಕಬ್ಬನ್‌ಪಾರ್ಕ್ ಒಳಭಾಗದ ಕಿಂಗ್ ರಸ್ತೆ, ಪ್ರೆಸ್ ಕ್ಲಬ್ ಮುಂಭಾಗ, ಬಾಲಭವನ ಮುಂಭಾಗ ವಾಹನ ನಿಲುಗಡೆ ನಿಷೇಧಿಸಲಾಗಿದೆ.
  • ಲ್ಯಾವೆಲ್ಲೆ ರಸ್ತೆಯಲ್ಲಿ, ಕ್ವೀನ್ಸ್ ವೃತ್ತದಿಂದ ವಿಠಲ್ ಮಲ್ಯ ರಸ್ತೆ ಜಂಕ್ಷನ್‌ವರೆಗೆ ಹಾಗೂ ವಿಠಲ್ ಮಲ್ಯ ರಸ್ತೆಯ ಸಿದ್ದಲಿಂಗಯ್ಯ ವೃತ್ತದಿಂದ ಸೆಂಟ್ ಮಾರ್ಕ್ಸ್ ರಸ್ತೆಯ ಬಿಷಪ್‌ಕಾಟನ್ ಬಾಲಕೀಯರ ಶಾಲೆಯವರೆಗೆ ವಾಹನ ನಿಲುಗಡೆ ನಿಷೇಧಿಸಲಾಗಿದೆ.

ಎಲ್ಲೆಲ್ಲಿ ಪಾರ್ಕಿಂಗ್​ಗೆ ಅವಕಾಶ?

  • ಪಂದ್ಯ ವೀಕ್ಷಣೆ ಮಾಡಲು ಬರುವವರಿಗೆ ಸೆಂಟ್ ಜೋಸೆಫ್ ಹೈಸ್ಕೂಲ್ ಗ್ರೌಂಡ್ ಹಾಗೂ ಯು.ಬಿ.ಸಿಟಿ ನಿಲುಗಡೆ ಸ್ಥಳದಲ್ಲಿ ವಾಹನಗಳ ನಿಲುಗಡೆಗೆ ವ್ಯವಸ್ಥೆ ಮಾಡಲಾಗಿದೆ.
  • ಶಿವಾಜಿನಗರ ಬಸ್ ನಿಲ್ದಾಣದ 1ನೇ ಮಹಡಿಯಲ್ಲಿ ಪಾರ್ಕಿಂಗ್ ಇದೆ.
  • ಕೆ.ಎಸ್.ಸಿ.ಎ. ಸದಸ್ಯರ ವಾಹನಗಳನ್ನು ಸೆಂಟ್ ಜೋಸೆಫ್ ಬಾಲಕರ ಶಾಲೆ ಮೈದಾನದಲ್ಲಿ ನಿಲ್ಲಿಸಲು ಸೂಚಿಸಲಾಗಿದೆ.

ಇದನ್ನೂ ಓದಿ: ಸತತ ಎರಡು ಪಂದ್ಯ ಗೆದ್ದ ಆರ್​ಸಿಬಿಯ ಮುಂದಿನ ಟಾರ್ಗೆಟ್ ಯಾರು?, ಮ್ಯಾಚ್ ಯಾವಾಗ?

ಇದನ್ನೂ ಓದಿ
Image
ಸತತ ಎರಡು ಪಂದ್ಯ ಗೆದ್ದ RCBಯ ಮುಂದಿನ ಟಾರ್ಗೆಟ್ ಯಾರು?, ಮ್ಯಾಚ್ ಯಾವಾಗ?
Image
ಒಂದು ಕಿಸ್​ಗೆ 50 ಸಾವಿರ! ಲಕ್ಷ ರೂ. ಸುಲಿಗೆ: ಟೀಚರ್ ಹಾಗೂ ಗ್ಯಾಂಗ್ ಬಂಧನ
Image
ಬೆಂಗಳೂರು ಜನರೇ ಎಚ್ಚರ: ಕರುಳು ಬೇನೆ, ಫುಡ್‌ ಪಾಯ್ಸನ್ ಪ್ರಕರಣಗಳು ಹೆಚ್ಚಳ
Image
ಬೆಂಗಳೂರಿನಲ್ಲಿ ಆಟೋ ಬುಕ್ ಮಾಡುವ ಟಿಪ್ಸ್ ನೀಡಬೇಕು

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:43 am, Tue, 1 April 25