AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿಗರೇ ಗಮನಿಸಿ: ಸಿಎಂ ಪದಗ್ರಹಣದ ಹಿನ್ನೆಲೆ ನಾಳೆ ನಗರದ ಈ ರಸ್ತೆಗಳ ಸಂಚಾರದಲ್ಲಿ ಮಾರ್ಪಾಡು

ನಾಳೆ (ಜೂನ್​​ 03) ಲೋಕಭವನದ ಗಾಜಿನ ಮನೆಯಲ್ಲಿ ಕರ್ನಾಟಕದ ನೂತನ ಮುಖ್ಯಮಂತ್ರಿಗಳ ಪ್ರಮಾಣವಚನ ಕಾರ್ಯಕ್ರಮ ನಡೆಯಲಿರುವ ಹಿನ್ನೆಲೆ ಸುಗಮ ಸಂಚಾರದ ದೃಷ್ಟಿಯಿಂದ ಕೆಲ ರಸ್ತೆಗಳ ಸಂಚಾರವನ್ನು ಬದಲಾವಣೆ ಮಾಡಿ ಬೆಂಗಳೂರು ನಗರ ಟ್ರಾಫಿಕ್​​ ಪೊಲೀಸರು ಆದೇಶ ಹೊರಡಿಸಿದ್ದಾರೆ. ಯಾವೆಲ್ಲ ಮಾರ್ಗಗಗಳಲ್ಲಿ ಸಂಚಾರ ನಿಷೇಧ? ಬದಲಿ ಮಾರ್ಗಗಳು ಯಾವವು? ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

ಬೆಂಗಳೂರಿಗರೇ ಗಮನಿಸಿ: ಸಿಎಂ ಪದಗ್ರಹಣದ ಹಿನ್ನೆಲೆ ನಾಳೆ ನಗರದ ಈ ರಸ್ತೆಗಳ ಸಂಚಾರದಲ್ಲಿ ಮಾರ್ಪಾಡು
ರಾಜ ಭವನImage Credit source: Deccan Herald
ಪ್ರಸನ್ನ ಹೆಗಡೆ
|

Updated on:Jun 02, 2026 | 2:24 PM

Share

ಬೆಂಗಳೂರು, ಜೂನ್​​ 02: ಕರ್ನಾಟಕದ ನೂತನ ಸಿಎಂ ಆಗಿ ಡಿ.ಕೆ.ಶಿವಕುಮಾರ್ (DK Shivakumar)​​ ನಾಳೆ (ಜೂನ್​​ 03) ಲೋಕಭವನದ ಗಾಜಿನ ಮನೆಯಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.  ಈ ಕಾರ್ಯಕ್ರಮದಲ್ಲಿ ದೇಶ ಹಾಗೂ ರಾಜ್ಯದ ಅತಿಗಣ್ಯವ್ಯಕ್ತಿಗಳು ಹಾಗೂ ಗಣ್ಯವ್ಯಕ್ತಿಗಳು ಭಾಗವಹಿಸಲಿದ್ದಾರೆ. ಲೋಕಭವನದಲ್ಲಿ ಪ್ರಮಾಣ ವಚನ ಕಾರ್ಯಕ್ರಮ ಹಾಗೂ ರೇಸ್‌ಕೋರ್ಸ್ ರಸ್ತೆಯ ಸಾರ್ವಜನಿಕ ಕಾರ್ಯಕ್ರಮದ ನಿಮಿತ್ತ ಹೆಚ್ಚಿನ ಸಂಚಾರ ದಟ್ಟಣೆಯಾಗುವ ಸಾಧ್ಯತೆ ಇದ್ದು, ಸಾರ್ವಜನಿಕರ ಸುಗಮ ಸಂಚಾರದ ಹಿತದೃಷ್ಟಿಯಿಂದ ಜೂನ್​​ 3ರ ಮಧ್ಯಾಹ್ನ 12 ಗಂಟೆಯಿಂದ ರಾತ್ರಿ 8ರ ವರೆಗೆ ಕೆಲ ರಸ್ತೆಗಳಲ್ಲಿ ಸಂಚಾರ ಮಾರ್ಪಾಡುಗಳನ್ನು ಮಾಡಲಾಗಿದೆ ಎಂದು ಬೆಂಗಳೂರಿನ ಚಂಚಾರ ಪೊಲೀಸರು ತಿಳಿಸಿದ್ದಾರೆ.

ಯಾವೆಲ್ಲ ರಸ್ತೆಗಳಲ್ಲಿ ಸಂಚಾರ ನಿರ್ಬಂಧ?

  • ಕಬ್ಬನ್ ರಸ್ತೆಯ ಬಿ.ಆರ್.ವಿ ಜಂಕ್ಷನ್‌ನಿಂದ ಸಿ.ಟಿ.ಓ. ಜಂಕ್ಷನ್ ವರೆಗೆ ಹಾಗೂ ಸಿ.ಟಿ.ಓ. ವೃತ್ತದಿಂದ ಲೋಕಭವನದವರೆಗೆ
  • ಬಾಳೇಕುಂದ್ರಿ ಜಂಕ್ಷನ್‌ನಿಂದ ಅಂಬೇಡ್ಕರ್ ರಸ್ತೆ ಕಡೆಗೆ
  • ಡಾ. ಅಂಬೇಡ್ಕರ್ ರಸ್ತೆಯಲ್ಲಿ ಕೆ.ಆರ್. ಸರ್ಕಲ್ ಕಡೆಯಿಂದ ಕಾಫಿಬೋರ್ಡ್ ಜಂಕ್ಷನ್‌ವರೆಗೆ
  • ರೇಸ್‌ಕೋರ್ಸ್ ರಸ್ತೆಯ ಟ್ರಿಲೈಟ್ ಜಂಕ್ಷನ್‌ನಿಂದ ಸುಬ್ಬಣ್ಣ ಜಂಕ್ಷನ್ ವರೆಗೆ, ಜೆ.ಡಿ.ಎಸ್ ಕ್ರಾಸ್‌ನಿಂದ ಸುಬ್ಬಣ್ಣ ಜಂಕ್ಷನ್ ವರೆಗೆ
  • ಕ್ಲೀನ್ಸ್ ಜಂಕ್ಷನ್ ಕಡೆಯಿಂದ ಸಿ.ಟಿ.ಓ ಕಡೆಗೆ
  • ಕ್ಲೀನ್ಸ್ ಜಂಕ್ಷನ್‌ನಲ್ಲಿ ಸೆಂಟ್ ಮಾರ್ಕ್ಸ್ ರಸ್ತೆಯಿಂದ ಸಿ.ಟಿ.ಓ. ಜಂಕ್ಷನ್ ಕಡೆಗೆ

ಈ ಮೇಲಿನ ಮಾರ್ಗಗಳಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸಿರುವ ವಾಹನಗಳನ್ನು ಹೊರತುಪಡಿಸಿ ಎಲ್ಲಾ ಮಾದರಿಯ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ.

ಇದನ್ನೂ ಓದಿ: ಸಿಎಂ ಆಗಿ ನಾಳೆ ಡಿಕೆಶಿ ಪ್ರಮಾಣ; ಪದಗ್ರಹಣಕ್ಕೆ ಅಂತಿಮ ಹಂತದ ತಯಾರಿ, ಅತಿಥಿಗಳಿಗೆ 3 ರೀತಿಯ ಪಾಸ್​​ ವಿತರಣೆ

ಪರ್ಯಾಯ ಮಾರ್ಗಗಳು

  • ಕಬ್ಬನ್ ರಸ್ತೆಯ ಬಿ.ಆರ್.ವಿ ಜಂಕ್ಷನ್‌ನಿಂದ ಸಿ.ಟಿ.ಓ. ಜಂಕ್ಷನ್ ವರೆಗೆ ಹಾಗೂ ಸಿ.ಟಿ.ಓ. ವೃತ್ತದಿಂದ ಲೋಕಭವನದವರೆಗೆ ಸಂಚರಿಸುವ ವಾಹನಗಳು ಬಿ.ಆರ್.ವಿ. ಜಂಕ್ಷನ್ ಬಳಿ ಶಿವಾಜಿನಗರ ಕಡೆಗೆ ಬಲತಿರುವು ಹಾಗೂ ಅನಿಲ್‌ ಕುಂಬ್ಳೆ ಜಂಕ್ಷನ್ ಕಡೆಗೆ ಎಡತಿರುವು ಪಡೆದು ಸಂಚರಿಸಬಹುದಾಗಿದೆ.
  • ಕ್ಲೀನ್ಸ್ ರಸ್ತೆ ಹಾಗೂ ಶಿವಾಜಿನಗರ ಕಡೆಯಿಂದ ಬರುವ ವಾಹನಗಳು ಬಾಳೇಕುಂದ್ರಿ ಜಂಕ್ಷನ್ ಬಳಿ ಕನ್ನಿಂಗ್‌ಹ್ಯಾಮ್ ರಸ್ತೆಯ ಮುಖಾಂತರ ಸಂಚರಿಸಬಹುದಾಗಿದೆ.
  • ಕೆ.ಆರ್. ಸರ್ಕಲ್‌ ಕಡೆಯಿಂದ ಕಾಫಿಬೋರ್ಡ್ ಜಂಕ್ಷನ್ ಕಡೆಗೆ ಸಂಚರಿಸುವ ವಾಹನಗಳು ನೃಪತುಂಗ ರಸ್ತೆಯ ಮುಖಾಂತರ ಸಂಚರಿಸಬಹುದಾಗಿದೆ.
  • ರೇಸ್‌ಕೋರ್ಸ್ ರಸ್ತೆಯ ಟ್ರಿಲೈಟ್ ಜಂಕ್ಷನ್‌ನಿಂದ ಸುಬ್ಬಣ್ಣ ಜಂಕ್ಷನ್ ವರೆಗೆ ಸಂಚರಿಸುವ ವಾಹನಗಳು ಟ್ರಿಲೈಟ್ ಜಂಕ್ಷನ್ ಕಡೆಯಿಂದ ಶಿವಾನಂದ ಜಂಕ್ಷನ್ ಮೂಲಕ ಎಸ್.ಸಿ. ರಸ್ತೆ ಜಂಕ್ಷನ್ ತಲುಪಿ ಎಡತಿರುವು ಪಡೆದು ಸಂಚರಿಸಬಹುದಾಗಿದೆ.
  • ಕ್ಲೀನ್ಸ್ ಜಂಕ್ಷನ್ ಕಡೆಯಿಂದ ಲೋಕ ಭವನದ ಕಡೆಗೆ ಸಂಚರಿಸುವ ವಾಹನಗಳು ಅನಿಲ್‌ ಕುಂಬ್ಳೆ ಹಾಗೂ ಬಿ.ಆರ್.ವಿ. ಜಂಕ್ಷನ್ ಮುಖಾಂತರ ಸಂಚರಿಸಬಹುದಾಗಿದೆ.
  • ಹಲಸೂರು ಮತ್ತು ಹಳೆ ಏರ್‌ಪೋರ್ಟ್ ಕಡೆಯಿಂದ ಕೆಂಪೇಗೌಡ ಏರ್‌ಪೋರ್ಟ್‌ ಮತ್ತು ಬಸವೇಶ್ವರ ಜಂಕ್ಷನ್ ಕಡೆಗೆ ಸಂಚರಿಸುವ ವಾಹನಗಳ ಸವಾರರು ಬಿ.ಆರ್.ವಿ ಜಂಕ್ಷನ್ ಬಳಿ ಬಲ ತಿರುವು ಪಡೆದು ಶಿವಾಜಿನಗರ ಬಸ್‌ನಿಲ್ದಾಣ ಮೂಲಕ ಬಾಳೆಕುಂದ್ರಿ ಜಂಕ್ಷನ್, ಕನ್ನಿಂಗ್ ಹ್ಯಾಂ ರಸ್ತೆ, ವಸಂತನಗರದಿಂದ ಹೆಬ್ಬಾಳ ಕಡೆಗೆ ಸಂಚರಿಸುವುದು.
  • ಹಲಸೂರು ಮತ್ತು ಹಳೇ ಮದ್ರಾಸ್ ರಸ್ತೆ ಕಡೆಯಿಂದ ಹೆಬ್ಬಾಳ ಕಡೆಗೆ ಸಂಚರಿಸುವ ವಾಹನಗಳ ಸವಾರರು ಹಲಸೂರು ಲೇಕ್ ಮೂಲಕ ಟಿನ್ ಫ್ಯಾಕ್ಟರಿ ಜಂಕ್ಷನ್ ಬಳಿಯಿಂದ ರಿಂಗ್ ರಸ್ತೆಯ ಮೂಲಕ ಹೆಬ್ಬಾಳ ಕಡೆಗೆ ಸಂಚರಿಸುವುದು.
  • ಆಶೀರ್ವಾದಂ ವೃತ್ತ ಹಾಗೂ ಎಂ.ಜಿ. ರಸ್ತೆ ಕಡೆಯಿಂದ ಬರುವಂತಹ ವಾಹನಗಳು ಬಿ.ಆರ್.ವಿ ಜಂಕ್ಷನ್ ಶಿವಾಜಿನಗರ ಬಸ್‌ನಿಲ್ದಾಣ ಮೂಲಕ ಬಾಳೆಕುಂದ್ರಿ ಜಂಕ್ಷನ್, ಕನ್ನಿಂಗ್ ಹ್ಯಾಂ ರಸ್ತೆ, ವಸಂತನಗರದಿಂದ ಹೆಬ್ಬಾಳ ಕಡೆಗೆ ಸಂಚರಿಸುವುದು.

ಎಲ್ಲೆಲ್ಲಿ ವಾಹನಗಳ ನಿಲುಗಡೆ ನಿಷೇಧ?

  • ಡಾ: ಬಿ.ಆರ್.ಅಂಬೇಡ್ಕರ್ ರಸ್ತೆ, ಬಾಳೇಕುಂದ್ರಿ ವೃತ್ತದಿಂದ ಕೆ.ಆರ್.ವೃತ್ತದ ವರೆಗೆ ರಸ್ತೆಯ ಎರಡೂ ಬದಿಗಳಲ್ಲಿ.
  • ಲೋಕಭವನ ರಸ್ತೆ ಬಿ.ಆರ್.ವಿ. ವೃತ್ತದಿಂದ – ಲೋಕಭವನ ಜಂಕ್ಷನ್ ವರೆಗೆ
  • ಎಲ್.ಹೆಚ್.ರಸ್ತೆ, ಲೋಕಭವನ ಜಂಕ್ಷನ್ ನಿಂದ – ಚಾಲುಕ್ಯ ವೃತ್ತದ ವರೆಗೆ
  • ಕ್ಲೀನ್ಸ್ ರಸ್ತೆ, ಬಾಳೇಕುಂದ್ರಿ ಜಂಕ್ಷನ್‌ನಿಂದ – ಕೀನ್ಸ್ ವೃತ್ತದ ವರೆಗೆ
  • ಪ್ಯಾಲೇಸ್ ರಸ್ತೆ, ಮೈಸೂರು ಬ್ಯಾಂಕ್ ವೃತ್ತದಿಂದ – ವಸಂತನಗರ ಕೆಳಸೇತುವೆ ವರೆಗೆ
  • ದೇವರಾಜ ಅರಸ್ ರಸ್ತೆ, ಚಾಲುಕ್ಯ ವೃತ್ತದಿಂದ – ಎಂ.ಎಸ್.ಬಿಲ್ಡಿಂಗ್ ವರೆಗೆ (ಒಳಭಾಗದ ರಸ್ತೆ ಸೇರಿ)
  • ರೇಸ್ ಕೋರ್ಸ್ ರಸ್ತೆ, ಟ್ರಿಲೈಟ್ ಜಂಕ್ಷನ್ ನಿಂದ ಚಾಲುಕ್ಯ ವೃತ್ತದ ವರೆಗೆ
  • ಪಾರ್ಕ್‌ಹೌಸ್‌ ರಸ್ತೆ, ಎ.ಜಿ.ಎಸ್. ಜಂಕ್ಷನ್ ನಿಂದ ಸಿ.ಐ.ಡಿ. ವೃತ್ತದ ವರೆಗೆ
  • ಕಬ್ಬನ್ ಉದ್ಯಾನವನದ ಒಳಭಾಗದ ರಸ್ತೆಗಳು
  • ಮಿಲ್ಲರ್ ರಸ್ತೆ, ಎಲ್.ಆರ್.ಡಿ.ಇ. ಜಂಕ್ಷನ್ ನಿಂದ ಬಸವೇಶ್ವರ ವೃತ್ತದ ವರೆಗೆ
  • ಇನ್‌ಫೆಂಟ್ರಿ ರಸ್ತೆ, ಅಲಿ ಆಸ್ಕರ್ ರಸ್ತೆ ಜಂಕ್ಷನ್ ನಿಂದ ಟ್ರಾಫಿಕ್ ಹೆಡ್ ಕ್ವಾರ್ಟರ್ ಜಂಕ್ಷನ್ ವರೆಗೆ
  • ಅಲಿ ಆಸ್ಕರ್ ರಸ್ತೆ, ರಾಜಭವನ ಜಂಕ್ಷನ್ ನಿಂದ ಅಲಿ ಆಸ್ಕರ್ ಕ್ರಾಸ್ ವರೆಗೆ
  • ಕೆ.ಜಿ.ರಸ್ತೆ, ಪೊಲೀಸ್ ಕಾರ್ನರ್ ನಿಂದ ಮೈಸೂರು ಬ್ಯಾಂಕ್ ವೃತ್ತದ ವರೆಗೆ
  • ಹಳೇ ಅಂಚೆ ಕಚೇರಿ ರಸ್ತೆ, ಮೈಸೂರು ಬ್ಯಾಂಕ್ ವೃತ್ತದಿಂದ ಕೆ.ಆರ್.ವೃತ್ತದ ವರೆಗೆ- ನೃಪತುಂಗ ರಸ್ತೆ, ಕೆ.ಆರ್.ವೃತ್ತದಿಂದ ಪೊಲೀಸ್ ಕಾರ್ನರ್ ವರೆಗೆ
  • ಕಸ್ತೂರಿಬಾ ರಸ್ತೆ, ಹಯ್ಸನ್ ವೃತ್ತದಿಂದ ಕ್ಲೀನ್ಸ್ ವೃತ್ತದ ವರೆಗೆ
  • ಮಲ್ಯ ಆಸ್ಪತ್ರೆ ರಸ್ತೆ, ಸಿದ್ದಲಿಂಗಯ್ಯ ವೃತ್ತದಿಂದ ಆರ್.ಆರ್.ಎಂ.ಆರ್. ಜಂಕ್ಷನ್ ವರೆಗೆ
  • ಆರ್.ಆರ್.ಎಂ.ಆರ್. ರಸ್ತೆ, ಆರ್.ಆರ್.ಎಂ.ಆರ್. ಜಂಕ್ಷನ್ ನಿಂದ ಹಡನ್ ವೃತ್ತದ ವರೆಗೆ
  • ಕಬ್ಬನ್ ರಸ್ತೆ, ಸಿ.ಟಿ.ಓ. ವೃತ್ತದಿಂದ ಮಣಿಪಾಲ್ ಸೆಂಟರ್ ವರೆಗೆ
  • ಟಿ.ಚೌಡಯ್ಯ ರಸ್ತೆ, ಹಳೇ ಗೌಂಡ್ ಜಂಕ್ಷನ್ ನಿಂದ ಕಾವೇರಿ ಜಂಕ್ಷನ್ ವರೆಗೆ- ರಮಣ ಮಹರ್ಷಿ ರಸ್ತೆ, ಕಾವೇರಿ ಜಂಕ್ಷನ್ ನಿಂದ ಮೇಖಿ ವೃತ್ತದ ವರೆಗೆ

ವಾಹನಗಳ ನಿಲುಗಡೆ

ಕಾರ್ಯಕ್ರಮಕ್ಕೆ ಬರುವ ಪಾಸ್ ಹೊಂದಿರುವ ವಾಹನಗಳು: ವಿಧಾನಸೌಧದ ಸಿಮೆಂಟ್ ಪಾರ್ಕಿಂಗ್ ಸ್ಥಳ ಹಾಗೂ ವಿಕಾಸಸೌಧದ ಸುತ್ತಮುತ್ತ, ರಾಜಭವನ ಹಿಂಭಾಗದ ಎಲ್.ಹೆಚ್. ವಾಹನ ನಿಲುಗಡೆ ಸ್ಥಳ, ನೆಹರೂ ತಾರಾಲಯದ ಆವರಣ

ಕಾರ್ಯಕ್ರಮಕ್ಕೆ ಬರುವ ಪಾಸ್ ಹೊಂದಿಲ್ಲದ ವಾಹನಗಳು: ಕೊಂಡಜ್ಜಿ ಭವನ ಅವರಣ, ಶಿವಾಜಿನಗರ ಬಸ್‌ನಿಲ್ದಾಣದ ಮೇಲ್ಬಾಗದ ಮಲೆವೆಲ್ ಪಾರ್ಕಿಂಗ್ ಸ್ಥಳ, ಕಂಠೀರವ ಕ್ರೀಡಾಂಗಣ, ಯು.ಬಿ. ಸಿಟಿ ಪಾರ್ಕಿಂಗ್ ಸ್ಥಳ ಕಾರ್ಪೊರೇಷನ್​ ಕಚೇರಿ ಸ್ಥಳ, ಸರ್ಕಾರಿ ಕಲಾ ಕಾಲೇಜು ಆವರಣ, ಪ್ಯಾಲೇಸ್ ಮೈದಾನದ ಗೇಟ್ ನಂ. 2, 3 ಮತ್ತು 4 ರಲ್ಲಿ

ಭಾರಿ ವಾಹನಗಳ ಸಂಚಾರ ನಿಷೇಧ

ಜೂನ್​​ 3ರ ಮಧ್ಯಾಹ್ನ 12 ಗಂಟೆಯಿಂದ ರಾತ್ರಿ 10ರವರೆಗೆ ಬೆಂಗಳೂರು ನಗರ ವ್ಯಾಪ್ತಿ ಪ್ರದೇಶದಲ್ಲಿ ಭಾರೀ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 2:21 pm, Tue, 2 June 26

Follow Us
ಒಮೈದಿಯಾ ಏರ್​ಪೋರ್ಟ್​ ಮೇಲೆ ಅಮೆರಿಕ ಬಾಂಬ್ ದಾಳಿ
ಒಮೈದಿಯಾ ಏರ್​ಪೋರ್ಟ್​ ಮೇಲೆ ಅಮೆರಿಕ ಬಾಂಬ್ ದಾಳಿ
Dudhsagar Falls: ಹಾಲಿನ ಕಡಲಿನಂತೆ ಹರಿಯುತ್ತಿದೆ ದೂದ್‌ ಸಾಗರ್​!
Dudhsagar Falls: ಹಾಲಿನ ಕಡಲಿನಂತೆ ಹರಿಯುತ್ತಿದೆ ದೂದ್‌ ಸಾಗರ್​!
ಸ್ಕೂಟಿಯಲ್ಲಿ ಗಾಂಜಾ ಮಾರಲು ಬಂದು ಪೊಲೀಸರ ಕೈಗೆ ಸಿಕ್ಕಿಬಿದ್ದ ಮಹಿಳೆ
ಸ್ಕೂಟಿಯಲ್ಲಿ ಗಾಂಜಾ ಮಾರಲು ಬಂದು ಪೊಲೀಸರ ಕೈಗೆ ಸಿಕ್ಕಿಬಿದ್ದ ಮಹಿಳೆ
ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ
ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್