
ಬೆಂಗಳೂರು, ಮೇ 17: ಪಟ್ಟಂದೂರು ಅಗ್ರಹಾರದಲ್ಲಿ (Pattandur Agrahara) ಭಾನುವಾರ (ಮೇ.18) ದಿಂದ ನಾಲ್ಕು ದಿನಗಳ ಕಾಲ ದೀಪೋತ್ಸವ ಮತ್ತು ದೇವರ ಪಲ್ಲಕ್ಕಿಗಳ ಉತ್ಸವ ಕಾರ್ಯಕ್ರಮ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರ ಮತ್ತು ವಾಹನ ಸವಾರರ ಹಿತದೃಷ್ಟಿಯಿಂದ ಕೆಲವು ರಸ್ತೆಗಳಲ್ಲಿ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದೆ (Vehicle Restriction). ಪರ್ಯಾಯ ಮಾರ್ಗವನ್ನು ಬೆಂಗಳೂರು ಸಂಚಾರಿ ಪೊಲೀಸರು ಸೂಚಿಸಿದ್ದಾರೆ.
ಭಾನುವಾರ (ಮೇ. 18) ಮದ್ಯಾಹ್ನ 02.00 ಗಂಟೆಯಿಂದ ಬುಧವಾರ (ಮೇ. 21) ಸಂಜೆ 6 ಗಂಟೆಯವರೆಗೆ ಪಟ್ಟಂದೂರು ಅಗ್ರಹಾರ ರಸ್ತೆಯಲ್ಲಿ ವಾಹನ ಸಂಚಾರ ನಿರ್ಬಂಧಿಸಲಾಗಿದೆ.
#ಸಂಚಾರಸಲಹೆ#TrafficAdvisory @DgpKarnataka @KarnatakaCops @CPBlr @Jointcptraffic @BlrCityPolice @blrcitytraffic @acpwfieldtrf @acpeasttraffic @mahadevapuratrf @halairporttrfps @KRPURATRAFFIC @wftrps @bwaditrafficps @ftowntrfps @jbnagartrfps @halasoortrfps @kghallitrfps… pic.twitter.com/BZf1tlLtNU
— DCP Traffic East ಉಪ ಪೊಲೀಸ್ ಆಯುಕ್ತರು ಸಂಚಾರ ಪೂರ್ವ (@DCPTrEastBCP) May 17, 2025
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಕೆ.ಆರ್. ಪುರ ಕಡೆಯಿಂದ ಮೇಖ್ರಿ ವೃತ್ತದ ಕಡೆಗೆ ಅಸ್ತಿತ್ವದಲ್ಲಿರುವ ಹೆಬ್ಬಾಳ ಮೇಲೇತುವೆಗೆ ಹೆಚ್ಚುವರಿ ಬ್ಯಾಂಪ್ಗಳನ್ನು ನಿರ್ಮಿಸುವ ಯೋಜನೆಯನ್ನು ಕೈಗೆತ್ತಿಕೊಂಡಿದೆ. ಈ ಕಾಮಗಾರಿಯ ಭಾಗವಾಗಿ, ರೈಲ್ವೆ ಹಳಿಗಳ ಮೇಲೆ 33.5 ಮೀ ಉದ್ದದ 07 ಉಕ್ಕಿನ ಗರ್ಡ್ಗಳನ್ನು ಅಳವಡಿಸುವ ಕಾಮಗಾರಿ ಶನಿವಾರ (ಮೇ.17) ದಿಂದ ಬುಧವಾರ (ಮೇ.21) ವರೆಗೆ ರಾತ್ರಿ 12:00 ರಿಂದ ಬೆಳಗಿನ ಜಾವ 03:00 ರವರೆಗೆ ನಡೆಯುತ್ತದೆ. ಸಾರ್ವಜನಿಕರ ಸುಗಮ ಸಂಚಾರದ ದೃಷ್ಟಿಯಿಂದ ಕಾಮಗಾರಿ ನಡೆಯುವ ಸಮಯದಲ್ಲಿ ಬೆಂಗಳೂರು ಸಂಚಾರಿ ಪೊಲೀಸರು ಸಂಚಾರ ಮಾರ್ಪಾಡು ಮಾಡಿದ್ದಾರೆ.
ಹೆಬ್ಬಾಳ ಮೇಲೇತುವೆಯಲ್ಲಿ ಎಸ್ಟೀಮ್ ಮಾಲ್ ನಿಂದ ಮೇದ್ರಿ ವೃತ್ತದ ಕಡೆಗೆ ರಾತ್ರಿ 12:00 ರಿಂದ ಬೆಳಿಗ್ಗೆ, 3:00 ರವರೆಗೆ ಎಲ್ಲಾ ರೀತಿಯ ವಾಹನಗಳನ್ನು ನಿಷೇಧಿಸಲಾಗಿದೆ.
ಇದನ್ನೂ ಓದಿ: ಟರ್ಕಿ ಹಾಗೂ ಅಜರ್ಬೈಜನ್ಗೆ ಶಾಕ್ ಕೊಟ್ಟ ಬೆಂಗಳೂರಿನ ಬಟ್ಟೆ ವ್ಯಾಪಾರಿಗಳು: ಆಮದು, ರಫ್ತು ನಿಷೇಧ
ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮೇಖ್ರಿ ವೃತ್ತದ ಕಡೆಗೆ ಚಲಿಸುವ ವಾಹನಗಳು ಎಸ್ಟ್ರೀಮ್ ಮಾಲ್‌ನಲ್ಲಿರುವ ಸರ್ವಿಸ್ ರಸ್ತೆಯನ್ನು ಪ್ರವೇಶಿಸಿ ಹೆಬ್ಬಾಳ ವೃತ್ತದಲ್ಲಿ ಹೊರ ವರ್ತುಲಕ್ಕೆ ಬಲ ತಿರುವು ಪಡೆದು ತುಮಕೂರು ಮಾರ್ಗವಾಗಿ ಚಲಿಸಿ, ಕುವೆಂಪು ವೃತ್ತದಲ್ಲಿ ಎಡ ತಿರುವು ಪಡೆದು ನ್ಯೂ ಬಿಇಎಲ್ ರಸ್ತೆ ಮೂಲಕ ಮೇಖ್ರಿ ವೃತ್ತವನ್ನು ತಲುಪಬಹುದಾಗಿದೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 3:21 pm, Sat, 17 May 25