Eid Al Adha 2026: ವಾಹನ ಸವಾರರೇ ಗಮನಿಸಿ! ಬಕ್ರೀದ್ ಹಿನ್ನೆಲೆ ಬೆಂಗಳೂರಿನ ಈ ಮಾರ್ಗಗಳಲ್ಲಿ ಸಂಚಾರ ನಿರ್ಬಂಧ

ಬಕ್ರೀದ್ ಹಬ್ಬದ ಸಾಮೂಹಿಕ ಪ್ರಾರ್ಥನೆ ಹಿನ್ನೆಲೆಯಲ್ಲಿ ಮೇ 28ರ ಬೆಳಿಗ್ಗೆ 8 ರಿಂದ 12 ಗಂಟೆಯವರೆಗೆ ಬೆಂಗಳೂರಿನ ಬನ್ನೇರುಘಟ್ಟ ಮುಖ್ಯ ರಸ್ತೆ ಹಾಗೂ ಕನಕಪುರ ರಸ್ತೆಯ ಸುತ್ತಮುತ್ತ ಸಂಚಾರ ಮಾರ್ಪಾಡು ಮಾಡಲಾಗಿದೆ. ಮೈಕೋಲೇಔಟ್ ಮತ್ತು ಕೆ.ಎಸ್. ಲೇಔಟ್ ವ್ಯಾಪ್ತಿಯಲ್ಲಿ ಟ್ರಾಫಿಕ್ ನಿರ್ಬಂಧಿಸಲಾಗಿದ್ದು, ವಾಹನ ಸವಾರರು ಸುಗಮ ಪ್ರಯಾಣಕ್ಕಾಗಿ ಪೊಲೀಸರು ಸೂಚಿಸಿರುವ ಪರ್ಯಾಯ ಮಾರ್ಗಗಳ ಸಂಪೂರ್ಣ ವಿವರ ಇಲ್ಲಿದೆ.

Eid Al Adha 2026: ವಾಹನ ಸವಾರರೇ ಗಮನಿಸಿ! ಬಕ್ರೀದ್ ಹಿನ್ನೆಲೆ ಬೆಂಗಳೂರಿನ ಈ ಮಾರ್ಗಗಳಲ್ಲಿ ಸಂಚಾರ ನಿರ್ಬಂಧ
ಕ್ರೀದ್ ಹಿನ್ನೆಲೆ ಬೆಂಗಳೂರಿನ ಈ ಮಾರ್ಗಗಳಲ್ಲಿ ಸಂಚಾರ ನಿರ್ಬಂಧ

Updated on: May 28, 2026 | 9:02 AM

ಬೆಂಗಳೂರು, ಮೇ 28: ನಗರದಲ್ಲಿ ಬಕ್ರೀದ್ ಹಬ್ಬದ ಹಿನ್ನೆಲೆ ಹಲವೆಡೆ ಸಂಚಾರ ಮಾರ್ಗಗಳಲ್ಲಿ ನಿರ್ಬಂಧ ವಿಧಿಸಲಾಗಿದೆ. ಈ ಬಗ್ಗೆ ಬೆಂಗಳೂರಿನ (Bengaluru) ದಕ್ಷಿಣ ವಿಭಾಗದ ಸಂಚಾರ ಪೊಲೀಸ್ ಉಪ ಆಯುಕ್ತರು ತಮ್ಮ ಅಧಿಕೃತ X ಖಾತೆಯಲ್ಲಿ ನಗರದ ವಾಹನ ಸವಾರರಿಗಾಗಿ ಪ್ರಮುಖ ಸಂಚಾರ ಸಲಹೆಯೊಂದನ್ನು ಹಂಚಿಕೊಂಡಿದ್ದಾರೆ. ರಸ್ತೆ ಕಾಮಗಾರಿಗಳ ಹಿನ್ನೆಲೆಯಲ್ಲಿ ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸುವಂತೆ ಕೋರಲಾಗಿದ್ದು, ಪರ್ಯಾಯ ಮಾರ್ಗಗಳ ಮಾಹಿತಿಯನ್ನೂ ಹಂಚಿಕೊಂಡಿದ್ದಾರೆ.

ಮುಖ್ಯಾಂಶಗಳು

  • ಬಕ್ರೀದ್ ಪ್ರಯುಕ್ತ ಬನ್ನೇರುಘಟ್ಟ ಮತ್ತು ಕನಕಪುರ ರಸ್ತೆಯಲ್ಲಿ ಸಂಚಾರ ಬದಲಾವಣೆ ಮಾಡಲಾಗಿದೆ.
  • ಗುರಪ್ಪನಪಾಳ್ಯ ಹಾಗೂ ಕೆ.ಎಸ್ ಲೇಔಟ್ ಈದ್ಗಾ ಮೈದಾನದ ಸುತ್ತಮುತ್ತ ನಿರ್ಬಂಧ ಹೇರಲಾಗಿದೆ.
  • ವಾಹನ ಸವಾರರ ಸುಗಮ ಸಂಚಾರಕ್ಕಾಗಿ ಪೊಲೀಸರು ಪರ್ಯಾಯ ಮಾರ್ಗಗಳನ್ನು ಸೂಚಿಸಿದ್ದಾರೆ.

ಮೇ 28ರಂದು ಬೆಳಿಗ್ಗೆ 08-00 ಗಂಟೆಯಿಂದ 12-00 ಗಂಟೆಯವರೆಗೆ ಬಕ್ರೀದ್ ಹಬ್ಬದ ಪ್ರಯುಕ್ತ ಮೈಕೋಲೇಔಟ್ ಸಂಚಾರ ಪೊಲೀಸ್ ಠಾಣಾ ಸರಹದ್ದಿನ ಬನ್ನೇರುಘಟ್ಟ ಮುಖ್ಯ ರಸ್ತೆಯ, ಗುರಪ್ಪನಪಾಳ್ಯ ಜಂಕ್ಷನ್‌ನಲ್ಲಿ ಮತ್ತು ಕೆ.ಎಸ್ ಲೇಔಟ್ ಸಂಚಾರ ಪೊಲೀಸ್ ಠಾಣಾ ಸರಹದ್ದಿನ ಔಟರ್ ರಿಂಗ್ ರಸ್ತೆಯಲ್ಲಿರುವ ಈದಾ ಮೈದಾನದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮುಸ್ಲಿಂ ಭಾಂದವರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಲಿದ್ದು, ಸಾರ್ವಜನಿಕ ವಾಹನಗಳ ಸುಗಮ ಸಂಚಾರದ ಹಿತದೃಷ್ಟಿಯಿಂದ ಸಂಚಾರ ದಕ್ಷಿಣ ವಿಭಾಗ ವ್ಯಾಪ್ತಿಯ ಸಂಚಾರ ಪೊಲೀಸ್ ಠಾಣಾ ಸರಹದ್ದುಗಳಲ್ಲಿ ಕೆಳಕಂಡಂತೆ ಸಂಚಾರ ಮಾರ್ಪಾಡುಗಳನ್ನು ಮಾಡಲಾಗಿರುತ್ತದೆ ಎಂದು ಪೋಸ್ಟ್​ನಲ್ಲಿ ತಿಳಿಸಲಾಗಿದೆ.

ಮೈಕೋಲೇಔಟ್ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಚಾರ ನಿರ್ಬಂಧ

  1. ಬನ್ನೇರುಘಟ್ಟ ಮುಖ್ಯ ರಸ್ತೆಯಲ್ಲಿ ಸಾಗರ್ ಆಸ್ಪತ್ರೆ ಜಂಕ್ಷನ್ ನಿಂದ ಗುರಪ್ಪನಪಾಳ್ಯ ಜಂಕ್ಷನ್ ವರೆಗೆ.
  2. ಬನ್ನೇರುಘಟ್ಟ ಮುಖ್ಯ ರಸ್ತೆಯಲ್ಲಿ ಸಾಯಿರಾಂ ಜಂಕ್ಷನ್ ನಿಂದ ಗುರಪ್ಪನಪಾಳ್ಯ ಜಂಕ್ಷನ್ ವರೆಗೆ.
  3. 39ನೇ ಕ್ರಾಸ್ ರಸ್ತೆಯಲ್ಲಿ ಗುರಪ್ಪನಪಾಳ್ಯ ಜಂಕ್ಷನ್ ನಿಂದ ರೆಡ್ಡಿ ಆಸ್ಪತ್ರೆ ಜಂಕ್ಷನ್ ವರೆಗೆ.

ಪರ್ಯಾಯ ಮಾರ್ಗಗಳು

ಡೈರಿ ಸರ್ಕಲ್ ನಿಂದ ಬರುವ ವಾಹನಗಳು ಸಾಗರ್ ಜಂಕ್ಷನ್‌ನಲ್ಲಿ ಬಲ ತಿರುವು ಪಡೆದು ತಿಲಕ ನಗರ ಮುಖ್ಯ ರಸ್ತೆಯಲ್ಲಿ ಚಲಿಸಿ ಸ್ವಾಗತ್ ಜಂಕ್ಷನ್ ನಲ್ಲಿ ಎಡ ತಿರುವು ಪಡೆದು, ಈಸ್ಟ್ ಎಂಡ್ ಮುಖ್ಯ ರಸ್ತೆಯಲ್ಲಿ ಚಲಿಸಿ, ಈಸ್ಟ್ ಎಂಡ್ ಜಂಕ್ಷನ್ ನಲ್ಲಿ ಎಡ ತಿರುವು ಪಡೆದು ಜಯದೇವಾ “ಯು” ಟರ್ನ ಜಂಕ್ಷನ್ನಲ್ಲಿ “ಯು” ತಿರುವು ಪಡೆದು ಹೊರ ರಿಂಗ್ ರಸ್ತೆಯಲ್ಲಿ ಚಲಿಸಿ ಜಯದೇವಾ ಜಂಕ್ಷನ್‌ ಸರ್ವಿಸ್ ರಸ್ತೆಯಲ್ಲಿ ಮುಕ್ತ ಎಡ ತಿರುವು ಪಡೆದು ಬನ್ನೇರುಘಟ್ಟ ಮುಖ್ಯ ರಸ್ತೆಗೆ ಸಂಪರ್ಕ ಪಡೆದು ಸಂಚರಿಸಬಹುದಾಗಿದೆ.

ಬನ್ನೇರುಘಟ್ಟ ಮುಖ್ಯ ರಸ್ತೆ ಜಿ ಡಿ ಮರ ಜಂಕ್ಷನ್ ( ನೆಕ್‌ಸ್‌ಸ್ ವೆಗಾ ಸಿಟಿ ಮಾಲ್ ಜಂಕ್ಷನ್ ಕಡೆಯಿಂದ ಡೈರಿ ಜಂಕ್ಷನ್ ಕಡೆಗೆ ಬರುವ ವಾಹನ ಸವಾರರು ಸಾಯಿ ರಾಂ ಜಂಕ್ಷನ ಸರ್ವಿಸ್ ರಸ್ತೆಯಲ್ಲಿ ಮುಕ್ತ ಎಡ ತಿರುವು ಪಡೆದು ಜಯದೇವಾ ಜಂಕ್ಷನ್ ನಲ್ಲಿ ಎಡ ತಿರುವು ಪಡೆದು. ಈಸ್ಟ್ ಎಂಡ್ ಜಂಕ್ಷನ್ ನಲ್ಲಿ ಬಲಕ್ಕೆ ತಿರುವು ಪಡೆದು, ಈಸ್ಟ್ ಎಂಡ್ ಮುಖ್ಯ ರಸ್ತೆಯ ಮುಖಾಂತರ ಸ್ವಾಗತ್ ಜಂಕ್ಷನ್ ತಲುಪಿ ಬಲ ತಿರುವು ಪಡೆದು, ಸಾಗರ್ ಜಂಕ್ಷನ್ ನಲ್ಲಿ ಎಡಕ್ಕೆ ತಿರುಗಿ ಬನ್ನೇರುಘಟ್ಟ ಮುಖ್ಯ ರಸ್ತೆಗೆ ಸಂಪರ್ಕ ಪಡೆದು, ಡೈರಿ ಜಂಕ್ಷನ್ ಕಡೆಗೆ ಸಂಚರಿಸಬಹುದಾಗಿದೆ.

ಇದನ್ನೂ ಓದಿ ಬಕ್ರೀದ್ ಹಬ್ಬ: ಕುರಿ, ಮೇಕೆಗಳ ವ್ಯಾಪಾರ ಜೋರು; ಮಾರುಕಟ್ಟೆಯಲ್ಲಿ ಅಮೀನಗಡ ಟಗರುಗಳದ್ದೇ ಹವಾ!

ಕೆ.ಎಸ್ ಲೇಔಟ್ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿ ಸಂಚಾರ ನಿರ್ಬಂಧ

ಕನಕಪುರ ಮುಖ್ಯ ರಸ್ತೆ ಸಾರಕ್ಕಿ ಸಿಗ್ನಲ್ ನಿಂದ ಔಟರ್ ರಿಂಗ್ ರಸ್ತೆ ಕೆ.ಎಸ್. ಲೇಔಟ್ ಸಿಗ್ನಲ್ ವರೆಗೆ

ಪರ್ಯಾಯ ಮಾರ್ಗಗಳು

ಕನಕಪುರ ಮುಖ್ಯ ರಸ್ತೆ ಸಾರಕ್ಕಿ ಸಿಗ್ನಲ್ ನಿಂದ ಮುಂದೆ ಸಾಗಿ ಸಾರಕ್ಕಿ ಮಾರ್ಕೆಟ್-ಬನಶಂಕರಿ ಬಸ್ ನಿಲ್ದಾಣ (ಎಡ ತಿರುವು)- ಬೇಂದ್ರೆ ಸರ್ಕಲ್ ಮೂಲಕ ಔಟರ್ ರಿಂಗ್ ರಸ್ತೆ ತಲುಪಿ ಅವಶ್ಯಕ ಮಾರ್ಗಗಳಲ್ಲಿ ತೆರಳಬಹುದು.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:49 am, Thu, 28 May 26

Follow Us