
ಬೆಂಗಳೂರು, ಜೂನ್ 3: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ (DK Shivakumar) ಇಂದು (ಜೂನ್ 3) ಲೋಕಭವನದ ಗ್ಲಾಸ್ ಹೌಸ್‌ನಲ್ಲಿ ಅಧಿಕಾರ ಸ್ವೀಕರಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಲೋಕಭವನ ವ್ಯಾಪ್ತಿಯಲ್ಲಿ ಬೆಂಗಳೂರು ಸಂಚಾರ ಪೊಲೀಸರು ಭಾರಿ ಬದಲಾವಣೆಗಳನ್ನು ಮಾಡಿದ್ದು, ಮಧ್ಯಾಹ್ನ 12 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ಪ್ರಮುಖ ರಸ್ತೆಗಳಲ್ಲಿ ಸಾರ್ವಜನಿಕ ವಾಹನ ಸಂಚಾರವನ್ನು ಸಂಪೂರ್ಣವಾಗಿ ನಿರ್ಬಂಧಿಸಿದ್ದಾರೆ. ವಿಶೇಷವಾಗಿ ನಮ್ಮ ಮೆಟ್ರೋ ಪ್ರಯಾಣಿಕರು ಕೂಡ ಇದನ್ನು ಗಮನಿಸಬೇಕಾಗಿದೆ. ನೀವು ಒಂದು ವೇಳೆ ಲೋಕಭವನ ಮತ್ತು ವಿಧಾನಸೌಧದ ಸುತ್ತಮುತ್ತಲಿನ ಪ್ರದೇಶಗಳಿಗೆ ತಲುಪಲು ವಿಧಾನಸೌಧ ಅಥವಾ ಕಬ್ಬನ್ ಪಾರ್ಕ್ ಮೆಟ್ರೋ ನಿಲ್ದಾಣಗಳಲ್ಲಿ ಇಳಿಯಲು ಯೋಜಿಸಿದ್ದರೆ, ನಿಲ್ದಾಣದಿಂದ ಹೊರಬಂದ ತಕ್ಷಣವೇ ನಿಮಗೆ ರಸ್ತೆ ಸಂಚಾರಕ್ಕೆ ತೀವ್ರ ಅಡಚಣೆ ಎದುರಾಗಬಹುದು.
ವಿಧಾನಸೌಧ ಮತ್ತು ಕಬ್ಬನ್ ಪಾರ್ಕ್ ಮೆಟ್ರೋ ನಿಲ್ದಾಣಗಳ ಹೊರಭಾಗದ ರಸ್ತೆಗಳಲ್ಲಿ ಸಂಚಾರಕ್ಕೆ ನಿರ್ಬಂಧ ಇರಲಿದ್ದು, ಕೇವಲ ಪಾದಚಾರಿಗಳಿಗೆ ಅಥವಾ ಪಾಸ್ ಇದ್ದವರಿಗೆ ಮಾತ್ರ ಪ್ರವೇಶವಿರಲಿದೆ. ಹೀಗಾಗಿ ಹೊರಬಂದ ತಕ್ಷಣ ಆಟೋ, ಟ್ಯಾಕ್ಸಿ ಅಥವಾ ಇತರೆ ವಾಹನಗಳ ಸೌಲಭ್ಯ ಸಿಗುವುದು ದುಸ್ತರವಾಗಲಿದ್ದು, ಪ್ರಯಾಣಿಕರು ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳುವುದು ಸೂಕ್ತ.
— ಬೆಂಗಳೂರು ಸಂಚಾರ ಪೊಲೀಸ್ BengaluruTrafficPolice (@blrcitytraffic) June 2, 2026
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ