ವಾಹನ ಸವಾರರೇ ಗಮನಿಸಿ: ಮೈಸೂರು ರಸ್ತೆ, ಕೆ. ಚನ್ನಸಂದ್ರ ಹಾಗೂ ಗೊರಗುಂಟೆಪಾಳ್ಯ ಮಾರ್ಗದಲ್ಲಿ ಇಂದು ಭಾರಿ ಟ್ರಾಫಿಕ್!

ಸಾಲು ಸಾಲು ರಜೆಗಳ ಹಿನ್ನೆಲೆಯಲ್ಲಿ ಬೆಂಗಳೂರಿನ ಹಲವು ಪ್ರಮುಖ ಮಾರ್ಗಗಳಲ್ಲಿ ಭಾರಿ ವಾಹನ ದಟ್ಟಣೆ ಕಂಡುಬಂದಿದೆ. ಬೆಂಗಳೂರು-ಮೈಸೂರು ರಸ್ತೆಯ ನೈಸ್ ರೋಡ್ ಜಂಕ್ಷನ್, ಕೆ. ಚನ್ನಸಂದ್ರ ಹಾಗೂ ಗೊರಗುಂಟೆಪಾಳ್ಯ ಮಾರ್ಗಗಳಲ್ಲಿ ಸಂಚಾರ ವಿಳಂಬವಾಗಿದ್ದು, ಪ್ರಯಾಣಿಕರು ಸಮಯ ಯೋಜಿಸಿಕೊಂಡು ಹೊರಡುವಂತೆ ಹಾಗೂ ಪರ್ಯಾಯ ರಸ್ತೆ ಬಳಸುವಂತೆ ಸಂಚಾರ ಪೊಲೀಸರು ಸೂಚಿಸಿದ್ದಾರೆ.

ವಾಹನ ಸವಾರರೇ ಗಮನಿಸಿ: ಮೈಸೂರು ರಸ್ತೆ, ಕೆ. ಚನ್ನಸಂದ್ರ ಹಾಗೂ ಗೊರಗುಂಟೆಪಾಳ್ಯ ಮಾರ್ಗದಲ್ಲಿ ಇಂದು ಭಾರಿ ಟ್ರಾಫಿಕ್!
ಸಾಂದರ್ಭಿಕ ಚಿತ್ರ
Image Credit source: scroll.in

Updated on: Oct 02, 2026 | 11:05 AM

ಮುಖ್ಯಾಂಶಗಳು

  • ನೈಸ್ ರಸ್ತೆ ಜಂಕ್ಷನ್ ಬಳಿ ವಾಹನ ಸಂಚಾರ ತೀವ್ರ ವಿಳಂಬವಾಗಿದೆ.
  • ರಸ್ತೆಯಲ್ಲಿ ನೀರು ನಿಂತು ಬಿಳೇಶಿವಾಲೆ ಮಾರ್ಗದಲ್ಲಿ ವಾಹನ ದಟ್ಟಣೆ ಉಂಟಾಗಿದೆ.
  • ಮುತ್ಯಾಲನಗರ ಸೇತುವೆ ಬಳಿ ವಾಹನ ಕೆಟ್ಟು ನಿಂತಿದ್ದರಿಂದ ಸಂಚಾರ ನಿಧಾನವಾಗಿದೆ.

ಬೆಂಗಳೂರು, ಅಕ್ಟೋಬರ್ 02: ಇಂದು ಗಾಂಧಿ ಜಯಂತಿ ಹಾಗೂ ವಾರಾಂತ್ಯದ ಸಾಲು ಸಾಲು ರಜೆಗಳ ಹಿನ್ನೆಲೆಯಲ್ಲಿ ಮೈಸೂರು ರಸ್ತೆ ಹಾಗೂ ನೈಸ್ ರೋಡ್ ಸೇರಿದಂತೆ ಬೆಂಗಳೂರಿನ ಹಲವು ಪ್ರಮುಖ ಮಾರ್ಗಗಳಲ್ಲಿ ಭಾರಿ ವಾಹನ ದಟ್ಟಣೆ ಹಾಗೂ ಸಂಚಾರ ವಿಳಂಬ ಉಂಟಾಗಿದೆ. ಪ್ರಯಾಣಿಕರ ಅನುಕೂಲಕ್ಕಾಗಿ ಬೆಂಗಳೂರು ಸಂಚಾರ ಪೊಲೀಸರು ಪ್ರಮುಖ ಸಂಚಾರ ಸಲಹೆಗಳನ್ನು ಬಿಡುಗಡೆ ಮಾಡಿದ್ದಾರೆ.

ಮೈಸೂರು ರಸ್ತೆ ಹಾಗೂ ನೈಸ್ ರೋಡ್ ಜಂಕ್ಷನ್‌ನಲ್ಲಿ ದಟ್ಟಣೆ

ಸುದೀರ್ಘ ರಜೆ ಹಿನ್ನೆಲೆಯಲ್ಲಿ ಸಾಲು ಸಾಲು ವಾಹನಗಳು ನಗರದಿಂದ ಹೊರಡುತ್ತಿರುವುದರಿಂದ, ಬೆಂಗಳೂರು-ಮೈಸೂರು ರಸ್ತೆಯ ‘ನೈಸ್ ರೋಡ್ ಜಂಕ್ಷನ್’ ಬಳಿ ಬೆಳಿಗ್ಗೆಯಿಂದಲೇ ಹೆಚ್ಚಿನ ವಾಹನ ದಟ್ಟಣೆ ಕಂಡುಬಂದಿದೆ. ಈ ಮಾರ್ಗದಲ್ಲಿ ಪ್ರಯಾಣಿಸುವವರು ಹೆಚ್ಚುವರಿ ಸಮಯವನ್ನು ಕಾಯ್ದಿರಿಸಿಕೊಂಡು ಹೊರಡುವುದು ಸೂಕ್ತ. ಸ್ಥಳದಲ್ಲಿರುವ ಸಂಚಾರ ಪೊಲೀಸರ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಕೋರಲಾಗಿದೆ.

ಕೆ. ಚನ್ನಸಂದ್ರ ಹಾಗೂ ಗೊರಗುಂಟೆಪಾಳ್ಯ ಮಾರ್ಗದಲ್ಲಿ ಸಂಚಾರ ನಿಧಾನ

ನಗರದ ಇನ್ನೆರಡು ಪ್ರಮುಖ ಭಾಗಗಳಲ್ಲೂ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಕೆ. ಚನ್ನಸಂದ್ರ ರಸ್ತೆಯಲ್ಲಿ ಮಳೆ ನೀರು ನಿಂತಿರುವುದರಿಂದ ಬಿಳೇಶಿವಾಲೆ ಕಡೆಗೆ ಹೋಗುವ ವಾಹನ ಸಂಚಾರ ನಿಧಾನಗತಿಯಲ್ಲಿದೆ. ಮುತ್ಯಾಲನಗರ ಸೇತುವೆ ಬಳಿ ವಾಹನವೊಂದು ಕೆಟ್ಟು ನಿಂತಿರುವ ಕಾರಣ, ಗೊರಗುಂಟೆಪಾಳ್ಯದ ಕಡೆಗೆ ಸಂಚರಿಸುವ ವಾಹನ ಸವಾರರು ಟ್ರಾಫಿಕ್ ಕಿರಿಕಿರಿ ಎದುರಿಸುತ್ತಿದ್ದಾರೆ. ಈ ಮಾರ್ಗಗಳಲ್ಲಿ ಸಂಚರಿಸುವ ಸವಾರರು ಪರ್ಯಾಯ ರಸ್ತೆಗಳನ್ನು ಬಳಸಲು ಹಾಗೂ ಸುರಕ್ಷಿತವಾಗಿ ವಾಹನ ಚಲಾಯಿಸಲು ಪೊಲೀಸರು ಮನವಿ ಮಾಡಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಭಾವನಾ ಹೆಗಡೆ

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More
Loading...
Unable to load recommendations.
Follow Us