ಬೆಂಗಳೂರು, (ಸೆಪ್ಟೆಂಬರ್ 28): ಈದ್ ಮಿಲಾದ್ ಹಬ್ಬದ ಪ್ರಯುಕ್ತ ಇಂದು (ಗುರುವಾರ) ಬೆಂಗಳೂರಿನ ಕೆಲವೆಡೆ ವಾಹನಗಳ ಸಂಚಾರ ನಿರ್ಬಂಧ ವಿಧಿಸಲಾಗಿದ್ದು, ಮಾರ್ಗ ಬದಲಾವಣೆ ಮಾಡಲಾಗಿದೆ. ಈ ಕುರಿತು ಬೆಂಗಳೂರು ನಗರ ಸಂಚಾರ ಪೊಲೀಸರು ಮಾರ್ಗಸೂಚಿ (Bangalore Traffic Advisory) ಬಿಡುಗಡೆ ಮಾಡಿದ್ದಾರೆ. ನೃಪತುಂಗ, ಅಂಬೇಡ್ಕರ್ ರಸ್ತೆ, ನಾಯಂಡಹಳ್ಳಿ ಜಂಕ್ಷನ್, ಕಿಂಕೋ ಜಂಕ್ಷನ್, ಬಾಪೂಜಿನಗರ, ಮಾರ್ಕೆಟ್ ರಸ್ತೆಯಲ್ಲಿ ವಾಹನಗಳ ಓಡಾಟಕ್ಕೆ ನಿರ್ಬಂಧ ಹೇರಲಾಗಿದೆ. ಬದಲಿ ಮಾರ್ಗ ಬಳಸುವಂತೆ ವಾಹನ ಸವಾರರಿಗೆ ಪೊಲೀಸರು ಸೂಚಿಸಿದ್ದಾರೆ.
ಆನಂದರಾವ್ ಸರ್ಕಲ್ ಕಡೆಯಿಂದ ಬರುವ ವಾಹನ ಸವಾರರು ಕೆ.ಆರ್ ಸರ್ಕಲ್ ಬಳಿ ಎಡ ತಿರುವು ಪಡೆದು ಡಾ|| ಅಂಬೇಡ್ಕರ್ ರಸ್ತೆಯಲ್ಲಿ ಸಾಗಿ ಬಾಳೇಕುಂದ್ರಿ ಸರ್ಕಲ್ ಕ್ಲೀನ್ಸ್ ರಸ್ತೆ ಮೂಲಕ ಮುಂದಕ್ಕೆ ತೆರಳುವುದು.
ಬಾಳೇಕುಂದ್ರಿ ಸರ್ಕಲ್‌ನಿಂದ ಸಿಟಿ ಮಾರ್ಕೆಟ್ ಕಡೆಗೆ ಸಂಚರಿಸುವ ಸವಾರರು ಕ್ಲೀನ್ಸ್ ರಸ್ತೆ ಸಿದ್ದಅಂಗಯ್ಯ ಸರ್ಕಲ್ ಮೂಲಕ ಸಂಚರಿಸುವುದು.
ಮೈಸೂರು ರಸ್ತೆಯಲ್ಲಿ ಸಂಚಾರ ದಟ್ಟಣೆ ಹೆಚ್ಚಾದಲ್ಲ ನಾಯಂಡನಹಳ್ಳಿ ಅಂಗ್ಲಸ್ ನಲ್ಲಿ ಎಡ ತಿರುವು ಪಡೆದು ನಾಗರಬಾವಿ ರಿಂಗ್ ರಸ್ತೆ ಮೂಲಕ ಸಂಚರಿಸಬಹುದಾಗಿದೆ ಹಾಗೂ ಚಂದ್ರಲೇಔಟ್ ವಿಜಯನಗರ ಮುಖೇನ ಸಂಚರಿಸಬಹುದಾಗಿರುತ್ತದೆ.
ಮೈಸೂರು ರಸ್ತೆಯಲ್ಲಿ ಸಂಚಾರ ದಟ್ಟಣಿ ಹೆಚ್ಚಾದಲ್ಲಿ ಕಿಂಕೋ ಜಂಕ್ಷನ್‌ನಲ್ಲ ಎಡತಿರುವು ಪಡೆದು ವಿಜಯನಗರ ಮಾರ್ಗವಾಗಿ ಸಂಚರಿಸಬಹುದಾಗಿರುತ್ತದೆ
ಮೈಸೂರು ರಸ್ತೆಯಲ್ಲಿ ಸಂಚಾರ ದಟ್ಟಣಿ ಹಚ್ಚಾದಲ್ಲ ವಿಜಯನಗರದ ಕಡೆಯಿಂದ ಬರುವ ವಾಹನಗಳು ಮೈಸೂರು ಕಡೆಗೆ ಟೆಲಸಲು ಚಂದ್ರಲೇಔಟ್‌ನಿಂದ ಬಲ ತಿರುವು ಪಡೆದು ನಾಗರಬಾವಿ ಸರ್ಕಲ್ ಹಾಗೂ ರಿಂಗ್ ರಸ್ತೆ ಮುಖಾಂತರ ಕೆಂಗೇರಿ ಉಪ ನಗರ ಮಾರ್ಗವಾಗಿ ಸಂಚರಿಸಬಹುದಾಗಿರುತ್ತದೆ
ಟೌನ್ ಹಾಲ್ ಕಡೆಗೆ ಸಂಚಾರ ದಟ್ಟಣೆ ಉಂಟಾದಲ್ಲಿ ಬಸಪ್ಪ ಸರ್ಕಲ್ ಕಡೆಗೆ ಬಲತಿರುವು ನೀಡಿ ಅಥವಾ ಅವಿನ್ಯೂ ರಸ್ತೆ ಕಡೆಗೆ ಮಾರ್ಗ ಬದಲಾವಣೆ ಮಾಡಲಾಗುವುದು.
ಪಾಟರಿ ಸರ್ಕಲ್ ನಿಂದ ನಾಗವಾರ ಸಿಗ್ನಲ್, ಗೋವಿಂದಮರ ಜಂಕ್ಷನ್‌ನಿಂದ ಗೋವಿಂದಮಠ ಕಾ & ಸು ಮೊಅಸ್ ಠಾಣೆಯವರೆಗೆ ಮತ್ತು ಹೆಚ್.ಐ.ಆರ್ ಬಡಾವಣೆಯ ಸಿದ್ದಪ್ಪ ರೆಡ್ಡಿ ಜಂಕ್ಷನ್‌ನಿಂದ ನರೇಂದ್ರ, ಟೆಂಟ್ ಜಂಕ್ಷನ್‌ವರೆಗೆ ಎರಡು ಬದಿಯಲ್ಲಿ ವಾಹನಗಳ ಪಾರ್ಕಿಂಗ್ ಅನ್ನು ನಿರ್ಬಂಧಿಸಲಾಗಿರುತ್ತದೆ.
ಇದನ್ನೂ ಓದಿ: Karnataka Bandh: ಕರ್ನಾಟಕ ಬಂದ್ ದಿನ ಏನೇನಿರುತ್ತೆ, ಏನೇನಿರಲ್ಲ? ಇಲ್ಲಿದೆ ವಿವರ
ನೇತಾಜಿ ಜಂಕ್ಷನ್‌ನಿಂದ ಹನ್ಸ್ ಸರ್ಕಲ್‌ವರೆಗೆ, ಹನ್ಸ್ ಸರ್ಕಲ್ ನಿಂದ ನ್ಯೂ ಬಂಬೂ ಬಹಾರ್ ಸರ್ಕಲ್‌ವರೆಗ, ಹನ್ಸ್ ಸರ್ಕಲ್‌ನಿಂದ ಹಜ್ ಕ್ಯಾಂಪ್‌ವರೆಗೆ ಮತ್ತು ಲಾಜರ್ ರಸ್ತೆಯಿಂದ ವೀಲರ್ ರಸ್ತೆಯ ಥಾಮಸ್ ಕಫೆ ಜಂಕ್ಷನ್‌ವರೆಗೆ ರಸ್ತೆಯ ಎರಡು ಬದಿಯಲ್ಲಿ ವಾಹನಗಳ ಪಾರ್ಕಿಂಗ್ ಅನ್ನು ನಿರ್ಬಂಧಿಸಲಾಗಿರುತ್ತದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ