Traffic Advisory: ಇಂದಿನಿಂದ ಆ.11ರವರೆಗೆ ಬೆಂಗಳೂರಿನ ಈ ಮಾರ್ಗದಲ್ಲಿ ವಾಹನ ಸಂಚಾರ ನಿರ್ಬಂಧ

ಬೆಂಗಳೂರು ಸಂಚಾರ ಸಲಹೆ: ಬೆಂಗಳೂರಿನ ಬಳಗೆರೆ ಟಿ ಜಂಕ್ಷನ್‌ನಿಂದ ಪಣತ್ತೂರು ರೈಲ್ವೆ ಬ್ರಿಡ್ಜ್​​ವರೆಗೆ ಬಿಬಿಎಂಪಿ ವೈಟ್ ಟಾಪಿಂಗ್ ಕಾಮಗಾರಿ ಹಿನ್ನಲೆ ಆಗಸ್ಟ್ 6 ರಿಂದ 10 ರವರೆಗೆ ಸಂಚಾರ ನಿರ್ಬಂಧಿಸಲಾಗಿದೆ. ಈ ಬಗ್ಗೆ ಬೆಂಗಳೂರು ಸಂಚಾರ ಪೊಲೀಸ್​ ಟ್ವೀಟ್​ ಮಾಡಿದೆ. ಹಾಗಾದರೆ ಪರ್ಯಾಯ ಮಾರ್ಗಗಳು ಯಾವವು ಎಂಬ ಮಾಹಿತಿ ಇಲ್ಲಿದೆ.

Traffic Advisory: ಇಂದಿನಿಂದ ಆ.11ರವರೆಗೆ ಬೆಂಗಳೂರಿನ ಈ ಮಾರ್ಗದಲ್ಲಿ ವಾಹನ ಸಂಚಾರ ನಿರ್ಬಂಧ
Traffic Advisory

Updated on: Aug 06, 2025 | 8:03 AM

ಬೆಂಗಳೂರು, ಆಗಸ್ಟ್ 06: ವೈಟ್​ಫೀಲ್ಡ್ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಬಳಗೆರೆ ಟಿ ಜಂಕ್ಷನ್‌ನಿಂದ ಪಣತ್ತೂರು ರೈಲ್ವೆ ಬ್ರಿಡ್ಜ್ ಜಂಕ್ಟನ್‌ವರೆಗೆ ಬಿಬಿಎಂಪಿ (BBMP) ವತಿಯಿಂದ ವೈಟ್ ಟಾಪಿಂಗ್ ಕಾಮಗಾರಿ ಕೈಗೊಳ್ಳಗಿದೆ. ಹೀಗಾಗಿ ಇಂದಿನಿಂದ ಆಗಸ್ಟ್​ 10 ರವರೆಗೆ ರಾತ್ರಿ 11 ಗಂಟೆಯಿಂದ ಭಾನುವಾರ ರಾತ್ರಿ 11 ಗಂಟೆಗೆಯವರೆಗೆ ವಾಹನ ಸಂಚಾರ (Traffic restrictions) ನಿರ್ಬಂಧಿಸಲಾಗಿದೆ. ವಾಹನ ಸವಾರರ ಹಿತದೃಷ್ಟಿಯಿಂದ ಈ ಕೆಳಗಿನಂತೆ ಸಂಚಾರ ಮಾರ್ಪಾಡು ಮಾಡಲಾಗಿದೆ. ಬೆಂಗಳೂರು ಸಂಚಾರ ಪೊಲೀಸ್​ ಸಾರ್ವಜನಿಕರು ಸಹಕರಿಸುವಂತೆ ಕೋರಿದೆ.

ವಾಹನ ಸಂಚಾರ ನಿರ್ಬಂಧಿಸಿರುವ ರಸ್ತೆಗಳು

  • ಪಣತ್ತೂರು ರೈಲ್ವೆ ಬ್ರಿಡ್ಜ್ ರಸ್ತೆಯಿಂದ ಬಳಗೆರೆ ಟಿ ಜಂಕ್ಷನ್​ವರೆಗೆ.

ಬೆಂಗಳೂರು ಸಂಚಾರ ಪೊಲೀಸ್ ಟ್ವೀಟ್​

ಪರ್ಯಾಯ ಮಾರ್ಗಗಳು ಹೀಗಿವೆ 

  • ಪಣತ್ತೂರು ಕಡೆಯಿಂದ ಬಳಗೆರೆ ಕಡೆಗೆ ಹೋಗುವ ವಾಹನ ಸವಾರರು ಪಣತ್ತೂರು ದಿಣ್ಣೆ ರಸ್ತೆಯಲ್ಲಿ ಚಲಿಸಿ ಪಣತ್ತೂರು ದಿಣ್ಣೆ ಬಳಿ ಎಡ ತಿರುವು ಪಡೆದು ಸಿಲ್ವರ್ ಓಕ್ ರಸ್ತೆಯಿಂದ ಬಳಗೆರೆ, ವಿಬ್‌ಗಯಾ‌ರ್ ರಸ್ತೆ ಮತ್ತು ವರ್ತೂರು ಕಡೆಗೆ ಸಂಚರಿಸಬಹುದಾಗಿದೆ.

ಇದನ್ನೂ ಓದಿ: ಪ್ರಯಾಣಿಕರ ಗಮನಕ್ಕೆ: ಸ್ವಾತಂತ್ರ್ಯ ದಿನಾಚರಣೆ, ಗಣೇಶ ಚತುರ್ಥಿ ನಿಮಿತ್ತ ಬೆಂಗಳೂರಿನಿಂದ ವಿವಿಧ ಜಿಲ್ಲೆಗಳಿಗೆ ವಿಶೇಷ ರೈಲು

  • ಬಳಗೆರೆ ಟಿ ಜಂಕ್ಷನ್ ಕಡೆಯಿಂದ ಪಣತ್ತೂರು ಕಡೆಗೆ ಹೋಗುವ ವಾಹನ ಸವಾರರು ಪಣತ್ತೂರು ದಿಣ್ಣೆ ರಸ್ತೆ, ವಿಬ್‌ಗಯಾರ್ ರಸ್ತೆ ಹಾಗೂ ಮೂಲಕ ಮಾರತ್ತಹಳ್ಳಿ ಬ್ರಿಡ್ಜ್ ಪಣತ್ತೂರು ಕಡೆಗೆ ಸಂಚರಿಸಬಹುದಾಗಿದೆ.

ಕೆಟ್ಟು ನಿಂತ ವಾಹನಗಳು 

ಸೋನಿ ವರ್ಲ್ಡ್ ಜಂಕ್ಷನ್ ಬಳಿ ವಾಹನ ಕೆಟ್ಟು ನಿಂತಿರುವುದರಿಂದ ಶ್ರೀನಿವಾಗಿಲು ಕಡೆಗೆ ನಿಧಾನಗತಿಯ ಸಂಚಾರವಿರುತ್ತದೆ. ವಾಹನ ಕೆಟ್ಟು ನಿಂತಿರುವುದರಿಂದ ಮಾರುಕಟ್ಟೆ ವೃತ್ತದ ಕಡೆಯಿಂದ ಮೈಸೂರು ರಸ್ತೆ ಕಡೆಗೆ ನಿಧಾನಗತಿಯ ಸಂಚಾರವಿರುತ್ತದೆ. ಅದೇ ರೀತಿಯಾಗಿ ಸಿ.ಎಂ.ಟಿ.ಐ ಜುಂಕ್ಷನ್ ಕಡೆಯಿಂದ ನಗರದ ಕಡೆಗೆ ನಿಧಾನಗತಿಯ ಸಂಚಾರವಿರುತ್ತದೆ ಎಂದು ಬೆಂಗಳೂರು ಸಂಚಾರ ಪೊಲೀಸ್​ ಸಂಚಾರ ಸಲಹೆ ನೀಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.