ಬೆಂಗಳೂರಿಗರೇ ಗಮನಿಸಿ: ಫ್ರೀಡಂ ಪಾರ್ಕ್​​ ಸುತ್ತಮುತ್ತ ಇಂದು ಸಂಚಾರ ಮಾರ್ಗ ಬದಲಾವಣೆ

ಬೆಂಗಳೂರಿನ ಫ್ರೀಡಂ ಪಾರ್ಕ್​​ನಲ್ಲಿ ಇಂದು (ಮಾರ್ಚ್ 12) ಪ್ರತಿಭಟನೆ ಹಿನ್ನೆಲೆಯಲ್ಲಿ ಭಾರೀ ಸಂಚಾರ ದಟ್ಟಣೆ ನಿರೀಕ್ಷಿಸಲಾಗಿದೆ. ಹೀಗಾಗಿ ಫ್ರೀಡಂ ಪಾರ್ಕ್​​ ಸುತ್ತಮುತ್ತಲಿನ ರಸ್ತೆಗಳಲ್ಲಿ ಸಂಚಾರ ಬದಲಾವಣೆ ಮಾಡಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಕೆಲ ರಸ್ತೆಗಳನ್ನು ನಿರ್ಬಂಧಿಸಲಾಗಿದ್ದು, ಪ್ರಯಾಣಿಕರು ಸಹಕರಿಸುವಂತೆ ಕೋರಲಾಗಿದೆ.

ಬೆಂಗಳೂರಿಗರೇ ಗಮನಿಸಿ: ಫ್ರೀಡಂ ಪಾರ್ಕ್​​ ಸುತ್ತಮುತ್ತ ಇಂದು ಸಂಚಾರ ಮಾರ್ಗ ಬದಲಾವಣೆ
ಸಾಂದರ್ಭಿಕ ಚಿತ್ರ
Image Credit source: Google

Updated on: Mar 12, 2026 | 7:22 AM

ಬೆಂಗಳೂರು, ಮಾರ್ಚ್​​ 12: ಉಪ್ಪಾರಪೇಟೆ ಸಂಚಾರ ಪೊಲೀಸ್ ಠಾಣಾ ಸರಹದ್ದಿನ ಫ್ರೀಡಂ ಪಾರ್ಕ್​​​ನಲ್ಲಿ ಪ್ರತಿಭಟನೆ ಹಿನ್ನೆಲೆ ಶೇಷಾದ್ರಿ ರಸ್ತೆಯ ಮೂಲಕ ಜನರು ಮತ್ತು ವಾಹನಗಳು ಹೆಚ್ಚಾಗಿ ಆಗಮಿಸುವ ಕಾರಣ ಫ್ರೀಡಂ ಪಾರ್ಕ್ ಸುತ್ತ ಮುತ್ತ ಸಂಚಾರ ದಟ್ಟಣೆ ಉಂಟಾಗುವ ಸಾಧ್ಯತೆ ಇದೆ. ಹೀಗಾಗಿ ಫ್ರೀಡಂಪಾರ್ಕ್​ ಸುತ್ತಮುತ್ತ ತಾತ್ಕಾಲಿಕ ಸಂಚಾರ ಮಾರ್ಗ ಬದಲಾವಣೆ ಮಾಡಲಾಗಿದೆ. ಈ ಬಗ್ಗೆ ಬೆಂಗಳೂರು ಟ್ರಾಫಿಕ್​​ ಪೊಲೀಸರು ಮಾಹಿತಿ ನೀಡಿದ್ದು, ಶಾಂತಲಾ ಜಂಕ್ಷನ್, ಖೋಡ್ ಸರ್ಕಲ್​ನಿಂದ ಆನಂದ ರಾವ್ ಫ್ಲೈಓವರ್​, ಓಲ್ಡ್ JDS ಕಚೇರಿ ಕ್ರಾಸ್, ಶೇಷಾದ್ರಿ ರಸ್ತೆಯಿಂದ ಫ್ರೀಡಂಪಾರ್ಕ್​​ವರೆಗೆ ನಿರ್ಬಂಧ ವಿಧಿಸಲಾಗಿದೆ. ವಾಹನ ಸವಾರರಿಗೆ ಪರ್ಯಾಯ ಮಾರ್ಗಗಳನ್ನು ಬಳಸಲು ಸೂಚನೆ ನೀಡಲಾಗಿದೆ.

ಪರ್ಯಾಯ ಮಾರ್ಗಗಳು


ಲುಲು ಮಾಲ್, ಕೆಎಫ್‌ ಎಂ, ರಾಜೀವ್ ಗಾಂಧಿ ಸರ್ಕಲ್, ಮಂತ್ರಿ ಮಾಲ್, ಸ್ವಸ್ತಿಕ್ ಸರ್ಕಲ್, ಶೇಷಾದ್ರಿಪುರಂ, ನೆಹರು ಸರ್ಕಲ್, ರೇಸ್ ಕೋರ್ಸ್ ಫೈ ಓವರ್, ರೇಸ್ ಕೋರ್ಸ್ ರಸ್ತೆ.

ಮೈಸೂರು ಬ್ಯಾಂಕ್‌ ಕಡೆಯಿಂದ ಚಾಲುಕ್ಯ ಸರ್ಕಲ್ ಕಡೆಗೆ: ಕೆ.ಜಿ ರಸ್ತೆ, ಮೈಸೂರು ಬ್ಯಾಂಕ್ ಜಂಕ್ಷನ್, ಸಾಗರ್ ಜಂಕ್ಷನ್, ಕೆ.ಜಿ. ಜಂಕ್ಷನ್, ಎಲೈಟ್, ಟಿಬಿ ರಸ್ತೆ, ಕೆ.ಎಫ್.ಎಂ, ರಾಜೀವ್ ಗಾಂಧಿ ಸರ್ಕಲ್, ಸ್ವಸ್ತಿಕ್, ನೆಹರು ಸರ್ಕಲ್, ರೇಸ್ ಕೋರ್ಸ್ ಫೈ ಓವರ್ ರಸ್ತೆ ಮೂಲಕ ಸಂಚರಿಸುವುದು.

ಚಾಲುಕ್ಯ ಸರ್ಕಲ್​​ನಿಂದ ಮೈಸೂರು ಬ್ಯಾಂಕ್ ಕಡೆಗೆ: ಚಾಲುಕ್ಯ ಸರ್ಕಲ್, ಎಲ್‌ಆರ್‌ಡಿ, ರಾಜಭವನ ರಸ್ತೆ, ಇನ್ ಪೆಂಟ್ರಿ ರಸ್ತೆ, ಇಂಡಿಯನ್ ಎಕ್ಸ್ ಪ್ರೆಸ್ ನಿಂದ ತೆರಳುವುದು.

ಕಾಳಿದಾಸ ರಸ್ತೆ ಕನಕದಾಸ ಜಂಕ್ಷನ್ ಕಡೆಯಿಂದ ಫ್ರೀಡಂ ಪಾರ್ಕ್ ಕಡೆಗೆ: ಕನಕದಾಸ ಜಂಕ್ಷನ್ ಬಲ ತಿರುವು ಸಾಗರ ಜಂಕ್ಷನ್ ಕಡೆಗೆ.

ಮೌರ್ಯ ಸುಬ್ಬಣ್ಣ ಜಂಕ್ಷನ್​​ನಿಂದ ಫ್ರೀಡಂ ಪಾರ್ಕ್ ಕಡೆಗೆ: ಸುಬ್ಬಣ್ಣ ಜಂಕ್ಷನ್​​ನಿಂದ ಬಲ ತಿರುವು ಆನಂದ್ ರಾವ್ ಸರ್ಕಲ್ ಕಡೆಗೆ ತೆರಳುವಂತೆ ಸೂಚಿಸಲಾಗಿದೆ.

ಇದನ್ನೂ ಓದಿ: ವಾಹನ ಮಾಲೀಕರ ಗಮನಕ್ಕೆ; ಇನ್ಮುಂದೆ ಗಾಡಿ ಎಫ್ಸಿಗೆ ಸಾರಿಗೆ ಇಲಾಖೆಯಿಂದ ಹೊಸ ರೂಲ್ಸ್

ಟಿನ್ ಫ್ಯಾಕ್ಟರಿ ಕಡೆಗೆ ನಿಧಾನಗತಿಯ ಸಂಚಾರ


ದೇವಸಂದ್ರ ಮಾರುಕಟ್ಟೆ ಬಳಿ ವಾಹನವೊಂದು ರಸ್ತೆಯಲ್ಲಿಯೇ ಕೆಟ್ಟು ನಿಂತಿರುವ ಕಾರಣ ಟ್ರಾಫಿಕ್​​ ಸಮಸ್ಯೆ ಉಂಟಾಗಿದ್ದು, ಟಿನ್ ಫ್ಯಾಕ್ಟರಿ ಕಡೆಗೆ ನಿಧಾನಗತಿಯ ಸಂಚಾರವಿರುತ್ತದೆ ಎಂದೂ ಬೆಂಗಳೂರು ಸಂಚಾರ ಪೊಲೀಸರು ಎಕ್ಸ್​​ ಪೋಸ್ಟ್​​ ಮೂಲಕ ಮಾಹಿತಿ ನೀಡಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 7:18 am, Thu, 12 March 26

Loading...
Unable to load recommendations.
Follow Us