AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿಗರೇ ಗಮನಿಸಿ: 60 ದಿನಗಳ ಕಾಲ ಈ ಪ್ರಮುಖ ರಸ್ತೆ ಕ್ಲೋಸ್​​; ಬದಲಿ ಮಾರ್ಗಗಳ ಮಾಹಿತಿ ಇಲ್ಲಿದೆ

ಬೆಂಗಳೂರಿನ ಶಿವಾಜಿನಗರ ವ್ಯಾಪ್ತಿಯ ಕಾಮರಾಜ ರಸ್ತೆಯಲ್ಲಿ ಕಲ್ವರ್ಟ್ ಕಾಮಗಾರಿ ಹಿನ್ನೆಲೆಯಲ್ಲಿ ಇಂದಿನಿಂದ 60 ದಿನಗಳ ಕಾಲ ವಾಹನ ಸಂಚಾರ ನಿರ್ಬಂಧಿಸಲಾಗಿದೆ. ಸವಾರರಿಗೆ ಟ್ರಾಫಿಕ್ ಪೊಲೀಸರು ಪರ್ಯಾಯ ಮಾರ್ಗಗಳನ್ನು ಪ್ರಕಟಿಸಿದ್ದಾರೆ. ಸಾರ್ವಜನಿಕರ ಮತ್ತು ವಾಹನ ಸವಾರರ ಹಿತದೃಷ್ಟಿಯಿಂದ ಸಂಚಾರ ಮಾರ್ಪಾಡುಗಳನ್ನು ಮಾಡಿರುವ ಬಗ್ಗೆ ಮಾಹಿತಿ ನೀಡಿದ್ದಾರೆ.

ಬೆಂಗಳೂರಿಗರೇ ಗಮನಿಸಿ: 60 ದಿನಗಳ ಕಾಲ ಈ ಪ್ರಮುಖ ರಸ್ತೆ ಕ್ಲೋಸ್​​; ಬದಲಿ ಮಾರ್ಗಗಳ ಮಾಹಿತಿ ಇಲ್ಲಿದೆ
ಸಾಂದರ್ಭಿಕ ಚಿತ್ರImage Credit source: deccanherald
ಪ್ರಸನ್ನ ಹೆಗಡೆ
|

Updated on:May 25, 2026 | 11:12 AM

Share

ಬೆಂಗಳೂರು, ಮೇ 25: ಶಿವಾಜಿನಗರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ನಾಲಾ ಕ್ರಾಸ್ ಸಮೀಪ ಹಳೆಯ ಕಲ್ಲಿನ ಕಲ್ವರ್ಟ್ ತೆರವುಗೊಳಿಸಿ ಹೊಸ RCC ಕಲ್ವರ್ಟ್ ನಿರ್ಮಾಣ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಮುಂದಿನ 60 ದಿನಗಳ ಕಾಲ ಕಾಮರಾಜ್ ರಸ್ತೆ ಬಂದ್ ಆಗಲಿದೆ ಎಂದು ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ತಿಳಿಸಿದೆ. ಸಾರ್ವಜನಿಕರ ಮತ್ತು ವಾಹನ ಸವಾರರ ಹಿತದೃಷ್ಟಿಯಿಂದ ಸಂಚಾರ ಮಾರ್ಪಾಡುಗಳನ್ನು ಮಾಡಿರುವ ಬಗ್ಗೆ ಪೊಲೀಸರು ಮಾಹಿತಿ ನೀಡಿದ್ದಾರೆ.

ಯಾವೆಲ್ಲ ರಸ್ತೆಗಳಲ್ಲಿ ವಾಹನ ಸಂಚಾರ ನಿರ್ಬಂಧ?

  • ಕಾಮರಾಜ ರಸ್ತೆಯ ವಿಠೋಬಾ ದೇವಸ್ಥಾನದಿಂದ ನಾಲಾ ರಸ್ತೆಯವರೆಗೆ ಎಲ್ಲಾ ರೀತಿಯ ವಾಹನಗಳ ಸಂಚಾರವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿರುತ್ತದೆ.
  • ಕಾಮರಾಜ ರಸ್ತೆಯ ಕೆ.ಆರ್ ರಸ್ತೆ – ಕಬ್ಬನ್ ರಸ್ತೆ ಜಂಕ್ಷನ್‌ನಿಂದ ಡಿಕನ್ಸನ್ ಜಂಕ್ಷನ್ ಕಡೆಗೆ ಬರುವ ಎಲ್ಲಾ ರೀತಿಯ ವಾಹನಗಳ ಸಂಚಾರವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿರುತ್ತದೆ.

ಇದನ್ನೂ ಓದಿ: ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ವರುಣಾರ್ಭಟ! 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​

ಪರ್ಯಾಯ ಮಾರ್ಗಗಳು

  • ಕಮರ್ಷಿಯಲ್ ಸ್ಟ್ರೀಟ್ ಕಡೆಯಿಂದ ಕಾಮರಾಜ ರಸ್ತೆಯ ಮೂಲಕ ಪುಲಕೇಶಿನಗರ ಮತ್ತು ಬಾಣಸವಾಡಿ ಕಡೆಗೆ ಸಂಚರಿಸುವ ಎಲ್ಲಾ ರೀತಿಯ ವಾಹನಗಳು ಕಾಮರಾಜ ರಸ್ತೆಯ ವಿಠೋಬಾ ದೇವಸ್ಥಾನದ ಹತ್ತಿರ ಬಲ ತಿರುವು ಪಡೆದು ವೀರಪಿಳ್ಳೆ ಸ್ಟ್ರೀಟ್ ಮೂಲಕ ನಾಗಮ್ಮ ದೇವಸ್ಥಾನದ ಹತ್ತಿರ ಎಡ ತಿರುವು ಪಡೆದು ಸೇಂಟ್ ಜಾನ್ ರಸ್ತೆಯ ಮೂಲಕ ಪುಲಕೇಶಿನಗರ ಮತ್ತು ಬಾಣಸವಾಡಿ ಕಡೆಗೆ ಸಂಚರಿಸಬಹುದಾಗಿದೆ.
  • ಕಬ್ಬನ್ ರಸ್ತೆ ಕಡೆಯಿಂದ ಕಾಮರಾಜ ರಸ್ತೆಯ ಮೂಲಕ ಪುಲಕೇಶಿನಗರ ಮತ್ತು ಬಾಣಸವಾಡಿ ಕಡೆಗೆ ಸಂಚರಿಸುವ ಎಲ್ಲಾ ರೀತಿಯ ವಾಹನಗಳು ಕೆ.ಆರ್ ರಸ್ತೆ ಕಬ್ಬನ್ ರಸ್ತೆ ಜಂಕ್ಷನ್ ಹತ್ತಿರ ಬಲ ತಿರುವು ಪಡೆದು ಕಬ್ಬನ್ ರಸ್ತೆಯ ಮೂಲಕ ತೆರಳಿ ಮಣಿಪಾಲ್ ಜಂಕ್ಷನ್ ಹತ್ತಿರ ಎಡ ತಿರುವು ಪಡೆದು ಡಿಕನ್ಸನ್ ರಸ್ತೆ ಮೂಲಕ ನೇರವಾಗಿ ತೆರಳಿ ಬ್ಲೂ ಸ್ಟೋನ್​​ ಹತ್ತಿರ ಬಲ ತಿರುವು ಪಡೆದುಕೊಂಡು ಸೇಂಟ್ ಜಾನ್ ರಸ್ತೆಯ ಮೂಲಕ ಪುಲಕೇಶಿನಗರ ಮತ್ತು ಬಾಣಸವಾಡಿ ಕಡೆಗೆ ಸಂಚರಿಸಬಹುದಾಗಿದೆ.
  • ಡಿಸ್ಪೆನ್ಸರಿ ರಸ್ತೆ (ಆಲೀಸ್ ಜಂಕ್ಷನ್) ಕಡೆಯಿಂದ ಕಾಮರಾಜ ರಸ್ತೆಯ ಮೂಲಕ ಪುಲಕೇಶಿನಗರ ಮತ್ತು ಬಾಣಸವಾಡಿ ಕಡೆಗೆ ಸಂಚರಿಸುವ ಎಲ್ಲಾ ರೀತಿಯ ವಾಹನಗಳು ಡಿಕನ್ಸನ್ ರಸ್ತೆಯ ಮೂಲಕ ನೇರವಾಗಿ ಚಲಿಸಿ ಬ್ಲೂ ಸ್ಟೋನ್ ಹತ್ತಿರ ಎಡ ತಿರುವು ಪಡೆದು ಸೇಂಟ್ ಜಾನ್ ರಸ್ತೆ ಮೂಲಕ ಪುಲಕೇಶಿನಗರ ಮತ್ತು ಬಾಣಸವಾಡಿ ಕಡೆಗೆ ಸಂಚರಿಸಬಹುದಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 10:45 am, Mon, 25 May 26

Follow Us
Prasanna Hegde
Prasanna Hegde

ಪ್ರಸನ್ನ ಹೆಗಡೆ ಹುಟ್ಟಿದ್ದು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕು. 9 ವರ್ಷಗಳಿಂದ ಪತ್ರಕರ್ತನಾಗಿ ಕೆಲಸ ಮಾಡಿರುವ ಅನುಭವವಿದೆ. ಮುದ್ರಣ, ಟಿವಿ ಮತ್ತು ಡಿಜಿಟಲ್​ ಮಾಧ್ಯಮಗಳಲ್ಲಿ ವಿವಿಧ ಜವಾಬ್ದಾರಿ ನಿಭಾಯಿಸಿದ್ದೇನೆ. ರಾಜಕೀಯ, ಸಿನಿಮಾ ವಿಷಯಗಳಲ್ಲಿ ಹೆಚ್ಚಿನ ಆಸಕ್ತಿ ಇದೆ. ಕವನಗಳ ರಚನೆ, ಪುಸ್ತಕಗಳನ್ನ ಓದುವುದು ನೆಚ್ಚಿನ ಹವ್ಯಾಸಗಳು.

Read More